Subscribe to Updates
Get the latest creative news from FooBar about art, design and business.
- “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
- ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
Author: admin
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಕಾರು ಚಾಲಕ ವರುಣ್ ಬಿ. ಆರ್. (28) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ‘ಸಂಜಯ್ ನಗರದ ನಿವಾಸಿ ವರುಣ್, ಕಂಪನಿಯೊಂದರ ಉದ್ಯೋಗಿ. ನಗರದಿಂದ ವಿಮಾನ ನಿಲ್ದಾಣದತ್ತ ಕಾರಿನಲ್ಲಿ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಇನ್ನೊಂದು ಕಾರಿನ ಚಾಲಕ ಬಿ. ಸಂಜಯ್ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ತಿಳಿಸಿದರು. ‘ವರುಣ್ ಅವರು ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದರು. ಹುಣಸಮಾರನಹಳ್ಳಿ ಮೇಲ್ಲೇತುವೆ ಬಳಿಯ ಡೌನ್ ಬ್ಯಾಂಪ್ ಸಮೀಪ ರಸ್ತೆ ವಿಭಜಕಕ್ಕೆ ಕಾರು ಗುದ್ದಿತ್ತು. ಅದಾದ ಬಳಿಕ ಮುಂದಕ್ಕೆ ನುಗ್ಗಿ ಪಕ್ಕದ ರಸ್ತೆಗೆ ಹೋಗಿದ್ದ ಕಾರು, ಎದುರಿಗೆ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು’ ಎಂದು ಹೇಳಿದರು. ‘ಅಪಘಾತದಿಂದಾಗಿ ಜಖಂಗೊಂಡಿದ್ದ ಕಾರಿನೊಳಗೆ ವರುಣ್ ಸಿಲುಕಿಕೊಂಡಿದ್ದರು. ಅಲ್ಲಿಯೇ ಅವರು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.’ ‘ಇನ್ನೊಂದು ಕಾರಿನಲ್ಲಿದ್ದ ಸಂಜಯ್, ದೀಪಂ ಕ್ಯಾಬ್ ಚಾಲಕ. ಅವರು ವಿಮಾನ…
ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್ ಐಟಿ) ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ‘ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಬೇಕು’ ಎಂದು ಘೋಷಣಾ ಫಲಕ ಪ್ರದರ್ಶಿಸಿದರು. ಸೌಜನ್ಯ ತಾಯಿ ಕುಸುಮಾವತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸೌಜನ್ಯ ಕೊಲೆ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿಯಾಗಿ ಮನವಿ ಸಲ್ಲಿಸಿದರು. ಕೆ.ಎಸ್. ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೆ ಪದ್ಮಸಾಲಿ, ಅಖಿಲಾ, ಬಿ. ಎಂ. ಭಟ್, ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…
ಬೆಂಗಳೂರು– ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ 158. 81 ಕೋಟಿ ರೂ. ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್. ಹೆಚ್. ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದರು. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು…
ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 2 ಆಗಸ್ಟ್ ಆಗಿದೆ. ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಥವಾ 10ನೇ ತರಗತಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ, ಸಶಸ್ತ್ರ ಪಡೆಗಳಲ್ಲಿ ಭಾರತೀಯ ಸೇನೆ, ನೌಕಾ ಪಡೆ, ವಾಯು ಸೇನೆಯಿಂದ ಸ್ಪೆಷನ್ ಸರ್ಟಿಫಿಕೆಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣಪತ್ರ ಹೊಂದಿರಬೇಕು. ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50…
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಬಲವಾಗಿದೆ. ಸಿ.ಟಿ.ರವಿ ಅವರನ್ನು 2020ರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಇದೀಗ ಹೈಕಮಾಂಡ್ ರಿಲೀಸ್ ಮಾಡಿರುವ ಪದಾಧಿಕಾರಗಳ ಪಟ್ಟಿಯಲ್ಲಿ ಸಿ.ಟಿ.ರವಿ ಅವರನ್ನು ಕೈಬಿಡಲಾಗಿದೆ. ಬಿಜೆಪಿಯಲ್ಲಿ ಎರಡು ಹುದ್ದೆ ಅಲಂಕರಿಸುವ ಹಾಗಿಲ್ಲ ಎಂಬ ಕಾನೂನಿದೆ. ಹಾಗಾಗಿಯೇ 2020ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸಿ.ಟಿ.ರವಿ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವೇಳೆ ಇವರಿಗೆ ಗೋವಾ, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳ ಉಸ್ತುವಾರಿಯನ್ನೂ ನೀಡಲಾಗಿತ್ತು. ಜೊತೆಗೆ ಪುದುಚೇರಿ ಮತ್ತು ಲಕ್ಷದ್ವೀಪಗಳ ಸಂಘಟನಾ ಜವಾಬ್ದಾರಿ ಕೂಡ ವಹಿಸಲಾಗಿತ್ತು. ಇನ್ನು ಗೋವಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿತ್ತು. ಆಗ ಕೈ ಶಾಸಕರನ್ನು ಸೆಳೆಯುವಲ್ಲಿ ಸಿ ಟಿ ರವಿ ಕಾರ್ಯತಂತ್ರ ರೂಪಿಸಿದ್ದರು. ಹಾಗೆಯೇ ತಮಿಳುನಾಡಿನ ಉಸ್ತವಾರಿ ವಹಿಸಿ ಪಕ್ಷ ಸಂಘಟನೆಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಎಐಎಡಿಎಂಕೆ…
ಒಳ ಮೀಸಲಾತಿ, ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವ ಮೂಲಕ ತಮ್ಮ ಬದ್ಧತೆ ತೋರಿಸಿ. ಮತ್ತೊಬ್ಬರ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಸವಾಲೆಸೆದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಬದ್ಧತೆ ಇದೆ. ನಾವು ಒಳ ಮೀಸಲಾತಿ ಶಿಫಾರಸು ಮಾಡಿ ಕಳುಹಿಸಿದ್ದೇವೆ. ಶೆಡ್ಯೂಲ್ 9ಕ್ಕೆ ಸೇರುವ ಮೊದಲೇ ತಮಿಳುನಾಡಿನಲ್ಲಿ ಒಳಮೀಸಲಾತಿ ಜಾರಿಗೊಳಿಸಿದ್ದರು. ಆಂಧ್ರ ಪ್ರದೇಶದಲ್ಲಿ ಒಳ ಮೀಸಲಾತಿ ಜಾರಿಗೆ ಬಂದ 24 ಗಂಟೆಯಲ್ಲೇ ಆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಕೊಟ್ಟಿದ್ದರು. ಒಳ ಮೀಸಲಾತಿ ಪರಿಣಾಮವಾಗಿ ವಂಚಿತ ಶೋಷಿತ ಅನೇಕ ವರ್ಗಕ್ಕೆ ಉದ್ಯೋಗ, ಶಿಕ್ಷಣಾವಕಾಶ ಲಭಿಸಿತ್ತು ಎಂದರು. ಇದಕ್ಕೆ ದಾಖಲೆಗಳಿವೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬದ್ಧತೆ ಇದ್ದರೆ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಶೋಷಿತರಿಗೆ ನ್ಯಾಯ ನೀಡಿದ ಮಾದರಿಯಲ್ಲಿ ಕೊಡುವ ಎದೆಗಾರಿಕೆ ತೋರಿಸಬೇಕು. ಅದಕ್ಕಾಗಿ ವಿಶೇಷ ಅಧಿವೇಶನ ಕರೆದು ಜಾರಿ ಮಾಡಿ ಎಂದು ಒತ್ತಾಯಿಸಿದರು.…
ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಬಿಜೆಪಿ ಅವರು ಯಾರನ್ನು ನಂಬುತ್ತಾರೆ ಅಂತ ಡಿಸೈಡ್ ಮಾಡಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಕ್ರಿಮಿನಲ್ ಇಂಟೆಂಟ್ ಇರಲಿಲ್ಲ, ಯಾವುದೇ ವಿಡಿಯೋ ಕ್ಯಾಮರಾ ಇರಲಿಲ್ಲ, ಎಲ್ಲೂ ವಿಡಿಯೋ ಸಿಕ್ಕಿಲ್ಲ ಎಂದು ಖುಷ್ಟು ಕೂಡ ಪುನರುಚ್ಚಾರ ಮಾಡಿದ್ದಾರೆ. ಆದರೆ ಇದೀಗ ವಿಡಿಯೋ ಓಡಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಹಾಗಿದ್ರೆ ಅವರು ಯಾವ ಸಾಮಾಜಿಕ ಜಾಲತಾಣದಲ್ಲಿದೆ ಎಂದು ವಿಡಿಯೋ ತೋರಿಸಲಿ ಎಂದರು. ಬಿಜೆಪಿಗರು ವಿಷಯಾಧಾರಿತ ಚರ್ಚೆ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು ವರ್ಗಾವಣೆ ದಂಧೆ ಅಂದ್ರು, ಪೆನ್ ಡ್ರೈವ್ ಇದೆ ಅಂದ್ರು ಎಂದರು. ಬಿಜೆಪಿಯಲ್ಲಿ ಯಾವಾಗ ಗೊಂದಲಗಳು ಆಗುತ್ತಾವೆಯೋ ಆ ಸಂದರ್ಭದಲ್ಲಿ ಇಂತಹ ವಿಚಾರ ಎತ್ತುತ್ತಾರೆ ಎಂದರು. ಆಜಾನ್, ಹಲಾಲ್, ಜಟ್ಕಾ ಕಟ್ ಅಂದ್ರು, ಅದೆಲ್ಲಾ ಏನಾದ್ದು? ಎಂದು ಪ್ರಶ್ನಿಸಿದರು. ಬಿಜೆಪಿ ತನ್ನ ಆಲೋಚನೆಯಲ್ಲೇ ಒಮ್ಮೆ ಆತ್ಮಾವಲೋಕನ ಮಾಡಬೇಕಿದೆ ಎಂದರು. ಬಿಜೆಪಿ ಅವರು ಅಸ್ತಿತ್ವ ಉಳಿಸಿಕೊಳ್ಳಲು ಈ…
ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ. ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು ಈಗಾಗಲೇ ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಪ್ರಕರಣ ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ವಿವರವಾದ ಆದೇಶ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಅರ್ಜಿದಾರರು 2020ರ ಸೆ. 9ರಂದು ತಮ್ಮ ವಿರುದ್ಧ ವಿಚಾರಣೆಗೆ ಸರ್ಕಾರ ಪೂರ್ವಾನುಮತಿ ನೀಡಿದ್ದನ್ನು ಮತ್ತು 2020ರ ಜ. 7ರಂದು ಸಿಬಿಐ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಎರಡು ಖಾಸಗಿ ಕಂಪನಿಗಳ ನೌಕರರಿಬ್ಬರ ಹೊಸ ಸಾರಿಗೆಯೇತರ ವಾಹನಗಳನ್ನು ಭಾರತ್ (ಬಿಎಚ್) ಸರಣಿಯಡಿ ನೋಂದಣಿ ಮಾಡುವಂತೆ ಸಾರಿಗೆ ಆಯುಕ್ತರಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ದೇಶಿದ್ದ ಕ್ರಮವನ್ನು ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಖಾಸಗಿ ಕಂಪನಿ ನೌಕರರಿಗೂ ಬಿಎಚ್ ಸರಣಿ ನೋಂದಣಿ ಸಂಖ್ಯೆ ನೀಡುವಂತೆ ನಿರ್ದೇಶನ ನೀಡಿದ್ದ ಏಕ ಸದಸ್ಯ ಪೀಠದ ಆದೇಶವನ್ನು ರಾಜ್ಯ ಸಾರಿಗೆ ಇಲಾಖೆ ದ್ವಿಸದ್ಯ ಪೀಠದಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜಿ. ಎಸ್. ಕಮಾಲ್ ಅವರಿದ್ದ ಪೀಠ, ಏಕ ಸದಸ್ಯ ಪೀಠದ ಆದೇಶಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿದ್ದ ವಿಚಾರ ಸಂಬಂಧ ಜಗಳ ತೆಗೆದು ಬಿ. ಕಾಂ ವಿದ್ಯಾರ್ಥಿ ಮಾರ್ವೇಶ್ (19) ಅವರನ್ನು ಕೊಲೆ ಮಾಡಿದ್ದ ಆರೋಪದಡಿ ರೌಡಿ ಸೇರಿ ಐವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ರೌಡಿ ಕಾರ್ತಿಕ್, ಅಭಿಷೇಕ್, ಯೊಹಾನ್ ಫ್ರಾಂಕ್, ಅಂಟೊನಿ ಡ್ಯಾನಿಯಲ್ ಹಾಗೂ ಶ್ರೀಕಾಂತ್ ಬಂಧಿತರು. ಇವರೆಲ್ಲರೂ ಸೇರಿ, ಮಾರ್ವೇಶ್ ಅವರನ್ನು ಜುಲೈ 26ರಂದು ಬೆಳಿಗ್ಗೆ ಕೊಲೆ ಮಾಡಿ ಪರಾರಿಯಾಗಿದ್ದರು. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಐವರು ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ರಾಮಮೂರ್ತಿನಗರ ಠಾಣೆಯ ರೌಡಿ ಪಟ್ಟಿಯಲ್ಲಿ ಕಾರ್ತಿಕ್ ಹೆಸರಿದೆ. ಅಭಿಷೇಕ್ ಹಾಗೂ ನೆಲ್ಸನ್ ವಿರುದ್ಧವೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಇವರಿಬ್ಬರ ಹೆಸರನ್ನು ರೌಡಿ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ಸ್ನೇಹಿತನಿಂದ ಗಲಾಟೆ: ‘ಮಾರ್ವೇಶ್ ಅವರ ಸ್ನೇಹಿತನೊಬ್ಬ, ಯುವತಿಯೊಬ್ಬರ ಹಿಂದೆ ಬಿದ್ದಿದ್ದ. ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ. ಬೇಸತ್ತಿದ್ದ ಯುವತಿ, ಸ್ನೇಹಿತನಾಗಿದ್ದ ಆರೋಪಿ ಶ್ರೀಕಾಂತ್‌ಗೆ ವಿಷಯ ತಿಳಿಸಿದ್ದರು. ಸ್ನೇಹಿತನಿಗೆ ಎಚ್ಚರಿಕೆ…