Author: admin

ಜಾಮೀನು ಕೊಡಿಸುವಂತೆ ಹಲ್ಲೆ ಮಾಡಿ, ಹಣ ದೋಚಿದ್ದ ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಾಜೇಶ್, ಮಂಜ ಹಾಗೂ ನವೀನ ಬಂಧಿತ ಆರೋಪಿಗಳು. ವಕೀಲ ಗಿರಿಧರ್ ಎಂಬುವವರು ನೀಡಿದ ದೂರಿನನ್ವಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದೂರುದಾರ ಗಿರಿಧರ್ ತಮ್ಮ ಸ್ನೇಹಿತನಾಗಿದ್ದ ಹರ್ಷಿತ್ ಜೊತೆ ಜುಲೈ 24ರಂದು ಕಾರಿನಲ್ಲಿ ತೆರಳಿದ್ದರು. ಈ ವೇಳೆ ಸಮೀಪದಲ್ಲೇ ತನ್ನ ಸ್ನೇಹಿತ ರಾಜೇಶ್‌ ನ ಮನೆಯಿದೆ, ಭೇಟಿಯಾಗೋಣ’ ಎಂದು ಹೇಳಿದ್ದ ಹರ್ಷಿತ್ ನೊಂದಿಗೆ ಗಿರಿಧರ್ ತೆರಳಿದ್ದರು. ಮನೆಯಲ್ಲಿ ರಾಜೇಶ್, ಜಾನ್, ಭರತ್ ಎಂಬಾತ ಸೇರಿದಂತೆ ಐವರು ಇದ್ದರು. ಮನೆಯಲ್ಲಿ ಏಕಾಏಕಿ ಗಿರಿಧರ್‌ ಗೆ ‘ನೀನು ಏನು ಮಾಡುತ್ತೀಯೋ ಗೊತ್ತಿಲ್ಲ. ತಕ್ಷಣ 5 ಲಕ್ಷ ರೂ. ತರಿಸಿಕೊಡಬೇಕು. ಹಾಗು ನಮ್ಮ ಕಡೆಯ ಎಂಟು ಜನರಿಗೆ ಜಾಮೀನು ಕೊಡಿಸಬೇಕು ಎಂದು ಬೆದರಿಕೆ ಹಾಕಿದ್ದರು ಎಂದು ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಮಾಧ್ಯಮಗಳು ಅತ್ಯಂತ ಯೋಗ್ಯ ವಿಧಾನದಲ್ಲಿ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ರುವ ಪ್ರಕರಣ ರದ್ದು ಕೋರಿ ವಿವಿಧ ಪತ್ರಿಕೆಗಳ ಸಂಪಾದಕರು ಮತ್ತು ವರದಿಗಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಮಾಧ್ಯಮಗಳಲ್ಲಿ ತಾಲಿಬಾನ್, ಗೂಂಡಾ, ಪುಂಡಾಟಿಕೆ ಎಂಬ ಪದಗಳ ಬಳಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದೆ. ಪತ್ರಕರ್ತರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುತ್ತವೆ. ಈ ಸುದ್ದಿಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ. ಹೀಗಾಗಿ ಸುದ್ದಿ ಮಾಧ್ಯಮಗಳು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…

Read More

ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www. fisheries. karnatakal. gov. in ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ ಮತ್ತು ಸೊರಬ-9241584070, ಸಾಗರ-9538044365, ತೀರ್ಥಹಳ್ಳಿ-8549933411 ಗಳ ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ. ಭೀಮಾಶಂಕರ್ (15) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್ ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಭೀಮಾಶಂಕರ್ ಕ್ರೀಡಾಕೂಟದಲ್ಲಿ ನಡೆದ ರಿಲೇ ಸ್ಫರ್ಧೆ ಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದನು. ಬಹುಮಾನ ಪಡೆಯುವ ಮೊದಲೇ ಹೃದಯಾಘಾತದಿಂದ ಮೃತ ಪಟ್ಟಿದ್ದಾನೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಪ್ರಾಣಬಿಟ್ಟಿದ್ದಾನೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿರುವ ಮರಣೋತ್ತರ ಪರೀಕ್ಷೆ ನಂತರ ಆತನ ಪೋಷಕರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಗುವುದು. ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕೊಬ್ಬರಿ ಧಾರಣೆ ಕುಸಿತ ಕಂಡಿರುವುದನ್ನು ಖಂಡಿಸಿ ತುರುವೇಕೆರೆ  ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ ಬಂದ್ ಆಚರಿಸಲಾಯಿತು. ಬೆಳಗ್ಗೆ 6 ಗಂಟೆಯಿಂದಲೇ ಪಟ್ಟಣದ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸುವ ಮೂಲಕ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಗಿದ್ದು, ಬಂದ್ ಭಾಗಶಃ ಯಶಸ್ವಿಯಾಗಿದೆ. ತುರುವೇಕೆರೆ ಎಪಿಎಂಸಿ ಮಾರುಕಟ್ಟೆಯಿಂದ ಪ್ರತಿಭಟನಾಕಾರರು ರೋಡ್ ಶೋ ಮೂಲಕ ದಬ್ಬೇಗಟ್ಟ ರಸ್ತೆಯಲ್ಲಿ ಸಾಗಿ ಬಾಣಸಂದ್ರ ಮತ್ತು ಮಾಯಸಂದ್ರ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ರಾಜ್ಯ ಹಸಿರು ಸೇನೆ ಅಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್,  1983ನೇ ಇಸ್ವಿಯಲ್ಲಿ 9700 ಇದ್ದಂತಹ ಕೊಬ್ಬರಿ ಧಾರಣೆ ನಲವತ್ತು ವರ್ಷಗಳ ನಂತರ 8000ಗಳಿಗೆ ಕುಸಿದಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯಾವ ಮಾನದಂಡವನ್ನು ಇಟ್ಟುಕೊಂಡು ಬೆಲೆ ನಿಗದಿ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ತಾಲೂಕು ಅಧ್ಯಕ್ಷ…

Read More

ಗುಬ್ಬಿ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎಮ್ಮೆಗಳು ಸಾವನ್ನಪ್ಪಿ ಮೂರು ಎಮ್ಮೆಗಳಿಗೆ ಗಂಭೀರವಾದ ಗಾಯಗಳಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪರಮಸಂದ್ರ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಗ್ರಾಮದ ಯೋಗೇಶ್ ಎಂಬುವವರಿಗೆ ಸೇರಿರುವ ಎಮ್ಮೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಈ ಘಟನೆ ನಡೆದಿದೆ. ಈ ಎಮ್ಮೆಗಳ ಹಾಲನ್ನೇ ಮಾರಿಕೊಂಡು ಯೋಗೇಶ್ ಕುಟುಂಬ ಜೀವನ ಸಾಗಿಸುತ್ತಿತ್ತು. ಮೃತ ಎಮ್ಮೆಗಳ ಮೌಲ್ಯ ಸುಮಾರು 60ರಿಂದ 70 ಸಾವಿರ ರೂಪಾಯಿಗಳಾಗಿವೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ಗಂಡನೊಬ್ಬ ಹೆಂಡತಿಯ ಜೊತೆ ಜಗಳವಾಡಿ ಆಕೆಯ ಬೆರಳನ್ನೇ ಕಚ್ಚಿ ತಿಂದಿರುವ ಘಟನೆ ಕೋಣನಕುಂಟೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ಈಕೆ ಗಂಡ ವಿಜಯ್ ಕುಮಾರ್ ಹಲ್ಲೆ ನಡೆಸಿರುವ ಆರೋಪಿಯಾಗಿದ್ದಾನೆ.ಹೆಂಡತಿ ಜೊತೆ ಜಗಳವಾಡುತ್ತಿದ್ದಾಗ ಆಕೆಯ ಎಡಗೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ ಎನ್ನಲಾಗಿದೆ. ವಿವಾಹದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಪತಿಯ ಕಿರುಕುಳ ಬೇಸತ್ತ ಪತ್ನಿ ಪತಿಯಿಂದ ದೂರವಿದ್ದರು. ಆದರೆ ಜುಲೈ 28ರಂದು ಪತಿ ವಿಜಯ್ಕುಮಾರ್ ಪತ್ನಿ ವಾಸಿಸುತ್ತಿದ್ದ ಮನೆಗೆ ತೆರಳಿ ಜಗಳವಾಡಿದ್ದ. ಈ ವೇಳೆ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದು ಮಾತ್ರವಲ್ಲದೆ ನಿನ್ನನ್ನು ಕೂಡಾ ಕೊಂದು ಇದೇ ರೀತಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯ ಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟಾನ್ಸಫರ್ ಮಾಡುವ ದಂಧೆ, ಸ್ವಜನ ಪಕ್ಷಪಾತ. ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ. ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ. ಸಿದ್ದರಾಮಯ್ಯ ಒನ್ ಗೂ, ಸಿದ್ದರಾಮಯ್ಯ ೨ ಬಹಳಷ್ಟು ವ್ಯತ್ಯಾಸವಾಗಿದೆ. ರಾಜಕೀಯ ಸ್ಥಿತಿಗತಿ ಆಗಿನಿಂದ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ ಎಂದು…

Read More

ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. ” ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ , ತೊಡೆದು ಹಾಕುವ , ಸರ್ವರಿಗೂ ಸಮಪಾಲು – ಸಮ ಬಾಳನ್ನು ನೀಡುವ ಕಾಲಘಟ್ಟದಲ್ಲಿ ಇರುವಾಗ, ಮನಸ್ಮೃತಿಯ ಹರಿಕಾರರಂತೆ ಅರಗ ಜ್ಞಾನೇಂದ್ರ ಹೇಳಿಕೆ ಇವರ ಸಂಸ್ಕೃತಿಯನ್ನು ತೋರಿಸುತ್ತದೆ. ನಮ್ಮ ಸಂವಿಧಾನಕ್ಕೆ , ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ” ಕಾಂಗ್ರೆಸ್ ಸರ್ಕಾರವು ಇವರ ಮೇಲೆ ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ…

Read More

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಸದರಿ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ಗ್ರಂಥಾಲಯಗಳನ್ನು ಗ್ರಾಮೀಣ ಜಾನ ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಗಸ್ಟ್-2023…

Read More