Subscribe to Updates
Get the latest creative news from FooBar about art, design and business.
- ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
- ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
- ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
- ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
- ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
- ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
Author: admin
ತುಮಕೂರು: ಬಾಲಕಿ ಮೇಲೆ ದಾಳಿ ಮಾಡಿ ಹೊತ್ತೊಯಲು ಯತ್ನಿಸಿದ ಚಿರತೆಯಿಂದ ತಂದೆಯೇ ಮಗಳನ್ನು ಕಾಪಾಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ. 7 ವರ್ಷ ವಯಸ್ಸಿನ ಲೇಖನ ಚಿರತೆ ದಾಳಿಗೆ ಒಳಗಾದವಳು. ಚಿರತೆ ಬಾಲಕಿಯನ್ನು ಹೊತ್ತೊಯಲು ಯತ್ನಿಸುತ್ತಿದ್ದ ವೇಳೆ ತಂದೆ ಚಿರತೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ. ರಾಕೇಶ್, ಹರ್ಷಿತ ದಂಪತಿಯ ಮಗು ಲೇಖನ ಮನೆ ಮುಂದೆ ಆಟವಾಡುತ್ತಿದ್ದಾಗ ದಾಳಿ ನಡೆಸಿದೆ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಚಿರತೆಯು ಏಕಾಏಕಿ ಮಗುವಿನ ಮೇಲೆ ದಾಳಿ ಮಾಡಿದೆ ಈ ವೇಳೆ ಸ್ಥಳದಲ್ಲಿಯೇ ಇದ್ದ ತಂದೆ ರಾಕೇಶ್ ಜೋರಾಗಿ ಕೂಗಿ ದೊಣ್ಣೆಯಿಂದ ಚಿರತೆಯನ್ನು ಬೆದರಿಸಿದ್ದಾರೆ. ಆಗ ಚಿರತೆಯು ಮಗುವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದೆ. ಮಗುವಿನ ಕಾಲಿಗೆ ಚಿರತೆ ಪರಚಿತ ಗಾಯಗಳಾಗಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಸಂಬಂಧ ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಶೀಘ್ರದಲ್ಲಿ ಕೆಇಎ (KEA) ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ನನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಡಿ ಪಾಟೀಲ್ ಬಂಧನ ಮಾಡಲು ಸೂಚನೆ ನೀಡಲಾಗಿದೆ. ಆತ ಮಹಾರಾಷ್ಟ್ರದಲ್ಲಿ ತಪ್ಪಿಸಿಕೊಂಡು ಹೋಗಿರುವ ಬಗ್ಗೆ ಮಾಹಿತಿ ಇದೆ. ಪೊಲೀಸರು ಅವರನ್ನು ಅರೆಸ್ಟ್ ಮಾಡಿಕೊಂಡು ಬರುತ್ತಾರೆ. ಒಂದು ದಿನ ತಪ್ಪಿಸಿಕೊಂಡು ಹೋಗಬಹುದು. ಯಾರಾದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದರೆ ಅವರ ಮೇಲೆಯೂ ಕ್ರಮ ಜರುಗಿಸಲಾಗುವುದು ಎಂದರು.
ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ತಲೆಯ ಹಾವುಗಳನ್ನು, ವನ್ಯಮೃಗಗಳ ಕೊಂಬುಗಳನ್ನು ಹಾಗೂ ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ವೈಯಾಲಿಕಾವಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎರಡು ತಲೆಯ ಎರಡು ಜೀವಂತ ಹಾವುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾಗೂ ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಮತ್ತು ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಬಂದ ಮಾಹಿತಿ ಮೇರೆಗೆ ಪ್ರತ್ಯೇಕವಾಗಿ ದಾಳಿ ಮಾಡಿ, ವ್ಯಕ್ತಿಗಳನ್ನು ವಶಕ್ಕೆ ಪಡೆದು, ಅವರಿಂದ ಸುಮಾರು 10 ಲಕ್ಷ ರೂ ಬೆಲೆ ಬಾಳುವ ಎರಡು ತಲೆಯ ಎರಡು ಹಾವುಗಳನ್ನು, ಸುಮಾರು 12 ಲಕ್ಷ ರೂ ಬೆಲೆಬಾಳುವ 12 ಜಿಂಕೆ ಕೊಂಬುಗಳನ್ನು ಹಾಗೂ ಸುಮಾರು 5 ಲಕ್ಷ ರೂ ಬೆಲೆಬಾಳುವ ಆನೆಯ ದಂತವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು: ಬೆಂಗಳೂರು ಕೇಂದ್ರ ವಿಭಾಗ, ಹೈಗ್ರೌಂಡ್ ಪೊಲೀಸ್ ಠಾಣೆಯ ಪೊಲೀಸರು, ವಂಚನೆ ಎಸಗಿದ ಐವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಬಂಧಿತರಿಂದ 65 ಲಕ್ಷ ನಗದು ಹಣ, 8.50 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಸಾಮಗ್ರಿಗಳು ಸೇರಿದಂತೆ ನಾಲ್ಕು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಅ.3ರಂದು ರಾಧಾಕೃಷ್ಣ ಎಂಬುವರನ್ನು ಜಮೀನು ಖರೀದಿ ವಿಷಯದಲ್ಲಿ 1,00.90.000 ರೂ.ಗಳನ್ನು ವಂಚಿಸಿ, ಸಂಜಯ್, ಶ್ರೀನಿವಾಸ್, ಲೋಕಾಚಾರಿ, ಪ್ರಭಾಕರ ರಸ್ತೆ ಮತ್ತು ಇತರರು ಪರಾರಿಯಾಗಿರುತ್ತಾರೆ. ಇವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸ ಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಕರಣ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಸಂಬಂಧ ಕಾರ್ಯ ಪ್ರವೃತ್ತರಾದ ಪೊಲೀಸರು ಅ.17ರಂದು ಕೃತ್ಯವೆಸಗಿದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಕೊಂಡಿರುತ್ತಾರೆ. ಪ್ರಕರಣದಲ್ಲಿ ಅಲ್ಲಿ ಖರೀದಿ ವಿಚಾರವಾಗಿ ನಕಲು ದಾಖಲಾತಿ ಪಡೆದಿರುವುದು ತಿಳಿದು ಬಂದಿರುತ್ತದೆ. ಪಿರ್ಯಾದುದಾರರ ಸ್ನೇಹಿತರಿಂದಲೂ ಮೋಸದಿಂದ ಹಣ ಪಡೆದಿರುವುದು ಕಂಡು ಬಂದಿರುತ್ತದೆ. ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶೇಷಾಪುರಂ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಹೈಗ್ರೌಂಡ್…
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವ್ಯಕ್ತಿಯನ್ನು ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ ತ್ಯಾಗರಾಜ್ (68) ಬಂಧಿತ ಆರೋಪಿ, ಆರೋಪಿ ತ್ಯಾಗರಾಜ್ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ, ನಾನು ಲೋಕಾಯುಕ್ತ ಇನ್ಸ್ ಪೆಕ್ಟರ್ ಎಂದು ಹಣಕ್ಕೆ ಬೇಡಿಕೆ ಇಟ್ಟ. ಇದರಿಂದ ಅನುಮಾನಗೊಂಡು ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ಹೋಲುವಂತೆ ಡೀಪ್ ಫೇಕ್ ವೀಡಿಯೊ ಒಂದು ಸಾಕಷ್ಟು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಟ ಅಮಿತಾಬ್ ಬಚ್ಚನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಪ್ಪು ಬಟ್ಟೆಯನ್ನು ಧರಿಸಿರುವ ಮಹಿಳೆಯೊಬ್ಬರು ಲಿಫ್ಟ್‌ಗೆ ಪ್ರವೇಶಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಅಸಲಿಯೇತ್ತೇನೆಂದರೆ ಇದೊಂದು ಫೇಕ್ ವೀಡಿಯೊ ಆಗಿದ್ದು ಹೊರ ದೇಶದಲ್ಲಿರುವ ಭಾರತೀಯ ಮೂಲದ ಇನ್ ಫ್ಲ್ಯುಯೇನ್ಸರ್ ಜಾರಾ ಪಟೇಲ್ ಎನ್ನುವ ಯುವತಿಯದ್ದಾಗಿದೆ. ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಸ್ತುತ ಆಳವಾದ ನಕಲಿಗಳಂತಹ ಸುಳ್ಳು ಮಾಹಿತಿಯು ಅತ್ಯಂತ ಅಪಾಯಕಾರಿ ಮತ್ತು ಹಾನಿಕಾರಕವಾಗುತ್ತಿದೆ ಎಂದು ಸೋಮವಾರ ಟ್ವಿಟ್ ಮಾಡಿದ್ದಾರೆ. ಇಂತಹ ವೀಡಿಯೋ ಹಾಕುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, ಐಟಿ ಕಾಯ್ದೆಯ ನಿಬಂಧನೆಗಳ ಪ್ರಕಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ಕೊರಟಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರಟಗೆರೆ ತಾಲ್ಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಕೊರಟಗೆರೆ ತಾಲ್ಲೂಕಿನ ಎರಡು ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ, ಬರ ಅಧ್ಯಯನ ನಡೆಸಿದರು. ರೈತರು ಬಿತ್ತನೆ ಮಾಡಿರುವ ಎಲ್ಲಾ ಬೆಳೆಗಳು ಮಳೆ ಇಲ್ಲದ ಕಾರಣ ಸಂಪೂರ್ಣವಾಗಿ ನಾಶವಾಗಿರುವ ಹಿನ್ನೆಲೆ ಭೇಟಿ ನೀಡಿದರು. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಬೋಡ ಬಂಡೆನಹಳ್ಳಿ ಗ್ರಾಮದ ಸರ್ವೆ ನಂಬರ್ 72 ರಲ್ಲಿ ರಾಗಿ, ಜೋಳ, ಶೇಂಗಾ ಬೆಳೆಗಳನ್ನು ವೀಕ್ಷಿಸಿದರು ಹಾಗೂ ಕಾಮೇನಹಳ್ಳಿ ಗ್ರಾಮದ ರೈತರ ಹೊಲಕ್ಕೆ ಭೇಟಿ ನೀಡಿ ಹೊಲದಲ್ಲಿ ಒಣಗಿ ಹೋಗಿರುವ ಬೆಳೆಗಳನ್ನ ಪರಿಶೀಲಿಸಿ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕಿದೆ ರೈತ ಬಿತ್ತಿರುವ ಎಲ್ಲಾ ಬೆಳೆಗಳು ನಾಶವಾಗಿವೆ ಆದಷ್ಟು ಬೇಗ ರೈತರಿಗೆ ಸಿಗಬೇಕಾದ ಪರಿಹಾರದ ಹಣ ಅವರ ಕೈ ಸೇರಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದರು. ವರದಿ: ಮಂಜುಸ್ವಾಮಿ ಎಂ.ಎನ್.…
ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ , ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್, ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್, ನಂದಿನಿ ಲೇಔಟ್ ನಲ್ಲಿ 70.60 ಮಿ.ಮೀ., ನಾಗೇನಹಳ್ಳಿ 71 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್ ಮಳೆಯಾಗಿದೆ. ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 ಮಿಲಿ ಮೀಟರ್, ಕೊಟ್ಟಿಗೆಪಾಳ್ಯ 64 ಮಿ.ಮೀ., ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಪರ ಸಚಿವ ಸಂತೋಷ್ ಲಾಡ್ ಬ್ಯಾಟ್ ಬೀಸಿದ್ದಾರೆ. ಸಂತೋಷ್ ಲಾಡ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಶಾಸಕ ಕೋನರೆಡ್ಡಿ ಜೊತೆ ಚರ್ಚೆ ವೇಳೆ ನಾನು ಜಿ. ಪರಮೇಶ್ವರ ಕಡೆಯವರು ಎಂದಿದ್ದಾರೆ. ನೀವು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಬೇಕು. ನಾವು ಹೋಮ್ ಮಿನಿಸ್ಟರ್ ಕಡೆಯವರು ಎಂದು ಎರಡು ಬಾರಿ ಉಚ್ಛರಿಸಿದರು. ಇದೇ ವೇಳೆ ನಾನು ಸಿಎಂ ಶಾಸಕ ಎಂದು ಕೋನರೆಡ್ಡಿ ಕಿಚಾಯಿಸಿದರು. ನೀವು ಯಾವ ಸಿಎಂ ಎಂದು ಸಚಿವ ಸಂತೋಷ್ ಲಾಡ್ ಕಾಲೆಳೆದರು. ಹೋಮ್ ಮಿನಿಸ್ಟರ್ ಇದ್ದಲ್ಲೇ ಸಿಎಂ ಎಂದು ಸಂತೋಷ್ ಲಾಡ್ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಬಿಬಿಎಂಪಿ: ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿದ್ದು, ಅದರಲ್ಲಿ ಪೊದೆ ಬೆಳೆಯಲು ಬಿಟ್ಟಲ್ಲಿ ಸಂಬಂಧಪಟ್ಟ ಮಾಲೀಕರಿಗೆ ದಂಡ ವಿಧಿಸಲು ನಿರ್ಧರಿಸಿದೆ. ಖಾಲಿ ನಿವೇಶನ ಹೊಂದಿರುವ ಮಾಲೀಕರು ಅದರಲ್ಲಿ ತಕ್ಷಣವೇ ಮನೆ ನಿರ್ಮಾಣ ಮಾಡಬೇಕು. ಇಲ್ಲವೇ ಖಾಲಿ ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಬೇಕು. ಒಂದು ವೇಳೆ ಖಾಲಿ ನಿವೇಶನದಲ್ಲಿ ಕಸ ಹಾಕುವುದು, ಕಟ್ಟಡ ತ್ಯಾಜ್ಯ ಸುರಿಯುವುದು, ಪೊದೆಗಳನ್ನು ಬೆಳೆಸಿದಲ್ಲಿ ಸಂಬಂಧಪಟ್ಟ ಮಾಲೀಕರಿಗೆ ಬಿಬಿಎಂಪಿ ವತಿಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.