Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ಸೇವಾದಳ ಕಾಂಗ್ರೆಸ್ ಪಕ್ಷದ ಬೆನ್ನೆಲುಬು, ಸೇವಾದಳ ಬಲಿಷ್ಠವಾದರೆ ಪಕ್ಷ ಬಲಿಷ್ಠವಾದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ಗುಬ್ಬಿ ಪಟ್ಟಣದ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ತುಮಕೂರು ಜಿಲ್ಲಾ ಸೇವಾದಳ ಘಟಕದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೇವಾದಳ ಒಂದು ಶಿಸ್ತು ಬದ್ಧ ಸಂಘಟನೆಯಾಗಿದ್ದು, ಸೇವಾದಳದಲ್ಲಿ ಕಾರ್ಯನಿರ್ವಹಿಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಮುಖ್ಯಮಂತ್ರಿಗಳಾಗಿ ಕೇಂದ್ರ ಮಂತ್ರಿಗಳಾಗಿ ಮಹತ್ತರ ಸ್ಥಾನಗಳನ್ನು ನಿರ್ವಹಿಸಿದ್ದಾರೆ. ಸೇವಾದಳ ಸಂಘಟನೆಯಾದರೆ ದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದೇಶದಂತೆ ಪದ್ಮಭೂಷಣ ಡಾ ನಾ ಸು ಹರ್ಡಿಕರ್ ಅವರಿಂದ ಈ ಸಂಸ್ಥೆ ಹಿಂದೂಸ್ತಾನಿ ಸೇವಾದಳ ಎಂಬ ಹೆಸರಿನಲ್ಲಿ ಸ್ಥಾಪನೆಯಾಯಿತು. ಇದರ ಪ್ರಥಮ ಅಧ್ಯಕ್ಷರಾಗಿ ಪಂಡಿತ್ ಜವಾಹರಲಾಲ್ ನೆಹರು ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಅಂದಿನಿಂದ ಈ ಸಂಸ್ಥೆ ಮಕ್ಕಳು ಹಾಗೂ ಯುವಜನರಲ್ಲಿ ಗಾಂಧಿ ತತ್ವದ ಆಧಾರದಲ್ಲಿ ಶಿಸ್ತು ಹಾಗೂ ರಾಷ್ಟ್ರೀಯತೆಯನ್ನು ಬೆಳೆಸುವುದರಲ್ಲಿ ಕಾರ್ಯನಿರತವಾಗಿದೆ. ಸಾವಿರಾರು ಶಿಕ್ಷಣ ಶಿಬಿರ ಹಾಗೂ ಸೇವಾ…
ತುರುವೇಕೆರೆ: ದಬ್ಬೇಘಟ್ಟ ಏತ ನೀರಾವರಿ ಯೋಜನೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಮಗಾರಿ ನಡೆದಿಲ್ಲ ಹಾಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಜನರನ್ನು ಶಾಸಕರು ತಪ್ಪುದಾರಿಗೆ ಎಳೆಯುತಿದ್ದಾರೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ನೇರ ಆರೋಪ ಮಾಡಿದರು. ದಬ್ಬೇಘಟ್ಟ ಏತ ನೀರಾವರಿಯ ಬಗ್ಗೆ ಶಾಸಕರು ಬೂಟಾಟಿಕೆಗಾಗಿ ಎಂದು ಅರೋಪ ಮಾಡಿರುವುದು ಸತ್ಯಕ್ಕೆ ದೂರವಾದ ವಿಚಾರ ನನ್ನ ಅವಧಿಯಲ್ಲಿ ಈ ಕಾಮಗಾರಿಗೆ ಚಾಲನೆ ದೊರೆತಿದ್ದು ಚುನಾವಣಾ ನೀತಿ ಸಂಹಿತೆಯ ಕಾರಣ ಕಾಮಗಾರಿ ನಿಲ್ಲಿಸಲಾಗಿತ್ತು ಗುತ್ತಿಗೆದಾರರು ಇವರನ್ನು ಭೇಟಿ ಮಾಡಲಿಲ್ಲವೆಂದು ಕಾಮಗಾರಿಯನ್ನು ನಿಲ್ಲಿಸಿದ್ದಾರೆ ಹಾಲಿ ಶಾಸಕರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಪತ್ರಿಕಾಗೋಷ್ಠಿ ಮಾಡಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತಿದ್ದಾರೆ ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಹಣ ಬಿಡುಗಡೆ ಯಾಗಿಲ್ಲ ಎಂದು ಜನರನ್ನು ತಪ್ಪುದಾರಿಗೆ ಎಳೆಯುತಿದ್ದು ಶಾಸಕರಿಗೆ ಒಂದು ಸವಾಲನ್ನು ಹಾಕುತ್ತಿದ್ದೇನೆ ನನ್ನ ಅವಧಿಯಲ್ಲಿ ಇದಕ್ಕೆ ಹಣ ಬಿಡುಗಡೆ ಯಾಗಿಲ್ಲದಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದರು. ಪಟ್ಟಣದ ಆರಾಧ್ಯ ದೇವತೆ…
ವಿವಿಧ ಕಾಯಿಲೆಗಳಿಗೆ ಶಸ್ತ್ರಚಿಕಿತ್ಸೆ ಸಂಬಂಧ ನಗರದ ಆಸ್ಪತ್ರೆಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ವಿದೇಶಿಗರು ಕೂಡ ಹೃದಯ ಸಂಬಂಧಿ ಸಮಸ್ಯೆ, ಮೂಳೆ ಮುರಿತ, ಮೂತ್ರಪಿಂಡ ಸಮಸ್ಯೆಯಂತಹ ಕಾಯಿಲೆಗಳಿಗೆ ಶಸ್ತ್ರಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬರಲಾರಂಭಿಸಿದ್ದಾರೆ. ಇದರಿಂದಾಗಿ ವೈದ್ಯರ ಪ್ರಕಾರ ಆಸ್ಪತ್ರೆಗಳ ಆದಾಯದಲ್ಲಿಯೂ ಶೇ 30 ರಷ್ಟು ಹೆಚ್ಚಳವಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ಇಲ್ಲಿನ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜತೆಗೆ ಹೊರ ದೇಶದಿಂದಲೂ ರೋಗಿಗಳು ಶಸ್ತ್ರಚಿಕಿತ್ಸೆಗಳಿಗೆ ಬರುತ್ತಿದ್ದಾರೆ. ಹೀಗಾಗಿ, ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಲ್ಲಿನ ಬಹುತೇಕ ಖಾಸಗಿ ಆಸ್ಪತ್ರೆಗಳು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದು, ರೋಬೋಟಿಕ್ ಶಸ್ತ್ರಚಿಕಿತ್ಸೆಗಳಿಗೆ ಆದ್ಯತೆ ನೀಡುತ್ತಿವೆ. ಇದರಿಂದಾಗಿ ರೋಗಿಗಳ ಚಿಕಿತ್ಸಾ ಅವಧಿ ಕಡಿತವಾಗುತ್ತಿದ್ದು, ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. 2020ರಲ್ಲಿ ಕೋವಿಡ್ ಕಾಣಿಸಿಕೊಂಡ ಬಳಿಕ ಅಂತರರಾಷ್ಟ್ರೀಯ ಪ್ರಯಾಣಕ್ಕೆ ನಿರ್ಬಂಧ ವಿಧಿಸಿದ ಪರಿಣಾಮ ವಿದೇಶಿ ರೋಗಿಗಳಿಗೆ ಚಿಕಿತ್ಸೆ ಪಡೆಯಲು ನಗರಕ್ಕೆ ಬರಲು ತೊಡಕುಗಳು ಎದುರಾಗಿದ್ದವು.…
ಕಂದಾಯ ಇಲಾಖೆಯಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಧ್ಯಮದವರಿಗೆ ಇಂದಿಲ್ಲಿ ತಿಳಿಸಿದರು. ಇಲಾಖೆಯ ಅಧಿಕಾರಿಗಳು, ನೌಕರರ ವಿರುದ್ಧದ ಸುಮಾರು 67 ಶಿಸ್ತುಕ್ರಮ ಕಡತಗಳು ವಿಚಾರಣೆಯಾಗದೆ ಅಥವಾ ವಿಚಾರಣೆ ಆಗಿಯೂ ಇತ್ಯರ್ಥವಾಗದೇ ಕಳೆದ 5ರಿಂದ 7 ವರ್ಷಗಳ ಕಾಲ ಸಚಿವಾಲಯದಲ್ಲೇ ಬಾಕಿ ಇದ್ದವು. ಪ್ರಸ್ತುತ ಆ ಎಲ್ಲಾ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ. ಪ್ರಸ್ತುತ 67 ಪ್ರಕರಣಗಳ ಪೈಕಿ ತಹಶೀಲ್ದಾರ್ 30, ಗ್ರಾಮ ಆಡಳಿತ ಅಧಿಕಾರಿ 12, ಉಪ ನೋಂದಣಿ ಅಧಿಕಾರಿಗಳು 14, ಶಿರಸ್ತೇದಾರ್ 04, ರಾಜಸ್ವ ನಿರೀಕ್ಷಕರು 01, ಪ್ರಥಮ ದರ್ಜೆ ಸಹಾಕರು 02, ದ್ವಿತೀಯ ದರ್ಜೆ ಸಹಾಯಕರು 1, ಕೇಂದ್ರ ಸ್ಥಾನಿಕ ಸಹಾಯಕರು 01, ಜಿಲ್ಲಾ ನೋಂದಾಣಾಧಿಕಾರಿ 01 ಪ್ರಕರಣಗಳು ಒಳಗೊಂಡಿವೆ. ಈ ಪ್ರಕರಣಗಳ ಪೈಕಿ ತಪ್ಪಿತಸ್ಥರು ಎಂದು ಸಾಬೀತಾಗಿರುವ 2 ಅಧಿಕಾರಿ/ನೌಕರರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ಜಾರಿಗೊಳಿಸಲಾಗಿದೆ.…
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ನಿನ್ನೆಯಷ್ಟೇ Demotion ಆಗಿರುವ, ಮಾಜಿ ಸಚಿವ ಹಾಗೂ ಬಿಜೆಪಿಯ ಮುಖಂಡ ಸಿ. ಟಿ. ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಲಭಿಸಲಿದೆ ಎಂಬ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿದ್ದ ಬೆನ್ನಲ್ಲೇ, ಇದೀಗ ಸ್ಫೋಟಕ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಬಾರಿ ಸಿ. ಟಿ. ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಅನುಮಾನ ಆಗುವ ಲಕ್ಷಣಗಳನ್ನು ಬಿಜೆಪಿ ಹೈಕಮಾಂಡ್ ನಾಯಕರ ಉನ್ನತ ಮೂಲಗಳೇ ಸ್ಪಷ್ಟಪಡಿಸಿದೆ. ಅಷ್ಟಕ್ಕೂ ಸಿ. ಟಿ. ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗುವುದು ಅನುಮಾನ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿರುವುದೇಕೆ? ಎಂಬುದನ್ನು ನೋಡುವುದಾದ್ರೆ, ಕಳೆದ ವಾರದಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಿಗೆ ರಾಜ್ಯಾಧ್ಯಕ್ಷರ ನೇಮಕ ಮಾಡಿದೆ. ಅದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶ್ರೀಮತಿ ಪುರಂದೇಶ್ವರಿ ಅವರಿಗೆ ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡಲಾಗಿದೆ. ಇಲ್ಲಿಯೂ ಹಾಗೇ ಸಿ. ಟಿ. ರವಿ ಅವರು ಬಿನೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗಲೇ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಹೈಕಮಾಂಡ್…
ಮೆಗಾಸಿಟಿ ಡೆವಲಪರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೇಶ್ವರ್ ಮತ್ತು ಅವರ ಕುಟುಂಬದವರು ವಿಚಾರಣೆ ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಮೆಗಾಸಿಟಿ ಡೆವಲಪರ್ಸ್ ವಂಚನೆ ಆರೋಪ ಸಂಬಂಧ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರದ ಗಂಭೀರ ಅಪರಾಧಗಳ ತನಿಖಾ ಇಲಾಖೆ (ಎಸ್‌ಎಫ್‌ಐಒ) ದಾಖಲಿಸಿದ್ದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯೋಗೇಶ್ವರ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿದೆ. ಆರೋಪ ಸಂಬಂಧ ಈಗಾಗಲೇ ಎಸ್ ಎಫ್ ಐ ಒ ಪ್ರಕರಣ ದಾಖಲಿಸಿ ಅದು ವಿಚಾರಣೆ ಹಂತದಲ್ಲಿದೆ. ಆದ್ದರಿಂದ ಈ ಹಂತರದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಿಕೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೊಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 1 ರ ಮಧ್ಯಾಹ್ನ 11. 59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನೀಟ್ ಅರ್ಜಿಯಲ್ಲಿ ಡಿಕ್ಲರೇಷನ್ ಮಾಡಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ಕೆ ಇ ಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಜುಲೈ 26 ಮತ್ತು 28 ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1ರಂದು ಮಧ್ಯಾಹ್ನ 3 ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ,…
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ವಿನೋದ್ ತಾವೆ ನೇತೃತ್ವದಲ್ಲಿ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಪಂಚಾಯತ್ ಮಟ್ಟದಿಂದ ಪಕ್ಷ ಕಟ್ಟುತ್ತಿದ್ದೇವೆ. ಬೆಂಗಳೂರಿನ ಮೂರು ಕ್ಷೇತ್ರದ ಬಿಜೆಪಿ ಮುಖಂಡರಿಗೆ ಈಗಾಗಲೇ ಸಿದ್ಧತೆಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ’ ಎಂದರು. ”ವಿಧಾನಸಭೆ ಚುನಾವಣೆಯಲ್ಲಿನ ನ್ಯೂನತೆಗಳನ್ನು ಸರಿದೂಗಿಸಿ 2019ರಲ್ಲಿನ ಲೋಕಸಭೆ ಚುನಾವಣೆಯಲ್ಲಿನ ಫಲಿತಾಂಶವನ್ನು ಮರುಕಳಿಸುವಂತೆ ಮಾಡಲು ಮುಂದಿನ 10 ತಿಂಗಳು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ಕಾರ್ಯಕರ್ತರಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಲಾಯಿತು. ಮೋದಿ ಸರ್ಕಾರದ ಸಾಧನೆಗಳನ್ನು ಜನಮನ ಮುಟ್ಟಿಸುವಂತೆ ತಿಳಿಸಲಾಗಿದೆ” ಎಂದು ಅವರು ತಿಳಿಸಿದರು. ಬೆಂಗಳೂರಿನ 3 ಲೋಕಸಭೆ ಕ್ಷೇತ್ರಗಳ ಸಿದ್ಧತೆ, ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ವಿಧಾನಸೌಧ ಪೂರ್ವ ಪ್ರವೇಶ ದ್ವಾರದ ಬಳಿ ಅಕ್ರಮವಾಗಿ ಡ್ರೋನ್ ಹಾರಿಸಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಕಾರ್ಯಕ್ರಮ ಸಂಘಟನೆ ಕಂಪನಿಯೊಂದರ ಉದ್ಯೋಗಿಗಳಾದ ಅರುಣ್ ಹಾಗೂ ಬಾಬು ಅವರು ಶುಕ್ರವಾರ (ಜುಲೈ 28) ಬೆಳಿಗ್ಗೆ ವಿಧಾನಸೌಧದ ಪೂರ್ವ ಪ್ರವೇಶ ದ್ವಾರದ ಬಳಿ ಡೋನ್ ಹಾರಿಸಿದ್ದರು. ಅದನ್ನು ನೋಡಿದ್ದ ಗಸ್ತು ಸಿಬ್ಬಂದಿ, ಇಬ್ಬರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ವಿಧಾನಸೌಧ ಹಾಗೂ ಹೈಕೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿ ಆರೋಪಿಗಳು ಡ್ರೋನ್ ಹಾರಿಸುತ್ತಿದ್ದರು. ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.’ ‘ಕಂಪನಿ ಸ್ಥಾಪಿಸಿ 15 ವರ್ಷವಾಗಿದ್ದು, ಅದರ ನೆನಪಿಗಾಗಿ ವಿಶೇಷ ವಿಡಿಯೊ ಸಿದ್ಧಪಡಿಸಲಾಗುತ್ತಿದೆ. ಈ ವಿಡಿಯೊಗೆ ವಿಧಾನಸೌಧದ ದೃಶ್ಯ ಅಗತ್ಯವಿತ್ತು. ಹೀಗಾಗಿ, ಡ್ರೋನ್ ಮೂಲಕ ದೃಶ್ಯ ಸೆರೆಹಿಡಿಯಲಾಗುತ್ತಿದೆ’ ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ. ಠಾಣೆ ಜಾಮೀನು ಮೇಲೆ ಆರೋಪಿಗಳನ್ನು ಬಿಟ್ಟು ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಗೃಹ ಇಲಾಖೆಯಲ್ಲಿ ವರ್ಗಾವಣೆ ಬಾಕಿ ಹಿನ್ನೆಲೆ ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಡಿಜಿ, ಐಜಿಪಿ ಕೂಡ ಉಪಸ್ಥಿತರಿದ್ದರು. ಯಾವುದೇ ಮಾಹಿತಿ ನೀಡದೆ ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಲಾಗುತ್ತಿದ್ದು, ಇತ್ತೀಚೆಗಷ್ಟೇ ಗೃಹ ಇಲಾಖೆ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಗೃಹ ಇಲಾಖೆಯಲ್ಲಿ ವರ್ಗಾವಣೆ ಆಗಿಲ್ಲ ಅಂತ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಕಿರುಕುಳ ಕೊಟ್ಟ ಅಧಿಕಾರಿಗಳ ಜೊತೆ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ಜೊತೆ ಸೇರಿ ವರ್ಗಾವಣೆಗೆ, ಸಿಎಂ ಸಿದ್ದರಾಮಯ್ಯ ವರ್ಗಾವಣೆ ಲಿಸ್ಟ್ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA