Author: admin

ಬೆಂಗಳೂರು: ಸಾಲದಿಂದ ದೇಶ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರ ‘ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗೆ ಇಲ್ಲವೆಂದು ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ಸಾಲ ಮಾಡಿದ್ದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ 2 ಲಕ್ಷ 45 ಸಾವಿರ ಕೋಟಿ ಸಾಲ ಮಾಡಿತ್ತು. ಈಗ 5 ಲಕ್ಷ 71 ಸಾವಿರ ಕೋಟಿಗೂ ಅಧಿಕ ಸಾಲ ಇದೆ. ನಿಮಗೆ ಪ್ರಧಾನಿ ಮೋದಿ ಬಗ್ಗೆ ಮಾತಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

Read More

ಪತಿಯನ್ನು ಕೊಂದು ದೇಹವನ್ನು ತುಂಡರಿಸಿದ ಪತ್ನಿ ಹಾಗೂ ಪ್ರಿಯಕರನ ಬಂಧನ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದೆ. 26 ವರ್ಷದ ವಿನೋದಿನಿ ತನ್ನ 23 ವರ್ಷದ ಪ್ರೇಮಿ ಭಾರತಿ ಸಹಾಯದಿಂದ ಪತಿ ಪ್ರಭುವನ್ನು ಕೊಂದಿದ್ದಾಳೆ. ಇವರಲ್ಲದೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5 ರಂದು ಸಹೋದರ ಹೂ ಮಾರಾಟಗಾರ ಪ್ರಭುವನ್ನು ನೋಡಲು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತನ್ನ ಸಹೋದರ ಎಲ್ಲಿದ್ದಾನೆ ಎಂದು ಕೇಳಿದಾಗ ವಿನೋದಿನಿ ಅವರು ಹಿಂತಿರುಗಿಲ್ಲ ಎಂದು ಉತ್ತರಿಸಿದರು. ಅನುಮಾನಗೊಂಡ ಸಹೋದರ ಪ್ರಭುವನ್ನು ಹುಡುಕಲು ಹೋದರು. ಹೂವಿನ ಅಂಗಡಿಯಲ್ಲೂ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ನಂತರ ಸಮಯಪುರಂ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದಾಗ, ಭಾರತಿಯೊಂದಿಗೆ ವಿನೋದಿನಿಯ ವಿವಾಹೇತರ ಸಂಬಂಧ ಮತ್ತು ಪ್ರಭುವನ್ನು ಕೊಲ್ಲುವ ಯೋಜನೆಯನ್ನು ಪೊಲೀಸರು ಪತ್ತೆ ಮಾಡಿದರು. ಮೂರು ತಿಂಗಳ ಹಿಂದೆ ಸಂಧ್ಯಾ ಗೇಟ್ ಬಳಿ ವಿನೋದಿನಿ ಮತ್ತು ಆಕೆಯ ಗೆಳೆಯ ಭಾರತಿ ಬಾಡಿಗೆ ಮನೆ ಮಾಡಿದ್ದರು. ಭಗವಂತ ಇದನ್ನು ಆಕಸ್ಮಿಕವಾಗಿ ಕಂಡುಹಿಡಿದನು. ಭಾರತಿಯೊಂದಿಗಿನ ಸಂಬಂಧವನ್ನು…

Read More

ಬೆಳಗಾವಿ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಬೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದೆ. ನಗರದ ಆದಿಜಾಂಬವ ನಗರದ ನಿವಾಸಿ ಸುರೇಶ ಪೂಜಾರಿ (25) ಕೊಲೆಯಾದ ಯುವಕ. ಅದೇ ಕಾಲೋನಿಯ ಐದಾರು ಜನ ಸೇರಿ ಇವನನ್ನು ಕೊಲೆಗೈದಿದ್ದು ಹಳೆ ವೈಶಮ್ಯಕ್ಕಾಗಿ ಕೃತ್ಯ ಎಸುಗಿರುವ ಅನುಮಾನ ವ್ಯಕ್ತವಾಗಿದೆ‌‌. ಹತ್ಯೆಯ ಘಟನೆಯ ನಂತರ ಮೃತನ ಸಂಬಂಧಿಕರು ಆರೋಪಿಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

Read More

ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ. ಪಟಾಕಿ ಸಿಡಿತದಿಂದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ ಎಂದು ನಾರಾಯಣ ಹೆಲ್ತ್‌ ನ ಅಧ್ಯಕ್ಷ ಡಾ. ರೋಹಿತ್ ಶೆಟ್ಟಿ ಹೇಳಿದ್ದಾರೆ. ಗಾಯಾಳುಗಳ ಪೈಕಿ ಶೇ. 90 ರಷ್ಟು ಮಂದಿ ನೋಡುಗರು ಅಥವಾ ಕೆಲಸದಿಂದ ಮನೆಗೆ ಮರಳುತ್ತಿದ್ದ ಅಮಾಯಕ ನಾಗರಿಕರಾಗಿದ್ದಾರೆ. ಇದು ಆತಂಕಕ್ಕೆ ದೊಡ್ಡ ಕಾರಣ ಎಂದು ಅವರು ತಿಳಿಸಿದ್ದಾರೆ. ನರಕ ಚತುರ್ದಶಿ ದಿನವಾದ ಭಾನುವಾರ ನಗರದ ವಿವಿಧೆಡೆ ಪಟಾಕಿ ಅವಘಡಗಳು ಸಂಭವಿಸಿದ್ದು, ನಾರಾಯಣ ನೇತ್ರಾಲಯದಲ್ಲಿ 16 ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳಲ್ಲಿ ಆರು ಮಂದಿಗೆ ಗಂಭೀರ ಗಾಯವಾಗಿದೆ. 10 ಮಂದಿಗೆ ಪಟಾಕಿ ಕಿಡಿಯಿಂದ ಸಣ್ಣ ಪುಟ್ಟ ಗಾಯಗಳಾಗಿವೆ. ಇವರಲ್ಲಿ ಶೇ 90ರಷ್ಟು ಮಂದಿ ಪಟಾಕಿ ಹಚ್ಚದಿದ್ದರೂ, ವೀಕ್ಷಿಸುವ ವೇಳೆ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆರು ಪ್ರಕರಣಗಳಲ್ಲಿ ಮೂರು ಮಂದಿ 19 ರಿಂದ 22 ವರ್ಷದೊಳಗಿನವರು. ಇಬ್ಬರು ಹತ್ತು ವರ್ಷದ ಮಕ್ಕಳಾಗಿದ್ದಾರೆ.

Read More

ಹುಬ್ಬಳ್ಳಿ: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಅವರು ‘ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಗಡ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ ಇದ್ದೆ‌. ಈ ಹಿನ್ನಲೆ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.

Read More

ಬೆಳಗಾವಿ: ವ್ಯಕ್ತಿತ್ವ ಪುನರುತ್ಥಾನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆ – ಈ 4 ಉದ್ದೇಶವಿಟ್ಟುಕೊಂಡು ಕಳೆದ 17 ವರ್ಷಗಳಿಂದ ನಿರಂತರವಾಗಿ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ. ಬೆಳಗಾವಿಯಲ್ಲಿ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಗುರುದೇವ ರಾನಡೆ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಮಾಜಗಳ ಪ್ರಮುಖರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ವೈಜ್ಞಾನಿಕವಾಗಿ ನಾವು ಮುಂದೆ ಹೋಗುತ್ತಿದ್ದೇವೆ. ಆದರೆ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೇವೆ. ಮಾನಸಿಕ ಒತ್ತಡಗಳಿಂದ ಅನೇಕ ರೋಗಗಳನ್ನು ಅನುಭವಿಸುತ್ತಿದ್ದೇವೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯಾಘಾತ ಮೊದಲಾದವು ಹೆಚ್ಚುತ್ತಿವೆ. ಇದಕ್ಕೆಲ್ಲ ಭಗವದ್ಗೀತೆಯಲ್ಲಿ ಪರಿಹಾರವಿದೆ. ಜನರ ಮನಸ್ಥಿತಿ ಸರಿ ಇಲ್ಲದಿದ್ದರೆ ಏನೇ ಮಾಡಿದರೂ ಪ್ರಯೋಜನವಿಲ್ಲ ಎಂದು ಶ್ರೀಗಳು ಹೇಳಿದರು. ಅಪರಾಧ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿವೆ. ಅಪರಾಧ ನಡೆದ…

Read More

ಚಾಮರಾಜನಗರ: ತಾವು ಈ ದೀಪಾವಳಿಯಲ್ಲಿ ಪಟಾಕಿ ಹಚ್ಚದೇ, ದೀಪ ಬೆಳಗಿ ಪರಿಸರ ದೀಪಾವಳಿ ಆಚರಿಸುತ್ತೇವೆ ಎಂದು ಸರ್ಕಾರಿ ಶಾಲಾ ಮಕ್ಕಳು ಪ್ರತಿಜ್ಞೆ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ  ಹೊಂಗಹಳ್ಳಿ ಶಾಲಾ ಮಕ್ಕಳು ಪಟಾಕಿ ಹಚ್ಚುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದು  ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚದೆ ನೆಲ ಮಾಲಿನ್ಯ, ಜಲ ಮಾಲಿನ್ಯ,ಶಬ್ಧ ಮಾಲಿನ್ಯ  ವಾಯು ಮಾಲಿನ್ಯ ತಡೆ ಗಟ್ಟುತ್ತೇವೆಂದು ಹಾಗೂ ನಮ್ಮ ನಮ್ಮ ಮನೆಗಳಲ್ಲಿ ಮಣ್ಣಿನ ದೀಪಗಳನ್ನು ಹಚ್ಚಿ ಮನೆ ಮನಗಳನ್ನು  ಬೆಳಗುವ ಮೂಲಕ ಹಸಿರು ದೀಪಾವಳಿ, ಸ್ವಾಸ್ಥ್ಯ ದೀಪಾವಳಿ, ಹಾಗೂ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡುತ್ತೇವೆಂದು ಧೃಢ ನಿಲುವು ತಳೆದಿದ್ದಾರೆ. ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ಮಾತನಾಡಿ, ಶಾಲೆಯಲ್ಲಿ ಸುಮಾರು ಏಳು ವರ್ಷಗಳಿಂದಲೂ ಪ್ರತಿ ವರ್ಷ ಹಬ್ಬದ ಒಂದು ವಾರ ಮುಂಚಿತವಾಗಿ ಪ್ರತಿ ನಿತ್ಯ ಪ್ರಾರ್ಥನಾ ಸಮಯದಲ್ಲಿ ಪ್ರತಿಜ್ಞೆ ಮಾಡಿಸಲಾಗುತ್ತದೆ. ಹಾಗೂ ಪಟಾಕಿ ಬಳಸುವುದರಿಂದ ಆಗಬಹುದಾದ ಅಪಾರ ಹಾನಿ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಯಾವುದೇ ಮಕ್ಕಳು ಪಟಾಕಿ ಬಳಸದೆ…

Read More

ಉಡುಪಿ ಜಿಲ್ಲೆಯ ಕೆಮ್ಮಣ್ಣು ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದ ದಾರುಣ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮುಸುಕುಧಾರಿ ವ್ಯಕ್ತಿಯೊಬ್ಬ ಬಲವಂತವಾಗಿ ಮನೆಗೆ ನುಗ್ಗಿ ಹಸೀನಾ (46) ಮತ್ತು ಆಕೆಯ 23, 21 ಮತ್ತು 12 ವರ್ಷದ ಮೂವರು ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯಲ್ಲಿ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂತ್ರಸ್ತೆಯ ಪತಿ ಗಲ್ಫ್ ‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Read More

ಲಕ್ನೋ: ಏಳನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಲಾಗಿದ್ದು ದಾಖಲೆಯ ಸಾಧನೆಯಾಗಿದೆ. 22.23 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಲಾಗಿದ್ದು ಕಳೆದ ವರ್ಷಕ್ಕಿಂತ 6.47 ಲಕ್ಷ ಹೆಚ್ಚು  ಬೆಳಗಿಸಲಾಗಿದೆ. 25,000 ಸ್ವಯಂಸೇವಕರು ನದಿಯ ಉದ್ದಕ್ಕೂ ರಾಮ್ ಕಿ ಪೈಡಿಯ 51 ಘಾಟ್‌ ಗಳಲ್ಲಿ ಬೆಳಗಿದರು. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಪ್ರತಿನಿಧಿಗಳು ಡ್ರೋನ್ ‌ಗಳನ್ನು ಬಳಸಿ ದೀಪಗಳನ್ನು ಎಣಿಸಿ ವಿಶ್ವ ದಾಖಲೆಯಾಗಿ ನೋಂದಾಯಿಸಿದ ನಂತರ ಅಯೋಧ್ಯೆ ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು. ಭಾನುವಾರ, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಎಕ್ಸ್ ‌ನಲ್ಲಿ ಪೋಸ್ಟ್ ‌ನಲ್ಲಿ ಸಾರ್ವಜನಿಕರಿಗೆ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ. “ದೀಪಾವಳಿ ಮತ್ತು ಭಯ್ಯಾ ದೂಜ್ ಸಂದರ್ಭದಲ್ಲಿ ದೇಶ ಮತ್ತು ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಭಾರತೀಯ ಸಹೋದರ ಸಹೋದರಿಯರು ಮತ್ತು ಅವರ ಕುಟುಂಬಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಎಲ್ಲರಿಗೂ ಸಂತೋಷ ಮತ್ತು ಸಮೃದ್ಧ ಜೀವನಕ್ಕಾಗಿ ಶುಭಾಶಯಗಳು” ಎಂದು ಅವರು…

Read More