Subscribe to Updates
Get the latest creative news from FooBar about art, design and business.
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
- ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
- ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
- ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
- ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
Author: admin
ಯುಪಿಯ ಪ್ರಸಿದ್ಧ ನಗರವಾದ ಅಲಿಘರ್ ತನ್ನ ಹೆಸರನ್ನು ಬದಲಾಯಿಸಲು ಸಿದ್ಧವಾಗಿದೆ. ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ಈ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲಿಗಢವನ್ನು ಹರಿಗಡ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಮುನ್ಸಿಪಲ್ ಕಾರ್ಪೊರೇಷನ್ ಬೋರ್ಡ್ ಅಂಗೀಕರಿಸಿತು. ಬಿಜೆಪಿಯ ಮುನ್ಸಿಪಲ್ ಕೌನ್ಸಿಲರ್ ಸಂಜಯ್ ಪಂಡಿತ್ ಅವರು ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ಅಲಿಘರ್ ಮುನ್ಸಿಪಲ್ ಕಾರ್ಪೊರೇಷನ್ ಅಂಗೀಕರಿಸಿದೆ. ಈಗ ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗುವುದು. ಶೀಘ್ರದಲ್ಲೇ ಆಡಳಿತಾತ್ಮಕ ಅನುಮತಿ ದೊರೆಯಲಿದೆ ಎಂದು ಅಲಿಗಢ ಮೇಯರ್ ಪ್ರಶಾಂತ್ ಸಿಂಘಾಲ್ ಭರವಸೆ ವ್ಯಕ್ತಪಡಿಸಿದರು. ಸರ್ಕಾರವು ಇದನ್ನು ಶೀಘ್ರದಲ್ಲೇ ಪರಿಗಣಿಸುತ್ತದೆ ಮತ್ತು ಅಲಿಗಢವನ್ನು ಹರಿಘರ್ ಎಂದು ಮರುನಾಮಕರಣ ಮಾಡುವ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂದು ನಾನು ಭಾವಿಸುತ್ತೇನೆ, ”ಎಂದು ಮೇಯರ್ ಪ್ರಶಾಂತ್ ಸಿಂಘಾಲ್ ಅವರು ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ಅಲಿಘರ್ ಅನ್ನು ಹರಿಘರ್ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ವರದಿ ಮಾಡಿದೆ. ಆದರೆ, ಇದು ಮೊದಲ ಹಂತವಷ್ಟೇ ಆಗಿದ್ದು, ಸರ್ಕಾರದ…
ಬೆಂಗಳೂರು: ತಿರುಪತಿಯಲ್ಲಿ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿ 1.09 ಕೋಟಿ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉದ್ಯಮಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಹೈಗೌಂಡ್ ಪೊಲೀಸರು, ಐವರು ಆರೋಪಿಗಳ ಬಂಧಿಸಿದ್ದಾರೆ. ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಅದರಂತೆ ಅಶೋಕ ಹೋಟೆಲ್ ಗೆ ಕರೆಸಿ ಡೀಲ್ ಮಾಡಿಕೊಂಡಿದ್ದಾರೆ. ಅಲ್ಲದೆ, 1.09 ಕೋಟಿ ರೂ. ಅಡ್ವಾನ್ಸ್ ಪಡೆದಿದ್ದಾರೆ.
ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾನಸಿಕವಾಗಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 2023ರ ಅಕ್ಟೋಬರ್ 5ರಂದು ಅಪ್ರಾಪ್ತ ಬಾಲಕನೊಬ್ಬನ ಪೋಷಕರು ಅವರ ತಾಯಿ, ಅಜ್ಜಿಯ ನಡುವಿನ ಮಕ್ಕಳ ಪಾಲನೆಗೆ ಸಂಬಂಧಿಸಿದ ಉಂಟಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಂಬಂಧಿಸಿದಂತೆ ನಿರ್ದೇಶನ ನೀಡಿದೆ.
ಬೆಂಗಳೂರು: ರೈಲು ಹಳಿಯಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 30 ಲಕ್ಷ ಅಮೆರಿಕ ಡಾಲರ್ ಮೌಲ್ಯದ ಕರೆನ್ಸಿಯ ಕಟ್ಟು ಇದ್ದ ಪ್ಲಾಸ್ಟಿಕ್ ಚೀಲವೊಂದು ಸಿಕ್ಕಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಡಾಲರ್ ಕರೆನ್ಸಿಯ ಸತ್ಯಾಸತ್ಯತೆ ಇನ್ನೂ ದೃಢವಾಗಿಲ್ಲ. ಡಾಲರ್ ಕಟ್ಟುಗಳು ನಕಲಿಯಾಗಿರಬಹುದು ಎಂದು ಶಂಕಿಸಲಾಗಿದ್ದು, ಅವುಗಳನ್ನು ಸಂಪೂರ್ಣ ಪರಿಶೀಲನೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಕಳುಹಿಸಲಾಗಿದೆ ಎಂದು ಹೆಬ್ಬಾಳ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಫುಟ್ ಪಾತ್ ನಲ್ಲಿದ್ದ ಅಕ್ರಮ ಶೆಡ್, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಬಿಬಿಎಂಪಿ ಮಾರ್ಷಲ್ ಗಳ ತಂಡ ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಅಂಗಡಿಗಳನ್ನ ಕೆಡವಲಾಗಿದೆ. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿದೆ. ಅಂಗಡಿಗಳ ತೆರವಿನಿಂದ ಬೀದಿಬದಿ ವ್ಯಾಪಾರಿಗಳು ಅತಂತ್ರಸ್ಥಿತಿಯಲ್ಲಿದ್ದಾರೆ. ಅಧಿಕಾರಿಗಳ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ ಮಾತನಾಡಿ, 35 ವರ್ಷದ ವ್ಯಕ್ತಿ ಉದ್ಯಾನದಲ್ಲಿ ವಾಕಿಂಗ್ ಮಾಡುವ ವೇಳೆ ಮರದ ಕೊಂಬೆ ತಲೆ ಮೇಲೆ ಬಿದ್ದು ತಲೆಗೆ ತೀವ್ರತರ ಗಾಯವಾಗಿತ್ತು ಆಪರೇಷನ್ ಮಾಡಲಾಗಿದೆ, ವ್ಯಕ್ತಿ ಆರೋಗ್ಯವಾಗಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಪೊಲೀಸ್ ಇನ್ ಫಾರ್ಮರ್ ಎಂದು ಪೊಲೀಸರಿಗೆ ವಂಚಿಸಿದ ಆರೋಪಿ ವಸೀಂ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇಲ್ಲೊಂದು ದಂಧೆ ನಡೀತಿದೆ. ನಾನು ಅಲ್ಲಿಗೆ ಹೋಗಿ ಲೊಕೇಷನ್ ಕಳಿಸ್ತೀನಿ ಎಂದವನು, ತಾನೇ ಅಲ್ಲಿಗೆ ಹೋಗಿ ಸ್ಪಾಟ್ ಲೊಕೇಷನ್ ಕಳಿಸ್ತೀನಿ ಅಂತಿದ್ದ. ನಂತರ ಆಟೋ ಪ್ರಾಬ್ಲಂ, ಪೆಟ್ರೋಲ್, ಬೈಕ್ ಇಲ್ಲ, ಮನೆಯಲ್ಲಿ ಸಮಸ್ಯೆ ಎಂದು ನಂಬಿಸಿ ಎರಡೂರು ಸಾವಿರ ಪೋನ್ ಪೇ ಮಾಡಿ ಅಂತಿದ್ದ. ಸರಿ ಎಂದು ಹಣ ಪೋನ್ ಪೇ ಮಾಡಿದ್ರೆ, ಅದರ ನಂತರ ಕೆಲವೇ ಕ್ಷಣಗಳಲ್ಲಿ ಪರಾರಿ ಆಗುತ್ತಿದ್ದ. ಕಳೆದ ನಾಲ್ಕು ವರ್ಷದಿಂದ ಪೊಲೀಸರಿಗೆ ವಂಚಿಸಿ ಪಬ್ ಬಾರ್ ಗಳಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ವಸೀಂ ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಸೀಂ, ಪೊಲೀಸರ ಜೊತೆಯಲ್ಲಿ ಇದ್ದುಕೊಂಡೇ ಅವರಿಗೆ ಸಹಾಯ ಮಾಡುವಂತೆ ಅವರ ಬಳಿಯಿಂದಲೇ ಹಣ ಪಡೆದು ವಂಚಿಸಿದ್ದಾನೆ.
ಬೆಳಗಾವಿ: ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಅಧಿಕೃತ ದಿನಾಂಕವನ್ನ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಅನೌಪಚಾರಿಕವಾಗಿ ಡಿಸೆಂಬರ್ 4 ರಿಂದ ಅಧಿವೇಶನ ನಡೆಯಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಹೇಳಿದರು. ಸುವರ್ಣವಿಧಾನಸೌಧಲ್ಲಿ ಮಾದ್ಯಮಗಳೊಮನದಿಗೆ ಮಾತನಾಡಿದ ಅವರು ಸರ್ಕಾರದಿಂದ ಈವರೆಗೂ ಅಧಿಕೃತವಾಗಿ ದಿನಾಂಕ ನಮಗೆ ತಿಳಿಸಿಲ್ಲ. ಅಧಿವೇಶನ ಅರ್ಥಪೂರ್ಣ ಆಗಬೇಕು ಅಂದರೇ ಪ್ರತಿಭಟನೆ ಕಡಿಮೆ ಆಗಬೇಕು. ನಮ್ಮ ಶಾಸಕರಲ್ಲಿ ಬೆಳಗಾವಿ ಅಧಿವೇಶನ ಅಂದರೇ ಪ್ರತಿಭಟನೆ ಅಂತಾ ಆಗಿದೆ. ಹೀಗಾಗಿ ಪ್ರತಿಭಟನೆಗಳು ಕಡಿಮೆ ಆಗಬೇಕು. ಹೀಗಾಗಿ ರೈತರ ಸಮಸ್ಯೆ ನಿವಾರಿಸುವಂತೆ ಸಂಬಂಧಿಸಿದ ಸಚಿವರಿಗೆ ಹೇಳುತ್ತೇವೆ ಎಂದರು.
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆ.ಎನ್. ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು. ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.
ಮಧುಗಿರಿ. ರಾಜ್ಯದಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸದಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು. ಪಟ್ಟಣದಲ್ಲಿರುವ ಬಿ. ಜೆ. ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಕಾಲಕ್ಕೆ ಮಳೆ ಬಾರದೆ ಶೇ.90 ರಷ್ಟು ಬೆಳೆ ನಾಶವಾಗಿದೆ. ಜಾನುವಾರುಗಳಿಗೆ ಮೇವು ಸಿಗದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಸರಿಯಾದ ಪರಿಹಾರ ಕೊಡುವ ಕೆಲಸ ಮಾಡುತ್ತಿಲ್ಲ. ಕೊಬ್ಬರಿಗೆ ಬೆಲೆ ಇಲ್ಲದೆ ತೆಂಗು ಬೆಳೆಗಾರ ಕಂಗಾಲಾಗಿದ್ದಾನೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಬರ ವೀಕ್ಷಣೆ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದು, ಕೇಂದ್ರ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಲಿದೆ ಆದರೆ ರಾಜ್ಯ ಸರ್ಕಾರ ತಕ್ಷಣ ರೈತರ ಸಮಸ್ಯೆಗಳಿಗೆ ಧಾವಿಸಿ ಬೆಳೆ ಹಾನಿ ಪರಿಹಾರ ನೀಡಬೇಕು. ಈ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ ಎಂದರು. ಕೊಳವೆ ಬಾವಿಗಳಲ್ಲಿ ಅಲ್ಪ ಸ್ವಲ್ಪ ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ನೀರು ಹಾಯಿಸಲು ಆಗುತ್ತಿಲ್ಲ.3-4 ಗಂಟೆಗಳ…