Subscribe to Updates
Get the latest creative news from FooBar about art, design and business.
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
Author: admin
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ಒಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್.ಡಿ. ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದ್ರೂ ನಾನು ಕೆಲಸ ಮಾಡ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ಬೆಂಗಳೂರು: ಒಂದೆಡೆ ರಾಜ್ಯ ತೀವ್ರ ಬರಗಾಲ, ವಿದ್ಯುತ್ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಖ್ಯಮಂತ್ರಿ ನಿವಾಸಕ್ಕೆ ಹೊಸದಾಗಿ ಕಾನ್ಫ್ʼರೆನ್ಸ್ ಹಾಲ್ ಮಾಡಿಕೊಂಡಿದ್ದಾರೆ. ಅದಕ್ಕೆ 3 ಕೋಟಿ ರೂ.ಗಳಷ್ಟು ಜನರ ದುಡ್ಡು ಖರ್ಚು ಮಾಡಿದ್ದಾರೆ. ಅದರ ಜತೆಗೆ, ಕಾವೇರಿ ನಿವಾಸಕ್ಕೆ 1.90 ಕೋಟಿ ರೂಪಾಯಿ ಬೆಲೆ ಬಾಳುವ ʼಸ್ಟ್ಯಾನ್ಲಿʼ ವಿದೇಶಿ ಬ್ರಾಂಡಿನ ಸೋಫಾ ಸೆಟ್ ಸೋಫಾ ಸೆಟ್, ಕಾಟ್ ಹಾಕಿಸಲಾಗಿದೆ. ಇದಕ್ಕೆ ಸರಕಾರದಿಂದ ಹಣ ನೀಡಲಾಗಿಲ್ಲ. ಹಾಗಾದರೆ, ಅದಕ್ಕೆ ಹಣ ಕೊಟ್ಟವರು ಯಾರು? ಇಂಥ ಐಶಾರಾಮಿ ಸೋಫಾ, ಕಾಟ್ʼಗಳನ್ನು ಬಳಸುವ ವ್ಯಕ್ತಿ ಸಮಾಜವಾದಿನಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ನನಗೆ ಬಂದಿರುವ ಮಾಹಿತಿ ಪ್ರಕಾರ ಯಾರೋ ಸಚಿವರೊಬ್ಬರ ಕಡೆಯವರು ಅದನ್ನೆಲ್ಲಾ ಮಾಡಿಸಿದ್ದಾರಂತೆ. ಇದೆನ್ನೆಲ್ಲಾ ನೋಡುತ್ತಿದ್ದರೆ ಇದು ಹ್ಯುಬ್ಲೆಟ್ ವಾಚ್ʼನ ಅಪ್ಡೇಟೆಡ್…
ಬೆಂಗಳೂರು: “ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದೂ ಪ್ರಶ್ನಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು ಭಾನುವಾರ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಬಗ್ಗೆ ಕೇಳಿದಾಗ ಅವರು ತಿರುಗೇಟು ನೀಡಿದ್ದು ಹೀಗೆ; “ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು…
ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾಗಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ ಎಂದರು. ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ…
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಚಿರತೆ ಸುಮಾರು 15 ಗಂಟೆಗಳ ಕಾಲ ಜನವಸತಿ ಪ್ರದೇಶದಲ್ಲಿ ಬೀಡುಬಿಟ್ಟು ಪರಾರಿಯಾಗಿದೆ. ಚಿರತೆ ದಾಳಿಯಲ್ಲಿ ರಕ್ಷಣಾ ಕಾರ್ಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಚಿರತೆ ಕುನ್ನೂರು ಬಳಿಯ ಬ್ರೂಕ್ ಲ್ಯಾಂಡ್ ನಲ್ಲಿರುವ ವಸತಿ ಪ್ರದೇಶದಲ್ಲಿ ಸ್ವಚ್ಛಂದವಾಗಿ ತಿರುಗಾಡಿಕೊಂಡು ಭಾನುವಾರ ಬೆಳಗ್ಗೆ ಮನೆಯೊಂದಕ್ಕೆ ಪ್ರವೇಶಿಸಿದೆ ಎಂದು ವರದಿಯಾಗಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ನಿನ್ನೆ ಬೆಳಗ್ಗೆ ನೀಲಗಿರಿಯ ಕುನ್ನೂರಿನ ಬ್ರೂಕ್ ಲ್ಯಾಂಡ್ಸ್ ಪ್ರದೇಶದ ಮನೆಯೊಂದಕ್ಕೆ ಚಿರತೆಯೊಂದು ನುಗ್ಗಿ 6 ಜನರ ಮೇಲೆ ದಾಳಿ ಮಾಡಿದೆ.
ಬೆಂಗಳೂರು: ದಕ್ಷಿಣ ಬೆಂಗಳೂರಿನ ಕಾಳೇನ ಅಗ್ರಹಾರದ ಬಳಿ ವೇಗವಾಗಿ ಬಂದ ಎಸ್ ಯುವಿ ಬೈಕ್‌ನಲ್ಲಿದ್ದ ಇಬ್ಬರು ಸವಾರರ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ಗಾಯಾಳುಗಳನ್ನು ಕಿರಣ್, ಜಸ್ಮಿತಾ ಮತ್ತು ಬಸಂತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಅಪಘಾತದ ನಂತರ ಬೈಕ್‌ನಲ್ಲಿದ್ದ ಕಿರಣ್ ಜಿಗಿದು ಕೆಳಗೆ ಬಿದ್ದಿದ್ದಾರೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಇನ್ನೊಂದು ಬೈಕ್ ನಲ್ಲಿದ್ದ ಜಸ್ಮಿತಾ ಮತ್ತು ಬಸಂತ್ ಕುಮಾರ್ ಗೂ ಗಾಯಗಳಾಗಿವೆ.” ಕಾರು ಚಾಲಕನ ವಿರುದ್ಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಅಯೋಧ್ಯೆಯಲ್ಲಿ ದೀಪೋತ್ಸವದ ನಂತರ ಮಕ್ಕಳು ಚಿರಾತ್ ನಿಂದ ಎಣ್ಣೆಯನ್ನು ಸಂಗ್ರಹಿಸುತ್ತಾರೆ. ಈ ವಿಡಿಯೋವನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ದೈವಿಕತೆಯ ನಡುವೆ ಬಡತನ ‘ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ದೀಪಾವಳಿಯ ಪ್ರಯುಕ್ತ ಅಯೋಧ್ಯೆ ನಗರದ 51 ಸ್ಥಳಗಳಲ್ಲಿ 22 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಲಾಯಿತು. ವೀಡಿಯೊದಲ್ಲಿ, ಮಕ್ಕಳು ದೀಪವನ್ನು ಬೆಳಗಿಸಲು ಬಳಸುವ ಮಣ್ಣಿನ ಪಾತ್ರೆಗಳಿಂದ ಎಣ್ಣೆಯನ್ನು ಸಂಗ್ರಹಿಸುತ್ತಾರೆ. ದೈವಿಕತೆಯ ನಡುವೆ ಬಡತನ… ದೀಪದಿಂದ ಎಣ್ಣೆ ತೆಗೆಯಲು ಬಡತನ ಪ್ರೇರೇಪಿಸುವಲ್ಲಿ ಆಚರಣೆಯ ಬೆಳಕು ಮಂದವಾಗುತ್ತದೆ. ಘಟ್ಟಗಳಷ್ಟೇ ಅಲ್ಲ, ಬಡವರ ಪ್ರತಿ ಮನೆಯೂ ಬೆಳಗುವ ಹಬ್ಬವಾಗಬೇಕು’. ಅಖಿಲೇಶ್ ಯಾದವ್ ಎಕ್ಸ್ ನಲ್ಲಿ ಬರೆದಿದ್ದಾರೆ. ನಗರದ 51 ಸ್ಥಳಗಳಲ್ಲಿ 22 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಲಾಯಿತು. ಅಯೋಧ್ಯೆಯಲ್ಲಿ ನಡೆದ ದೀಪೋತ್ಸವವು ತನ್ನದೇ ದಾಖಲೆಯನ್ನು ಮುರಿದು ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆಯಿತು. ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ವಿಶ್ವ ದಾಖಲೆಯ ಘೋಷಣೆಯನ್ನೂ ಮಾಡಲಾಯಿತು.…
ದೆಹಲಿ: ವಾಯುವ್ಯ ದೆಹಲಿಯ ಖೇರಾ ಖುರ್ದ್ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಪೂಜೆಗೆಂದು ತೆರಳಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಹಿಂದೆ ಆಸ್ತಿ ವಿವಾದ ಇರಬಹುದೆಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಮಹಿಳೆಯ ಕುಟುಂಬದೊಂದಿಗೆ ಕೆಲವು ಆಸ್ತಿ ವಿವಾದವಿದ್ದು, ಇದೇ ದಾಳಿಯ ಹಿಂದೆ ಇದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಘಟನೆ ನಡೆದ ಸ್ಥಳದ ಸಮೀಪದ ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಿತಿ ಗಂಭೀರವಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.
ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ದೂರದೃಷ್ಟಿ ನಾಯಕ ದಿ. ಅನಂತ್ ಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಅನಂತಸ್ಮೃತಿ ನಡಿಗೆ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ನಾಡಿನ ದಿಗ್ಗಜರ ಶ್ರೇಷ್ಠ ಬದುಕು ನಮಗೆಲ್ಲ ನಿತ್ಯ ನಿರಂತರ ಪ್ರೇರಣೆಯ ಚಿಲುಮೆಯಾಗಿದ್ದು, ನಾಡಿಗೆ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದಿ. ಅನಂತ್ ಕುಮಾರ್ ಪುಣ್ಯಸ್ಮರಣೆ ಅರ್ಥಗರ್ಭಿತವಾಗಿ ಆಚರಿಸಲಾಯಿತು ಎಂದರು. ಬೆಂಗಳೂರಿನಲ್ಲಿ ಅನಂತ ಸ್ಮೃತಿ ನಡಿಗೆ ಕಾರ್ಯಕ್ರಮದಲ್ಲಿ ಆರ್ ಅಶೋಕ್ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ತನ್ನ ನಾಯಕತ್ವ ಗುಣ, ಕರ್ತೃತ್ವಶಕ್ತಿ, ಮೇರು ವ್ಯಕ್ತಿತ್ವದ ಮೂಲಕ ರಾಷ್ಟ್ರ ಮಟ್ಟದ ನಾಯಕ ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿದ, ಬಿಜೆಪಿಯ ಅಪ್ರತಿಮ ಸಂಘಟಕರು ಹಾಗೂ ನಮ್ಮೆಲ್ಲರ ನಾಯಕರಾಗಿದ್ದ ದಿ. ಅನಂತಕುಮಾರ್ ಪುಣ್ಯಸ್ಮರಣೆಯ ದಿನದಂದು ನಡೆದ ಪಂಜಿನ ಮೆರವಣಿಗೆ ನಡೆಸಲಾಯಿತು ಎಂದರು. ಈ ಸಂದರ್ಭದಲ್ಲಿ ಹಿರಿಯರಾದ ಪಿ. ವಿ. ಕೃಷ್ಣಭಟ್, ಶ್ರೀಮತಿ ತೇಜಸ್ವಿನಿ ಅನಂತ ಕುಮಾರ್,…
ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಒಂಬತ್ತು ಮಂದಿ ಗಾಯಗೊಂಡಿದ್ದು, ಏಳು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮಥುರಾ ಜಿಲ್ಲೆಯ ಗೋಪಾಲಬಾಗ್ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ಪಟಾಕಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ತ್ವರಿತವಾಗಿ ಇತರ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತೀರ್ಮಾನಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುಟ್ಟ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲ ಅಂಗಡಿಗಳಿಗೂ ಪರವಾನಗಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಜಯ್ ಕಿಶೋರ್ ಹೇಳಿದ್ದಾರೆ.