Author: admin

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. 2021ರ ಜ.29ರಂದು ಬಿಬಿಎಂಪಿಯ ಕೌನ್ಸಿಲರ್ಸ್‌ಗಳ ಸಂಖ್ಯೆಯನ್ನು 243ಕ್ಕೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದುಕೊಳ್ಳಲಾಗಿದೆ. ಬಿಬಿಎಂಪಿ ಅಧಿನಿಯಮ- 2020ರ 7ನೇ ಪ್ರಕರಣದಂತೆ ಅಧಿಕಾರ ಚಲಾಯಿಸಿ, ತತ್‌ಕ್ಷಣದಿಂದ ಜಾರಿಗೆ ಬರುವಂತೆ ಕಾರ್ಪೊರೇಟರ್‌ ಗಳ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಲಾಗಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡಿಸಲು ಮುಖ್ಯ ಆಯುಕ್ತರ ನೇತೃತ್ವದ ಆಯೋಗವನ್ನು ಸರ್ಕಾರ ಜೂನ್ 23ರಂದು ಪುನರ್ ರಚಿಸಿತ್ತು. ಹೈಕೋರ್ಟ್ ಆದೇಶದಂತೆ 12 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈ ಸಮಿತಿ ಜೂನ್ 25ರಂದು ಮೊದಲ ಸಭೆ ನಡೆಸಿತ್ತು. ನಂತರ ಪ್ರಕ್ರಿಯೆಗಳು ಆಗಿರಲಿಲ್ಲ. ವಾರ್ಡ್‌ಗಳ ಸಂಖ್ಯೆ ಕಡಿಮೆ ಮಾಡಬೇಕೇ? ಹೆಚ್ಚು ಮಾಡಬೇಕೇ ಎಂಬ ಬಗ್ಗೆ ಚರ್ಚೆಗಳಾಗುತ್ತಿದ್ದವು. ಈ ಮಧ್ಯೆ ಸಚಿವ ರಾಮಲಿಂಗಾರೆಡ್ಡಿ ಅವರು, ‘ಬಿಜೆಪಿಯವರು ಕಾಂಗ್ರೆಸ್‌ಗೆ ಅನ್ಯಾಯ ಮಾಡಿ ವಾರ್ಡ್ ವಿಂಗಡಣೆ ಮಾಡಿದೆ. ಕೆಲವು ಅನಗತ್ಯ ವಾರ್ಡ್‌ಗಳಿವೆ. ವಾರ್ಡ್‌ಗಳ ಸಂಖ್ಯೆ 225 ಆಗಬಹುದು’ ಎಂದು ಹೇಳಿದ್ದರು.…

Read More

ಆಟೊ, ಕ್ಯಾಬ್‌ ಗಳ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ವತಿಯಿಂದಲೇ ಹೊಸ ಆ್ಯಪ್ ರೂಪಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಲಾಭ ಮತ್ತು ನಷ್ಟ ಇಲ್ಲದ ಪರಿಕಲ್ಪನೆಯಲ್ಲಿ ಈ ಆ್ಯಪ್ ಅನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಕೆಲವೇ ತಿಂಗಳಲ್ಲಿ ಹೊಸ ಆ್ಯಪ್‌ ನ ಪ್ರಾಥಮಿಕ ಪ್ರಯೋಗಕ್ಕೆ ಚಾಲನೆ ದೊರೆಯಲಿದೆ. ನಂತರ, ಇತರ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು’ ಎಂದು ತಿಳಿಸಿದರು. ‘ಹೊಸ ಆ್ಯಪ್‌ ನಲ್ಲಿ ದರ ನಿಗದಿಪಡಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ. ಆ್ಯಪ್ ಆಧಾರಿತ ಸಾರಿಗೆ ಸೇವೆ ನೀಡುತ್ತಿರುವ ಕೆಲವು ಖಾಸಗಿ ಸಂಸ್ಥೆಗಳು ಆಟೊ ಮತ್ತು ಕ್ಯಾಬ್ ಚಾಲಕರಿಗೆ ಕಡಿಮೆ ಹಣ ನೀಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ಕ್ರಮಕೈಗೊಂಡಿದೆ’ ಎಂದು ವಿವರಿಸಿದರು. ‘ಸಾರಿಗೆ ಇಲಾಖೆಯ ಆ್ಯಪ್ ಆಧಾರಿತ ಸೇವೆಗೆ ನೋಂದಣಿ ಮಾಡಿಕೊಳ್ಳಬೇಕು. ಓಲಾ, ಉಬರ್‌ಗಿಂತಲೂ ಚಾಲಕರು ಹೆಚ್ಚಿನ ಲಾಭಗಳಿಸಬಹುದು. ಇಲ್ಲಿ ಯಾವುದೇ ಕಿರುಕುಳ ಇರುವುದಿಲ್ಲ ಸಾರ್ವಜನಿಕರು…

Read More

ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಬೇಕು, ಕಸದಿಂದ ವಿದ್ಯುತ್ ತಯಾರಿ, ತ್ಯಾಜ್ಯ ನಿರ್ವಹಣೆಗೆ ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಪದ್ಧತಿ ಬಳಕೆ, ವಿಲೇವಾರಿ ಬಗ್ಗೆ ಯುವಕರು ಹಾಗೂ ಮಕ್ಕಳಿಗೆ ಜಾಗೃತಿ ನೀಡಬೇಕು. ‘ಬ್ರಾಂಡ್ ಬೆಂಗಳೂರಿನ’ ಅಭಿಯಾನದ ಅಂಗವಾಗಿ ಘನತ್ಯಾಜ್ಯ ನಿರ್ವಹಣೆಗೆ ನಾಗರಿಕರಿಂದ ಬಂದಿರುವ ಪ್ರಮುಖ ಸಲಹೆಗಳಿವು. ‘ಸ್ವಚ್ಚ ಬೆಂಗಳೂರು’ ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪರಿಸರ ವಿಜ್ಞಾನ ವಿಭಾಗ ಎಲ್ಲಾ ಸಲಹೆಗಳನ್ನು ಬೇರ್ಪಡಿಸಿ ವರದಿಯನ್ನು ಸಿದ್ದಪಡಿಸಲಿದೆ. ಈ ಬಗ್ಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ವಿಚಾರ ಸಂಕಿರಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೇಖ್ ಲತೀಫ್ ಮಾತನಾಡಿ, ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ ಪಾಲಿಕೆಯ ಕರ್ತವ್ಯ ಮಾತ್ರವಲ್ಲ, ಎಲ್ಲ ವರ್ಗದ ನಾಗರಿಕರ ಕರ್ತವ್ಯ. ಜವಾಬ್ದಾರಿಗಳನ್ನು ಅರಿತು ಮೂಲದಲ್ಲಿಯೇ ಸ್ವಚ್ಛತೆ ಕಾಪಾಡಿದರೆ ಸ್ವಚ್ಛ ಬೆಂಗಳೂರನ್ನಾಗಿಸಲು ಸಾಧ್ಯ ಎಂದರು. ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಪ್ರಧಾನ ಎಂಜಿನಿಯರ್ ಬಸವರಾಜ್ ಕಬಾಡೆ ಮಾತನಾಡಿ, ‘ಸ್ವಚ್ಛ ಬೆಂಗಳೂರು ವಿಭಾಗದ ಅಭಿವೃದ್ಧಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದೊಂದಿಗೆ ಶೈಕ್ಷಣಿಕ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.…

Read More

‘ಸಹಪಾಠಿ ಬಾಲಕಿ ಜೊತೆ ದ್ವಿಚಕ್ರ ವಾಹನದಲ್ಲಿ ಸುತ್ತಾಡಿದ’ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಜೆ. ಪಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಠಾಣೆ ವ್ಯಾಪ್ತಿಯಲ್ಲಿರುವ ಪಿ. ಯು ಕಾಲೇಜಿನಲ್ಲಿ ನಡೆದಿರುವ ಘಟನೆ ಬಗ್ಗೆ ಸಂತ್ರಸ್ತ ವಿದ್ಯಾರ್ಥಿ ದೂರು ನೀಡಿದ್ದಾನೆ. ಬಾಲಕಿಯ ಅಣ್ಣನ ಸ್ನೇಹಿತ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಎಲ್ಲರೂ ಅಪ್ರಾಪ್ತರು. ಹೀಗಾಗಿ, ಹೆಸರು ಬಹಿರಂಗಪಡಿಸಲಾಗದು’ ಎಂದು ಪೊಲೀಸರು ಹೇಳಿದರು. ‘ಸಂತ್ರಸ್ತ ವಿದ್ಯಾರ್ಥಿ ಹಾಗೂ ಸಹಪಾಠಿ ಬಾಲಕಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು, ಕಾಲೇಜಿನಲ್ಲಿ ಜುಲೈ 22ರಂದು ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಇಬ್ಬರಿಗೂ ಪರಿಚಯವಾಗಿತ್ತು. ಕಾರ್ಯಕ್ರಮದ ನಂತರ ಬಾಲಕಿಯ ಜೊತೆ ಆಕೆಯ ದ್ವಿಚಕ್ರ ವಾಹನದಲ್ಲಿ ವಿದ್ಯಾರ್ಥಿ ಸುತ್ತಾಡಿದ್ದ. ಅದನ್ನು ಬಾಲಕಿಯ ಅಣ್ಣ ನೋಡಿದ್ದ.’ ‘ಸ್ನೇಹಿತನಾಗಿದ್ದ ಆರೋಪಿಗೆ ವಿಷಯ ತಿಳಿಸಿದ್ದ ಅಣ್ಣ, ತಂಗಿ ಜೊತೆ ಸುತ್ತಾಡುತ್ತಿರುವ ಹುಡುಗನಿಗೆ ತಾಕೀತು ಮಾಡುವಂತೆ ಹೇಳಿದ್ದ. ಜುಲೈ 25ರಂದು ವಿದ್ಯಾರ್ಥಿಯನ್ನು ಅಡ್ಡಗಟ್ಟಿ…

Read More

ಹೋಟೆಲ್‌ ಗಳಲ್ಲಿ ತಿಂಡಿ-ತಿನಿಸುಗಳ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದ ಹೋಟೆಲ್‌ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಇಂದು ಮಧ್ಯಾಹ್ನ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ 1 ರೂ. ಗೆ ರಾಗಿ ಮುದ್ದೆ, ಸಾರು ನೀಡುವ ಮೂಲಕ ವಿನೂತನ ರೀತಿಯಲ್ಲಿ ಅವರು ಪ್ರತಿಭಟನೆ ಮಾಡಿದರು. ತಿಂಡಿಗಳ ಬೆಲೆ ಏರಿಕೆ ಅವೈಜ್ಞಾನಿಕ. ಶೇ. 60 ರಷ್ಟು ಜನರು ಹೋಟೆಲ್ ತಿಂಡಿಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ಹೋಟೆಲ್‌ ಗಳಲ್ಲಿ ತಿಂಡಿಗಳ ಬೆಲೆ ಏರಿಸಬಾರದು ಎಂದು ಅವರು ಆಗ್ರಹಿಸಿದರು. ಬೆಲೆ ಇಳಿಕೆ ಮಾಡುವವರೆಗೆ ಮುಂದಿನ ದಿನಗಳಲ್ಲಿ ನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ರಾಗಿ ಮುದ್ದೆಗೆ 50 ರೂಪಾಯಿಯಾಗಿದೆ. ನಾವು 1 ರೂಪಾಯಿಗೆ ಒಂದು ರಾಗಿ ಮುದ್ದೆ ಹಾಗೂ ಸಾಂಬಾರು ಮಾರುವ ಮೂಲಕ ಹೋಟೆಲ್‌ ಗಳಲ್ಲಿ ತಿಂಡಿಗಳ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದೇವೆ ಎಂದರು. ಸರ್ಕಾರ ಹಾಲಿನ ದರವನ್ನೂ ಏರಿಕೆ ಮಾಡಿದೆ.…

Read More

ಪಿಇಎಸ್ ವಿಶ್ವವಿದ್ಯಾಲಯ ನಗರದಲ್ಲಿ ಶುಕ್ರವಾರ ಆಯೋಜಿಸಿದ ‘ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಪರಿಣಾಮ’ ಸಮಾವೇಶ ಆಯೋಜಿಸಲಾಗಿತ್ತು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ‘ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ದಿಂದ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಾಧ್ಯ’ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಆರ್. ದೊರೆಸ್ವಾಮಿ ತಿಳಿಸಿದರು. ‘ನಮ್ಮ ದೇಶದ ದೊಡ್ಡ ಶಕ್ತಿ ವಿದ್ಯಾವಂತ ಯುವ ಮಾನವ ಸಂಪನ್ಮೂಲ. ದೇಶದಲ್ಲಿ 3,500 ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿದ್ದು, ಇಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ ಸಹಕಾರಿಯಾಗಲಿದೆ. ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸ್ನಾತಕೋತ್ತರ ಪದವಿಯ ನಂತರ 3ರಿಂದ 6 ತಿಂಗಳ ಅಧ್ಯಾಪಕರ ತರಬೇತಿ ಕಾರ್ಯಕ್ರಮವನ್ನು ನಡೆಸುವುದು ಉತ್ತಮ. ಬೋಧನೆ-ಕಲಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ನೆರವು ಪಡೆದುಕೊಳ್ಳಬೇಕು’ ಎಂದು ಹೇಳಿದರು. ಎಐಸಿಟಿಇ ಅಧ್ಯಕ್ಷ ಟಿ. ಜಿ. ಸೀತಾರಾಮ್, ‘ಶಿಕ್ಷಣ, ವೈದ್ಯಕೀಯ, ಆಟೋಮೊಬೈಲ್, ಕೈಗಾರಿಕೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈ ತಂತ್ರಜ್ಞಾನ ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಹೆಚ್ಚಿಸಿಕೊಳ್ಳುತ್ತಿದೆ. ಐಐಟಿ…

Read More

ವಿಕ್ಟೋರಿಯಾ ಆಸ್ಪತ್ರೆಯ ಅಸ್ಥಿ ಚಿಕಿತ್ಸಾ ಶಾಸ್ತ್ರ ವಿಭಾಗವು ನಗರದಲ್ಲಿ ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಡೀನ್ ಡಾ. ರಮೇಶ್ ಕೃಷ್ಣ ಕೆ ಮಾತನಾಡಿ, ಪ್ರತಿ ಐವರಲ್ಲಿ ಒಬ್ಬರನ್ನು ಕಾಡುತ್ತಿರುವ ಮೂಳೆ ರಂಧ್ರತೆ ಸಮಸ್ಯೆಯು, ಅಂಗವಿಕಲತೆಗೆ ಕಾರಣವಾಗುತ್ತಿದೆ. ಈ ಸಮಸ್ಯೆ ಋತುಚಕ್ರ ನಿಂತ ಮಹಿಳೆಯರನ್ನು ಹೆಚ್ಚಾಗಿ ಕಾಡಲಾರಂಭಿಸಿದೆ ಎಂದು ತಿಳಿಸಿದರು. ಮೊಣಕಾಲು ಹಾಗೂ ಕೀಲು ನೋವು, ನಿರಂತರ ಸೊಂಟ ನೋವು, ನಡೆಯಲು ಸಾಧ್ಯವಾಗದಿರುವುದು ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಂಡಾಗ ವೈದ್ಯಕೀಯ ಸಹಾಯ ಪಡೆಯಬೇಕು. ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ವಿಭಾಗವು ಸುಮಾರು 60 ಸಾವಿರ ಹೊರರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಿದೆ. 2,500 ಮಂದಿಗೆ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ. 250 ಪ್ರಕರಣಗಳಲ್ಲಿ ಕೀಲುಗಳ ಮರುಜೋಡಣೆ ಮಾಡಲಾಗಿದೆ.  ಆಸ್ಪತ್ರೆಯಲ್ಲಿರುವ ಈ ವಿಭಾಗವು ಅತ್ಯಾಧುನಿಕ ವೈದ್ಯಕೀಯ ಸಾಧನಗಳನ್ನು ಹೊಂದಿದ್ದು, ಎಲ್ಲ ವಯೋಮಾನದವರಿಗೂ ಚಿಕಿತ್ಸೆ ಒದಗಿಸಲಾಗುತ್ತದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.…

Read More

ಬೆಂಗಳೂರು: ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಾವು ಕುಟುಂಬ ಸಮೇತ ಪ್ರವಾಸ ಹೋಗಿದ್ದು ಯುರೋಪ್ ಗೆ ಆದ್ರೆ, ಸರ್ಕಾರ ಕೆಡವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಅವರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಡ್ಯದ ಹೊಳಲು ಗ್ರಾಮದಲ್ಲಿ ನಡೆದಿದೆ. ಮಾದ ಅಲಿಯಾಸ್ ಮಾದಪ್ಪ ಎಂಬಾತನನ್ನು ಬಾಸ್ ಎಂದು ಕರೆಯದೇ ಇರುವುದಕ್ಕೆ ಮಾದ ಹಾಗೂ ಆತನ ಸಹಚರರಾದ ಚಿಂಟು, ತರುಣ್, ಸುಶಾಂತ್ ಹಾಗೂ ಚಂದನ್ ಎಂಬುವವರು ಶಾರಂತ್ ಎಂಬ ಯುವಕನ ಬಳಿ ಗಲಾಟೆ ಮಾಡಿದ್ದಾರೆ. ಬಳಿಕ ಮಚ್ಚಿನಿಂದ ಹೊಡೆದು, ಡ್ರಾಗನ್‍ ನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಮಾದಪ್ಪನಿಗೆ ಬಾಸ್ ಎಂದು ಕರೆಯಬೇಕು ಎಂದು ಪುಡಿ ರೌಡಿಗಳು ಎಚ್ಚರಿಸಿದ್ದರು. ಇದಕ್ಕೆ ಶಾರಂತ್ ಅವನು, ನನಗೆ ಯಾವ ಬಾಸ್ ಎಂದು ಹೇಳಿದ್ದ. ಇದೇ ವಿಚಾರಕ್ಕೆ ಗುರುವಾರ ಸ್ನೇಹಿತರೊಂದಿಗೆ ಹುಟ್ಟು ಹಬ್ಬ ಆಚರಿಸಿ ಗ್ರಾಮದ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಶಾರಂತ್ ಮೇಲೆ ದಾಳಿ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ…

Read More

ಬೆಂಗಳೂರು: ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಆರೋಪ  ‘ಪರಿಶಿಷ್ಟ ಜಾತಿ, ಪಂಗಡಕ್ಕೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ಸರ್ಕಾರ ಜನಪರ ಕೆಲಸ ಮಾಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ, ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಮಾಡುತ್ತಿದ್ದಾರೆ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More