Author: admin

ತುಮಕೂರು: ನಗರದ ಹೊರವಲಯದಲ್ಲಿ ಹಾದು ಹೋಗಿರೋ ಬೆಂಗಳೂರು–ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಾರ ಪ್ರಮಾಣದ ರಸ್ತೆ ಅಪಘಾತಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಅಪಘಾತಗಳ ಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಖುದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕಳೆದ ಒಂದು ವರ್ಷದಲ್ಲಿ 750ಕ್ಕೂ ಹೆಚ್ಚು ಅಪಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಿಸಿದರು. ತುಮಕೂರು ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳು ಬಂದಿರೋ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಗೆ ಭೇಟಿ ನೀಡಿದರು, ಅಲ್ಲದೆ ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ಬಳಿ ದಂಡ ವಿಧಿಸುವುದೇ ಪ್ರಮುಖ ಅಂಶವಾಗಬಾರದು. ಬದಲಾಗಿ ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್…

Read More

ಸಂಪೂರ್ಣವಾಗಿ ಕಚ್ಚಾ ವೇಗನ್ ಅರ್ಥಾತ್ ಸಸ್ಯಜನ್ಯ ಆಹಾರವನ್ನು ಸೇವಿಸುತ್ತಿದ್ದ ರಶ್ಯದ  ಮಹಿಳೆ ಝನ್ನಾ ಸ್ಯಾಮ್ಸೊನೋವಾ ಅವರು ನಿಧನರಾಗಿದ್ದಾರೆ. ಅವರಿಗೆ 39 ವರ್ಷವಾಗಿತ್ತು. ಹಸಿವೆಯಿಂದ ಅವರ ಸಾವು ಸಂಭವಿಸಿದೆ ಎನ್ನಲಾಗಿದೆ. ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಈಕೆ ಕಚ್ಚಾ ಆಹಾರಗಳ ಬಗ್ಗೆ  ಪ್ರಚಾರ ಮಾಡುತ್ತಿದ್ದರು. ಝನ್ನಾ ಕನಿಷ್ಠ ನಾಲ್ಕು ವರ್ಷಗಳಿಂದ ಸಂಪೂರ್ಣ ಕಚ್ಚಾ ವೇಗನ್ ಆಹಾರ ಕ್ರಮವನ್ನು ಅನುಸರಿಸುತ್ತಿದ್ದರು. ಅವರು ಕೇವಲ ಹಣ್ಣುಗಳು, ಮೊಳಕೆ ಬರಿಸಿದ ಸೂರ್ಯಕಾಂತಿ ಬೀಜಗಳು, ಹಣ್ಣುಗಳ ರಸಗಳನ್ನು ಸೇವಿಸುತ್ತಿದ್ದರು. ತನ್ನ ಮಗಳ ಸಾವಿಗೆ ‘ಕಾಲರಾ ತರಹದ ಸೋಂಕು’ ಕಾರಣವೆಂದು ಝನ್ನಾರ ತಾಯಿ ಹೇಳಿದ್ದು ಆದರೆ, ಅವರ ಸಾವಿಗೆ ಅಧಿಕೃತ ಕಾರಣವನ್ನು ಘೋಷಿಸಲಾಗಿಲ್ಲ. ತಮ್ಮ ಪುತ್ರಿಯ ಸಾವಿಗೆ ಕಾರಣವನ್ನು ನಿರ್ಧರಿಸುವ ವೈದ್ಯಕೀಯ ವರದಿ ಮತ್ತು ಮರಣ ಪ್ರಮಾಣಪತ್ರಕ್ಕಾಗಿ ಕುಟುಂಬವು ಕಾಯುತ್ತಿದ್ದು, ಆಲ್‌ – ವೀಗನ್‌ ಡಯಟ್‌ನಿಂದ ಬಳಲಿಕೆ ಮತ್ತು ಅವಳ ದೇಹದ ಮೇಲೆ ಒತ್ತಡ ಉಂಟಾಗಿ ಮೃತಟ್ಟಿರಬಹುದು ಎಂದೂ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ. ಟಿ. ರವಿ ಅವರನ್ನು, ರಾಜ್ಯ ಕಾಂಗ್ರೆಸ್ “ವೈಫಲ್ಯಗಳ ಸರದಾರ” ಎಂದು ಕರೆದಿದೆ. ತವರು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ, ಬೇರೆ ಕ್ಷೇತ್ರವನ್ನು ಗೆಲ್ಲಿಸುವುದಿರಲಿ, ಸ್ವತಃ ತಾವೇ ಹೀನಾಯವಾಗಿ ಸೋತಿದ್ದಾರೆ. ತಮಿಳುನಾಡಿನ ಉಸ್ತುವಾರಿಯಾಗಿ ಮಾಡಿದ ಸಾಧನೆ ಶೂನ್ಯ. ಇಂತಹ ಹಲವು “ವೈಫಲ್ಯಗಳ ಸರದಾರ” ಸಿ. ಟಿ ರವಿಯನ್ನು ಬಿಜೆಪಿಯ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಲಾಭವಾಗಲಿದೆ. ಅಕಸ್ಮಾತ್ ಬಿಜೆಪಿ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಪಕ್ಷ ಸಂತೋಷದಿಂದ ಸ್ವಾಗತಿಸುತ್ತದೆ ಎಂದು ಸಿ. ಟಿ. ರವಿ ಅವರ ಕಾಲನ್ನು ರಾಜ್ಯ ಕಾಂಗ್ರೆಸ್ ಘಟಕ ಎಳೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಉಡುಪಿ ಕಾಲೇಜು ಪ್ರಕರಣ ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಒತ್ತಾಯ ಮಾಡಲೇಬೇಕು. ಅವರು ಹೇಳಿದ್ರು ಅಂತ ನಾವು ಅದನ್ನ ಕೇಳಬೇಕು ಅಂತ ಏನು ಇಲ್ಲ. ಅವರು ಬೇಕಾದ್ರೆ ರಚನಾತ್ಮಕವಾಗಿ ಸಲಹೆ ಕೊಟ್ಟರೆ ಪರವಾಗಿಲ್ಲ. ಅದು ಬಿಟ್ಟು ಪ್ರತಿಭಟನೆ ಮಾಡಿದ್ರೆ ಅವರು ಪ್ರತಿಭಟನೆ ಮಾಡಲಿ. ಅವರ ಪಕ್ಷದ ಖುಷ್ಟೂ ಅವರೇ ಹೇಳಿದ ಮೇಲೂ ಅವರು ನಂಬಲಿಲ್ಲ ಅಂದ್ರೆ ಹೇಗೆ? ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ದೆಹಲಿ ಭೇಟಿ ವಿಚಾರದಲ್ಲಿ ಏನು ಅಜೆಂಡಾ ಇದೆ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದೆಹಲಿ ಭೇಟಿಯಲ್ಲಿ ಏನು ಅಜೆಂಡಾ ಇದೆಯೋ ನನಗೆ ಗೊತ್ತಿಲ್ಲ. ಈ ಹಿಂದೆಯೂ ನಾಯಕರುಗಳು ಇಲ್ಲಿಗೆ ಬರುತ್ತಿದ್ದರು. ಕೆಲವೊಮ್ಮೆ ನಮ್ಮನ್ನು…

Read More

ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್ ಹೊಂದಿರುವ 20 ನೇ ವಿಮಾನವನ್ನು ಆಕಾಸ ಏರ್‌ಲೈನ್ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ 737 MAX, 737-8-200 ವಿಮಾನವು ಇಂದು ಬೆಳಗ್ಗೆ 9. 31ಕ್ಕೆ ಬೆಂಗಳೂರಿಗೆ ಆಗಮಿಸಿತು. ಈ ನೂತನ ವಿಮಾನವನ್ನು ಯುಎಸ್‌ನ ಸಿಯಾಟಲ್‌ ನಲ್ಲಿ ಈ ವಿಮಾನಯಾನವು ಹೊರಟು ಇಂದು ಬೆಂಗಳೂರಿಗೆ ಬಂದು ತಲುಪಿದೆ. ಕಳೆದ ವರ್ಷದ ತನ್ನ ವಿಮಾನಯಾವನ್ನು ಪ್ರಾರಂಭಿಸಿದ ಆಕಾಸ ವಿಮಾನ ಸಂಸ್ಥೆಯು ಒಂದು ವರ್ಷದೊಳಗೆ 20 ವಿಮಾನವನ್ನು ವಿವಿಧ ಮಾರ್ಗಗಳಿಗೆ ತೆರೆದಿದೆ. ಇನ್ನು, ವಿಮಾನ ನೌಕಾಪಡೆಗೆ ಸೇರ್ಪಡೆಗೊಳ್ಳಬೇಕೆಂದರೆ, ಕನಿಷ್ಠ 20 ವಿಮಾನಗಳನ್ನು ಹೊಂದಿರಬೇಕು. ಇದೀಗ ತನ್ನ 20ನೇ ವಿಮಾನವನ್ನು ಪರಿಚಯಿಸಿರುವ ಆಕಾಸ ವಿಮಾನ ಸಂಸ್ಥೆ ಇದೀಗ ವಿಮಾನ ನೌಕಾಪಡೆಗೂ ಸೇರ್ಪಡೆಗೊಂಡಿದೆ. ಈ ಕುರಿತು ಮಾತನಾಡಿದ ಆಕಾಸ ಏರ್‌ ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಯ್ ದುಬೆ, ಆಕಾಸ ವಿಮಾನಯಾನ ಪ್ರಾರಂಭಗೊಂಡ ಒಂದೇ ವರ್ಷದಲ್ಲಿ ತನ್ನ ವಿಮಾನಗಳ ಸಂಖ್ಯೆಯನ್ನು 20ಕ್ಕೆ…

Read More

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ www. kannadapustakapradhikara. Com (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಈ ಶೇ. 50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ…

Read More

ರಾಜ್ಯದಲ್ಲಿ ಶಕ್ತಿ ಯೋಜನೆ ಆರಂಭವಾಗಿದ್ದೇ ಆಗಿದ್ದು, ದೇವಾಲಯಗಳಿಗೆ ಆಗಮಿಸುವ ಮಹಿಳಾ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಇನ್ನು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಮಠಕ್ಕೆ ಮಹಿಳಾ ಭಕ್ತರ ಸಂಖ್ಯೆ ದುಪ್ಪಟ್ಟಾಗಿದ್ದು, ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠ ದಾಖಲೆ ಬರೆದಿದೆ. ಕಳೆದ ವಾರದಿಂದ ಆರಂಭವಾಗಿದ್ದು ಹುಂಡಿ ಕಾಣಿಕೆ ಎಣಿಕೆ ಕಾರ್ಯ, ನಿನ್ನೆ ದಿನ ಮುಕ್ತಾಯ ಆಗಿದೆ. ಮಂತ್ರಾಲಯದ ಹುಂಡಿಯಲ್ಲಿ 3.69 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಅದರಲ್ಲಿ 3.76 ಕೋಟಿ ರೂಪಾಯಿ ನಗದು, 7.05 ಲಕ್ಷ ಮೌಲ್ಯದ ನಾಣ್ಯ, 99 ಗ್ರಾಂ ಬಂಗಾರ, 940 ಗ್ರಾಂ ಬೆಳ್ಳಿ ಸಂಗ್ರಹವಾಗಿದ್ದು, ಮಠ ದಾಖಲೆ ಬರೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಸಿಸೇರಿಯನ್ ನಡೆಸಲು ಬಡ ಮಹಿಳೆಯಿಂದ ಲಂಚ ಪಡೆದ ಆರೋಪದ ಮೇಲೆ ಯಲಹಂಕ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ರಾಮಚಂದ್ರ ಮತ್ತು ವಾರ್ಡ್ ಬಾಯ್ (ಹೊರ ಗುತ್ತಿಗೆ ನೌಕರ) ವಾಹಿದ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ ಐ ಆರ್ ದಾಖಲಿಸಿದ್ದಾರೆ. ಮಂಜುಳಾ ಅವರಿಗೆ ಸಿಸೇರಿಯನ್ ನಡೆಸಲು ರಾಮಚಂದ್ರ 15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಜುಲೈ 15ರಂದು ಮಹಿಳೆಯ ಪತಿ ಮತ್ತು ಸಂಬಂಧಿಕರಿಂದ ‍10,000ವನ್ನು ವಾಹಿದ್ ಮೂಲಕ ಪಡೆಯಲಾಗಿತ್ತು. ಬಳಿಕ ಸಿಸೇರಿಯನ್ ನಡೆಸಲಾಗಿತ್ತು. ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಮಹಿಳೆಯ ಪತಿ ಮತ್ತು ಸಂಬಂಧಿಕರು ಲೋಕಾಯುಕ್ತರ ಗಮನಕ್ಕೆ ತಂದಿದ್ದರು. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್‌ಪಿ ಎಂ.ಪ್ರದೀಪ್ ಕುಮಾರ್ ನೇತೃತ್ವದ ತಂಡ ಆಸ್ಪತ್ರೆಗೆ ತೆರಳುವಷ್ಟರಲ್ಲಿ ಲಂಚದ ಹಣ ಪಡೆದುಕೊಂಡು, ಸಿಸೇರಿಯನ್ ಪೂರ್ಣಗೊಳಿಸಲಾಗಿತ್ತು. ವಾಹಿದ್ ಬಳಿಯಿಂದ ಹಣ ವಾಪಸ್ ಕೊಡಿಸಿದ್ದ ತನಿಖಾ ತಂಡ, ಈ ಕುರಿತು ವಾರ್ಡ್‌ಬಾಯ್ ಮತ್ತು ರಾಮಚಂದ್ರ ಮಧ್ಯದ ದೂರವಾಣಿ ಸಂಭಾಷಣೆಯನ್ನು ವಿಡಿಯೊ ರೆಕಾರ್ಡಿಂಗ್ ಮಾಡಿಕೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನವು ಆಗಸ್ಟ್ 4 ರಿಂದ ಆಗಸ್ಟ್ 15ರವರೆಗೂ ಲಾಲ್‌ ಬಾಗ್‌ ನಲ್ಲಿ ನಡೆಯಲಿದೆ’ ಎಂದು ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಡಿನ ಕೀರ್ತಿಯನ್ನು ದೇಶದಲ್ಲಿ ಪಸರಿಸಿದ ಕೆಂಗಲ್ ಹನುಮಂತಯ್ಯ ಅವರ ಜೀವನ, ಸಾಧನೆ, ಹೋರಾಟಗಳನ್ನು ಈ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಪುಷ್ಪ ಗೌರವ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ’ ಎಂದು ವಿವರಿಸಿದರು. ‘ತೋಟಗಾರಿಕೆ ಇಲಾಖೆ ಸ್ವಾತಂತ್ರೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ 214ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಸಸ್ಯಕಾಶಿ ಲಾಲ್‌ ಬಾಗ್‌ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆಗಸ್ಟ್ 4ರಂದು ಸಂಜೆ 6ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು. ‘ಗಾಜಿನ ಮನೆಯ ಕೇಂದ್ರ ಭಾಗದಲ್ಲಿ…

Read More

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈ ಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು. ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು. ಪ್ರಗತಿ ಪರಿಶೀಲನೆ ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್…

Read More