Author: admin

ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಆ ಸಚಿವರ ಚೇಲಾಗಳು ತಾಕೀತು ಮಾಡಿದ್ದಾರೆ ಎಂದು ಹೆಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು ವಿದೇಶದಿಂದ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದು, ಸಚಿವರ ಚೇಲಾಗಳು ದುಡ್ಡು ಮಾಡಲು ಇಳಿದಿದ್ದಾರೆ. ಇವರು ಈಗ ಹೋಗಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳುತ್ತಾರೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವೇ? ಪಾರದರ್ಶಕ ಆಡಳಿತ ನೀಡಲು ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾತನಾಡಿದರು. ಈ ಎರಡು ಸಮುದಾಯಗಳ ಹಣ ಸದ್ಬಳಕೆ ಬಗ್ಗೆ ಸೂಕ್ತ ಕಾನೂನನ್ನು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಈ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ ಎಂದರು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ, ಪ್ರಮುಖ ವಿಪಕ್ಷವಾಗಿ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮೈಸೂರು ಎಕ್ಸ್‌ ಪ್ರೆಸ್ ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವಿಟ್ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ಎಕ್ಸ್‌ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲಿ 29 ಮತ್ತು ಜೂನ್‌ ನಲ್ಲಿ 28 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಸಂಖ್ಯೆಯನ್ನು ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಕ್ಸ್‌ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾದ ಒಂದು ತಿಂಗಳ ಅಂತರದಲ್ಲಿ ಎಡಿಜಿಪಿ ಎರಡು ಸಲ ಹೆದ್ದಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ, ಅಪಘಾತಗಳ ಸಂಖ್ಯೆ ಸಾವು ಹಾಗೂ ಗಾಯಾಳುಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸುತ್ತಿರುವ ರಾಜ್ಯ ಸರ್ಕಾರ, ಎಸ್. ಸಿ ಹಾಗೂ ಎಸ್. ಟಿ ಸಮುದಾಯದವರಿಗೆ ದ್ರೋಹವೆಸಗುತ್ತಿದೆ’ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ‘ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಬರಹವುಳ್ಳ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಗೆ ನೀಡಿರುವ ಪರಿಶಿಷ್ಟರ ಹಣವನ್ನು ವಾಪಸು ಪಡೆಯಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು. ‘ಜನರಿಗೆ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ದಲಿತರ ಜೀವನದ ಜೊತೆ ಆಟವಾಡುತ್ತಿದೆ. ದಲಿತರ ಮನೆಗಳಿಗೆ ಹೋಗಿ ಗ್ಯಾರಂಟಿ ಕಾರ್ಡ್ ನೀಡಿದ್ದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು, ಇದೀಗ ದಲಿತರ ಹಣವನ್ನೇ ಗ್ಯಾರಂಟಿಗೆ ವ್ಯಯಿಸುತ್ತಿದ್ದಾರೆ’ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದೆ. ಎಸ್‌ ಸಿ ಪಿ ಹಾಗೂ ಟಿ ಎಸ್‌ ಪಿ…

Read More

ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ದೆಹಲಿ: ಅಹಿಂದ್ ಹೆಸರಲ್ಲಿ ಸಿದ್ದರಾಮಯ್ಯ ಮತ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಹೇಳಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬೇರೆ ಕಡೆ ಬಳಕೆ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ವಾಪಸ್ ಪಡೆದಿದ್ದಾರೆ. ದಲಿತರ ಕಲ್ಯಾಣಕ್ಕೆ ಹಣದ ಕೊರತೆ ಆಗಲಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಶ್ರೀ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240 ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪರಿಣಾಮ‌ ಲೋಕಸಭಾ ಚುನಾವಣೆಯಲ್ಲೂ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ…

Read More

ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ದಿದ್ದಾರೆ. ಮೊಬೈಲ್ ನಲ್ಲಿ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ. ಜತೆಗೆ ಈಗಾಗಲೇ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಪರೀಕ್ಷಾ ಕೇಂದ್ರಗಳೊಳಗೆ ತೆರಳಿ ಅಕ್ರಮಿಗಳಿಗೆ ಸಹಾಯ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಜಾಮೀನು ಪಡೆದು ಹೊರಬಂದ ಎರಡೇ ದಿನದಲ್ಲಿ ಕರ್ತವ್ಯ ನಿರತ ಇಬ್ಬರು ಕಾನ್‌ಸ್ಟೆಬಲ್‌ಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಈ ಸಂಬಂಧ ಆರೋಪಿಯನ್ನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಜೆ ಜೆ ನಗರ ನಿವಾಸಿ ಅಫ್ರಿದ್ ಖಾನ್ ಬಂಧಿತ ಆರೋಪಿ. ಗಾಯಾಳು ಕಾನ್ ಸ್ಟೆಬಲ್‌ಗಳಾದ ಶಿವಪ್ರಸಾದ್ ದಾನರೆಡ್ಡಿ ಹಾಗೂ ವಿಜಯ್ ಕುಮಾರ್ ಹಲ್ಲೆಗೊಳಗಾದವರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೂರು ನೀಡಿದ್ದು, ಅರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಅಫ್ರಿದ್ ಕಳೆದ ಸೋಮವಾರವಷ್ಟೇ ಜೈಲಿನಿಂದ ಹೊರಬಂದಿದ್ದ. ಹವಾ ಮೆಂಟೈನ್ ಮಾಡಲು ಶರ್ಟ್ ಹಿಂಭಾಗದಲ್ಲಿ ಮಚ್ಚು ಇಟ್ಟುಕೊಂಡು ತಿರುಗಾಡುತ್ತಿದ್ದ. ನಿನ್ನೆ ಮಧ್ಯಾಹ್ನ 3. 45ರ ಸುಮಾರಿಗೆ ಕಾನ್‌ಸ್ಟೆಬಲ್‌ ಗಳಾದ ಶಿವಪ್ರಕಾಶ್ ಹಾಗೂ ವಿಜಯ್ ಕುಮಾರ್ ಗಸ್ತು ಕರ್ತವ್ಯದಲ್ಲಿ ಅನಂತ ರಾಮಯ್ಯ ಕಾಂಪೌಂಡ್ ಬಳಿ ಬರುವಾಗ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಫ್ರೀನ್‌ನ್ನು ಕಂಡು ತಡೆದು ನಿಲ್ಲಿಸಿದ್ದಾರೆ. ಎಂಸಿಸಿಟಿಎನ್‌ಎಸ್ ಆ್ಯಪ್‌ನಡಿ ಬೆರಳಚ್ಚು ಪಡೆಯಲು ಮುಂದಾಗಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಮೊನ್ನೆಯಷ್ಟೇ ಜೈಲಿಂದ ಬಂದಿರುವೆ. ಚೆಕ್ ಮಾಡಲು ಬಂದಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಇನ್ನೊಂದು ಸಲ…

Read More