Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಹಬ್ಬ ದಸರಾ ಸಭೆ ಬಳಿ ಅವರು ಮಾತನಾಡಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳು ಹೀಗಿವೆ, ಶ್ರೀ ರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು. ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಬಿಡಬೇಕು ಎಂದು ತೀರ್ಮಾನಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಗರದ ಹೊರವಲಯದಲ್ಲಿ ಉದ್ದೇಶಿತ ವರ್ತುಲ ರಸ್ತೆ ನಿರ್ಮಾಣದಿಂದ ಭೂಮಿ ಕಳೆದುಕೊಳ್ಳಲಿರುವ ಮಾಲೀಕರು ಹಾಗೂ ರೈತರ ಜತೆ ಡಿ. ಕೆ ಶಿವಕುಮಾರ್ ಅವರು ಸೋಮವಾರ ಸಂವಾದ ನಡೆಸಿದರು. ಬಳಿಕ ಮಾತನಾಡಿ, 18 ವರ್ಷದಿಂದ ಪೆರಿಫೆರಲ್ ರಸ್ತೆ ನೆನೆಗುದಿಗೆ ಬಿದ್ದಿದೆ. ಅನೇಕ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಂಡಿದೆ. ಕೋರ್ಟ್ ಆದೇಶ ಕೂಡ ಕೊಟ್ಟಿದೆ. ರೈತರಿಗೆ ಸಹಾಯ ಆಗುತ್ತಿಲ್ಲ. ರೈತರು ಎನ್ ಒ ಸಿ ಕೇಳುತ್ತಿದ್ದು, ಕೊಡುವುದಕ್ಕೆ ಆಗಲ್ಲ ಅಂತ ಹೇಳಿದ್ದೇವೆ. ನನ್ನ ಕಾಲದಲ್ಲಿ ಡಿನೋಟಿಫಿಕೇಷನ್ ಮಾಡಲು ಆಗಲ್ಲ. 2013ರ ಕಾಯ್ದೆ ಪ್ರಕಾರ ಪರಿಹಾರ ಕೇಳಿದ್ದಾರೆ. ಇದರ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇನೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಆರಂಭಕ್ಕೆ ಚಾಲನೆ ಕೊಡುತ್ತೇವೆ. ಹಾಗು 24 ಗಂಟೆ ಹೋಟೆಲ್ ಗಳಿಗೆ ವ್ಯಾಪಾರ ಮಾಡಲು ಬಿಡುವ ಬಗ್ಗೆ ಮುಂದೆ ನೋಡಿ ತೀರ್ಮಾನಿಸುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ದಸರಾ ಹಬ್ಬವನ್ನು ದಿನಾಂಕ 15. 10. 2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು. ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ – 2023ರ ಮಹೋತ್ಸವ ಆಚರಿಸುವ ಸಂಬಂಧ, ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣಾ ಸಮಿತಿಯ ಉನ್ನತಮಟ್ಟದ ಪೂರ್ವಭಾವಿ ಸಭೆ ನಡೆಯಿತು. ಪ್ರತಿ ವರ್ಷವೂ ರಾಜ್ಯ ಸರ್ಕಾರದಿಂದ ನಾಡಹಬ್ಬ ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಈ ಬಾರಿಯೂ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ದಸರಾ ಮಹೋತ್ಸವ ಆಚರಿಸುವ ಕುರಿತಾಗಿ ಸಭೆಯಲ್ಲಿ ನಿರ್ಧರಿಸಲಾಯಿತು. ಇದೇ ಅಕ್ಟೋಬರ್ 15ರಂದು ಬೆಳಗ್ಗೆ 10.15ರಿಂದ 10. 30ರ ಅವಧಿಯಲ್ಲಿ ದಸರಾವನ್ನು ಉದ್ಘಾಟನೆ ಮಾಡಲಾಗುತ್ತದೆ. ದಸರಾ ಮಹೋತ್ಸವ ವೇಳೆ ದೀಪಾಲಂಕಾರ, ಮೆರವಣಿಗೆ, ಜಂಬೂಸವಾರಿ, ಸ್ಥಬ್ಧ ಚಿತ್ರಗಳ ಮೆರವಣಿಗೆ ಜನರನ್ನು ಬಹಳ ಆಕರ್ಷಿಸುತ್ತವೆ. ಈ ಬಾರಿ ಸ್ಥಬ್ದ ಚಿತ್ರಗಳ ಮೆರವಣಿಗೆಯಲ್ಲಿ ರಾಜ್ಯದ ಪರಂಪರೆ, ಜಿಲ್ಲೆಗಳ ವಿಶೇಷತೆಗಳು, ನಮ್ಮ 5 ಗ್ಯಾರಂಟಿಗಳ ಬಗ್ಗೆ ಜನತೆಗೆ ಮಾಹಿತಿ ತಿಳಿಸುವ ಅಂಶಗಳು ಇರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಅಂಶಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಂಗಳೂರು: ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ. ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದೆ. ಮದ್ರಾಸ್ ಐ ರೋಗದ ಲಕ್ಷಣಗಳು: ಕಣ್ಣು ಕೆಂಪಾಗುವುದು, ನೀರು ಸೋರುವಿಕೆ ಅತಿಯಾದ ಕಣ್ಣೀರು ಕಣ್ಣಿನಲ್ಲಿ ತುರಿಕೆ ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು ದೃಷ್ಟಿ ಮಂಜಾಗುವುದು ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು ಮದ್ರಾಸ್ ಐ ಬರದಂತೆ ತಡೆಯುವುದು ಹೇಗೆ ? ವೈಯಕ್ತಿಕವಾಗಿ ಸ್ವಚ್ಛತೆ ಗೆ ಆದ್ಯತೆ ಕೊಡಿ. ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು. ಸೊಂಕಿತ ವ್ಯಕ್ತಿ ಬಳಸಿದ ಕರವಸ್ರ್ತ ಮತ್ತು ಇತರ ವಸ್ತುಗಳನ್ನು…
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನ ಮೂಡಿದ ಹಿನ್ನೆಲೆ ಹೈಕಮಾಂಡ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 19 ಸಚಿವರಿಗೆ ದೆಹಲಿಗೆ ಕರೆದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಹೆಚ್. ಕೆ ಪಾಟೀಲ್, ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ, ಶಿವಾನಂದ ಪಾಟೀಲ್, ಎಸ್ .ಎಸ್ ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಎನ್. ಎಸ್ ಬೋಸರಾಜು, ಪ್ರಿಯಾಂಕ್ ಖರ್ಗೆಗೆ ಬುಲಾವ್ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಹೆಚ್ ಡಿ ಕೋಟೆ: ತಾಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಿದ್ದಮ್ಮ ಜವರಾಜಯ್ಯ ಉಪಾಧ್ಯಕ್ಷರಾಗಿ ಸುಮ ಗಜೇಂದ್ರ ಆಯ್ಕೆಯಾಗಿದ್ದಾರೆ. ಇಂದು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. 17 ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ, ಎಲ್ಲಾರ ಸಹಮತದಿಂದ ಅದ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದರೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಉಪಾದ್ಯಕ್ಷರ ಗಾದಿಗೆ ಇಬ್ಬರು ಸದಸ್ಯರು ನಾಮಪತ್ರಸಲ್ಲಿಸಿದರು ಬಿ.ಕೆ.ಮಹೇಶ ಎಂಟು ಮತಗಳನ್ನು ಪಡೆದು ಪರಾಜಿತಗೊಂಡರೆ ಸುಮ ಗಜೇಂದ್ರ ಒಂದು ಮತದ ಅಂತರ ದಿಂದ ಒಂಬತ್ತು ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಿ ಸುಮ ಗಜೇಂದ್ರ ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೃಷ್ಣಯ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಘೋಷಣೆ ಮಾಡಿದರು. ನೂತನ ಅಧ್ಯಕ್ಷೆ ಸಿದ್ದಮ್ಮಮಾತನಾಡಿ, ಅಣ್ಣೂರು ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ನನಗೆ ಸಂತಸ ತಂದಿದೆ ಎಂದು…
ನಮ್ಮದು ದಾಸೋಹ ಹಾಗೂ ಶಿಕ್ಷಣ ಪರಂಪರೆ ಹಾಗಾಗಿ ಪ್ರತಿಯೊಬ್ಬರನ್ನ ನಮ್ಮ ಜೊತೆಗೆ ಕರೆದುಕೊಂಡು ಹೋಗುವುದು ನಮ್ಮ ವೀರಶೈವ ಲಿಂಗಾಯತ ಧರ್ಮದ ಸಿದ್ಧಾಂತವೆಂದು ಬೆಟ್ಟದಹಳ್ಳಿಯ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು. ಗುಬ್ಬಿ ಪಟ್ಟಣದ ಬಾವಿ ಮನೆ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕು ವೀರಶೈವ ಲಿಂಗಾಯತ ನೌಕರರ ಸಮಾವೇಶ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಗಮನ ಕೊಡದೆ ಇರುವುದು ದೊಡ್ಡ ದುರಂತವಾಗಿದೆ ಓದುತ್ತಿರುವ ಮಕ್ಕಳಿಗೆ ಸರಿಯಾದ ಶಿಕ್ಷಕರನ್ನು ನೀಡದೆ ಇರುವುದು ನೋಡಿದಾಗ ನಮ್ಮ ರಾಜಕೀಯ ಪಕ್ಷಗಳಿಗೆ ರಾಜಕೀಯ ಮುಖಂಡರಿಗೆ ಶಿಕ್ಷಣದ ಜ್ಞಾನವೇ ಇಲ್ಲವೇನೋ ಎನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರು. ಸಂಸ್ಥೆ ನಡೆಸುತ್ತಿರುವ ಶಾಲೆಗಳಲ್ಲಿ ಶಿಕ್ಷಕರು ನಿವೃತ್ತರಾಗಿ ಸುಮಾರು ಏಳು ವರ್ಷ ಕಳೆದರು ಇದುವರೆಗೂ ತುಂಬುವ ಕೆಲಸವನ್ನು ಮಾಡುತ್ತಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕಲಿಸುವಂತಹ ಶಿಕ್ಷಣ ಈಗ ಅವಶ್ಯಕತೆಯಾಗಿ ಬೇಕಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರತಿಭಾವಂತ…
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವಿಪ್ರತೃಯಿ ಪರಿಷತ್ ತುರ್ತು ಸಭೆಯಲ್ಲಿ, ಸಂಕಷ್ಟಕ್ಕೆ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರ ಹಿತರಕ್ಷಣೆಗೆ ಧಾವಿಸುವ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತು ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಸೇರಿದಂತೆ ಅನೇಕ ಬ್ರಾಹ್ಮಣ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚ್ಚಿದಾನಂದ ಮೂರ್ತಿ ಅವರು, ದಿವಾಳಿ ಅಂಚಿನಲ್ಲಿ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನ ಪುನರುಜ್ಜೀವನ ಮಾಡುವುದು ಸೇರಿದಂತೆ, ಠೇವಣಿದಾರರ ಸಂಪೂರ್ಣ ಹಿತ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಠೇವಣಿದಾರರಿಗೆ ಆರ್ಥಿಕ ನೆರವು, ಕಾನೂನು ಸಲಹೆ ಮತ್ತು ನೈತಿಕ ಬೆಂಬಲ ನೀಡಲಾಗುವುದು ಎಂದರು. ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಮಾತನಾಡಿ, ಠೇವಣಿದಾರರಿಗೆ ಐದು ಲಕ್ಷ ರೂಪಾಯಿ ವಿಮೆ ಯೋಜನೆ ಹಣ ದೊರೆಯಲಿದೆ. ಜೊತೆಗೆ ವಿಪ್ರತೃಯಿ…
ಮಧುಗಿರಿ : ಸ್ವಂತ ‘ ಮನೆಗೆ ಓಡಾಡಲು ಇದ್ದ ರಸ್ತೆಗೆ ಕೆಲವರು ಗುಂಡಿ ತೆಗೆದ ಕಾರಣ ಮಹಿಳೆಯೊಬ್ಬರು ಠಾಣೆ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಘಟನೆ ನಡೆದಿದೆ.ತಾಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದ ಎಸ್. ಅಪ್ಪೇನಹಳ್ಳಿ ವಾಸಿ ರತ್ನ ‘ ಎಂಬುವ ಮಹಿಳೆಯೇ ಧರಣಿ ಕೂತವರು , ಈಕೆ ತಾಲೂಕು ಬಿಜೆಪಿ ಪಕ್ಷದ ಮಾಜಿ ಮಹಿಳಾ ಅಧ್ಯಕ್ಷಿಯಾಗಿದ್ದರು . ಘಟನ ಹಿನ್ನಲೆ : ಸ್ವಗ್ರಾಮ ಎಸ್ ಅಷ್ಟೇನಹಳ್ಳಿಯಲ್ಲಿ ಇವರು ರಸ್ತೆ ಬದಿಯಲ್ಲಿ ಮನೆ ನಿರ್ಮಿಸಿಕೊಂಡಿದ್ದು, ಹಲವಾರು ವರ್ಷದಿಂದ ರಸ್ತೆ ಬದಿಯ ಜಾಗದಲ್ಲೇ ಮನೆಗೆ ಓಡಾಡುತ್ತಿದ್ದರು . ಆದರೆ ಈ ಜಾಗ ಗ್ರಾಮ ಠಾಣಾಜಾಗವಾಗಿದ್ದು, ದಾಖಲೆಯಲ್ಲಿ ಸರಕಾರಿ ಜಾಗವೆಂದು ನಮೂದಾಗಿದೆ. ಆದರೆ ಇದು ನಮ್ಮ ಜಾಗವೆಂದು ಅದೇ ಗ್ರಾಮದ ಹನುಮಕ್ಕ ಎಂಬುವವರು ಕೋರ್ಟ್ ಮೊರೆ ಹೋಗಿದ್ದರು . ಈಗ ಕೋರ್ಟ್ ತೀರ್ಪು ನಮ್ಮ ಪರವಾಗಿದೆ ಎಂದು ಇಬ್ಬರೂ ವಾದಿಸುತ್ತಿದ್ದು , ಇದಕ್ಕೆ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ರತ್ನ ಎಂಬುವವರ ಓಡಾಡುವ ರಸ್ತೆಗೆ ಗುಂಡಿ…