Author: admin

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಮನೆಯತ್ತ ಹೊರಟಿದ್ದ ರೌಡಿ ಮಹೇಶ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್‌ ನನ್ನು ಹಳೇ ವೈಷಮ್ಯದಿಂದಾಗಿ ಕೊಲೆ ಮಾಡಿರುವುದು ಗೊತ್ತಾಗಿದೆ. ಕೃತ್ಯ ಎಸಗಿದ್ದಾರೆ ಎನ್ನಲಾದ ರೌಡಿ ವಿಲ್ಸನ್ ಗಾರ್ಡನ್ ನಾಗ, ಈತನ ಸಹಚರ ಮೋಹನ್ ಅಲಿಯಾಸ್ ಡಬಲ್ ಮೀಟರ್‌ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಕೊಲೆ ಪ್ರಕರಣದಲ್ಲಿ ಮಹೇಶ್ ಜೈಲಿಗೆ ಹೋಗಿದ್ದ. ಜೈಲಿನಿಂದ ಹೊರಬಂದ ನಂತರ, ನಾಗ ಹಾಗೂ ಆತನ ಕಡೆಯವರನ್ನು ಹತ್ಯೆಗೆ ಸಂಚು ರೂಪಿಸುತ್ತಿದ್ದ. ಈ ಮಾಹಿತಿ ತಿಳಿದ ನಾಗ, ಜೈಲಿನಿಂದ ಹೊರಬರುತ್ತಿದ್ದಂತೆ ಮಹೇಶ್ ಹತ್ಯೆ ಮಾಡಿದ್ದಾನೆ’ ಎಂದು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe…

Read More

ಬೆಂಗಳೂರು ನಗರದ ಕಾನೂನು ಕಾಲೇಜೊಂದರ ವಿದ್ಯಾರ್ಥಿ ಆರ್ಯಕುಮಾರ್ ನಡ್ಡಾ (23) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಮಾಚಲ ಪ್ರದೇಶದ ಆರ್ಯಕುಮಾರ್, ವ್ಯಾಸಂಗಕ್ಕೆಂದು ನಗರಕ್ಕೆ ಬಂದಿದ್ದರು. ಎಲ್. ಎಲ್. ಬಿ ಮೂರನೇ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸರು ಹೇಳಿದರು. ‘ಶ್ರೀಗಂಧಕಾವಲು ಡಿ ಗ್ರೂಪ್ ಬಡಾವಣೆಯ ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ (ಪಿ. ಜಿ) ಆರ್ಯಕುಮಾರ್ ವಾಸವಿದ್ದರು. ಭಾನುವಾರ ಬೆಳಿಗ್ಗೆ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹ ನೋಡಿದ್ದ ಪಿ. ಜಿ ಸಿಬ್ಬಂದಿ ಠಾಣೆಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕಾಂಗ್ರೆಸ್ಸಿಗರು ಆಶ್ವಾಸನೆ ಮೂಲಕವೇ ದೇಶವನ್ನು ಮುನ್ನಡೆಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ವಿಕಾಸದ ಯಾತ್ರೆ ನಡೆಯುತ್ತಿದೆ. ಆದರೆ ಕಾಂಗ್ರೆಸ್​ನ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಶ್ರೀಲಂಕಾ, ಪಾಕಿಸ್ತಾನದಲ್ಲಿ ಏನಾಗಿದೆ ಎಂದು ನಾವು ನೋಡಿದ್ದೇವೆ. ಈ ದೇಶವನ್ನು ಸಿದ್ದರಾಮಯ್ಯ ಯಾವ ಕಡೆ ಕೊಂಡೊಯ್ಯುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮ್ಯಾಟೋ ದರ ಕುಸಿದಿದೆ. ಕಳೆದ 2-3 ತಿಂಗಳಿಂದ ನಿರಂತರವಾಗಿ ಏರಿಕೆ ಕಂಡಿದ್ದ ಟೊಮ್ಯಾಟೋ ದರ, ಇದೀಗ 15 ಕೆಜಿ ಟೊಮ್ಯಾಟೋ ಬಾಕ್ಸ್ ದರ 2700 ರೂ.ನಿಂದ 1500 ರೂ. ಆಗಿದೆ. ಕಳೆದ 4 ದಿನಗಳಲ್ಲಿ ಟೊಮ್ಯಾಟೋ ದರ ಅಂದಾಜು 1000 ರೂ. ಕುಸಿತವಾಗಿದೆ. ಕೋಲಾರ ಎಪಿಎಂಸಿಗೆ ಬೇರೆ ರಾಜ್ಯಗಳಿಂದ ಟೊಮ್ಯಾಟೋ ಪೂರೈಕೆ ಹಿನ್ನೆಲೆ ಇಂದು 15 ಕೆಜಿ ಟೊಮ್ಯಾಟೋ ಬಾಕ್ಸ್​ 1500-1700 ರೂ.ಗೆ ಹರಾಜುಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕ್ರಾಂತಿಕಾರಿ ಕವಿ, ಖ್ಯಾತ ಜಾನಪದ ಗಾಯಕ ಗದ್ದರ್​ ಭಾನುವಾರ ನಿಧನ ಹೊಂದಿದ್ದಾರೆ. ಕೆಲ ದಿನಗಳಿಂದ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಗದ್ದರ್​ ಹೈದರಾಬಾದ್‌ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಡುಗಳ ಮೂಲಕ ಚಳವಳಿ ಹುಟ್ಟು ಹಾಕಿದ್ದರು. 2010ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ತೆಲಂಗಾಣ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ತೆಲಂಗಾಣದಲ್ಲಿ ದಲಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು. ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಸೈಜುಕಲ್ಲು ಎಸೆದು ಮಹಿಳೆಯೊಬ್ಬರನ್ನ ಕೊಲೆ ಮಾಡಲು ಯತ್ನಿಸಿರುವ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ತಿಮ್ಮಮ್ಮನಹಳ್ಳಿಯಲ್ಲಿ ನಡೆದಿದೆ. ಸುಬ್ಬಯ್ಯ ಎನ್ನುವವರಿಂದ  ಅಕ್ಕಮ್ಮ ಮೇಲೆ ದಾಳಿ ನಡೆದಿದೆ ಸಾರ್ವಜನಿಕರು ಓಡಾಡುವ ದಾರಿಯಲ್ಲಿ ಸುಬ್ಬಯ್ಯ ಕಲ್ಲುಹಾಕಿ ಬಂದ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ತಿಮ್ಮಮ್ಮನಹಳ್ಳಿಯಿಂದ ಉಪ್ಪಾರಹಳ್ಳಿಗೆ ಸಂಪರ್ಕ ಕಲ್ಪಿಸುತಿದ್ದ ದಾರಿಯಾಗಿದ್ದು ದಾರಿ ಬಿಡುವಂತೆ   ಅಕ್ಕಮ್ಮ ಒತ್ತಾಯಿಸಿದ್ದರು. ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ, ಅಲ್ಲದೆ ಮಾರಣಾಂತಿಕ ಹಲ್ಲೆ ನಡೆಸುವ ಹಂತಕ್ಕೆ ದ್ವೇಷ ಬೆಳದಿದೆ. ಜಮೀನಿನಲ್ಲಿ ಇರುವ ಸೈಜುಗಲ್ಲು ತಲೆ ಮೇಲೆ ಎತ್ತಾಕಿ ಕೊಲೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಅಕ್ಕಮ ಪಾರಾಗಿದ್ದಾರೆ , ಆದ್ರೆ ಅಕ್ಕಮ್ಮರ ಸೊಂಟ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡಿರುವ ಅಕ್ಕಮ ಅವರನ್ನು ಚಿಕಿತ್ಸೆಗಾಗಿ ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…

Read More

ಕೇರಳ ಪೊಲೀಸರಿಂದ ವೈಟ್ ಫೀಲ್ಡ್ ಸಿಇಎನ್ ಪೊಲೀಸರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಇನ್ಸ್ ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸೆಬಲ್ ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸಬಲ್ ಸಂದೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ. ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್‌ವೆರ್ ಇಂಜಿನಿಯರ್ ಬಳಿ ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ವಂಚನೆ ಮಾಡಿದ ಆರೋಪದ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ಹಣ ವರ್ಗಾವಣೆ…

Read More

ಪಿಎಸ್‌ಐ ಮತ್ತು ಸಿಬ್ಬಂದಿ ಎರವಲು ಸೇವೆಯನ್ನು ಮೂರು ವರ್ಷಕ್ಕೆ ಸೀಮಿತಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಮೂರು ವರ್ಷ ಮುಗಿದ ಬಳಿಕ ಮಾತೃ ಘಟಕಕ್ಕೆ ವರ್ಗಾವಣೆ ಮಾಡಲಾಗುತ್ತದೆ. ವಿಶೇಷ ಕಾರಣ ಅಥವಾ ಸಂದರ್ಭದಲ್ಲಿ ಡಿಜಿ ಐಜಿಪಿ ಕಚೇರಿ ಆದೇಶದ ಮೇರೆಗೆ ಗರಿಷ್ಠ 5 ವರ್ಷದವರೆಗೆ ವಿಸ್ತರಣೆ ಮಾಡಲಾಗುತ್ತದೆ. ಮಾತೃ ಘಟಕದಲ್ಲಿ ಕನಿಷ್ಠ ಎರಡು ವರ್ಷ ಕೂಲ್ ಪಿರಿಯೆಡ್ ಪೂರೈಸಬೇಕು. ಕೂಲ್ ಪಿರಿಯೆಡ್ ಪೂರೈಸದೇ ಮತ್ತೆ ಎರವಲು ಸೇವೆ ನೀಡಲು ನಿರ್ಬಂಧ ವಿಧಿಸಲಾಗಿದೆ. ಗುಪ್ತವಾರ್ತೆ, ಸಿಐಡಿ, ಅರಣ್ಯ ಘಟಕ, ಲೋಕಾಯುಕ್ತ, ಕೆಪಿಟಿಸಿಎಲ್, ಬಿಡಿಎ, ಬಿಎಂಟಿಎಫ್, ಹೈಕೋರ್ಟ್, ಕೆಎಟಿ, ಸಿಎಟಿ, ಡಿಸಿಆರ್‌ಇ ಸೇರಿ ಇತರ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುವ ಪಿಎಸ್‌ಐ ಮತ್ತು ಕೆಳ ದರ್ಜೆ ಸಿಬ್ಬಂದಿಗೆ ಈ ಆದೇಶ ಅನ್ವಯವಾಗಲಿದೆ. ಅವಧಿ ಮೀರಿ ಮುಂದುವರಿಯುವುದು ಆಡಳಿತಾತ್ಮಕ ದೃಷ್ಟಿಯಿಂದ ಸೂಕ್ತವಲ್ಲದ ಹಿನ್ನೆಲೆ ವಿಶೇಷ ಘಟಕದಲ್ಲಿ 3 ವರ್ಷ ಅವಧಿ ಪೂರೈಸಿದ ಎಸ್‌ಐ, ಸಿಬ್ಬಂದಿ ಮಾರ್ಗಸೂಚಿ ಪಾಲನೆ ಮಾಡಬೇಕೆಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಈ…

Read More

ಪ್ರಿಯತಮನೇ ಯುವತಿ ಮೇಲೆ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಮೈಕೋಲೇಔಟ್‌ನಲ್ಲಿ ನಡೆದಿದೆ. ಟೆಕ್ಕಿ ಸ್ನೇಹ ಚಟರ್ಜಿ(26) ಹಲ್ಲೆಗೊಳಗಾದ ಯುವತಿ. ಟೆಕ್ಕಿಗಳಾಗಿದ್ದ ಆರೋಪಿ ಪ್ರಿಯತಮ ರವಿಕುಮಾರ್(28) ಹಾಗೂ ಸ್ನೇಹ ಇಬ್ಬರು ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೌದು, ಅದೇ ಕಂಪನಿಯಲ್ಲಿ ಸ್ನೇಹ ಇಂಟರ್ನ್‌ಶಿಪ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪರಿಚಯವಾಗಿ ಪರಸ್ಪರ ಪ್ರೀತಿಸಿದ್ದರು ಎನ್ನಲಾಗಿದೆ. ಇತ್ತೀಚೆಗೆ ಬೇರೆ ಕಂಪನಿಗೆ ಸೇರಿಕೊಂಡಿದ್ದ ಟೆಕ್ಕಿ ಸ್ನೇಹ, ರವಿಕುಮಾರ್ ಜೊತೆ ಅಂತರ ಕಾಯ್ದುಗೊಂಡಿದ್ದರು. ಈ ಹಿನ್ನಲೆ ರವಿಕುಮಾರ್ ಫೋನ್ ಕರೆಯನ್ನ ಸ್ನೇಹ ಸ್ವೀಕರಿಸದ ಕಾರಣ, ಅನುಮಾನಗೊಂಡು ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಹೌದು, ಮೈಕೋಲೇಔಟ್ ನ ತನ್ನ ಪಿಜಿ ಬಳಿ ಆ. 2ರ ಬುಧವಾರ ಮುಂಜಾನೆ 3. 30ಕ್ಕೆ ಕರೆಸಿಕೊಂಡು ರಾಡ್‌ನಿಂದ ಸ್ನೇಹಳ ತಲೆಗೆ ಹೊಡೆದಿದ್ದಾನೆ. ಗಾಯಾಳು ಸ್ನೇಹಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ರವಿಕುಮಾರ್‌ನನ್ನು ಬಂಧಿಸಿ ಮೈಕೋಲೇಔಟ್ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನು ನಾನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ನೋಡೋಣ. ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದರು. ಹಿಟ್ ಅಂಡ್ ರನ್ ಮಾಡ್ತಾ ಇರೋದು ನೀವು. ಬಿಜೆಪಿ ಸರಕಾರದ ಮೇಲೆ 40% ಆರೋಪ ಮಾಡಿದಿರಿ. ಆ ಆರೋಪಗಳ ಕಥೆ ಏನಾಯಿತು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೆ? ಎಂದು ಕುಮಾರಸ್ವಾಮಿ ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More