Subscribe to Updates
Get the latest creative news from FooBar about art, design and business.
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
- ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
Author: admin
ವಾಹನ ಸವಾರರೇ ಗಮನಿಸಿ… ‘HSRP’ ನಂಬರ್ ಪ್ಲೇಟ್ ಅಳವಡಿಸಲು ನ.17 ಕೊನೆಯ ದಿನವಾಗಿದೆ. 01 ಏಪ್ರಿಲ್ 2019ರ ನಂತರ ನೋಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ ಒಳಗಾಗಿ ಹೆಚ್ ಎಸ್ ಆರ್ಪಿ (ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ಸಾರಿಗೆ ಇಲಾಖೆಯಿಂದ ಗುರುತಿಸಿದ ಮೂಲ ವಾಹನ ಉತ್ಪಾದನಕ ಕಂಪನಿಗಳು ಹಾಗೂ ಅಧಿಕೃತ ವಾಹನ ಡೀಲರ್ ಗಳು ಮಾತ್ರ ಹೆಚ್. ಎಸ್. ಆರ್. ಪಿ ನಂಬರ್ ಪ್ಲೇಟ್ ಅಳವಡಿಸಲು ಮಾನ್ಯತೆ ಹೊಂದಿರುತ್ತಾರೆ.
ಬೆಂಗಳೂರು: ಪೊಲೀಸ್ ಇಲಾಖೆಯ ಎಲ್ಲ ವಾಹನಗಳ ಮೇಲೆ ಕಡ್ಡಾಯವಾಗಿ ‘ಪೊಲೀಸ್’ ಎಂದು ಸ್ಟಿಕ್ಕರಿಂಗ್ ಮಾಡಿಸುವಂತೆ ಡಿಜಿ ಸೂಚನೆ ಮೇರೆಗೆ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಎಸ್. ಮುರುಗನ್ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ 8*2 ಇಂಚು(ಕನಿಷ್ಠ), ನಾಲ್ಕು ಚಕ್ರದ ವಾಹನಗಳಿಗೆ 12*3 ಇಂಚು ಸ್ಟಿಕ್ಕರಿಂಗ್ ಮಾಡಿಸಬೇಕು. ಕೆಲವು ವಾಹನಗಳ ಮೇಲಿನ ಸ್ಟಿಕ್ಕರಿಂಗ್ ಅನ್ನು ಅಧಿಕಾರಿಗಳು ತೆಗೆಸಿ ಹಾಕಿದ್ದು, ಇದು ನಿಯಮ ಬಾಹಿರವಾಗಿರುತ್ತದೆ ಎಂದು ಮುರುಗನ್ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ವಿರೋಧ ಪಕ್ಷ ನಾಯಕ ಆಯ್ಕೆ ಹೈಕಮಾಂಡ್ ಗೆ ಕಗ್ಗಟ್ಟಾಗಿದ್ದು, ಈ ಹುದ್ದೆಗೆ ಒಕ್ಕಲಿಗರು ಮತ್ತು ಒಬಿಸಿ ನಾಯಕರಿಗೆ ಪ್ರಾತಿನಿಧ್ಯವನ್ನು ನೀಡುವ ನಿರೀಕ್ಷೆಯಿದೆ. ನವೆಂಬರ್ 17 ರಂದು ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಹೈಕಮಾಂಡ್ ಕಳುಹಿಸಿದ ವೀಕ್ಷಕರು ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ ಎಂದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ. ಅಲ್ಲದೇ ನ.17 ರಂದು ಸಭೆ ನಿಗದಿಯಾಗಿದ್ದು, ಅದೇ ದಿನ ವಿರೋಧ ಪಕ್ಷದ ನಾಯಕರ ಹೆಸರು ಪ್ರಕಟಿಸುವ ನಿರೀಕ್ಷೆ ಇದೆ.
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ದಿನಗಳಲ್ಲಿ 24×7 ಸೇವೆ ನೀಡಲು ಸಜ್ಜಾಗಿವೆ. ಮಿಂಟೊ, ನಾರಾಯಣ ನೇತ್ರಾಲಯ, ನೇತ್ರಧಾಮ, ಶಂಕರ, ಡಾ. ಅಗರವಾಲ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಳು ಚಿಕಿತ್ಸೆಗೆ ಬೇಕಾದ ಔಷಧಗಳನ್ನು ದಾಸ್ತಾನು ಮಾಡಿಕೊಂಡಿವೆ. ಅದೇ ರೀತಿ, ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಿಂಟೊ, ನಾರಾಯಣ ನೇತ್ರಾಲಯ ಆಸ್ಪತ್ರೆಗಳಲ್ಲಿ ಮಾಡಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರು ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯನಿರ್ವಹಿಸಲಿದ್ದಾರೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.
ರಾಜಸ್ಥಾನ: ನಾಲ್ಕು ವರ್ಷದ ದಲಿತ ಬಾಲಕಿಯ ಮೇಲೆ ದೌರ್ಜನ್ಯ ರಾಜಸ್ಥಾನದ ದೌಸಾದಲ್ಲಿ ಬಾಲಕಿಗೆ ಮದ್ಯ ನೀಡಿ ಅತ್ಯಾಚಾರವೆಸಗಲಾಗಿದೆ. ದೌಸಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯಲ್ಲಿ ಎಸ್‌ಐ ಭೂಪೇಂದ್ರ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಗುವನ್ನು ತನ್ನ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದ್ಯ ನೀಡಿ ದೌರ್ಜನ್ಯ ಎಸಗಿದ್ದಾನೆ. ಘಟನೆಯನ್ನು ವಿರೋಧಿಸಿ, ದೌಸಾ ನಿವಾಸಿಗಳು ರಾಹುವಾಸ್ ಪೊಲೀಸ್ ಠಾಣೆಗೆ ಘೋಷಣೆಗಳೊಂದಿಗೆ ಮುತ್ತಿಗೆ ಹಾಕಿದರು. ಬಿಜೆಪಿ ಸಂಸದ ಕಿರೋಟಿ ಲಾಲ್ ಮೀರಾ ಕೂಡ ಪೊಲೀಸ್ ಠಾಣೆಗೆ ಪ್ರತಿಭಟನೆಗೆ ಬಂದಿದ್ದರು. ಅಶೋಕ್ ಗೆಹ್ಲೋಟ್ ಸರ್ಕಾರವು ಪೊಲೀಸರಲ್ಲಿ ಅತಿರೇಕದ ಕ್ರೌರ್ಯವನ್ನು ಹೊಂದಿದೆ ಎಂದು ಬಿಜೆಪಿ ಆರೋಪಿಸಿದೆ.
ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಅವಕಾಶ ವಂಚಿತ ಪ್ರತಿಭಾನ್ವಿತ ಯುವತಿಯರಿಗೆ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರಕ್ಕೆ ಪ್ರವೇಶ ಪಡೆಯುವ ‘ರಾಹ್ ಸೂಪರ್ 30’ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಶಿಕ್ಷಣ ದಿನದಂದು ಚಾಲನೆ ದೊರೆತಿದೆ. ‘ರಾಹ್ ಅಕಾಡೆಮಿ’ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ರಾಜ್ಯದ 30 ಪ್ರತಿಭಾನ್ವಿತ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜತೆಗೆ, ಗ್ರಂಥಾಲಯದ ವ್ಯವಸ್ಥೆ, ಪರಿಣಿತರ ಮಾರ್ಗದರ್ಶನ ಸೇರಿದಂತೆ ಅಧ್ಯಯನಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು. ಪದವಿ ಪೂರ್ಣಗೊಳಿಸಿರುವ ಪ್ರತಿಭಾನ್ವಿತ ಯುವತಿಯರು ವೆಬ್‌ಸೈಟ್ https://raahsuper30.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹಲವು ಸುತ್ತಿನ ಪರೀಕ್ಷೆ ನಂತರ ಕಾರ್ಯಕ್ರಮಕ್ಕೆ ಆಯ್ದ 30 ಅಭ್ಯರ್ಥಿಗಳನ್ನು ಸೇರ್ಪಡೆಗೊಳಿಸಲಾಗುವುದು. “ಭಾರತದ ಮೊದಲ ಶಿಕ್ಷಣ ಸಚಿವ, ಭಾರತ ರತ್ನ ಡಾ. ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮದಿನವಾದ ನವೆಂಬರ್ 11 ರಂದು ಆಚರಿಸಲಾಗುವ ‘ರಾಷ್ಟ್ರೀಯ ಶಿಕ್ಷಣ ದಿನ’ದಂದು ‘ರಾಹ್ ಸೂಪರ್ 30’ಕಾರ್ಯಕ್ರಮ ಆರಂಭಿಸಲಾಗುತ್ತಿದೆ. ಅಜಾದ್ ಅವರು…
ಅತ್ತಿಬೆಲೆ ಪಟಾಕಿ ದುರಂತ ಹಿನ್ನೆಲೆಯಲ್ಲಿ ಈ ಬಾರಿ ಸಿಮೀತ ಮಳಿಗೆಗಳಲ್ಲಿ ಶನಿವಾರ ಪಟಾಕಿ ವ್ಯಾಪಾರ ಆರಂಭವಾಯಿತು. ಕಡಿಮೆ ಸಂಖ್ಯೆಯಲ್ಲಿ ಮಳಿಗೆಗಳನ್ನು ತೆರೆದ ಕಾರಣ ಜನಸಂದಣಿ ಕಂಡು ಬಂದಿತು. ಇದರಿಂದ ಗಡಿ ಭಾಗದ ರಸ್ತೆಗಳಲ್ಲಿ ಕಿಲೋಮೀಟರ್ ಗಟ್ಟಲೇ ವಾಹನ ದಟ್ಟಣೆ ಉಂಟಾಗಿತ್ತು. ಹೈಕೋರ್ಟ್ ಆದೇಶದಂತೆ ಅತ್ತಿಬೆಲೆ ಹೋಬಳಿಯಲ್ಲಿ 22 ಪಟಾಕಿ ಮಳಿಗೆ ತೆರೆಯಲು ಹಾಗೂ ಪ್ರತಿ ಮಳಿಗೆಯಲ್ಲೂ 600 ಕೆ. ಜಿ ಪಟಾಕಿ ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಬೆಳಕಿನ ಹಬ್ಬಕ್ಕೆ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ, ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಮಳಿಗೆಗಳಲ್ಲಿ ಮುಗಿಬಿದ್ದಿದ್ದರು. ಮಾರುಕಟ್ಟೆಗಳಲ್ಲಿ ಮಣ್ಣಿನ ಹಣತೆಗಳನ್ನು ರಸ್ತೆ ಬದಿಗಳಲ್ಲೇ ರಾಶಿ ಹಾಕಲಾಗಿದೆ. ತರಹೇವಾರಿ ವಿನ್ಯಾಸದ ಹಣತೆಗಳು ಜನರನ್ನು ಆಕರ್ಷಿಸುತ್ತಿದ್ದವು. ದೀಪವೊಂದರ ಬೆಲೆ 15ರಿಂದ 300ವರೆಗಿದೆ. ಉದ್ಯೋಗ ಹಾಗೂ ನಾನಾ ಕಾರಣಗಳಿಂದ ನಗರದಲ್ಲಿ ನೆಲೆಸಿರುವವರು ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ಹೊರಟಿರುವುದರಿಂದ ನಗರದ ಬಸ್ ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. ಹೊರಜಿಲ್ಲೆ, ಹೊರರಾಜ್ಯಗಳನ್ನು ಸಂಪರ್ಕಿಸುವ…
ಬೆಂಗಳೂರು: ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠ ಅಮಿತ್ ಶಾ ಈ ಎಲ್ಲರೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರನಿಗೆ ಪಕ್ಷದ ರಾಜ್ಯಾಧ್ಯಕ್ಷ ನೀಡಿ ಸೂಕ್ತ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಧಾರ ತೆಗೆದುಕೊಂಡ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್ ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದರು.
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಶಾಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದ್ರೆ, ಇಲ್ಲಿನ ಶಾಲೆಗೆ ಸರಿಯಾದ ನೀರಿನ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಡಿ. ನಯೀಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ನೀರಿಗಾಗಿ ಪರದಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಔರಾದ ತಾಲ್ಲೂಕಾ ಪಂಚಾಯಿತಿ ಇ. ಓ. ಅಧಿಕಾರಿಗಳು ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು. ನಿರ್ಲಕ್ಷ್ಯವಹಿಸಿರುವ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಇದೇ ವೇಳೆ ಗ್ರಾಮಸ್ಥರು ಒತ್ತಾಯಿಸಿದರು. ಈ ವೇಳೆ ಮುಖಂಡರಾದ ಜಾಮೀದ ಸರ್ಫುದ್ದೀನ್, ಪಾಷಾಮಿಯಾ. ಮೌಲಾನಾ ಶೌ. ಮಹಮೂದ್ ಸಾಹಿಬ್ ಇದ್ದರು. ವರದಿ: ಅರವಿಂದ ಮಲ್ಲಿಗೆ
ಹೈದರಾಬಾದ್: ತೆಲಂಗಾಣ ವಿಧಾನ ಸಭೆ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶವೇ ಮರುಕಳಿಸಲಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶನಿವಾರ ಹೈದರಾಬಾದ್ ನ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹತ್ತು ವರ್ಷಗಳ ಕೆ ಸಿ ಆರ್ ಆಡಳಿತದಿಂದ ಜನ ಬೇಸರಗೊಂಡಿದ್ದು ಎ ಬಾರಿ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ದ ಮಾದರಿಯಲ್ಲೇ ಇಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ತೆಲಂಗಾಣ ದಲ್ಲಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಜಾತ್ಯತೀತ ಮನೋಭಾವದ ಎಲ್ಲ ವರ್ಗ ಕಾಂಗ್ರೆಸ್ ಪರ ವಿಶ್ವಾಸ ಹೊಂದಿದೆ. ಕೆ ಸಿ ಆರ್ ಕೊಟ್ಟ ಭರವಸೆ ಈಡೇರಿಸಿಲ್ಲ, ಆಡಳಿತ ವಿರೋಧಿ ಅಲೆ ತೀವ್ರವಾಗಿದೆ ಎಂದು ತಿಳಿಸಿದರು. ಕರ್ನಾಟಕ ದಲ್ಲಿ ನಾವು ಕೊಟ್ಟ ಗ್ಯಾರಂಟಿ ಈಡೇರಿಸಿದ್ದೇವೆ. ಕೋಟ್ಯಂತರ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಯ ಫಲ ದೊರಕುತ್ತಿದೆ. ತೆಲಂಗಾಣದಲ್ಲೂ ನಾವು ಆರು ಗ್ಯಾರಂಟಿ ನೀಡಿದ್ದು ಅದರ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿದರು. ಕರ್ನಾಟಕದಲ್ಲಿ…