Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ತುಮಕೂರು:ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, 9 ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ. ಮೃತರನ್ನು ತಾಲ್ಲೂಕಿನ ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ ಇನ್ನುಳಿದಂತೆ ಆಟೋದಲ್ಲಿದ್ದ 9 ಮಂದಿ ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ಘಟನೆ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿ ಗೆ ತೆರಳುತ್ತಿದ್ದ ಮಹಿಳೆಯರಾಗಿದ್ದಾರೆ. ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಾಜಿ ಸಚಿವ ಸುರೇಶ್ ಕುಮಾರ್ ಅವರು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ನನ್ನ ಮೇಲೆ ಪ್ರಕರಣ ಇದೆಯೋ ಇಲ್ಲವೋ ಅದು ಬೇರೆ ಪ್ರಶ್ನೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು. ನಾನು ಅವರ ಮದುವೆಯಲ್ಲಿ ಭಾಗವಹಿಸಿದರೆ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ ಎಂಬ ಕಾರಣಕ್ಕೆ ಆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ನಾನು ಈಗ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದು, ಅನೇಕ ನ್ಯಾಯಾಲಯದ ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮೇಲೆ ರಾಜಕೀಯ ಪ್ರೇರಿತ ಪ್ರಕರಣಗಳಿದ್ದು, ನನ್ನನ್ನು ದೋಷಿ ಎಂದು ತೀರ್ಮಾನ ಮಾಡಲಾಗಿಲ್ಲ. ನನ್ನ ಜತೆಗೆ…
ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರ ಮಗ ಪಾನಮತ್ತರಾಗಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರಘು ನಾಯಕ್ (65) ಹಾಗೂ ಅವರ ಮಗ ಚಿರಂಜೀವಿ (25) ಮೃತಪಟ್ಟಿದ್ದಾರೆ. ‘ದಾವಣಗೆರೆಯ ರಘು ನಾಯಕ್, ಮಗ ಚಿರಂಜೀವಿ ಹಾಗೂ ಕುಟುಂಬದವರ ಜೊತೆ ಸಿಂಗಪುರ ಲೇಔಟ್ ಬಳಿಯ ಕುವೆಂಪು ನಗರದಲ್ಲಿ ವಾಸವಿದ್ದರು. ಇವರಿಬ್ಬರು ಸಂಬಂಧಿ ವಾಸು ನಾಯಕ್ ಜೊತೆ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದರು. ‘ಅಪಘಾತಕ್ಕೆ ಕಾರಣವಾಗಿರುವ ಆಕಾಶ್ ಹಾಗೂ ಕಾರಿನಲ್ಲಿದ್ದ ನಿಖಿತ್ ಅವರನ್ನು ಬಂಧಿಸಲಾಗಿದೆ. ಇಬ್ಬರೂ ಮದ್ಯ ಕುಡಿದಿರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಅಪಘಾತದಲ್ಲಿ ರಘು ಅವರ ಅಳಿಯ ವಾಸು ನಾಯಕ್ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…
ಬೆಂಗಳೂರು: ‘ವಿಧಾನಪರಿಷತ್ ಸದಸ್ಯತ್ವ ಸ್ಥಾನ ನಿಷ್ಠಾವಂತ ಕಾರ್ಯಕರ್ತರಿಗೆ ಸಿಗದೇ, ಉಳ್ಳವರ ಪಾಲಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡಿದ್ದಾರೆ.’ ಈ ಹಿನ್ನೆಲೆ ಇಂದು ಪಕ್ಷದ ನಾಯಕರ ನಿಲುವಿನ ವಿರುದ್ಧ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಕೆಪಿಸಿಸಿ ಕಚೇರಿ ಸಭೆ ನಡೆಸಲಿದ್ದಾರೆ. ಎಂಆರ್ ಸೀತಾರಾಮ್, ಉಮಾಶ್ರೀ ಮತ್ತು ಸುಧಾಮ್ ದಾಸ್ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡುತ್ತಿರುವುದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(8/ಆಗಸ್ಟ್) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ, ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೆವು. ಲೋಕಸಭೆಗೆ ವಿಚಾರಗಳು ಬೇರೆ ಇರುತ್ತವೆ. ನಾವು 25 ಸ್ಥಾನಗಳನ್ನು ಉಳಿಸಿಕೊಳ್ಳಲು ತಯಾರಿ ಮಾಡಿಕೊಳ್ಳವೆ ಎಂದು ಹೇಳಿದರು. ನಾನು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಂಸದರು ಮನವಿ ಮಾಡಿದ್ದರು. ಈ ಹಿನ್ನಲೆ ದೆಹಲಿಗೆ ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಅಮಿತ್ ಶಾ ಭೇಟಿಗೂ ಪ್ರಯತ್ನ ಮಾಡುತ್ತೇನೆ. ಅವರು ಸಂಸತ್ ಕಲಾಪ ಹಿನ್ನಲೆ ಸಮಯ ಸಿಕ್ಕಿಲ್ಲ. ಸಮಯ ಸಿಕ್ಕ ಬಳಿಕ ನಾನು ಭೇಟಿ ಮಾಡುತ್ತೇನೆ ಹೈಕಮಾಂಡ್ ಬುಲಾವ್ ನೀಡಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಳೆದ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗಿತ್ತು. ಈ ಬಾರಿಯೂ ಅದೇ ಮಾದರಿಯಲ್ಲಿ ಇನ್ನಷ್ಟು ಉತ್ಸಾಹದಿಂದ ಪಕ್ಷಾತೀತವಾಗಿ ಎಲ್ಲರನ್ನೂ ಜೋಡಿಸಬೇಕು ಎಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವಥ್ ನಾರಾಯಣ ತಿಳಿಸಿದರು. ದೇಶಭಕ್ತಿಯ ಕುರಿತು ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಗಸ್ಟ್ 13 ರಿಂದಲೇ ನಡೆಸಲು ಉದ್ದೇಶಿಸಲಾಗಿದೆ. ನಮ್ಮ ಮಲ್ಲೇಶ್ವರದ ಎಲ್ಲಾ ಆಟದ ಮೈದಾನಗಳು, ಉದ್ಯಾನವನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ-ಕಾಲೇಜು ಮಕ್ಕಳನ್ನು ಜೋಡಿಸಿಕೊಂಡು ಆಚರಿಸಲು ಸೂಚಿಸಲಾಗಿದೆ. ಕಳೆದ ಬಾರಿಯ ಧ್ವಜವನ್ನೇ ಮರು ಬಳಕೆ ಮಾಡಲು ಸೂಚಿಸುವ ಜತೆ ಅಗತ್ಯ ಇರುವವರಿಗೆ ಅಂಚೆ ಕಚೇರಿಗಳು ಹಾಗೂ ಸ್ವ ಸಹಾಯ ಸಂಘದ ಸಹೋದರಿಯರು ತಯಾರಿಸಿದ ರಾಷ್ಟ್ರ ಧ್ವಜವನ್ನು ಕೊಂಡುಕೊಳ್ಳುವಂತೆ ತಿಳಿಸಲು ಹೇಳಲಾಯಿತು. ಹಾಗೆಯೇ ಧ್ವಜವನ್ನು ಸುರಕ್ಷಿತವಾಗಿ ಮಡಚಿ ಇಡುವ ಬಗ್ಗೆ ಜನತೆಗೆ ಅರಿವು ಮೂಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನ ಎಸಗುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ನಿವಾಸಿ ಅಚ್ಯುತ್ ಕುಮಾರ್, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಮಾರ್ಚ್‌ನಲ್ಲಿ ಈತನನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. ಕೃತ್ಯದ ಬಳಿಕ ಆರೋಪಿ ಮೈಸೂರಿಗೆ ಹೋಗಿ ತಲೆಮರೆಸಿಕೊಂಡಿದ್ದ. ಮಹಿಳೆ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಈತನಿಂದ 9.40 ಲಕ್ಷ ಮೌಲ್ಯದ 4 ಚಿನ್ನದ ಸರ ಹಾಗೂ ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಅವರನ್ನು ಮುಖ್ಯಮಂತ್ರಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು. ‘ಕೃಷಿ ಸಚಿವರು, ತಮ್ಮ ಇಲಾಖೆಯ ಅಧಿಕಾರಿಗಳಿಂದ ತಿಂಗಳಿಗೆ ತಲಾ ಕೆ 6ರಿಂದ 8 ಲಕ್ಷ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೂ ದೂರ ನೀಡಿದ್ದಾರೆ. ಅದರಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪಾಲೆಷ್ಟು ಎಂದು ಜನರು ಕೇಳುವ ಮೊದಲು ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು. ಮುಖಂಡರಾದ ಜಗದೀಶ್ ಚಂದ್ರ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ದರ್ಶನ್ ಜೈನ್ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಯುಪಿಎಸ್ ಸಿ ಪರೀಕ್ಷೆಯಲ್ಲಿ 349ನೇ ಬ್ಯಾಂಕ್ ಪಡೆದಿರುವ ಶಿಲ್ಪಶ್ರೀ ಆರ್. ಅವರನ್ನು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು. ನಗರದ ಜನ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ನಡೆದ ಸಂಘದ 23ನೇ ವಾರ್ಷಿಕೋತ್ಸವ ಮತ್ತು 44ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು. ಹೈಸ್ಕೂಲ್ ನಿಂದ ಉನ್ನತ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದಿರುವ ಭೋವಿ ಸಮಾಜದ 442 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಮಹಾಗಣಪತಿ ಹೋಮ, ದುರ್ಗಾ ಹೋಮ, ಕುಂಭಾಭಿಷೇಕ ಮಹೋತ್ಸವ, ಗೋಪೂಜೆ, ಮಂಟಪ ಪ್ರವೇಶ, ಗಣೇಶ ಪೂಜೆಗಳು ನಡೆದವು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA