Author: admin

ಮೈಸೂರು: ಹೆಚ್‌ ಡಿ ಕೋಟೆ ತಾಲೂಕಿನ ತೆಲಗುಮಸಳ್ಳಿ ಗ್ರಾಮದಲ್ಲಿ ದಿಢೀರ್‌ ಕುಸಿದ ಅಂಗನವಾಡಿ ಮೇಲ್ಛಾವಣಿಯಿಂದಾಗಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅಂಗನವಾಡಿಯಲ್ಲಿ ಊಟ ಮುಗಿಸಿ ಆರು ಮಕ್ಕಳು ನಿದ್ರಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಘಟನೆಯಲ್ಲಿ ಪೂರ್ಣಿಮಾ ಮತ್ತು ದಿಶಾಂತ ಎಂಬ ಮಕ್ಕಳ ತಲೆಗೆ ಪೆಟ್ಟಾಗಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ಛಾವಣಿ ಕುಸಿದ ವಿಷಯ ತಿಳಿಯುತ್ತಿದ್ದಂತೆ ಅಂಗನವಾಡಿಗೆ ಶಾಸಕ ಅನಿಲ ಚಿಕ್ಕಮಾದು, ಶಿಶು ಅಭಿವೃದ್ಧಿ ಇಲಾಖೆಯ ಡಿ ಡಿ ಬಸವರಾಜು ಹಿರಿಯ ಅಧಿಕಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚಾಮರಾಜನಗರ: ಪ್ರಮುಖ ಯಾತ್ರಸ್ಥಳವಾದ ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಿಂದ ದೀಪಾವಳಿ ಜಾತ್ರೆ ಆರಂಭಗೊಳ್ಳಲಿದ್ದು ಸಹಸ್ರಾರು ಮಂದಿ ಪಾದಯಾತ್ರೆ ಮೂಲಕ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಚಾಮರಾಜನಗರ, ನಂಜನಗೂಡು, ಮಂಡ್ಯ ಸೇರಿದಂತೆ ಹತ್ತಾರು ಜಿಲ್ಲೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ನೂರಾರು ಕಿಮೀ ಪಾದಯಾತ್ರೆ ಮೂಲಕ ಭಕ್ತರು ಬರುತ್ತಿದ್ದು ಬೆಟ್ಟದಲ್ಲಿ ಭಕ್ತ ಸಾಗರ ಸೇರಿದೆ. ಶುಕ್ರವಾರದಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು 14 ರ ಮಂಗಳವಾರದಂದು ಬೆಳಗ್ಗೆ 8.50ಕ್ಕೆ ರಥೋತ್ಸವ ನಡೆಯಲಿದೆ. ಇನ್ನು, ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಹನೂರಿನಲ್ಲಿ ಮಹಿಳಾ ಭಕ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕುತ್ತಾ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಡೆದು ಹೋಗುವುದೇ ಕಷ್ಟ ಎಂಬ ಸ್ಥಿತಿಯಲ್ಲಿ ಮಹಿಳಾ ಭಕ್ತರು ಕುಣಿದು ಕುಪ್ಪಳಿಸಿ ಮಹದೇಶ್ವರನಿಗೆ ಘೋಷಣೆ ಕೂಗುತ್ತಾ ತೆರಳುವ ಮೂಲಕ ಭಕ್ತಿ ಪರಾಕಷ್ಟೆ ಮೆರೆದಿದ್ದಾರೆ.

Read More

ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ. ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ ವರ್ಚುವೆಲ್ ಸಭೆಯಲ್ಲಿ ಈ ಬಗ್ಗೆ ನಿರ್ದೇಶಿಸಲಾಗಿದೆ. ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಜಿಎಂಪಿಎಲ್) ನಲ್ಲಿ ನಿರ್ವಸಿತರಿಗೆ ಉದ್ಯೋಗದ ಮುಂದುವರಿಕೆಯ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿತು, ನಿರ್ವಸಿತರಿಗೆ ಉದ್ಯೋಗ ನೀಡುವುದು ಜಿಎಂಪಿಎಲ್ ಸಂಸ್ಥೆಯ ಬಾಧ್ಯತೆಯಾಗಿದೆ. ಭೂಸ್ವಾಧೀನ ಸಂದರ್ಭದಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಯೋಜನೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಕರ್ನಾಟಕ ಸರಕಾರವು ಭರವಸೆ ನೀಡಿತ್ತು. ನೇಮಕಾತಿ ನಿಯಮಗಳನ್ನು ಮುಂದಿಟ್ಟು ಉದ್ಯೋಗ ನಿರಾಕರಿಸುವುದು ಸರಿಯಲ್ಲ. ಎಂ.ಆರ್.ಪಿ.ಎಲ್ ಮತ್ತು ಐ.ಎಸ್.ಪಿ.ಆರ್.ಎಲ್. ನಂತಹ ಸಾರ್ವಜನಿಕ ಉದ್ಯಮಗಳು ಯಾವುದೇ ಆಯ್ಕೆ ಮಾನದಂಡಗಳಿಲ್ಲದೆ ನಿರ್ವಸಿತರಿಗೆ ಉದ್ಯೋಗ ನೀಡಿವೆ. ಇದೇ ಆಧಾರದಲ್ಲಿ ನಿರ್ವಸಿತರ ಉದ್ಯೋಗ ಸಮಸ್ಯೆ ಬಗೆಹರಿಸಲು ಸಭೆ ಗೈಲ್…

Read More

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಚಿಂದಿ ಬಟ್ಟೆಗಳನ್ನು ಹಿಡಿದು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು‌. ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಹಳೇ ಬಟ್ಟೆ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಚಿಂದಿ ಸಮಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು‌. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ 60 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ತನಕ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಚಿಂದಿ ಬಟ್ಟೆ ಸುರಿದು ಆಕ್ರೋಶ ಹೊರಹಾಕಿದರು.…

Read More

ಬೆಂಗಳೂರು: ಫಿಟ್ನೆಸ್ ಸೆಂಟರ್ ‌ನಲ್ಲಿ ಕಾಮುಕ ಕೋಚ್  ಒಬ್ಬ ನೀಚ ಕೆಲಸ ಮಾಡಿದ್ದಾನೆ.  ವರ್ಕ್‌ಔಟ್‌ ಮುಗಿಸಿ ಮಹಿಳೆ ಸ್ನಾನ ಮಾಡುವುದನ್ನು ಕಾಮುಕ ಕೋಚ್ ವೀಡಿಯೊ ಮಾಡಿದ್ದಾನೆ. ಬಾಣಸವಾಡಿ ಎನ್ ‌ಆರ್ ‌ಐ ಲೇಔಟ್‌ ನಲ್ಲಿರುವ ಫಿಟ್ನೆಸ್‌ ಸೆಂಟರ್ ‌ನಲ್ಲಿ ಈ ಘಟನೆ ನಡೆದಿದೆ. ಬಾಣಸವಾಡಿ ಪೊಲೀಸರು ಜಿಮ್ ಕೋಚ್‌ ಸಿಬಿಯಾಚನ್ ಎಂಬಾತನನ್ನು ಬಂಧಿಸಿದ್ದಾರೆ. ಮಹಿಳಾ ಟೆಕ್ಕಿಯೊಬ್ಬರು ವರ್ಕ್‌ ಔಟ್‌ ಮುಗಿಸಿ ಸ್ನಾನ ಮಾಡಲು ಬಾತ್‌ ರೂಂಗೆ ತೆರಳಿದ್ದರು. ಈ ವೇಳೆ ಸಿಬಿಯಾಚನ್ ‌ನ ಕಿಟಕಿಯ ಮೂಲಕ ಮೊಬೈಲ್‌ ಹಿಡಿದು ರೆಕಾರ್ಡಿಂಗ್ ಮಾಡುತ್ತಿದ್ದ. ಈ ವೇಳೆ ಟೆಕ್ಕಿಗೆ ಸಣ್ಣದೊಂದು ಅನುಮಾನ ಬಂದಿದೆ. ಕೂಡಲೇ ಹೊರಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ಆದರೂ ಯಾರೋ ಲೇಡಿಸ್‌ ಟಾಯ್ಲೆಟ್‌ ಬಳಿ ಬಂದು ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಜಿಮ್ ಮ್ಯಾನೇಜರ್‌ಗೆ ದೂರು ನೀಡಿದ್ದಾರೆ. ಈ ವೇಳೆ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಕೃತ್ಯ ಬೆಳಕಿಗೆ ಬಂದಿದೆ.

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ‍ನ ಕಥೋಹಾಲನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ‍ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್‍ಫ್ರಂಟ್‍ನೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.  ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.

Read More

ನವದೆಹಲಿ: ಈ ದೀಪಾವಳಿಯಲ್ಲಿ ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ನಂತರ ಆ ಉತ್ಪನ್ನ ಅಥವಾ ಅದರ ತಯಾರಕರೊಂದಿಗೆ ಸೆಲ್ಫಿಯನ್ನು ಕ್ಲಿಕ್ಕಿಸಿ, ನಮೋ ಆಯಪ್ ‍ನಲ್ಲಿ ಪೋಸ್ಟ್ ಮಾಡಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಸಂದೇಶವನ್ನು ಪ್ರಧಾನಿ ಪ್ರಕಟಿಸಿದ್ದಾರೆ. ಈ ದೀಪಾವಳಿಯಲ್ಲಿ ನಮೋ ಅಪ್ಲಿಕೇಷನ್ ‍ನಲ್ಲಿ #VocalForLocal ಥ್ರೆಡ್ ‍ಗಳೊಂದಿಗೆ ನಿಮ್ಮ ಸೆಲ್ಫಿಯನ್ನು ಪೋಸ್ಟ್ ಮಾಡಿ. ಭಾರತದ ಉದ್ಯಮಶೀಲತೆ ಮತ್ತು ಸೃಜನಶೀಲ ಮನೋಭಾವ ಹಬ್ಬದ ಸಂದರ್ಭದಲ್ಲಿ ಎತ್ತಿ ಹಿಡಿಯೋಣ ಎಂದು ಮೋದಿ ಹೇಳಿದ್ದಾರೆ. ಈ ಅಭಿಯಾನ ಗಟ್ಟಿಗೊಳಿಸಲು, ಸಕಾರಾತ್ಮಕ ಮನೋಭಾವವನ್ನು ಹರಡಲು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಆಹ್ವಾನಿಸಿ ಎಂದೂ ಕರೆ ನೀಡಿದ್ದಾರೆ. ಸ್ಥಳೀಯ ಪ್ರತಿಭೆಗಳನ್ನು ಬೆಂಬಲಿಸಲು ಡಿಜಿಟಲ್ ಮಾಧ್ಯಮದ ಶಕ್ತಿಯನ್ನು ಬಳಸೋಣ. ನಮ್ಮ ಜತೆಗಿನ ಭಾರತೀಯರ ಸೃಜನಶೀಲತೆಯನ್ನು ಪ್ರೋತ್ಸಾಹಿಸೋಣ ಮತ್ತು ನಮ್ಮ ಸಂಪ್ರದಾಯಗಳನ್ನು ಪ್ರವರ್ಧಮಾನಕ್ಕೆ ತರೋಣ ಎಂದು ಅವರು ಸಲಹೆ ನೀಡಿದ್ದಾರೆ. ಅಕ್ಟೋಬರ್‍ನ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ…

Read More

ಇಂದಿನ ದಿನಮಾನಗಳಲ್ಲಿ ಮಹಿಳೆಯರ ಶೋಷಣೆ, ಹಲ್ಲೆಯಂತಹ ಹಲವಾರು ಘಟನೆಗಳು ಜರುಗುತ್ತಲೇ ಇವೆ. ಸದ್ಯ, ಸಹ ಪ್ರಯಾಣಿಕನೊಬ್ಬ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಪ್ರಾಂಕ್‌ ಫರ್ಟ್‌ ನಿಂದ ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಲುಪ್ತಾನ್ನ ಏರ್ಲೈನ್ಸ್‌ ನ LH 0754 ವಿಮಾನ ಮೂಲಕ ಬೆಂಗಳೂರಿಗೆ ಬರುತ್ತಿದ್ದರು. ರಂಗನಾಥ(50) ಎಂಬುವನೇ ಕೃತ್ಯ ಎಸಗಿದ ಆರೋಪಿಯಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿ ಹಾಗೂ ಚಾಲಕನ‌ ಬಂಧನವಾಗಿದೆ. ಬೆಂಗಳೂರು ನಗರ ಲೋಕಾಯುಕ್ತ ಎಸ್‍ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿಯಲ್ಲಿ ಚೆಕ್ ‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ  ಮತ್ತು ಖಾಸಗಿ ಚಾಲಕ ಬಂಧನಕ್ಕೊಳಗಾಗಿದ್ದಾರೆ. ಬುಧವಾರ ಖಾಸಗಿ ಹೋಟೆಲ್ ‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್ ‍ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Read More

ಬೆಂಗಳೂರು: ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಈ ದೇಶದ ಇತಿಹಾಸವನ್ನು ಗೌರವಿಸಿ, ಕಾಪಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಗುರುವಾರ ನಡೆದ ಭಾರತ ಸೇವಾದಳದ ಶತಮಾನೋತ್ಸವ ಸಂಭ್ರಮದಲ್ಲಿ ಮಾತನಾಡಿದ ಅವರು, “ಈ ದೇಶದ ಇತಿಹಾಸ ಗೊತ್ತಿಲ್ಲದವರು ಈಗ ಭಾರತ ಎಂದು ಹೆಸರು ಬದಲಾಯಿಸಲು ಹೊರಟಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬರುವ ಮುಂಚಿತವಾಗಿಯೇ, ಪಕ್ಷದ ಸಂಸ್ಥೆಗೆ ʼಭಾರತʼ ಸೇವಾದಳ ಎಂದು ಹೆಸರಿಟ್ಟವರು ನಾವು ಎಂದು ಅಭಿಮಾನ ವ್ಯಕ್ತಪಡಿಸಿದರು. ಸೇವಾದಳದವರು ಹೋರಾಟದ ಹಾದಿಯಲ್ಲಿ ಹೆಚ್ಚು ತೊಡಗಿಸಿಕೊಂಡು, ಮುನ್ನುಗ್ಗಬೇಕು. ಹೋರಾಟದ ಹಾದಿಯಲ್ಲಿ ಬಂದವರು ಎಂದಿಗೂ ಮಾರಾಟವಾಗುವುದಿಲ್ಲ. ಕಾಂಗ್ರೆಸ್ ಪಕ್ಷದ ಅಡಿಪಾಯವೇ ಸೇವಾದಳ ಎಂದು ಹೇಳಿದರು. ನಂಬಿಕೆ ಇಲ್ಲದ ಕಡೆ ವಾದ ಮಾಡಲು, ಇಷ್ಟ ಇಲ್ಲದ ಕಡೆ ತಲೆ ತಗ್ಗಿಸಲು, ಬೆಲೆ ಇಲ್ಲದ ಕಡೆ ಪ್ರೀತಿ ಬಯಸಲು ಹೋಗಬೇಡಿ. ಕಾಯಕ ನಿರತರಾಗಿ ಸಂಸ್ಥೆಯ ಏಳಿಗೆಗೆ ದುಡಿಯಿರಿ, ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಸದಾ ಮುಖ್ಯ ಎಂದು ಸಲಹೆ…

Read More