Author: admin

ತಿರುಪತಿ ತಿರುಮಲ ದೇವಾಲಯದಲ್ಲಿ ತಯಾರಾಗುವ ಲಡ್ಡು ಪ್ರಸಾದಕ್ಕೆ ಬಳಕೆ ಮಾಡುತ್ತಿದ್ದ, ರಾಜ್ಯದ ಕೆಎಂಎಫ್‌ನ ತುಪ್ಪಕ್ಕೆ ಬ್ರೇಕ್ ಬಿದ್ದಿದ್ದು ಭಾರೀ ಸುದ್ದಿಯಾದ ಬೆನ್ನಲ್ಲೇ, ಇದೀಗ ಕೆಎಂಎಫ್ ಟಿಟಿಡಿ ಆಡಳಿತ ಮಂಡಳಿಗೆ ಪತ್ರ ಬರೆದು ತುಪ್ಪ ಖರೀದಿಸುವಂತೆ ಪ್ರಸ್ತಾಪ ಮುಂದಿಟ್ಟಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ಸರ್ಕಾರ ಆಸ್ತಿತ್ವಕ್ಕೆ ಬಂದಿದ್ದು, ಯಾವಾಗ ನಂದಿನಿ ಹಾಲಿನ ದರ ಏರಿಕೆಯಾಯಿತೋ, ನಂದಿನಿಯ ಎಲ್ಲಾ ಉತ್ಪನ್ನಗಳ ಬೆಲೆಯಲ್ಲೂ ಏರಿಕೆ ಆಗಿದ್ದು, ತಿರುಪತಿ ತಿರುಮಲ ದೇವಾಲಯ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪ ಬೇಡ ಎಂದಿತ್ತು. ಇದೀಗ ಮತ್ತೆ ಕೆಎಂಎಫ್ ಪತ್ರ ಬರೆದು, ನಂದಿನಿ ತುಪ್ಪ ಬಳಸಿಕೊಳ್ಳುವಂತೆ ಪ್ರಸ್ತಾಪ ಮುಂದಿಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಹಾಡಹಗಲೇ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ವಿಲಿಯಮ್ ಟೌನ್‌ ನಲ್ಲಿ ನಡೆದಿದೆ. ಹೆಲ್ಮಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಖದೀಮರು ಸ್ಕೂಟಿಯಲ್ಲಿ ಹೋಗುತ್ತಿದ್ದ ಸವಾರನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಆತನ ಜೇಬಿನಲ್ಲಿದ್ದ ಮೊಬೈಲ್ ಫೋನ್, ವ್ಯಾಲೆಟ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಸಾರ್ವಜನಿಕರೊಬ್ಬರು ಟ್ವಿಟ್ ಮಾಡುವ ಮೂಲಕ ಪೊಲೀಸರ ಗಮನಕ್ಕೆ ತಂದಿದ್ದಾರೆ. ಆದರೆ ಠಾಣೆಗೆ ಈವರೆಗೂ ಯಾವುದೇ ದೂರು ಬಂದಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿರಿಸಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪಕ್ಷದ ನಾಯಕರು ಈ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಎಸ್ ಸಿ ಎಸ್‌ ಪಿ ಮತ್ತು ಟಿ ಎಸ್‌ ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದ್ದು, ಇಲ್ಲಿ ಎಲ್ಲಿಯೂ ನಿಯಮಾವಳಿಗಳನ್ನು ಮೀರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರಾಂಡ್ ಬೆಂಗಳೂರು’ ಅಭಿಯಾನಕ್ಕೆ 10,479 ಸಲಹೆಗಳು ಸ್ವೀಕಾರವಾಗಿವೆ. ಗುರುವಾರ ಜ್ಞಾನಭಾರತಿ ಆವರಣದಲ್ಲಿ ಆಯೋಜಿಸಲಾಗಿದ್ದ ಘನತ್ಯಾಜ್ಯ ನಿರ್ವಹಣೆ ಪಾಲುದಾರರ ಸಭೆಯಲ್ಲಿ ಬಂದಂತಹ ಸಲಹೆಗಳು ಮತ್ತು ನಾಗರಿಕರಿಂದ ಈಗಾಗಲೇ ಬಂದಿರುವ ಎಲ್ಲ ಸಲಹೆಗಳನ್ನು ಕ್ರೋಢೀಕರಿಸಿ ಅಧ್ಯಯನ ನಡೆಸಿ ಅಂತಿಮವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಸಲಹೆಗಳನ್ನು ಬೇರ್ಪಡಿಸಿ ವರದಿ ಸಿದ್ಧಪಡಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ನಾಗರಿಕರಿಂದ ಬಂದಿರುವ ಸಲಹೆಗಳ ಸಂಬಂಧ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್, ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಬೆಂಗಳೂರು ವಿವಿ ರಿಜಿಸ್ಟರ್ ಶೇಖ್ ಲತೀಫ್ ಮಾತನಾಡಿ, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸ್ವಚ್ಛ ಬೆಂಗಳೂರು ವಿಭಾಗಕ್ಕೆ ನಮ್ಮ ವಿವಿ ಶೈಕ್ಷಣಿಕ ಪಾಲುದಾರವಾಗಿದೆ. ಸ್ವಚ್ಛ ಬೆಂಗಳೂರು ವಿಭಾಗಗಕ್ಕೆ ಬಂದಿರುವ ಸಲಹೆಗಳನ್ನು ಈಗಾಗಲೇ ವಿಂಗಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಬಂದಿರುವ ಸಲಹೆಗಳನ್ನೂ ಒಟ್ಟುಗೂಡಿಸಿ ವರದಿ ತಯಾರಿಸಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳನ್ನ ಅಲಿಸಿದರು. ಬಿ. ಆರ್. ಎಸ್ ನವರು ನೀಡಬೇಕಾಗಿದ್ದ, ಬಾಕಿ ವೇತನವನ್ನ 45 ದಿನಗಳ ಒಳಗಾಗಿ ಪಾವತಿಸುವುದಾಗಿ ಸಚಿವರು ಸಿಬ್ಬಂದಿಗಳಿಗೆ ಭರವಸೆ ನೀಡಿದರು. ಇಎಸ್‌ಐ, ಪಿಎಫ್ ಕುರಿತಂತೆ ಅಗಸ್ಟ್ 31 ರೊಳಗೆ ಕ್ರಮ ಕೈಗೊಳ್ಳುವಂತೆ ಸಂಜೀವಿನಿ ಸಂಸ್ಥೆಯವರಿಗೆ ಇದೇ ವೇಳೆ ತಾಕೀತು ಮಾಡಲಾಯಿತು. ಆರೋಗ್ಯ ಸಚಿವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟು, ಡಯಾಲಿಸಿಸ್ ಕೇಂದ್ರಗಳಲ್ಲಿ ತಮ್ಮ ಕಾರ್ಯ ಮುಂದುವರಿಸಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಸಭೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಎಂ. ಡಿ ಎನ್. ಎಚ್. ಎಮ್ ನವೀನ್ ಭಟ್ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಓರ್ವ ವ್ಯಕ್ತಿ ಸರಾಸರಿ ವಿದ್ಯುತ್ ಬಳಕೆ 199 ಯೂನಿಟ್ ಇದ್ದು, ಈ ಬಾರಿ 203 ಯುನಿಟ್ ಬಳಸಿದ್ರೆ ಯೋಜನೆ ಲಾಭ ಇಲ್ಲ. ಸರಾಸರಿ ಬಳಕೆ ಮೇಲೆ 10% ಹೆಚ್ಚುವರಿ ಸೇರಿದ್ರೆ 200 ಯೂನಿಟ್ ಮೀರಬಾರದು. ಆದರೆ 185 ಸರಾಸರಿ ಯುನಿಟ್ ಬಳಸ್ತಿದ್ದವರು ಈ ಬಾರಿ 199 ಯುನಿಟ್ ಬಳಸಿದ್ರೆ ಯೋಜನೆಗೆ ಅರ್ಹರಾಗ್ತಾರೆ. ಇಲ್ಲವೇ 185 ಯೂನಿಟ್ ಬಳಸುವವರು 10% ಹೆಚ್ಚುವರಿ ಯುನಿಟ್‌ ಗೆ ಅವಕಾಶ ಇದೆ ಎಂದು 203 ಯುನಿಟ್ ಬಳಸಿದ್ರೆ ಆತ ಸಂಪೂರ್ಣ ಬಿಲ್ ಕಟ್ಟಬೇಕು. ಹೀಗೆ ಅನೇಕ ಹಿಡನ್ ಕಂಡೀಷನ್ ಅನ್ನು ಇಂಧನ ಇಲಾಖೆ ಅಪ್ಲೈ ಮಾಡಿದೆ. ಗೃಹಜ್ಯೋತಿ ಯೋಜನೆ ಶೂನ್ಯ ಬಿಲ್ ವಿಚಾರದಲ್ಲಿ ಕಳೆದ ವರ್ಷ 200 ಯುನಿಟ್ ಮೇಲಿದ್ದವರಿಗೆ ಅನ್ವಯ ಇಲ್ಲ. ಅಂತವರು ಈ ತಿಂಗಳು 150 ಯುನಿಟ್ ಬಳಸಿದ್ರೂ ಬಿಲ್ ಕಟ್ಟೇಕು. ಅವರೇಜ್ 200 ಯುನಿಟ್ ಮೇಲಿದ್ದವರು ಯೋಜನೆಯಿಂದ ಹೊರಗುಳಿಯಲಿದ್ದಾರೆ. ಅಂಥವರು ಈ ತಿಂಗಳು 150 ಯುನಿಟ್ ಬಳಸಿದ್ರೂ ಬಿಲ್ ಕಟ್ಟಬೇಕು. 2022 ಏಪ್ರಿಲ್ 1 ರಿಂದ…

Read More

ಗೃಹ ಇಲಾಖೆ ಅಧಿಕಾರಿಗಳ ಟ್ರಾನ್ಸ್‌ ಫರ್‌ ನಲ್ಲಿ ಏನಾಗುತ್ತಿದೆ ಅನ್ನೋ ಅನುಮಾನ ಕಾಡಲು ಆರಂಭಿಸಿದೆ. ಈ ವರ್ಗಾಣೆಯಲ್ಲೂ ಗೃಹ ಇಲಾಖೆಗೆ ಯಾಕಿಷ್ಟು ಗೊಂದಲ ಎನ್ನುವಂತಾಗಿದೆ. 2 ತಿಂಗಳಾದ್ರೂ ಸರಿಯಾಗಿ ಅಧಿಕಾರಿಗಳ ವರ್ಗಾವಣೆ ಆಗಿಲ್ಲ. ದಿನೇ ದಿನೆ ಪೊಲೀಸರ ಟ್ರಾನ್ಸ್‌ ಫರ್ ಮುಂದಕ್ಕೆ ಹೋಗುತ್ತಿದ್ದು, ಇನ್ಸ್‌ ಪೆಕ್ಟರ್ ಗಳ ವರ್ಗಾವಣೆಯಲ್ಲೂ ಗೃಹ ಇಲಾಖೆ ಗೊಂದಲ ಎದ್ದು ಕಾಣಿದೆ. ಮೊದಲಿಗೆ ಗೃಹ ಇಲಾಖೆಯಿಂದ 211 ಇನ್ಸ್‌ ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಆ ಬಳಿಕ 69 ಇನ್ಸ್‌ ಪೆಕ್ಟರ್ ಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿರುವುದು ಈಗ ಗೊಂದಲ ಸೃಷ್ಟಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗುತ್ತಿದೆ. ಇತ್ತ ಎನ್‌ ಡಿ ಎ ಹಾಗೂ ಅದರ ಮೈತ್ರಿ ಪಕ್ಷಗಳ ಸಂಸದರ ಜೊತೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಒನ್ ಟು ಒನ್ ಮಾತುಕತೆ ಆಡುತ್ತಿದ್ದು, ನಿನ್ನೆ ತಡರಾತ್ರಿ ದಕ್ಷಿಣ ಭಾರತದ ಸಂಸದರ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಇನ್ನು ಭೇಟಿಯ ಬಳಿಕ ದಕ್ಷಿಣ ಭಾರತದ ಊಟದ ಶೈಲಿಯನ್ನು ಕಂಡು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಬಾಳೆ ಎಲೆ ಊಟವನ್ನು ಸಂಸದರೊಟ್ಟಿಗೆ ಮಾಡಿದ್ದು, ಪಣಿಯಾರು, ಅಪ್ಪಂ, ತರಕಾರಿ ಕುರ್ಮಾ, ಪಪ್ಪು, ಸಾರು, ಅಡೈ ಅವಿಯಲ್ ಸವೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮುಂದಿನ ದಿನಗಳಲ್ಲಿ ನಗರದಲ್ಲಿ ಅಳವಡಿಕೆಯಾಗುವ ಪ್ರತಿ ಅನಧಿಕೃತ ಜಾಹೀರಾತು ಫಲಕಕ್ಕೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ತಲಾ 50 ಸಾವಿರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಸೂಚನೆ ನೀಡಿದೆ. ನಗರದಲ್ಲಿ ಅನಧಿಕೃತ ಫೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಎಜುಕೇಷನ್ (ಸಿಬಿಎಸ್ಸಿ) ಮತ್ತು ಕೌನ್ಸಿಲ್ ಪಾರ್ ದಿ ಇಂಡಿಯನ್ ಸ್ಕೂಲ್ ಆಫ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಐ) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿ, ಕಾನೂನು ರೂಪಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಹಲವು ಮಕ್ಕಳ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿ.ಸೋಮಸೇಖರ್ ಎಂಬುವರು ಸೇರಿದಂರೆ 19 ಮಂದಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ. ಕನ್ನಡ ಮಾತೃಭಾಷೆಯಲ್ಲದ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಮಧ್ಯಭಾಗದಲ್ಲಿ ಕರ್ನಾಟಕದ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿರುವುದರಿಂದ ಕನ್ನಡ ಭಾಷೆ ಅಧ್ಯಯನ ಮಾಡಲು ಕಷ್ಟವಾಗುತ್ತದೆ. ಅಲ್ಲದೆ, ಕನ್ನಡ ಭಾಷೆಯನ್ನು ಕಡ್ಡಾಯ ಮಾಡದಿದ್ದಲ್ಲಿ ಪ್ರಸ್ತುತ ನೀಡಿರುವ ಎನ್‌ಒಸಿಯನ್ನು ಹಿಂಪಡೆಯುವುದಾಗಿ ರಾಜ್ಯದ ಅಧಿಕಾರಿಗಳು…

Read More