Author: admin

ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ ಗೆ ಕೂದಲು ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ 33 ವರ್ಷದ ಶ್ವೇತಾ ಮೃತ ದುರ್ದೈವಿ. ಮಿಕ್ಸರ್‌ ಗೆ ಜಡೆ ಸಿಲುಕಿ ಮಹಿಳೆಯ ತಲೆ ಕಟ್ ಆಗಿದೆ. ಇನ್ನುಳಿದವರು ಮಿಕ್ಸರ್‌  ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ‘ಅಮೃತಧಾರೆ’ ಹೆಸರಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್ ಸ್ಥಾಪಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿರುವ ಶಿಶುಗಳಿಗೆ ನಿತ್ಯ ಒಂದೂವರೆ ಲೀಟರ್ ಎದೆಹಾಲು ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿನ ದಾನಿಗಳಿಂದ 270 ಲೀಟರ್ ಎದೆಹಾಲು ಸಂಗ್ರಹಿಸಲಾಗಿದೆ. ಆಸ್ಪತ್ರೆ ಹೊರಗಿನ ತಾಯಂದಿರಿಂದ 19 ಲೀಟರ್ ಎದೆಹಾಲನ್ನು ದಾನ ಪಡೆದಿದ್ದು, ನೂರಾರು ಕಂದಮ್ಮಗಳಿಗೆ ಅನುಕೂಲವಾಗಿದೆ. ಎದೆಹಾಲನ್ನು ಪಾಶ್ಚಿಕರಿಸಿ ಪ್ಯಾಕ್ ಮಾಡಲಾಗುತ್ತದೆ. ಇದನ್ನು 120 ಡಿಗ್ರಿ ಸೆಲ್ಸಿಯಸ್ ನಲ್ಲಿ ಸಂರಕ್ಷಿಸಿ ಇಡಲಾಗುತ್ತದೆ. ಆರು ತಿಂಗಳವರೆಗೂ ಈ ಹಾಲನ್ನು ಬಳಸಬಹುದಾಗಿದೆ.

Read More

ಬೆಂಗಳೂರು: ವಿಶೇಷಚೇತನ ವ್ಯಕ್ತಿಯೊಬ್ಬರ ಅಂಗಡಿ ಪಾದಚಾರಿ ಮಾರ್ಗದಲ್ಲಿದೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ದೊಮ್ಮಲೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ) ಮೂರ್ತಿ ಎಂಬವರು ಯಾವುದೆ ಸಮೀಕ್ಷೆ ನಡೆಸದೆ ಜೆಸಿಬಿಯೊಂದಿಗೆ ಬಂದು ಅಂಗಡಿಯನ್ನು ನೆಲಸಮಗೊಳಿಸಿದ್ದಾರೆ ಎಂದು ವಿವೇಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಟಿನ್ ಟೌನ್ ನ ಗ್ಯಾಂಗ್ಟನ್ ಕ್ವಾರ್ಟಸ್ ನಿವಾಸಿಯಾಗಿರುವ ವಿಶೇಷಚೇತನ ನಿತ್ಯಾನಂದನ್ ಎಂಬವರು ಬ್ಯಾಟರಿ ಅಂಗಡಿ ಇಟ್ಟುಕೊಂಡಿದ್ದರು. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೈಕೋರ್ಟ್ ಆದೇಶ ಹಾಗೂ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ಆಯುಕ್ತರ ಸೂಚನೆಗೂ ಮನ್ನಣೆ ನೀಡಿದೆ, ನನ್ನ ಪರವಾನಗಿಯನ್ನು ನವೀಕರಣಗೊಳಿಸದೆ. ಏಕಾಏಕಿ ಬಂದು ನನ್ನ ಅಂಗಡಿ ನೆಲಸಮ ಮಾಡಿ ಹೋಗಿದ್ದಾರೆ ಎಂದು ಅಂಗವಿಕಲ ನಿತ್ಯಾನಂದ ದೂರು ನೀಡಿದ್ದಾರೆ.

Read More

ಬೆಂಗಳೂರು ನಗರದ ವಿವಿಧ ಪೊಲೀಸ್ ವಿಭಾಗಗಳ ವ್ಯಾಪ್ತಿಯ ರೌಡಿಶೀಟರ್ ‌ಗಳ ಮನೆಯ ಮೇಲೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ತಡರಾತ್ರಿ ದಾಳಿ ನಡೆಸಿ ಬಿಸಿ ಮುಟ್ಟಿಸಿದರು. ರೌಡಿಶೀಟರ್‌ ಗಳಾದ ರಮೇಶ್, ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು. ‘ಮಾರಕಾಸ್ತ್ರಗಳು ಹಾಗೂ ಕೆಲವು ದಾಖಲೆ ಪತ್ರಗಳನ್ನು ಜಪ್ತಿ ಮಾಡಲಾಗಿದೆ. ಕೆಲವು ರೌಡಿಗಳ ಮನೆಯಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

Read More

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 13 ಆರೋಪಿಗಳನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಪಂದ್ಯಗಳ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 11 ಸ್ಥಳಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಚಿನ್ನಸ್ವಾಮಿ ಕ್ರೀಡಾಂಗಣ ಒಳಭಾಗದ ಪ್ರೇಕ್ಷಕರ ಗ್ಯಾಲರಿಯಲ್ಲೂ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Read More

ಮಧ್ಯಪ್ರದೇಶದ ಚಂದ್ವಾರ ಜಿಲ್ಲೆಯ ಕೊತ್ವಾಲಿ ಪೊಲೀಸರು ಇತ್ತೀಚೆಗೆ ತಪಾಸಣೆ ವೇಳೆ 60 ಅಕ್ರಮ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದರು. ಆದರೆ ವಶಪಡಿಸಿಕೊಂಡ ಮದ್ಯದ ಬಾಟಲಿಗಳು ಏಕಾಏಕಿ ನಾಪತ್ತೆಯಾಗಿದ್ದು, ನ್ಯಾಯಾಲಯ ಇದಕ್ಕೆ ಕಾರಣ ಕೇಳಿದಾಗ ಇಲಿಗಳು ಮದ್ಯದ ಬಾಟಲಿಗಳನ್ನು ಕುಡಿದಿವೆ. ಈ ಪೈಕಿ ಒಂದನ್ನು ಸೆರೆ ಹಿಡಿಯಲಾಗಿದ್ದು ಉಳಿದ ಇಲಿಗಳು ತಪ್ಪಿಸಿಕೊಂಡವು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

Read More

ಚುನಾವಣಾ ರಾಜಕೀಯದಿಂದ ಡಿ.ವಿ. ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ. ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.

Read More

ಬೆಂಗಳೂರು: ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಜನರಿಗೆ ಏನು ಬೇಕೋ ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇವತ್ತು ಕೆಲಸ ಇಲ್ಲದೆ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೇ ನಾವೇನು ಮಾಡಲು ಆಗುತ್ತದೆ ಎಂದರು.

Read More

ಕರ್ನಾಟಕದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬರ ಇದ್ದರೂ ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಜಾಹೀರಾತಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41,630 ಹೆಕ್ಟೇರ್ ಭತ್ತ ಒಣಗಿ ಹೋಗಿದೆ. ಬರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ 192 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಈ ಬಾರಿ ಪರಿಹಾರ ಮೊತ್ತವನ್ನೂ ಕಡಿತಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.

Read More

ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಇದಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿ ಶಾಮಕದಳದಿಂದ ಬೆಂಕಿ‌ನಂದಿಸಲಾಯಿತು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More