Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ಬೆಂಗಳೂರು: ಬಿಬಿಎಂಪಿ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೇ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಟಾರ್ಗೆಟ್ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿನ ಬಿಬಿಎಂಪಿ ಎಲ್ಲಾ ಟೆಂಡರ್, ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. 2019 ರಿಂದ 2023 ರವರೆಗೆ ಬಿಬಿಎಂಪಿಯಲ್ಲಿ ನಡೆದ ಟೆಂಡರ್ ಗಳು, ಕಾಮಗಾರಿಗಳು, ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಸಂಪೂರ್ಣ ಮಾಹಿತಿ ನೀಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪ್ರತಿ ಕಾಮಗಾರಿಯಲ್ಲಿ 15 ಅಂಶಗಳ ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ನೀಡುವಂತೆ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹಾಗಾದರೆ ಚುನಾವಣೆ ಸಮಯದಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ತಂತ್ರನಾ? ಬಿಜೆಪಿ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಾರಾ? ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ದೊಡ್ಡ ಅಕ್ರಮ ಆಗಿದೆಯಾ? ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ತನಿಖೆ ಮಾಡಿಸುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಗೊರಗುಂಟೆಪಾಳ್ಯ ಬಳಿಯ ಹೊರವರ್ತುಲ ರಸ್ತೆಯಲ್ಲಿ ಬೈಕ್ ಸವಾರರಿಗೆ ಚಾಕು ತೋರಿಸಿ ಮೊಬೈಲ್ ಸುಲಿಗೆ ಮಾಡಿದ್ದ ಅಪರಾಧಿ ಕಾರ್ತಿಕ್ ಕೆ. ಅಲಿಯಾಸ್ ಗುಂಡನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ನಗರದ 51ನೇ ಸಿಸಿಎಚ್ ನ್ಯಾಯಾಲಯು ಆದೇಶ ಹೊರಡಿಸಿದೆ. 2021ರ ಜ. 3ರಂದು ಬೈಕ್ ಸವಾರರಿಬ್ಬರು ಹೊರವರ್ತುಲ ರಸ್ತೆಯಲ್ಲಿ ಹೊರಟಿದ್ದರು. ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿದ್ದ ಸವಾರ, ಮೂತ್ರ ವಿಸರ್ಜನೆಗೆ ಹೋಗಿದ್ದರು. ಹಿಂಬದಿ ಸವಾರ, ಬೈಕ್ ಮೇಲೆ ಕುಳಿತಿದ್ದರು. ಇದೇ ವೇಳೆ ಸ್ಥಳಕ್ಕೆ ಬಂದಿದ್ದ ಕಾರ್ತಿಕ್, ಚಾಕು ತೋರಿಸಿ ಮೊಬೈಲ್ ಕಸಿದುಕೊಂಡಿದ್ದ. ನಂತರ, ಮೂತ್ರ ವಿಸರ್ಜನೆಗೆ ಹೋಗಿದ್ದ ಸವಾರನನ್ನು ಬೆನ್ನಟ್ಟಿ ಹಿಡಿದು ಚಾಕು ತೋರಿಸಿ ಅವರ ಮೊಬೈಲ್ ಸಹ ಸುಲಿಗೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು. ‘ಸವಾರರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿದರು. ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಸಿ. ಬಿ. ಸಂತೋಷ್ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಬಿ. ಎಚ್. ಭಾಸ್ಕರ್…
ಬಾಲಕಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 12 ವರ್ಷದ ಬಾಲಕಿ, 2020ರ ಫೆ. 9ರಂದು ಬೆಳಿಗ್ಗೆ ತಮ್ಮ ಸಾಕುನಾಯಿ ಜೊತೆ ಮನೆ ಎದುರು ನಿಂತುಕೊಂಡಿದ್ದಳು. ಇದೇ ವೇಳೆ ಆರೋಪಿ ಬಾಲಕಿಯ ಎದುರು ರಹಮತ್-ಉಲ್ಲಾ, ತನ್ನ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಈತನ ವರ್ತನೆಯಿಂದ ಹೆದರಿದ ಬಾಲಕಿ, ಮನೆಯೊಳಗೆ ಹೋಗಿದ್ದಳು. ಆದರೂ ಕಾಮುಕ ಬಿಡದೆ ಬಾಲಕಿಯನ್ನು ಆತ ಹಿಂಬಾಲಿಸಿದ್ದ ಎನ್ನಲಾಗಿದೆ. ಅದೇ ಸಮಯದಲ್ಲಿ ಬಾಲಕಿಯ ಪೋಷಕರನ್ನು ಕಂಡ ಕಾಮುಕ ಮನೆಯಿಂದ ಓಡಿಹೋಗಿದ್ದ. ಗಾಬರಿಗೊಂಡಿದ್ದ ಬಾಲಕಿ, ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಳು. ನಂತರ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಜಿ. ಪಿ. ರಮೇಶ್, ರಹಮತ್-ಉಲ್ಲಾನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ‘ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಜೊತೆಯಲ್ಲಿ ಗೆ 20…
ಇತ್ತೀಚೆಗೆ ನಡೆದಿದ್ದ ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಂದರ್ಭದಲ್ಲಿ ದೂರು ದಾಖಲಾಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಪ್ರತ್ಯೇಕವಾಗಿ ಕರೆಸಿ ವಿಚಾರಣೆ ನಡೆಸಿದಾಗ, ವಿಡಿಯೋ ಚಿತ್ರೀಕರಣ ಮಾಡಿರುವುದು ನಿಜ ಎಂದು ಆ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಇನ್ನು ಪ್ರಕರಣದಲ್ಲಿ ತಪ್ಪೊಪ್ಪಿಗೆ ಬಗ್ಗೆ ವಿದ್ಯಾರ್ಥಿನಿಯರು ಬಾಯಿ ಬಿಟ್ಟಿದ್ದು, ಇದನ್ನು ತಮಾಷೆಗೆಂದು ಮಾಡಲಾಗಿದೆ ಹೊರತು, ಬೇರೆ ಯಾವುದೇ ದುರುದ್ದೇಶದಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಅಲಿಯಾ ಎಂಬ ಮೂವರು ವಿದ್ಯಾರ್ಥಿನಿಯರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಈಗ ವಿದ್ಯಾರ್ಥಿನಿಯರೇ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ ಸ್ಟೆಬಲ್ ನವೀನ್‌ಕುಮಾರ್ (35) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹಾಸನದ ನವೀನ್ ಕುಮಾರ್, ಹಲವು ವರ್ಷಗಳಿಂದ ವಿಜಯನಗರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಭಾನುವಾರ ಬೆಳಿಗ್ಗೆ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸರು ಹೇಳಿದರು. ‘ಶನಿವಾರ ರಾತ್ರಿ ಕೆಲಸ ಮುಗಿಸಿ ನವೀನ್ ಮನೆಗೆ ಹೋಗಿದ್ದರು. ಶನಿವಾರ (ಆಗಸ್ಟ್ 5) ಬೆಳಿಗ್ಗೆ ಸಹೋದರ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಸಹೋದರ, ಮನೆ ಬಳಿ ಹೋಗಿ ನೋಡುವಂತೆ ಸಂಬಂಧಿಕರಿಗೆ ತಿಳಿಸಿದ್ದರು. ಸಂಬಂಧಿಕರು, ಮನೆಗೆ ಹೋಗಿ ನೋಡಿದಾಗಲೇ ಮೃತದೇಹ ಕಂಡಿತ್ತು’ ಎಂದು ತಿಳಿಸಿದರು. ‘ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ’ ಎಂದರು. ಮದುವೆ ನಿಶ್ಚಯ: ‘ನವೀನ್ ಅವರಿಗೆ ಮದುವೆ ನಿಶ್ಚಯವಾಗಿತ್ತು. ಆಗಸ್ಟ್ ಕೊನೆಯ ವಾರದಲ್ಲಿ ಮದುವೆ ನಡೆಯಬೇಕಿತ್ತು.…
ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಗುರುತಿಸುವಲ್ಲಿ ಪೊಲೀಸರ ಪಾತ್ರ ಮುಖ್ಯ. ಆ ಮಕ್ಕಳ ಸಾಮರ್ಥ್ಯ ಅನುಸಾರ ವಾತಾವರಣ ಕಲ್ಪಿಸಿ ಉತ್ತಮ ಪ್ರಜೆಗಳಾಗಿ ರೂಪಿಸಬೇಕು’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹೇಳಿದರು. ಬಾಲ ನ್ಯಾಯ ಮಂಡಳಿ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಭಾನುವಾರ ಆಯೋಜಿಸಿದ್ದ ‘ಮಕ್ಕಳ ರಕ್ಷಣೆಯ ಕುರಿತು ಸಮಾಲೋಚನ ಸಭೆ’ಯಲ್ಲಿ ವರ್ಚ್ಯುವಲ್ ಆಗಿ ಅವರು ಮಾತನಾಡಿದರು. ‘ರಾಜ್ಯದಲ್ಲಿ 34 ಬಾಲ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುತ್ತಿವೆ. 17 ಪುನಶ್ವೇತನ ಕೇಂದ್ರಗಳಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕಿಡಾದವರ ಪುನಶ್ವೇತನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸಂಘರ್ಷಕ್ಕಿಡಾದ 6,366 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ’ ಎಂದು ಮಾಹಿತಿ ನೀಡಿದರು. ‘ಮಕ್ಕಳು ಕಾನೂನುಬಾಹಿರ ಚಟುವಟಿಕೆಗಳಿಗೆ ಸಿಲುಕದಂತೆ ಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಕುಟುಂಬ, ಶಿಕ್ಷಣ ಸಂಸ್ಥೆಗಳು, ಕಾನೂನು ಅನುಷ್ಠಾನ ಸಂಸ್ಥೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು. ‘ಮಕ್ಕಳನ್ನು ಬಂಧನದಲ್ಲಿರಿಸಿದರೆ ಮತ್ತಷ್ಟು ತಪ್ಪು ದಾರಿಗೆ ಹೋಗುವ ಸಾಧ್ಯತೆ ಇದೆ. ಅವರನ್ನು ಸಮುದಾಯ ಆಧಾರಿತ ಪರ್ಯಾಯ ಮಾರ್ಗಗಳ ಮೂಲಕ ಅವರಲ್ಲಿ…
ಹಿಟ್ ಆಂಡ್ ರನ್ ಅಪಘಾತಕ್ಕೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ರಘು ಮತ್ತು ಚಿರಂಜೀವಿ ಮೃತಪಟ್ಟ ದುರ್ದೈವಿಗಳು. ವಾಸು ಎಂಬವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಬೆಂಗಳೂರಿನ ಕುವೆಂಪು ನಗರದ ನಿವಾಸಿಗಳಾಗಿದ್ದು, ಪುಸ್ತಕ ವ್ಯಾಪಾರ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಹಿಂದಿರುಗುವ ವೇಳೆ ಅಪಘಾತ ನಡೆದಿದೆ. ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಬಂದಿದ್ದ ಮಾರುತಿ ಇಕೋ ನಿಂತಿದ್ದ ಕಾರ್ ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಮೊದಲು ರಸ್ತೆ ಬದಿ ನಿಂತಿದ್ದ ಒರ್ವನಿಗೆ ಹಾಗೂ ಡಿಯೋ ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಸ್ಥಳೀಯರು ಕಾರ್ ತಡೆದು ನಿಲ್ಲಿಸಿದ್ದು, ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಕಾರ್ ಸಮೇತ ಎಸ್ಕೆಪ್ ಆಗಿದ್ದಾರೆ. ಆಕಾಶ್ ಎಂಬಾತನನ್ನು ಹಿಡಿಯುವಲ್ಲಿ ಸ್ಥಳೀಯರು…
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ.ಇಂಥವರಿಂದ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ದಿವಾಳಿಕರಣ ಸಿದ್ದರಾಮಯ್ಯ ಎಂದು ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದು, ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬ್ಯಾಂಕಾಕ್ ನಲ್ಲಿ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ವಿಜಯ ರಾಘವೇಂದ್ರ ಅಭಿಮಾನಿಗೆ ಇದೊಂದು ಬೇಸರದ ಸುದ್ದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಣಿಪುರದಲ್ಲಿ ಹಿಂಸಾಚಾರ ಕೊನೆಗಾಣಿಸಬೇಕು. ಶಾಂತಿ, ಸೌಹಾರ್ದವನ್ನು ಮರುಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ. ಮಣಿಪುರದಲ್ಲಿ ಮೂರು ತಿಂಗಳಲ್ಲಿ 200ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದು, 800ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 70,000ಕ್ಕೂ ಅಧಿಕ ಜನರು ಸ್ಥಳಾಂತರಗೊಂಡಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಹಿಂಸಾಚಾರ ಮುಂದುವರಿದಿದೆ. ಇದನ್ನು ನಿಯಂತ್ರಿಸಲು ಭಾರತ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮಣಿಪುರದಲ್ಲಿ ಮಾತ್ರವಲ್ಲ ದೇಶದ ವಿವಿಧೆಡೆ ಸಾಮಾಜಿಕ ಅಸ್ಥಿರತೆ, ಅಶಾಂತಿ, ಅಭದ್ರತೆ ಸೃಷ್ಟಿಯಾಗಿದೆ. ವಿಶ್ವಾಸ, ಸಹೋದರ ಭಾವನೆ, ನಾಗರಿಕತೆ, ಪರಸ್ಪರ ನಂಬಿಕೆ ಕಳೆದು ಹೋಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ರಾಷ್ಟ್ರಪತಿಯವರು ಮಧ್ಯಪ್ರವೇಶಿಸಬೇಕು. ಸಾಧ್ಯವಾದರೆ ರಾಷ್ಟ್ರಪತಿ ಆಡಳಿತ ಹೇರಬೇಕು. ಕೋಮುವಾದಿ ಗೂಂಡಾಗಳ, ಕೊಲೆಗಡುಕರ ವಿರುದ್ಧ ಕ್ರಮಕೈಗೊಳ್ಳಬೇಕು. ಮಹಿಳೆಯರು, ಮಕ್ಕಳಿಗೆ ಆಶ್ರಯ, ರಕ್ಷಣೆ ನೀಡಬೇಕು ಎಂದು ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕೌತಾಳ್, ಬರಹಗಾರ ಶಿವಸುಂದರ್, ಎನ್. ವೆಂಕಟೇಶ್ ಪತ್ರ ಬರೆದಿದ್ದಾರೆ. ಪ್ರತಿಯನ್ನು ಪ್ರಧಾನಿ,…