Author: admin

ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ“ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ 9,60,000 ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್. ಹೊರಟ್ಟಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಮಿಕ ಇಲಾಖೆ ಸಚಿವ ಸಂತೋಪ್ ಎಸ್. ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಶ್ರೀನಿವಾಸ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಮೊಹರಮ್ ಮೊಹಿಸಿನ್, ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಭಾರತಿ.ಡಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Read More

ರಾಜಸ್ಥಾನ: ರೈಲ್ವೇ ಹಳಿಯಲ್ಲಿ ಪಟಾಕಿ ಸಿಡಿಸಿದ ಯೂಟ್ಯೂಬರ್‌ ಗಾಗಿ ರೈಲ್ವೆ ರಕ್ಷಣಾ ಪಡೆ ಹುಡುಕಾಟ ನಡೆಸುತ್ತಿದೆ ರಾಜಸ್ಥಾನದ ಫುಲೇರಾ-ಅಜ್ಮೀರ್ ಪ್ರದೇಶದ ದಂತ್ರಾ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಯೂಟ್ಯೂಬರ್‌ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಆರ್‌ಪಿಎಫ್ ಈ ವಿಷಯವನ್ನು ಗಮನಿಸಿ ದೃಶ್ಯದಲ್ಲಿರುವ ವ್ಯಕ್ತಿಯನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿತು. ಮಾರ್ಗ ಮಧ್ಯೆ ಪಟಾಕಿ ಸಿಡಿಸಲಾಯಿತು. ಆಗ ಭಾರೀ ಹೊಗೆ ಕಾಣಿಸಿಕೊಂಡಿದೆ. ಬೂದಿ ಹಾವಿನ ಆಕಾರದಲ್ಲಿತ್ತು. ಯೂಟ್ಯೂಬರ್ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈಲ್ವೇ ಸಂರಕ್ಷಣಾ ಪಡೆಯ ವಾಯುವ್ಯ ವಿಭಾಗಕ್ಕೆ ಕರೆಗಳನ್ನು ಮಾಡಲಾಗಿತ್ತು. ಇದರೊಂದಿಗೆ ಆ ವಿಡಿಯೋದಲ್ಲಿರುವ ಯುವಕನ ಗುರುತು ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರೈಲ್ವೆ ಕಾಯಿದೆಯ ಸೆಕ್ಷನ್ 145, 147 ರೈಲ್ವೆ ಹಳಿಗಳು ಮತ್ತು ಪ್ಲಾಟ್‌ ಫಾರ್ಮ್‌ಗಳಲ್ಲಿ ವೀಡಿಯೊ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಈ ನಿಯಮವನ್ನು ಉಲ್ಲಂಘಿಸಿದರೆ ರೂ 1000 ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Read More

ದೆಹಲಿಯಲ್ಲಿ ಶಾಲೆಗಳಿಗೆ ಆರಂಭಿಕ ಚಳಿಗಾಲದ ರಜೆ. ನವೆಂಬರ್ 9 ರಿಂದ 19 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲು ದೆಹಲಿ ಸರ್ಕಾರ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿರ್ಬಂಧ ಹೇರಿದ್ದರೂ ಗಾಳಿಯ ಗುಣಮಟ್ಟ ಸುಧಾರಣೆಯಾಗದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಇದೇ ತಿಂಗಳ 10ರವರೆಗೆ ರಜೆ ಘೋಷಿಸಲಾಗಿತ್ತು. ಇದು ವಿಸ್ತರಣೆಯಾಗಿದೆ. ಉಳಿದ ಭಾಗದ ಚಳಿಗಾಲದ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ. ಇದೇ ವೇಳೆ ಬೇರೆ ರಾಜ್ಯಗಳಿಂದ ದೆಹಲಿಗೆ ಬರುವ ಆಪ್ ಆಧಾರಿತ ಕ್ಯಾಬ್ ಗಳ ಮೇಲೆ ನಿಷೇಧ ಹೇರಲಾಗಿದೆ. ಅಂದರೆ ನೋಯ್ಡಾ ಅಥವಾ ಗುರುಗ್ರಾಮದಿಂದ ಓಲಾ-ಉಬರ್ ಮೂಲಕ ದೆಹಲಿಗೆ ಬರಲು ಸಾಧ್ಯವಿಲ್ಲ. ಸದ್ಯ ದೆಹಲಿಯಲ್ಲಿ ಸೇವೆ ಮುಂದುವರಿದಿದೆ.

Read More

ಜನಸಂಖ್ಯೆ ನಿಯಂತ್ರಣದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಹಿಳಾ ವಿರೋಧಿ ಹೇಳಿಕೆಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ. ಮಹಿಳೆಯರ ವಿರುದ್ಧದ ಇಂತಹ ಹೇಳಿಕೆಗಳು ರಾಷ್ಟ್ರವನ್ನು ಅವಮಾನಿಸಿದಂತೆ ಎಂದು ಮೋದಿ ಹೇಳಿದರು. ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು. ಪ್ರಧಾನಿಯವರು ನಿತೀಶ್ ಕುಮಾರ್ ಅವರನ್ನು ತೀವ್ರ ಭಾಷೆಯಲ್ಲಿ ಟೀಕಿಸಿದರು ಮತ್ತು ಈ ವಿಷಯದ ಬಗ್ಗೆ ಪ್ರತಿಪಕ್ಷಗಳ ಮೌನವನ್ನು ಪ್ರಶ್ನಿಸಿದರು. ನಿನ್ನೆ ಬಿಹಾರ ವಿಧಾನಸಭೆಯೊಳಗೆ ‘ಭಾರತ’ ಮೈತ್ರಿಕೂಟದ ಪ್ರಮುಖ ನಾಯಕರೊಬ್ಬರು ಮಹಿಳೆಯರನ್ನು ಅವಮಾನಿಸಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟದ ಒಬ್ಬ ನಾಯಕನೂ ಇದರ ವಿರುದ್ಧ ಒಂದೇ ಒಂದು ಮಾತನ್ನೂ ಆಡಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ? ಸ್ತ್ರೀದ್ವೇಷಿಗಳು ನಿಮಗೆ ಏನಾದರೂ ಒಳ್ಳೆಯದನ್ನು ಮಾಡಬಹುದೇ? – ಮೋದಿ ಕೇಳಿದರು. ನಮ್ಮ ತಾಯಂದಿರು ಮತ್ತು ಸಹೋದರಿಯರ ಬಗ್ಗೆ ಇಂತಹ ಕೆಟ್ಟ ಮನೋಭಾವವನ್ನು ಹೊಂದಿರುವವರು ದೇಶವನ್ನು ಅವಮಾನಿಸುತ್ತಿದ್ದಾರೆ, ನೀವು ಎಷ್ಟು ಕೆಳಮಟ್ಟಕ್ಕೆ ಹೋಗುತ್ತೀರಿ ಎಂದು ಅವರು ಹೇಳಿದರು. ಬಿಹಾರದ ಫಲವತ್ತತೆ ದರವು 4.2 ರಿಂದ 2.9 ಕ್ಕೆ ಇಳಿಯಲು ಕಾರಣವನ್ನು ವಿವರಿಸುವಾಗ…

Read More

ರಾಣೆಬೆನ್ನೂರಿನ ಅಂಧರ ಜೀವ ಬೆಳಕು ಟ್ರಸ್ಟ್ ಹತ್ತಾರು ವರ್ಷಗಳಿಂದ ಅಂಧ ಮಕ್ಕಳ ಭವಿಷ್ಯ ರೂಪಿಸುತ್ತಿದೆ. ಅಂಧರ ಜೀವ ಬೆಳಕು ಅಂಧರ ಶಾಲೆಯಲ್ಲಿ ವಾರ್ಷಿಕವಾಗಿ 30 ಜನ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಪ್ರಸ್ತುತ 5 ಜನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಗೆ ಧನ ಸಹಾಯದ ಅವಶ್ಯಕತೆ ಇದ್ದು ದಾನಿಗಳ ಸಹಾಯದ ನಿರೀಕ್ಷೆ ಯಲ್ಲಿದೆ ಅಂಧರ ಜೀವ ಬೆಳಕು ಸಂಸ್ಥೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕವಾಗಿ ಇಪ್ಪತ್ತು ಸಾವಿರ ಶೈಕ್ಷಣಿಕ ವೆಚ್ಚ ಖರ್ಚಾಗುತ್ತಿದ್ದು ಸಹೃದಯಿ ದಾನಿಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಧನ ಸಹಾಯ ಮಾಡಬೇಕೆಂದು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ನಾಗನಗೌಡ ಬೆಳ್ಳೂಳ್ಳಿ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ-+91 95359 51112

Read More

ಪಶ್ಚಿಮ ಬಂಗಾಳದಲ್ಲಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆಯಾಗಿದೆ. ಕೈಗಳನ್ನು ಬಟ್ಟೆಯಿಂದ ಕಟ್ಟಿ ನೇಣು ಬಿಗಿದುಕೊಂಡಿದ್ದರು. ಈ ಹತ್ಯೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರ ಕೈವಾಡವಿದೆ ಎಂದು ಆರೋಪಿಸಿ ಬಿಜೆಪಿ ಮುಂದೆ ಬಂದಿದ್ದು, ಸಿಬಿಐ ತನಿಖೆಗೆ ಆಗ್ರಹಿಸಿದೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಸುಭದೀಪ್ ಮಿಶ್ರಾ ಅಲಿಯಾಸ್ ದೀಪು ಮಿಶ್ರಾ ಮೃತದೇಹ ನಿಧಿರಾಂಪುರ ಗ್ರಾಮದಲ್ಲಿ ಪತ್ತೆಯಾಗಿದೆ. ಏಳು ದಿನಗಳ ಹಿಂದೆ ಮನೆ ಬಿಟ್ಟು ಬೇರೆಡೆ ವಾಸ ಆರಂಭಿಸಿದ್ದ. ಸುಭದೀಪ್ ಮಂಗಳವಾರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಸುಭದೀಪ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಕೊಲೆಯ ಹಿಂದೆ ಮಹಿಳೆಯ ಕುಟುಂಬದ ಸದಸ್ಯರ ಕೈವಾಡವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದೇ ವೇಳೆ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಮುಂದಾದಾಗ ಸ್ಥಳೀಯರು ಪ್ರತಿಭಟನೆ ನಡೆಸಿ ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಸುಭಾದೀಪ್ ಅವರ ಸಾವು ರಾಜಕೀಯ ಕೊಲೆ ಎಂದು…

Read More

ಹರಿಯಾಣದ ಗುರುಗ್ರಾಮ್‌ ನಲ್ಲಿ ದೆಹಲಿ-ಜೈಪುರ ಎಕ್ಸ್‌ ಪ್ರೆಸ್‌ ವೇಯಲ್ಲಿ ಬಸ್‌ ಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಘಟಕಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿಡಿಯೋ ಹರಿದಾಡುತ್ತಿದೆ. ಬಸ್ಸಿನಿಂದ ಜ್ವಾಲೆಗಳು ಬರುತ್ತಿದ್ದವು. ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಎಸಿಪಿ ವರುಣ್ ದಹಿಯಾ ಅವರು ಸ್ಲೀಪರ್ ಬಸ್‌ ನಿಂದ ಎರಡು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಹಲವಾರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

Read More

ತುಮಕೂರು:  ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಮೃತರು ಗಂಗಾವತಿ ಮೂಲದವರು ಅನ್ನೋ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಇನ್ನೊರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ, ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯಲಿರುವ ಪ್ರತಿಭಟನೆ ನಡೆಯುತ್ತಿದೆ. ಇಲ್ಲಿಗೆ ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ಕಾರ್ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ನಡೆದಿದೆ.…

Read More

ರಿಪೇರಿ ಮಾಡುವ ವೇಳೆ ವಿಮಾನದಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ರಾಮಪ್ರಕಾಶ್ ಸಿಂಗ್(56) ಏರ್ ಇಂಡಿಯಾದಲ್ಲಿ ಹಿರಿಯ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ವಿಮಾನ ರಿಪೇರಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿಮಾನದಿಂದ ಕೆಳಗೆ ಬಿದ್ದಿದ್ದಾರೆ. ಆತನ ತಲೆಗೆ ತೀವ್ರ ಗಾಯಗಳಾಗಿವೆ. ಅಲ್ಲಿದ್ದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಉತ್ತರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ರಾಜ್ಯದ ಔರೈಯಾ ಜಿಲ್ಲೆಯ ನವೀನ್ ಬಸ್ತಿ ಪಶ್ಚಿಮ ನಿವಾಸಿ ಪ್ರಬಲ್ ಪ್ರತಾಪ್ ಸಿಂಗ್ ಅವರ ಪುತ್ರಿ ಅಂಜಲಿ(20) ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ತಕ್ಷಣವೇ ಆಕೆಯನ್ನು ಸಿಎಚ್‌ ಸಿಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಶವವನ್ನು ಮನೆಗೆ ಕೊಂಡೊಯ್ಯಲು ವಾಹನ ಇಲ್ಲದ ಕಾರಣ ಮೃತರ ಅಣ್ಣ ಬೈಕ್ ನಲ್ಲಿ ಶವವನ್ನು ಮನೆಗೆ ಸಾಗಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Read More