Author: admin

‘ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ಜನರಿಗೆ ಓಡಾಡಲು ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆ ಜತೆಗೆ ಪಾದಚಾರಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಜ್ಞಾನಭಾರತಿ ಸಭಾಂಗಣದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬೀದಿ ಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಬೇಕು ಎಂದು ಅನೇಕ ಒತ್ತಡವಿದೆ. ನಾನೇ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ. ಅನೇಕ ಕಡೆ ರಸ್ತೆಯೇ ಇಲ್ಲ. ಬೀದಿ ವ್ಯಾಪಾರಿಗಳ ವಿರುದ್ಧ ನಾವಿಲ್ಲ, ಅವರಿಗೆ ತೊಂದರೆ ನೀಡುವ ಉದ್ದೇಶ ನಮ್ಮದಲ್ಲ. ಅವರು ಕೂಡ ಬದುಕಬೇಕು, ಜೀವನ ಮಾಡಬೇಕು. ಆದರೆ ಜನರ ಓಡಾಟಕ್ಕೆ ಪಾದಚಾರಿ ಮಾರ್ಗದಲ್ಲಿ ದಾರಿ ಬಿಡಬೇಕು. ಹಾಗೇ ದಾರಿ ಬಿಟ್ಟಿದ್ದರೆ ಯಾವುದೇ ರೀತಿ ಅಭ್ಯಂತರವಿಲ್ಲ ಎಂದರು. ಜೊತೆಗೆ ಜನರು ಓಡಾಡಲು ಜಾಗವೂ ಬೇಕಲ್ಲವೇ. ಪಾದಾಚಾರಿ ಮಾರ್ಗದಲ್ಲಿ ಜನರೂ ಓಡಾಡಬೇಕು, ಅವರು ಇರಬೇಕು. ಈ ವಿಚಾರವಾಗಿ ಅನೇಕರು ಬಂದು ದೂರು ನೀಡಿದ್ದಾರೆ. ಇಬ್ಬರ…

Read More

2024 ರ ಲೋಕಸಭಾ ಚುನಾವಣೆಯಲ್ಲಿ INDIA ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯ ಸೇರಿದಂತೆ ದೇಶದಲ್ಲಿ ಚುನಾವಣಾ ಹೊಸ್ತಿಲಿನಲ್ಲಿ ಸಮೀಕ್ಷೆಗಳು ನಡೆಯುತ್ತದೆ. ಆ ಸಮೀಕ್ಷೆಗಳು ನಡುವೆ ನಿಜವಾಗುವುದಿಲ್ಲ. ಎಷ್ಟೋ ಸಮೀಕ್ಷೆಗಳು ಉಲ್ಟಾ ಹೊಡೆದಿದೆ. ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸಮೀಕ್ಷೆಗಳು ಬಂದಿತ್ತು. ಕಡೆಗೆ ನಮಗೆ ಸಿಕ್ಕಿದ್ದು 135 ಸ್ಥಾನಗಳು. ಈಗಲೇ ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಅಂತಾರೆ. ಅದು ಸಮೀಕ್ಷೆ ನಿಜವಾಗುವುದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

“ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು,  ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲ ಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಎನ್ ಓ ಸಿ ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ. ನಾನು ಸ್ವಾಧೀನ ಆಗಿರುವ ಭೂಮಿ…

Read More

ಜಯನಗರ ಸಾರ್ವಜನಿಕ ಆಸ್ಪತ್ರೆ ಭೇಟಿ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸ್ವಚ್ಚತೆ, ಡಾಕ್ಟರ್‌ ಗಳ ಹಾಜರಾತಿ ಬಗ್ಗೆ ಸಾಕಷ್ಟು ದೂರು ಬಂದಿತ್ತು. ಸಾಮಾಜಿಕ ಕಾರ್ಯಕರ್ತನ ಬಗ್ಗೆ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದೆ. ಆದೇ ರೀತಿ ಇಂದು ಜಯನಗರ ಶಾಸಕರ ಸಮೇತ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ. N. R. ರಮೇಶ್ ಆಸ್ಪತ್ರೆಗಳಲ್ಲಿ ಶವಗಳ ಮಾಫಿಯಾ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದಾರೆ. ಅವರು ಸಾಕಷ್ಟು ಆರೋಪ ಮಾಡುತ್ತಿರುತ್ತಾರೆ. ಅವರ ಬಳಿ ಮಾಹಿತಿ ಇದ್ದರೆ ಒದಗಿಸಲಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಮನೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಸರಘಟ್ಟ ಬಳಿಯ ಕಲ್ಲು ಗುಡ್ಡದಹಳ್ಳಿ ನಿವಾಸಿಗಳಾದ ಶಂಕರ್ (30), ಕುಮಾರ್ (21) ಹಾಗೂ ಶ್ರೀನಿವಾಸ್ ಬಂಧಿತರು. ಸಲ್ಪರ್ ಪೌಡರ್, ನೈಟ್ರೇಟ್, ಸ್ಫೋಟಕ ಮದ್ದು ಹಾಗೂ ರಾಸಾಯನಿಕ ಪೇಸ್ಟ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮೂವರು ಆರೋಪಿಗಳು, ಬಂಡೆಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಲ್ಲು ಗುಡ್ಡದಹಳ್ಳಿಯಲ್ಲಿ ಸಣ್ಣ ಪ್ರಮಾಣದ ಕ್ವಾರಿಗಳಿದ್ದು, ಅಲ್ಲಿ ಕಲ್ಲುಗಳನ್ನು ಒಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿತ್ತು. ಈ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ‘ಮನೆಯಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಬಂದಿತ್ತು. ಪಿ ಎಸ್‌ ಐ ನೇತೃತ್ವದ ತಂಡ ಮನೆಯಲ್ಲಿ ಶೋಧ ನಡೆಸಿತ್ತು. ಅದೇ ಸಂದರ್ಭದಲ್ಲಿ ಸ್ಫೋಟಕಗಳು ಪತ್ತೆಯಾದವು. ಬಳಿಕ, ಮೂವರನ್ನು ಬಂಧಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…

Read More

ಯಲಹಂಕ ಕೆರೆಯ ಆವರಣದಲ್ಲಿ ಬಿಬಿಎಂಪಿ ಅನುದಾನದಲ್ಲಿ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸ್ವಯಂ ವಿದ್ಯುತ್ ಚಾಲಿತ ಬಟ್ಟೆ ಶುದ್ದೀಕರಣ ಯಂತ್ರೋಪಕರಣಗಳ ಘಟಕ ಹಾಗೂ ಯಲಹಂಕ ‘ಧೋಬಿ ಘಾಟ್’ ಅನ್ನು ಶಾಸಕ ಎಸ್. ಆರ್. ವಿಶ್ವನಾಥ್ ಉದ್ಘಾಟಿಸಿದರು. ಕೈಯಿಂದ ಬಟ್ಟೆ ಶುಚಿಗೊಳಿಸಲು ಮಡಿವಾಳ ಸಮಾಜಕ್ಕೆ ತಾತ್ಕಾಲಿಕವಾಗಿ ಧೋಬಿ ಘಾಟ್ ನಿರ್ಮಿಸಲಾಗಿತ್ತು. ಯಂತ್ರೋಪಕರಣಗಳಿಂದ ಬಟ್ಟೆ ಶುಚಿಗೊಳಿಸಿ, ಒಣಗಿಸಲು ಹಾಗೂ ಇಸ್ತ್ರಿ ಮಾಡುವ ಯಂತ್ರಗಳನ್ನು ನೀಡಬೇಕು ಎಂದು ಮಾಡಿದ್ದ ಮನವಿಯ ಮೇರೆಗೆ ನೂತನಕಟ್ಟಡ ನಿರ್ಮಿಸಿ, ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಎಸ್. ಆರ್. ವಿಶ್ವನಾಥ್ ತಿಳಿಸಿದರು. ಅಟ್ಟೂರು ಕೆರೆಯಲ್ಲಿಯೂ ಧೋಬಿ ಘಾಟ್ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಅನುದಾನದ ಲಭ್ಯತೆ ನೋಡಿಕೊಂಡು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ವನಮಹೋತ್ಸವ: ಬಿಬಿಎಂಪಿ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮದಡಿ ಕೆರೆಯ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಜಲಸಿರಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಮು. ಕೃಷ್ಣಮೂರ್ತಿ, ಯಲಹಂಕ ವಲಯದ ಬಿಬಿಎಂಪಿ ಜಂಟಿ ಆಯುಕ್ತರಾದ ಡಾ. ಪೂರ್ಣಿಮಾ, ಉಪ…

Read More

500 ಮುಖಬೆಲೆ ನೋಟುಗಳನ್ನು ನೀಡಿದರೆ ಕಮಿಷನ್ ಸಮೇತ  2,000 ಮುಖಬೆಲೆಯ ನೋಟುಗಳನ್ನು ವಾಪಸ್ ನೀಡುವುದಾಗಿ ಹೇಳಿ ಗುತ್ತಿಗೆದಾರರಿಗೆ ವಂಚಿಸಿರುವ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ‘ಸ್ಥಳೀಯ ಗುತ್ತಿಗೆದಾರ ಸುರೇಶ್ ಮೋಸ ಹೋದವರು. ಆರೋಪಿಗಳಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಶಿವು ವಿರುದ್ಧ ಎಫ್‌ ಐ ಆರ್ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು, ತನಿಖೆ ಮುಂದುವರಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಇಂದಿನಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ ಗೆ 3 ರೂ. ಹೆಚ್ಚಳವಾಗಲಿದೆ. ಟೋನ್ಡ್‌ ಹಾಲಿನ ಹಿಂದಿನ ದರ 39 ರೂ., ಪರಿಷ್ಕೃತ ದರ 42 ರೂ. ಆಗಲಿದೆ. ಹೋಮೋಜಿನೈಸ್ಡ್  ಹಾಲಿನ ಹಿಂದಿನ ದರ 40 ರೂ., ಪರಿಷ್ಕೃತ ದರ 43 ರೂ. ಆಗಲಿದೆ. ಹಸುವಿನ ಹಾಲು(ಹಸಿರು ಪೊಟ್ಟಣ) ಹಿಂದಿನ ದರ 43, ಪರಿಷ್ಕೃತ ದರ 46 ರೂ. ಶುಭಂ ಹಾಲಿನ ಹಿಂದಿನ ದರ 45 ರೂಪಾಯಿ, ಪರಿಷ್ಕೃತ ದರ 48 ರೂ. ಮೊಸರು ಪ್ರತಿ ಲೀಟರ್‌ ಗೆ ಹಿಂದಿನ ದರ 47 ರೂ., ಪರಿಷ್ಕೃತ ದರ 50 ರೂ. ಮಜ್ಜಿಗೆ 200ml ಹಿಂದಿನ ದರ 8 ರೂಪಾಯಿ, ಪರಿಷ್ಕೃತ ದರ 9 ರೂ. ಆಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಉದ್ಘಾಟನೆ, ಜಂಬೂಸವಾರಿ ಮುಹೂರ್ತ ಬಹುತೇಕ ಅಂತಿಮವಾಗಿದೆ. ಅಕ್ಟೋಬರ್ 15ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅ.15ರ ಬೆಳಗ್ಗೆ 10.15ರಿಂದ 10.36ಕ್ಕೆ ವೃಚ್ಚಿಕ ಲಗ್ನದಲ್ಲಿ ಚಾಲನೆ ಸಿಗಲಿದ್ದು ಅ.24ರಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಎನ್ ಸಿಸಿ ಕೆಡೆಟ್ ಗಳು ರಾಷ್ಟ್ರ ಮತ್ತು ಸಾರ್ವಜನಿಕ ಸೇವೆಗಾಗಿ ನಿರಂತರವಾಗಿ ತೊಡಗಿಸಿಕೊಳ್ಳಲಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ಕರೆ ನೀಡಿದ್ದಾರೆ. ಇಂಟರ್ ಡೈರೆಕ್ಟರೇಟ್ ಸ್ಪೋರ್ಟ್ ಶೂಟಿಂಗ್ ಚಾಂಪಿಯನ್‌ ಶಿಪ್ 2023 ರಲ್ಲಿ ಭಾಗವಹಿಸಿದ ಕರ್ನಾಟಕ ಮತ್ತು ಗೋವಾದ ಎನ್‌ಸಿಸಿ ಕೆಡೆಟ್‌ ಗಳಿಗೆ ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂಟರ್  ಡೈರೆಕ್ಟರೇಟ್ ಸ್ಪೋರ್ಟ್ ಶೂಟಿಂಗ್ ಚಾಂಪಿಯನ್‌ ಶಿಪ್ 2023 ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ, ಪ್ರಶಸ್ತಿ ಗಳಿಸಿದ ಕರ್ನಾಟಕ ಮತ್ತು ಗೋವಾ ಎನ್‌ ಸಿ ಸಿ ನಿರ್ದೇಶನಾಲಯದ ಎನ್‌ ಸಿ ಸಿ ಕೆಡೆಟ್‌ ಶೂಟಿಂಗ್ ತಂಡಕ್ಕೆ ಅಭಿನಂದಿಸಿದ ರಾಜ್ಯಪಾಲರು, ಯುವ ಕೆಡೆಟ್‌ ಗಳು ಚಾಂಪಿಯನ್‌ ಶಿಪ್‌ ನಲ್ಲಿ ಶ್ಲಾಘನೀಯ ಪ್ರದರ್ಶನ ನೀಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಎನ್‌ಸಿಸಿಯ ಗುರಿ ಮತ್ತು ಉದ್ದೇಶವು ಯುವಕರಲ್ಲಿ ಚಾರಿತ್ರ್ಯ ನಿರ್ಮಾಣ, ಶಿಸ್ತು, ಸಾಹಸ ಮನೋಭಾವ…

Read More