Author: admin

ತಿಂಡಿ ಬೀದಿಯ 200 ಮೀಟರ್ ಉದ್ದದ 5 ಮೀಟರ್ ಅಗಲದ ಕಾಂಕ್ರೀಟ್ ರಸ್ತೆಯ ಮೇಲ್ಬಾಗಕ್ಕೆ 3 ಎಂಎಂ ಕೆಂಗಂದು ಬಣ್ಣ ಹಾಕಲಾಗುತ್ತಿದೆ ಎಂದು, ದಕ್ಷಿಣ ವಲಯದ ಆಯುಕ್ತ ಜಯರಾಮ್  ರಾಯಪುರ ತಿಳಿಸಿದರು. ಈ ಕಾಮಗಾರಿ ಶೇ 70 ರಷ್ಟು ಪೂರ್ಣಗೊಂಡ ಬಳಿಕ ರಸ್ತೆಗೆ ಕೆಂಗಂದು ಬಣ್ಣದ ಪಾಲೀಶ್ ಮಾಡಲಾಗುತ್ತದೆ ಎಂದು ಹೇಳಿದರು. ತಿಂಡಿ ಬೀದಿಯ ಅಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿದ ಅವರು, 5 ಮೀಟರ್ ಕಾಂಕ್ರೀಟ್ ರಸ್ತೆ, ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆ ನೀರುಗಾಲುವೆ ಸಂಪರ್ಕ, ಕೇಬಲ್‌ ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ ಗೆ ಸಂಬಂಧಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಕೊಪ್ಪಳ: ಪ್ರಧಾನಿ ಹಾಗೂ ಸಿಎಂ ಆಗುವುದಕ್ಕೆ ಅದೃಷ್ಟವೇ ಮುಖ್ಯ ಎನ್ನುವಂತೆ ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಹಲವು ನಾಯಕರ ಹೆಸರೆತ್ತಿ ಅವಹೇಳನಾಕಾರಿಯಾಗಿ ಮಾತನಾಡಿರುವ ಪ್ರಸಂಗವೊಂದು ವರದಿಯಾಗಿದೆ. ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ಎಲ್.ಕೆ.ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ನರೇಂದ್ರ ಮೋದಿ ಪ್ರಧಾನಿ ಆಗಿಬಿಟ್ಟ. ದೇವೆಗೌಡರ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು, ಮುಖ್ಯಮಂತ್ರಿ ಆಗಿಬಿಟ್ಟ ಎಂದಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದು ಎರಡು ಭಾರಿ ಸಿಎಂ ಆಗಿದ್ದಾರೆ. ಕಾಂಗ್ರೆಸ್ನ ಹಳೆ (ಮೂಲ) ಮಂದಿ ಏನಂತಿರಬಹುದು? ಇದೆಲ್ಲಾ ಮನುಷ್ಯನ ಅದೃಷ್ಟ ಎಂದು ಹೇಳಿದ್ದಾರೆ. ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ. ಅವರ ಅಪ್ಪಂದಿರ ಜತೆ ನಾನು ಕೆಲಸ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡುತ್ತಿದ್ದಾರೆ. ಎಸ್.ಆರ್…

Read More

ರಾಣೆಬೆನ್ನೂರು: ನಗರದ ಯರೇಕುಪ್ಪಿ ರಸ್ತೆಯಲ್ಲಿರುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದು ಜನರಿಗೆ ಗಂಭೀರ ಗಾಯವಾಗಿದೆ. ಮೂರು ಜನರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ . ಶ್ರೀಕಾಂತ್ ಎನ್ನುವವರಿಗೆ ಸೇರಿದ  ಸ್ಪಾರ್ಕ್ ಕ್ಯಾಂಡಲ್ ಕಂಪನಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್.ಡಿ.ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ನೇತೃತ್ವದ ಪೀಠ ಸಮನ್ಸ್ ಜಾರಿ ಮಾಡಿದೆ. ರೇವಣ್ಣ ಅಕ್ರಮದ ಮೂಲಕ ಚುನಾವಣೆಯಲ್ಲಿ ಗೆದ್ದು ಶಾಸಕರಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡರು ವಾಗ್ದಾಳಿ ನಡೆಸಿದರು.  ರೇವಣ್ಣ ಮತದಾರರಿಗೆ ನಗದು, ಕೋಳಿ ಮಾಂಸ ವಿತರಿಸಿ ಮತ ನೀಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಮನವಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಅವರನ್ನು ಪರಾಜಿತ ಎಂದು ಘೋಷಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದರು. ಚುನಾವಣೆಯ ಹಿಂದಿನ ದಿನ ರೇವಣ್ಣ ಅವರ ಸಹಚರರು ಮತ್ತು ಬೆಂಬಲಿಗರು ಅನ್ನೇನಹಳ್ಳಿ, ದಂಡಿಗನಹಳ್ಳಿಯಲ್ಲಿ ಪ್ರತಿ ಮನೆಗೆ ಎರಡು ಜೀವಂತ ಕೋಳಿ ಮತ್ತು 3 ಸಾವಿರ ರೂ.ನಗದನ್ನು ವಿತರಿಸಿದ್ದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು  ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಬಿಜೆಪಿ ಹಾಗೂ ಎನ್ ಡಿಎ ಮಿತ್ರಕೂಟ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ನಡೆಸುತ್ತಿದೆ ಇದೇ ವೇಳೆ ಮುಸ್ಲಿಮ್ ಮಹಿಳೆಯರನ್ನೊಳಗೊಂಡು ರಕ್ಷಾ ಬಂಧನ ಆಚರಿಸಲು ಪ್ರಧಾನಿ ಪಕ್ಷದ ಕಾರ್ಯಕರ್ತರಿಗೆ  ಸೂಚಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ. ಈ ಬಾರಿ ಮುಸ್ಲಿಂ ಸಹೋದರಿಯರ ಜತೆ ರಕ್ಷಾ ಬಂಧನ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್ ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ತಲುಪಲು ರಕ್ಷಾ ಬಂಧನದ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪ್ರಧಾನಿ ಕೇಳಿಕೊಂಡರು ಎಂದು ಸಭೆಯಲ್ಲಿದ್ದ ಕೆಲವು ಸಂಸದರು…

Read More

ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಸಾವು ಪ್ರಕರಣ ಸದ್ಯ ಕೋರ್ಟ್, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದೆಂದು ವಿನಂತಿಸುತ್ತೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ. 2012 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಲಾಗಿದೆ.…

Read More

ಕಾರವಾರ: ಮೊಬೈಲ್ ಚಾರ್ಜರ್ ನ್ನು ಕಚ್ಚಿದ 8 ತಿಂಗಳ ಮಗುವೊಂದು ವಿದ್ಯುತ್ ಶಾಕ್ ತಗಲಿ ದಾರುಣವಾಗಿ ಮೃತಪಟ್ಟ ಘಟನೆ ಸಿದ್ದರ ಗ್ರಾಮಲ್ಲಿ ನಡೆದಿದೆ. ಗ್ರಾಮದ ಸಂತೋಷ್ ಕಲ್ಗುಟ್ಕರ್, ಸಂಜನಾ ದಂಪತಿಯ 8 ತಿಂಗಳ ಸಾನಿಧ್ಯ ಮೃತಪಟ್ಟ ಮಗು. ಪೋಷಕರು ಮನೆಯಲ್ಲಿ ಮೊಬೈಲ್​ ಚಾರ್ಜ್​​ ಮಾಡಿಕೊಂಡು ಬಟನ್​ ಆಫ್ ಮಾಡದೆ ಹಾಗೇ ಬಿಟ್ಟಿದ್ದರು. ಆಟವಾಡುತ್ತಾ ಬಂದ ಮಗು ಚಾರ್ಜರ್ ನ್ನು ಬಾಯಿಗೆ ಇಟ್ಟುಕೊಂಡಿದೆ. ಪರಿಣಾಮವಾಗಿ ವಿದ್ಯುತ್ ಶಾಕ್ ತಗಲಿ ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಮೈಸೂರಿನ ಭಾರತೀಯ ಭಾರತಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ” ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಆಚಾರ್ಯ ವಿನೋಬಾ ಭಾವೆ ಅವರು ಕನ್ನಡ ಲಿಪಿಯನ್ನು ‘ವಿಶ್ವದ ಲಿಪಿಗಳ ಮಹಾರಾಣಿ’ ಎಂಬ ಬಿರುದು ನೀಡಿದ್ದರು. ಇಲ್ಲಿಯವರೆಗೆ ಕನ್ನಡ ಭಾರತೀಯ ಸಾಹ್ಯಿತಿಕ ವಿಭಾಗದಲ್ಲಿ 8 ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ಕನ್ನಡ ಭಾಷೆಯು ಸುಮಾರು 3000 ವರ್ಷಗಳಿಗಿಂತ ಹೆಚ್ಚು ದೀರ್ಘ ಇತಿಹಾಸವನ್ನು ಹೊಂದಿದ್ದು, 6.5 ಕೋಟಿಗಿಂತ ಹೆಚ್ಚು ಜನ ಕನ್ನಡವನ್ನು ತಮ್ಮ ಮಾತೃಭಾಷೆಯಾಗಿ ಮಾತನಾಡುತ್ತಿದ್ದಾರೆ ಮತ್ತು ಕನ್ನಡ ಭಾರತದ ಅತ್ಯಂತ ಹಳೆಯ ಭಾರತಗಳಲ್ಲಿ ಒಂದಾಗಿದೆ. ಕನ್ನಡ ಭಾರತೀಯಗೆ 2008 ರಲ್ಲಿ ಶಾಸ್ತ್ರೀಯ ಭಾರತೀಯ ಸ್ಥಾನಮಾನವನ್ನು ನೀಡಲಾಗಿದೆ. ಹೀಗಾಗಿ ಭಾರತೀಯ ಬೆಳವಣಿಗೆ ಮತ್ತು ಸಂಶೋಧನೆಗಾಗಿ 2011 ರಲ್ಲಿ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ…

Read More

ನಗರದಲ್ಲಿ ಇಂದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರವರನ್ನು ಭೇಟಿ ಮಾಡಿದ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ ಸರ್ಕಾರವು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಅನೇಕ ಆಯೋಗಗಳನ್ನು ರಚಿಸಿದೆ. ಈ ಹಿಂದೆ ಎಚ್. ಕಾಂತರಾಜು ಅವರ ನೇತೃತ್ವದಲ್ಲಿ ರಚಿಸಿದ ಆಯೋಗವು 2015 ರಲ್ಲಿ ನಡೆಸಿದ ಸಮೀಕ್ಷೆಯ ವರದಿ ಇನ್ನೂ ಪ್ರಕಟಗೊಳ್ಳದಿರುವುದು ಅಸಮಂಜಸ. ಈ ಆಯೋಗದ ವರದಿ ರಾಜ್ಯದ ಪ್ರತಿಯೊಂದು ಜಾತಿ, ಉಪಜಾತಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಜನರಿಗೆ ತಿಳಿಸುತ್ತದೆ ಎಂಬ ನಂಬಿಕೆಯನ್ನು ಮೂಡಿಸಿತ್ತು. ಈ ವರದಿ ಇನ್ನೂ ಮಂಡನೆಯಾಗದಿರುವುದು ರಾಜ್ಯದ ಬೊಕ್ಕಸಕ್ಕೆ ಆದ ನಷ್ಟ ಮಾತ್ರವಲ್ಲದೇ, ಹಿಂದುಳಿದ ಜಾತಿಯ ಜನರಿಗೆ ಅನ್ಯಾಯವು ಕೂಡ ” ” ಶೈಕ್ಷಣಿಕ ಸವಲತ್ತುಗಳು ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸ್ಥಿತಿಗೆ ಹೋಲಿಕೆ ಮಾಡುವಂತಿರಬೇಕು ಎಂದು ಕೆ.ಸಿ.ವಸಂತ್‌ಕುಮಾರ್ ಪ್ರಕರಣದಲ್ಲಿ ಮಾನ್ಯ ಸುಪ್ರೀಂಕೋರ್ಟ್ ತಿಳಿಸಿದೆ. ಜತೆಗೆ…

Read More

ಶಿವಮೊಗ್ಗ: ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬಸ್ ನಲ್ಲಿದ್ದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ಹೊಡೆದ ಘಟನೆ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಳೆಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಎಸ್ ಬಿಕೆ ಸಂಸ್ಥೆಗೆ ಸೇರಿದ ಖಾಸಗಿ ಬಸ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ 35 ವಿದ್ಯಾರ್ಥಿಗಳು ಶಾಕ್‌ ಗೆ ಒಳಗಾಗಿದ್ದಾರೆ. ವಿದ್ಯುತ್ ಶಾಕ್ ನಿಂದಾಗಿ ಕೆಲವರು ಬಸ್ಸಿನೊಳಗೆಯೇ ಉರುಳಿ ಬಿದ್ದಿದ್ದಾರೆ. ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More