Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ದುಷ್ಕರ್ಮಿಗಳಿಗೆ ಕಾನೂನು ರೀತಿ ಶಿಕ್ಷೆ ನೀಡಬೇಕೆಂದು ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಕೆ. ಎಂ. ಪಾಲಾಕ್ಷರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು ಕುಕಿ ಸಮುದಾಯದ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವುದು ಮನುಕುಲವೇ ತಲೆತಗ್ಗಿಸುವಂತಹ ರಾಕ್ಷಸಿ ಕೃತ್ಯವಾಗಿದೆ. ಮಣಿಪುರ ರಾಜ್ಯದ ಮುಖ್ಯಮಂತ್ರಿ ಬೀರೇನ್‌ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರೌಫ್, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್, ರಾಜ್ಯ ಉಪಾಧ್ಯಕ್ಷರಾದ ಎಂ. ಆರ್ ಕೃಷ್ಣಪ್ಪ, ಮಹಿಳೆಯ ಮುಖಂಡರಾದ ಶ್ರೀಮತಿ ವಾಣಿ ಎನ್ ಶೆಟ್ಟಿ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು…
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ ಆ. 9ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರವಿ ಎಂ. ತಿರ್ಲಾಪೂರ, ‘1919ರಲ್ಲಿ ಪ್ರಾರಂಭವಾದ ಕರ್ನಾಟಕ ಆಡಳಿತ ಸೇವೆ ಅಧಿಕಾರಗಳ ಸಂಘವು 2019ಕ್ಕೆ ನೂರು ವರ್ಷಗಳನ್ನು ಪೂರೈಸಿತ್ತು. ಕೋವಿಡ್ ಕಾರಣದಿಂದ ಶತಮಾನೋತ್ಸವವನ್ನು ಮುಂದೂಡಲಾಗಿತ್ತು’ ಎಂದು ತಿಳಿಸಿದರು. ‘ಈ ಸಮಾರಂಭವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸಲಿದ್ದಾರೆ. ಸಂಘದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು. ‘ಟಿ. ಎಂ. ವಿಜಯಭಾಸ್ಕರ, ರಾಜೀವ್ ಚಾವ್ಹಾ, ಗುರುರಾಜ ಕರಜಗಿ ಮತ್ತು ಟಿ. ವಿ. ಮೋಹನ್ ದಾಸ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…
ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಪುನರ್ವಸತಿ ಯೋಜನೆಯಡಿ ತುಮಕೂರು ತಾಲ್ಲೂಕಿನ ಹೊಳಕಲ್ಲು, ಹೊನ್ನುಡಿಕೆ, ಹಿರೇಹಳ್ಳಿ, ಸೀತಕಲ್ಲು ಮತ್ತು ನೆಲಹಾಳ್ ಈ ಐದು ಗ್ರಾಮ ಪಂಚಾಯಿತಿಗಳು ಹಾಗೂ ತುರುವೇಕೆರೆ ತಾಲ್ಲೂಕಿನ ತಂಡಗ, ಭೈತರಹೊಸಹಳ್ಳಿ, ತಾಳೆಕೆರೆ, ಉಲ್ಲೇಕೆರೆ ಮತ್ತು ಆನೇಕೆರೆ ಸೇರಿದಂತೆ 10 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ರೂ.9000/- ಗಳ ಗೌರವಧನ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಸದರಿ ಹುದ್ದೆಗೆ ಶೇ.40ರ ಮೇಲ್ಪಟ್ಟು ಪ್ರಮಾಣವಿರುವ ವಿಕಲಚೇತನ ಅಭ್ಯರ್ಥಿಗಳು, ಎಸ್.ಎಸ್.ಎಲ್.ಸಿ ಉತ್ತೀರ್ಣ 18-45 ವರ್ಷದೊಳಗಿನ ಹಾಗೂ ಅದೇ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಮತ್ತು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ (ಯು.ಡಿ.ಐ.ಡಿ) ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಸಕ್ತರು ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ತುರುವೇಕೆರೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿಗಳ ಕಛೇರಿ, ಎಂ.ಜಿ.ರಸ್ತೆ, ಜಿಲ್ಲಾ ಬಾಲಭವನ ಆವರಣ, ತುಮಕೂರು ಇಲ್ಲಿ…
ತುಮಕೂರು: ವಿಶ್ವವಿದ್ಯಾಲಯಗಳು ಮತ್ತು ಅದರ ಸಂಯೋಜಿತ ಕಾಲೇಜುಗಳು “ಒಂದು ಕಾಲೇಜು, ಒಂದು ಗ್ರಾಮ” ಅಂದರೆ ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಮುಂದಾಗಬೇಕು ಹಾಗೂ ಶಾಲಾ ಕಾಲೇಜುಗಳಲ್ಲಿ ಡ್ರಾಪ್ ಔಟ್ ಸಮಸ್ಯೆಯನ್ನು ತಡೆಯಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ತುಮಕೂರು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕಾದರೆ, ಮೊದಲಿಗೆ ಡ್ರಾಪ್ ಔಟ್ ಸಮಸ್ಯೆಯನ್ನು ಬಗೆಹರಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸಲು ಪ್ರಯತ್ನಿಸಬೇಕು ಹಾಗೂ ಆದಷ್ಟು ಉತ್ತಮ ಶಿಕ್ಷಣ ಪಡೆಯಲು ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದರು. ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಅನಾದಿ ಕಾಲದಿಂದಲೂ “ವಸುಧೈವ ಕುಟುಂಬಕA” ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ ಮತ್ತು “ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ” ಎಂಬ ಮನೋಭಾವದಿಂದ ಪ್ರೇರಿತವಾಗಿದೆ, ನಾವು ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವಶಾಂತಿಗಾಗಿ ಶ್ರಮಿಸುತ್ತೇವೆ ಮತ್ತು ಸಮಾನತೆ ಮತ್ತು…
ತುಮಕೂರು: ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದ ಸಂತೋಷದಲ್ಲಿ ಇದ್ದ ನನಗೆ ನಟ ವಿಜಯ ರಾಘವೇಂದ್ರ ಪತ್ನಿ ಸಾವಿನ ವಿಷಯ ಕೇಳಿ ಶೇಕಡ 100ರಷ್ಟು ಸಂತೋಷ ಇಳಿದುಹೋಯ್ತು ಎಂದು ಹಿರಿಯ ನಿರ್ದೇಶಕ ಟಿ ಎಸ್ ನಾಗಾಭರಣ ತಿಳಿಸಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನಿಜಕ್ಕೂ ಈ ವಿಷಯ ಕೇಳಿ ಬಹಳ ದುಃಖ ಆಗಿದೆ. ನಮ್ಮದು ಮತ್ತು ಅವರದ್ದು ಬಹಳ ದೊಡ್ಡ ಒಡನಾಟ. ಚಿನ್ನಾರಿ ಮುತ್ತನ ಬೆಳವಣಿಗೆಯನ್ನು ಕಾಣ್ತಾ ಬಂದವನು ಎಂದರು. ನನ್ನ ಚೆನ್ನಾರಿ ಮುತ್ತನನ್ನ ಅಲ್ಲಿ ಕಂಡವನು. ಈ ವಿಷಯ ಕೇಳಿ ನಿಜವಾಗಿಯೂ ನನಗೆ ಶಾಕ್ ಆಗ್ತಿದೆ. ನಿನ್ನೆ ಅವರ ಮಗ ಶೌರ್ಯನ ಜೊತೆ ಕ್ಲಾಸ್ ನಡಿತಾ ಇತ್ತು ಎಂದರು. ನೀವು ಹೇಳ್ತಿರೋದನ್ನ ಕೇಳಿದ್ರೆ ಇದು ಏನಿದು ಅನಿಸುತ್ತೆ. ನಿಜವಾಗಿಯೂ ಪರಿತಾಪಪಡುವ ದುಃಖದ ವಿಷಯವಾಗಿದೆ ಎಂದು ಹೇಳಿದರು. ನನಗೆ ರಿಯಾಕ್ಟ್ ಮಾಡೋಕೆ ಆಗ್ತಿಲ್ಲ. ಬಹಳ ಬಹಳ ದುಃಖದ ಸಂಗತಿ. ಯಾಕೋ ಆ ಕುಟುಂಬದ ಸುತ್ತ ಛಾಯೆಗಳು ನಿರಂತರವಾಗಿ ಎರಗ್ತಿದಿಯಲ್ಲ…
ರಾಜಗೋಪಾಲನಗರದ ಸನ್ ರೈಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಚಿನಕುರಳಿ ಚಿಣ್ಣರ ಸಂತೆ ಏರ್ಪಡಿಸಲಾಗಿತ್ತು. ಶಾಲಾ ಆವರಣ, ಅಕ್ಷರಶಃ ಸಂತೆಯ ವಾತಾವರಣವಾಗಿ ಪರಿವರ್ತನೆಯಾಗಿತ್ತು. ಈ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ತರಕಾರಿ ಮಾರಾಟ ಮಾಡುವ ರೈತರು ಹಾಗೂ ವ್ಯಾಪಾರಸ್ಥರಾಗಿದ್ದರು. ಪೋಷಕರು ಹಾಗೂ ಶಾಲೆಯ ಅಕ್ಕಪಕ್ಕದ ನಿವಾಸಿಗಳು ಗ್ರಾಹಕರಾಗಿದ್ದರು. ಶಾಲಾ ಮಕ್ಕಳು ಸೊಗಸಾದ ಜಾನಪದ ಗೀತೆ ಹಾಡಿ ಚಿಣ್ಣರ ಸಂತೆಗೆ ಹೆಚ್ಚು ಮೆರುಗು ತಂದರು. ವ್ಯವಸ್ಥಾಪಕ ಮಹೇಶ್ ಮಾತನಾಡಿ, ‘ಇಂದು ಮಾಲ್ ಸಂಸ್ಕೃತಿ, ಆನ್ ಲೈನ್ ಶಾಪ್ ಗೆ ಹೊಂದಿಕೊಂಡಿರುವ ಮಕ್ಕಳಿಗೆ ಈ ಒಂದು ಸಂತೆ ಮಾರುವ, ಕೊಳ್ಳುವ ವ್ಯವಹಾರದ ಜ್ಞಾನವನ್ನು ಬೆಳೆಸುವಂತೆ ಕಾರ್ಯಕ್ರಮದ ಅವಕಾಶ ಒದಗಿಸಿ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿ ತುಂಬಾ ಸೊಗಸಾಗಿ ಮೂಡಿಬರುವಂತೆ ಅವಕಾಶವನ್ನು ನೀಡಿದ ನಮ್ಮ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಪೋಷಕರು ಕಾರಣರಾಗಿದ್ದಾರೆ’ ಎಂದರು. ‘ಶಾಲೆಗಳಲ್ಲಿ ಏರ್ಪಡಿಸುವ ಇಂತಹ ಚಿಣ್ಣರ ಸಂತೆ ಸಂಭ್ರಮದಲ್ಲಿ ಪೋಷಕರ ಮಾರ್ಗದರ್ಶನದಲ್ಲಿ ಮಕ್ಕಳು ಭಾಗವಹಿಸುವುದರಿಂದ ವಸ್ತುಗಳ ಪರಿಚಯ,ದರ…
ವರ್ತೂರು ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯೊಂದರ 10 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲೆ ಬಂದ್ ಮಾಡಲು ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ. ಶಾಲೆಯ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪದಡಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೃತ್ಯದ ಬಗ್ಗೆ ಮಾಹಿತಿ ಪಡೆದ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ, ಸದಸ್ಯ ಶಶಿಧರ ಕೋಸಂಬಿ ನೇತೃತ್ವದ ತಂಡ, ಸಂತ್ರಸ್ತ ಬಾಲಕಿ ಮನೆ ಹಾಗೂ ಶಾಲೆಗೆ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿತು. ಬೆಂಗಳೂರು ಪೂರ್ವ ತಾಲ್ಲೂಕಿನ ದಕ್ಷಿಣ ವಲಯ-4ರ ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಆರ್. ರಾಮಮೂರ್ತಿ, ಮಕ್ಕಳ ಕಲ್ಯಾಣ ಅಧಿಕಾರಿ ಶಿವಕುಮಾರ್ ಜೊತೆಗಿದ್ದರು. ವರ್ತೂರು ಠಾಣೆ ಪಿಎಸ್‌ಐ ಶ್ರೀನಿವಾಸ್ ಶಿರೂರ, ಶಾಲೆಯಲ್ಲಾದ ಕೃತದ ಬಗ್ಗೆ ತಂಡಕ್ಕೆ ವಿವರಣೆ ನೀಡಿದರು. ತಂಡದ ಸದಸ್ಯರು, ಅದನ್ನು…
ಬೆಂಗಳೂರು ನಗರದ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಉತ್ತರ ಪ್ರದೇಶದ ನಾಲ್ವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಿಂತು ವಿಶ್ವಾಸ್, ಹರೀಶ್ ಚಂದ್ರ, ಜಸ್ವೀರ್ ಹಾಗೂ ಚಂದ್ರಬಾನು ಬಂಧಿತರು. ಉತ್ತರ ಪ್ರದೇಶದಿಂದ ವಿಮಾನದಲ್ಲಿ ನಗರಕ್ಕೆ ಆಗಾಗ ಬರುತ್ತಿದ್ದ ಆರೋಪಿಗಳು, ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು. ನಾಲ್ವರನ್ನೂ ಬಂಧಿಸಿ 178 ಲಕ್ಷ ಮೌಲ್ಯದ 1 ಕೆ. ಜಿ 430 ಗ್ರಾಂ ಚಿನ್ನಾಭರಣ ಹಾಗೂ ವಜ್ರದ ಒಡವೆ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ‘ಆರೋಪಿಗಳು, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದರು. ದೆಹಲಿ, ಕರ್ನಾಟಕ, ಕೇರಳ ಹಾಗೂ ರಾಜಸ್ಥಾನ್ ರಾಜ್ಯಗಳಲ್ಲಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದರು. ವಿಮಾನದಲ್ಲಿ ಸಂಚಾರ, ಲಾಡ್ಜ್ ನಲ್ಲಿ ವಾಸ್ತವ್ಯ: ಉತ್ತರ ಪ್ರದೇಶದಿಂದ ವಿಮಾನದಲ್ಲಿ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಇಲ್ಲಿಯ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಆರಂಭದಲ್ಲಿ, ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅದರಲ್ಲಿಯೇ ನಗರದ ಹಲವು ಪ್ರದೇಶಗಳಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು. ‘ಅಂಗಳದಲ್ಲಿ ಕಸ…
ಬೆಂಗಳೂರು: ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದು ಇದನ್ನು ಶಮನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು (ಆ.07) 6 ಜಿಲ್ಲೆಗಳ ಸಚಿವರು, ಶಾಸಕರ ಜತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಯಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಧಾರವಾಡ, ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಶಾಸಕರು, ಉಸ್ತುವಾರಿ ಸಚಿವರು ಭಾಗಿಯಾಗುವ ನಿರೀಕ್ಷೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪಕ್ಷದ ಅಲ್ಪಸಂಖ್ಯಾತರ ನಾಯಕರ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಈ ಸಮುದಾಯದ ನಾಯಕರು ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಈ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸರ್ಕಾರ ವಾರ್ಡ್ ಮರುವಿಂಗಡಣೆ ಹೆಸರಲ್ಲಿ ಇವರ ಕ್ಷೇತ್ರಗಳನ್ನು ವಿಭಜಿಸಿ, ಈ ಸಮುದಾಯದವರು ಅವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಧ್ಯವಾಗದ ರೀತಿಯಲ್ಲಿ ಮಾಡಲಾಗಿತ್ತು. ಆಮೂಲಕ ಅವರ ಮತಗಳನ್ನು ಒಡೆಯುವ ಕೆಲಸ ಮಾಡಲಾಗಿತ್ತು. ಹೀಗಾಗಿ ಅಲ್ಪಸಂಖ್ಯಾತರು ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿದ್ದಾರೆ. ಈ ವಿಚಾರವನ್ನು ಸಮಿತಿಗೆ ಪಾಲಿಕೆ ಚುನಾವಣೆ ಸಮಿತಿ ಮುಂದೆ ಇಡಲಾಗುವುದು. ಅವರ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಸ್ಥಾನಮಾನ ನೀಡಲಾಗುವುದು. ಇನ್ನು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ಸಂಸತ್ ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಎಲ್ಲಾರೂ ಒಂದಾಗಿ ಕೆಲಸ ಮಾಡಿ ದೇಶವನ್ನು ರಕ್ಷಣೆ ಮಾಡಬೇಕು. ಇಂಡಿಯಾ ಗೆಲ್ಲಿಸಬೇಕು ಎಂಬುದು ನಮ್ಮೆಲ್ಲರ ಅಜೆಂಡಾ ಆಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…