Author: admin

ಕಾಶಿಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿರುವ ಸಹಾಯಧನವನ್ನು 5,000 ದಿಂದ 7,500 ರೂ. ಗಳಿಗೆ ಹೆಚ್ಚಿಸಲು ಚಿಂತನೆ ಮಾಡಲಾಗಿದೆ. ಆ ಮೂಲಕ ಸಾಮಾನ್ಯ ಭಕ್ತರು ಕೂಡ ಕಾಶಿಯಾತ್ರ ಕೈಗೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ ಸರಕಾರದಿಂದ ರಿಯಾಯಿತಿ ದರದ ‘ಕರ್ನಾಟಕ ಭಾರತ್’ ಗೌರವ ಕಾಶಿ ದರ್ಶನ’ ಯೋಜನೆಯಡಿ ಬೆಂಗಳೂರಿನಿಂದ 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ನಗರದ ಯಶವಂತಪುರ ರೈಲ್ವೆ ನಿಲ್ದಾಣದಿಂದ ಶನಿವಾರ ತೆರಳಿತು. ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು. ಕಾಶಿಯಾತ್ರೆಯ ಸಹಾಯಧನ ಹೆಚ್ಚಿಸುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂತಿಮ ಕೈಗೊಳ್ಳಲಾಗುವುದು. ಮುಂದಿನ ಟ್ರಿಪ್ ಆ. 12ಕ್ಕೆ ಹೊರಡಲಿದೆ. ರಾಮೇಶ್ವರಂ, ಗಯಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡಲಾಗುವುದು, ಎಂದು ತಿಳಿಸಿದರು. ”ಒಟ್ಟು 8 ದಿನಗಳ ಕಾಶಿ ಪ್ರವಾಸ ಇದಾಗಿದ್ದು, ಒಬ್ಬರಿಗೆ 20, 000 ರೂ. ವೆಚ್ಚವಾಗಲಿದೆ. ಇದರಲ್ಲಿ 5,000 ರೂ. ರಾಜ್ಯ ಸರಕಾರದಿಂದ ಸಹಾಯಧನ ಸಿಗಲಿದೆ. ಈ ಪ್ಯಾಕೇಜ್‌ನಲ್ಲಿ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭದಿಂದಲೂ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡುವುದನ್ನು ಮುಂದುವರೆಸಿದ್ದು, ಅವರ ಮಾತುಗಳು ಸಂಪೂರ್ಣ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಥಿಕತೆ ಹಾಳು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಆದರೆ, ಯುಪಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಬೆಲೆ ಏರಿಕೆಯಾಗಿ ಡಬಲ್ ಅಂಕಿ ಬೆಲೆ ಏರಿಕೆ, ಸಿಂಗಲ್ ಅಂಕಿ ಆರ್ಥಿಕ ಬೆಳವಣಿಗೆಯಾಗಿತ್ತು. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಆರೋಪ ಯುಪಿಎ ಸರ್ಕಾರದ ಮೇಲೆ ಇತ್ತು. ಆಕಾಶ, ಭೂಮಿ ನೀರಿನಲ್ಲಿ ಹಗರಣ ಇತ್ತು. ಎಲ್ಲೆಡೆ ಹಗರಣಗಳ ಸುರಿಮಳೆ ಇತ್ತು. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಆರ್ಥಿಕತೆ ಸಧ್ಯತೆ ತಂದಿದ್ದಾರೆ. ಮೋದಿಯವರ ಕಾಲದಲ್ಲಿ ಅತಿ ಹೆಚ್ಚು ವಿದೇಶಿ ವಿನಿಮಯ ನಿಧಿ ಇದೆ. 573 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಫಂಡ್…

Read More

ಅಭಿವೃದ್ಧಿ ಗೆ ಹಣ ಇಲ್ಲ ಅಂತ ನೀವೇ ಶಾಸಕರಿಗೆ ಹೇಳಿದ್ದಿರಿ, ಉಪ ಮುಖ್ಯಮಂತ್ರಿ ಕೂಡ ಅಭಿವೃದ್ಧಿ ಗೆ ಹಣ ಕೇಳಬೇಡಿ ಅಂತ ಹೇಳಿದ್ದಾರೆ. ನಮ್ಮ ಸರ್ಕಾರ ಸದೃಢ ಆರ್ಥಿಕತೆ ಮಾಡಿದ್ದರಿಂದ ನೀವು ಗ್ಯಾರೆಂಟಿ ಗಳನ್ನು ಕೊಡುತ್ತಿದ್ದೀರಿ, ಅವುಗಳಲ್ಲಿಯೂ ಕೂಡ ಕಂಡಿಷನ್ ಹಾಕಿದ್ದೀರಿ, ಅಕ್ಕಿ ಕೊಡುತ್ತೇವೆಂದು ಕೊಡದೇ ನಿಮ್ಮ ವೈಫಲ್ಯ ಕೇಂದ್ರ ಸರ್ಕಾರದ ಮೇಲೆ ಹಾಕುತ್ತಿದ್ದೀರಿ ಎಂದು  ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾತನಾಡಿ, ಗೃಹಜ್ಯೋತಿ ಯಲ್ಲಿ 200 ಯುನಿಟ್ ಕೊಡುತ್ತೆವೆ ಅಂತ ಹೇಳಿ ಸರಾಸರಿ ಅಂತ 43 ಯುನಿಟ್ ಕೊಡುತ್ತಿದ್ದೀರ, ಇದು ಜನರಿಗೆ ಮಾಡಿದ ಮೋಸ ಅಲ್ಲವಾ? ಗೃಹಲಕ್ಷ್ಮೀ ಇನ್ನೂ ಜಾರಿಗೆ ತರಲಿಕ್ಕೆ ಆಗಿಲ್ಲ. ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್ ಆರ್‌ಟಿಸಿ ಸಿಬ್ಬಂದಿಗೆ ಪೂರ್ಣ ಸಂಬಳ ಕೊಡಲಾಗುತ್ತಿಲ್ಲ. ಪೊಲಿಸರಿಗೆ ಸಂಬಳ ಕೊಡಲಿಕ್ಕೆ ಆಗುತ್ತಿಲ್ಲ. ನಾವು ಕೊವಿಡ್ ಸಂದರ್ಭದಲ್ಲೂ ಎಲ್ಲ ಉದ್ಯೋಗಿಗಳಿಗೆ ಪೂರ್ಣ ಸಂಬಳ ಕೊಟ್ಟಿದ್ದೆವು, ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ…

Read More

ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಇದುವರೆಗೂ ಒಂದು ಕೋಟಿ ಮಹಿಳೆಯರು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ರು. ಜುಲೈ 19 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಒಟ್ಟು 1. 28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಓನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಮಹಿಳೆಯರು ಯಾವುದೇ ಶುಲ್ಕ ನೀಡದೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು. ಕೇವಲ 15 ದಿನಗಳಲ್ಲಿ ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಳ‌ ಸಂಸತ ವ್ಯಕ್ತಪಡಿಸಿದ್ದಾರೆ. ಇದೇ ಆಗಸ್ಟ್ 16 ಅಥವಾ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಫಲಾನುಭವಿಗಳ ಬ್ಯಾಂಕ್…

Read More

ಬೆಂಗಳೂರಿನ ಎಎಸ್‌ ಸಿ ಸೆಂಟರಿನಿಂದ ಅಗ್ನಿವೀರರ ಮೊದಲ ಬ್ಯಾಚ್ ತರಬೇತಿಯನ್ನು ಪೂರ್ಣಗೊಳಿಸಿತು. ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಕೇಂದ್ರ ಸಶಸ್ತ್ರ ಪಡೆಗಳ ಮೂರು ಸೇವೆಗಳಿಗೆ ಸೈನಿಕರ ನೇಮಕಾತಿಗಾಗಿ 2022ರ ಜೂನ್ 16ರಂದು ಭಾರತ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಅನುಮೋದನೆಗೊಳಿಸಿತ್ತು. ಸೆಂಟರ್‌ ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ. ಯೋಜನೆಯ ಭಾಗವಾಗಿ ಇದೇ ವರ್ಷ ಜನವರಿ 2023 ರಿಂದ ಪ್ರಾರಂಭವಾದ ತರಬೇತಿಯಲ್ಲಿ ಆಗಸ್ಟ್ 5 ರ ವರೆಗೆ 85 ಅಗ್ನಿವೀರರು (ಎಂಟಿ) ಉತ್ತೀರ್ಣರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರಿನಲ್ಲಿರುವ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ (ಉತ್ತರ) ಭಾರತೀಯ ಸೇನೆಗಾಗಿ ಅನಿಮಲ್ಸ್ ಮತ್ತು ಸ್ಟೋರ್ ಹ್ಯಾಂಡ್ಲರ್‌ ಗಳು, ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್‌ ಡ್ರೈವರ್‌ ಗಳು ಸೇರಿದಂತೆ ವಿವಿಧ ತರಬೇತಿ ನೀಡುವ ಪ್ರಮುಖ ಸಂಸ್ಥೆಯಾಗಿದೆ. ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್(ಉತ್ತರ)- 1 ಎಟಿಸಿಯ ಕಮಾಂಡೆಂಟ್, ಬ್ರಿಗೇಡಿಯರ್ ತೇಜ್‌ ಪಾಲ್ ಸಿಂಗ್ ಮಾನ್ ಶನಿವಾರ ಅಗ್ನಿವೀರರು ತರಬೇತಿ ಮತ್ತು ಉತ್ತೀರ್ಣರಾದವರ ಪರೇಡ್ ವೀಕ್ಷಿಸಿದರು. ಬಳಿಕ ತಮ್ಮ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 7 ರಂದು ಸಿಎಂ ಸಿದ್ಧರಾಮಯ್ಯ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2. 00 ರ ವರೆಗೆ ಹಾಗೂ ಸಂಜೆ 4. 00 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಿಎಂ ಕಚೇರಿ ಮಾಹಿತಿ ಬಿಡುಗಡೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಜೀವಹಾನಿಯೂ ಆಗಿದ್ದು, ಅಮೂಲ್ಯವಾದ ಜನ, ಜಾನುವಾರುಗಳ ಜೀವ ಉಳಿಸಲು ಮತ್ತು ಆರೋಗ್ಯ ರಕ್ಷಿಸಲು ಪಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ)ನಿಂದ ತಯಾರಿಸಿದ ಹಾಗೂ ಲೋಹಯುಕ್ತ ಅಪಾಯಕಾರಿ ರಾಸಾಯನಿಕ ಬಣ್ಣ ಬಳಸಿದ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮಾಡದಂತೆ ಜಾಗೃತಿ ಮೂಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ. ಹಬ್ಬಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಈಗಿನಿಂದಲೇ ಪಿಓಪಿ ಗೌರಿ, ಗಣಪತಿ ಮೂರ್ತಿಗಳನ್ನು ತಯಾರಿಸದಂತೆ, ಬೇರೆ ರಾಜ್ಯದಿಂದ ಮಾರುಕಟ್ಟೆ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ.…

Read More

ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ  ವಿಚಾರಣೆಗೆ ಕರೆದೊಯ್ಯುವಾಗ ಆಸನೂರಿನ ಹೋಟೆಲ್​ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ ಇಂದು ನಂಜನಗೂಡಿನಿಂದ ವಾಪಾಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು…

Read More

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡುವ ಮಹಾನುಭಾವರು ಬಿಬಿಎಂಪಿಯಲ್ಲಿ 710 ಕೋಟಿ ರೂಪಾಯಿ ಗುತ್ತಿಗೆದಾರರ ಹಣವನ್ನು ಯಾಕೆ ಬಿಡುಗಡೆ ಮಾಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಬಿಜೆಪಿ ಸರ್ಕಾರ ಇದ್ದಾಗ ಪ್ರತಿಯೊಂದನ್ನೂ ಪ್ರಶ್ನೆ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈಗೆಲ್ಲಿದ್ದಾರೆ ಎಂದು ಕೇಳಿದರು. ಗುತ್ತಿಗೆದಾರರ ಬಾಕಿ ಬಿಲ್ಲುಗಳನ್ನು ಯಾಕೆ ತಡೆ ಹಿಡಿದ್ದಾರೆ? ಬೆಂಗಳೂರು ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 710 ಕೋಟಿ ಹಣ ರಿಲೀಸ್ ಮಾಡಿಸಿಲ್ಲ. ಇದರ ಹಿಂದಿರುವ ಅಸಲಿ ಕಾರಣವನ್ನು ಜನರಿಗೆ ಕೊಂಚ ಹೇಳಬೇಕಲ್ಲವೇ ಎಂದು ಅವರು ಒತ್ತಾಯಿಸಿದರು. ಕಳೆದ ಮೇ ತಿಂಗಳಲ್ಲಿ ಗುತ್ತಿಗೆದಾರರಿಗೆ 710 ಕೋಟಿ ರೂ. ಬಿಡುಗಡೆ ಆಯಿತು. ಅವತ್ತಿನ ದಿನವೇ ಕಾಂಗ್ರೆಸ್ ಪಕ್ಷದ ಎಂಪಿ ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟರು. ನಮ್ಮ ಸರ್ಕಾರ ಬರ್ತಾ ಇದೆ, ಒಂದು ರೂಪಾಯಿ ಬಿಡುಗಡೆ ಆಗಬಾರದು ಅಂತ ತಾಕೀತು ಮಾಡಿದರು.…

Read More

ರಾಷ್ಟ್ರದ ಮಹಾನಗರಗಳ ಪೈಕಿ, ಬೆಂಗಳೂರು ನಗರವು ‘ಸೇಫ್ ಸಿಟಿ’ (ಸುರಕ್ಷತಾ ನಗರ) ಯೋಜನೆ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದೆ. ಸದ್ಯದಲ್ಲೇ ಈ ಯೋಜನೆ ಅನುಷ್ಠಾನ ಪೂರ್ಣಗೊಳಿಸಿದ ಮೊದಲ ನಗರ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಹೇಳಿದರು. ನಗರದಲ್ಲಿ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ‘ಸೇಫ್ ಸಿಟಿ ಯೋಜನೆ’ ಅಡಿ ಇದುವರೆಗೂ 4, 500 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮೂರು ಸಾವಿರ ಕ್ಯಾಮೆರಾ ಅಳವಡಿಕೆ ಬಾಕಿ ಇದೆ. ಕೃತಕ ಬುದ್ಧಿಮತ್ತೆ ಕ್ಯಾಮೆರಾ ವ್ಯವಸ್ಥೆ ನೆರವಿನಿಂದ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಫೋಟೊ ತೆಗೆದು ದಂಡ ವಿಧಿಸಲಾಗುತ್ತಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ ಅಳವಡಿಕೆ ಕೆಲಸಗಳು ಬಾಕಿಯಿದೆ. ಅದನ್ನು ಪೂರ್ಣಗೊಳಿಸಿದರೆ ಬೆಂಗಳೂರು ಈ ಯೋಜನೆ ಅನುಷ್ಠಾನದಲ್ಲಿ ಮೊದಲ ಸ್ಥಾನಕ್ಕೇರಲಿದೆ. ಇತರೆ ಮಹಾನಗರಗಳಲ್ಲಿ ಯೋಜನೆ ಇನ್ನೂ ಟೆಂಡರ್ ಹಂತದಲ್ಲಿವೆ’ ಎಂದು ಹೇಳಿದರು. ‘ಸಮಾಜಘಾತುಕ ಕೃತ್ಯಗಳನ್ನು ಹತ್ತಿಕ್ಕಲು ಬೆಂಗಳೂರು ಪೊಲೀಸರು ಸಮರ್ಥರಿದ್ದಾರೆ. ಉತ್ತಮ ಬೆಂಗಳೂರು…

Read More