Author: admin

ಸರಗೂರು: ಜುಲೈ 18ರಂದು ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ಕೂಡಗಿ ಗೋವಿಂದರಾಜು ತಿಳಿಸಿದ್ದಾರೆ. ತಾಲ್ಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಸರ್ಕಾರದಿಂದ ದರಖಾಸ್ತು ಮೂಲಕ ಮಜೂರಾತಿ ಮಾಡಿರುವ ವಿತರಣೆ ಮಾಡದೆ ಇರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ದರಖಾಸ್ತು ಭೂಮಿ ಸಕ್ರಮೀಕರಣವು ಆಯಾ ಕ್ಷೇತ್ರದ ಶಾಸಕರುಗಳ ಅಧ್ಯಕ್ಷತೆ ಹೊಂದಿರುವ ಸಮಿತಿಗಳು ನಿರ್ಲಕ್ಷತೆಯಿಂದ ಸರಿಯಾಗಿ ಕೆಲಸ ನಿರ್ವಹಿಸದೆ ಫಾರಂ 53 54 57 ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಮತ್ತು ತಳಸಮುದಾಯಗಳ ಅರ್ಜಿಗಳು ರಾಶಿಗಟ್ಟಲೆ ಕೊಳೆಯುತ್ತಾ ಬಿದ್ದಿವೆ. ಬಾಬಾ ಸಾಹೇಬರ ಸೈದ್ಯಾಂತಿಕಾ ನೆಲೆಯಲ್ಲಿ ದಲಿತ ಚಳುವಳಿಗಳು ಹಿಂದಿನಿಂದಲೂ ಭೂಮಿ ಶಿಕ್ಷಣ ವಸತಿ ಹಾಗೂ ಉದ್ಯೋಗ ಮತ್ತು ಮೂಲಭೂತ ಅವಶ್ಯಕತೆಗಾಗಿ ಆಳುವ ಪ್ರಭುತ್ವದೊಂದಿಗೆ ನಿರಂತರ ಸಂಘರ್ಷ ನಡೆಸುತ್ತಲೇ ಬಂದಿದೆ. ಆದರೆ ಆಳುವ ಸರ್ಕಾರ ತನ್ನ ವಿಫಲತೆಯನ್ನು…

Read More

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆದಿದೆ. ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಅವರ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ನಾಯಿಯ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಅಮಾನವೀಯತೆಯಿಂದ ವರ್ತಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಜುಲೈ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯ ಪಕ್ಕದ ಜಾಗದಲ್ಲಿ ನಾಯಿ ಮಲಗಿತ್ತು. ಈ ವೇಳೆ ಅಲ್ಲಿಗೆ ಬಂದ ಕಾರು, ಸ್ವಲ್ಪ ಹೊತ್ತು ಮುಂದೆಯೇ ನಿಂತಿತ್ತು. ನಂತರ ಚಾಲಕ ಏಕಾಏಕಿ ನಾಯಿಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾನೆ. ಇದರಿಂದ ನಾಯಿ ಗಂಭೀರವಾಗಿ ಗಾಯಗೊಂಡಿದೆ. ಉದ್ದೇಶಪೂರ್ವಕವಾಗಿಯೇ ನಾಯಿಯ ಮೇಲೆ ಕಾರು ಹತ್ತಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿರುವ ಸಾರ್ವಜನಿಕರು ಕಾರಿನ ಚಾಲಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೋಲಾರ: KSRTC ನೌಕರರೊಬ್ಬರು  ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತಪಟ್ಟವರಾಗಿದ್ದಾರೆ. ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಕೂಡ ಕರ್ತವ್ಯ ನಿಭಾಯಿಸಿ ಮನೆಗೆ ತೆರಳಿದ್ದರು. ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಬಾಬಾಜಾನ್ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಶಿವಮೊಗ್ಗ:  ಶಿಷ್ಟಾಚಾರ ಉಲ್ಲಂಘನೆ ಮತ್ತು ಕಾರ್ಯಕ್ರಮವನ್ನು ರಾಜ್ಯ ಸಚಿವರು ಮತ್ತು ಶಾಸಕರು ಬಹಿಷ್ಕರಿಸಿದ್ದಾರೆ ಎಂಬ ಆರೋಪದ ನಡುವೆಯೇ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ಮತ್ತು ರಾಜ್ಯದ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯನ್ನು ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬರಗೋಡ್ಲು ಮತ್ತು ಕಳಸವಳ್ಳಿ ಗ್ರಾಮಗಳ ನಡುವೆ 473 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು, ಒಟ್ಟು 2.44 ಕಿ.ಮೀ. ಉದ್ದವಿದೆ.  ಹೊಸ ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿಯ ಹೆಸರನ್ನಿಟ್ಟ ಗಡ್ಕರಿ, ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಮತ್ತು ಯೋಜಿಸಲಾಗಿರುವ ಹೆದ್ದಾರಿ ಯೋಜನೆಗಳನ್ನು ಪಟ್ಟಿ ಮಾಡಿದರು. 5 ಲಕ್ಷ ಕೋಟಿ ರೂ. ಮೌಲ್ಯದ ಈ ಯೋಜನೆಗಳು ಕೇಂದ್ರ ಸರ್ಕಾರದ ಅಧಿಕಾರಾವಧಿಯ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು.  2,041 ಕೋಟಿ ರೂ. ಮೌಲ್ಯದ ಒಂಬತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ನಿತಿನ್ ಗಡ್ಕರಿಯವರು ಚಾಲನೆ…

Read More

ಚಂಡೀಗಢ: ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಅಪಘಾತದಲ್ಲಿ ನಿಧನರಾಗಿರುವ ಘಟನೆ ಸೋಮವಾರ ನಡೆದಿದ್ದು, ಜಲಂಧರ್ ​​ನಲ್ಲಿರುವ ತಮ್ಮ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ. 2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. 89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ…

Read More

ತುಮಕೂರು: ಹೃದಯಾಘಾತಕ್ಕೆ 23 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಶ್ (23) ಮೃತ ಯುವಕನಾಗಿದ್ದಾನೆ. ಚಿಕ್ಕನಾಯಕನಹಳ್ಳಿಯಲ್ಲಿ ಸ್ನೇಹಿತನ ಮನೆಗೆ ಹೋಗಿ ಊಟಕ್ಕೆ ಹೋಗಿ ವಾಪಸ್ ಬರುವಾಗ ದಾರಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಅವರನ್ನು ಗುಬ್ಬಿ ಆಸ್ಪತ್ರೆಗೆ ಸ್ನೇಹಿತರು ಕರೆತಂದಿದ್ದಾರೆ. ಆದರೆ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಹಠಾತ್ ಹೃದಯಾಘಾತದಿಂದ, ಆಸ್ಪತ್ರೆಗೆ ತರುವ ವೇಳೆ ಆತ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು, ನೊಂದ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಗೊಂಡನಹಳ್ಳಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಶ್ರೀಜಾ ರೆಡ್ಡಿ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.  ಮಗಳ ಆತ್ಮಹತ್ಯೆಯನ್ನು ಕಂಡು ನೊಂದ ತಾಯಿ ರಕ್ಷಿತಾ(48), ತನ್ನ ಪತಿಗೆ ಕರೆ ಮಾಡಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾಳೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ, ಮಗಳ ಮೃತದೇಹ ಫ್ಯಾನ್ ನಿಂದ ಇಳಿಸಿ, ಅದೇ ಫ್ಯಾನ್ ಗೆ ತಾನೂ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಆಂಧ್ರಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಶ್ರೀಜಾ ರೆಡ್ಡಿ ಖಾಸಗಿ ಕಂಪನಿಯಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ನಿರ್ವಹಿಸ್ತಿದ್ದಳು. ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿದೆ.  ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವೈಟ್ ಫೀಲ್ಡ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಹಾಸನ: ಸಂತೆಯಿಂದ ಮನೆಯ ಕಡೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೇಲೂರಿನ ಯಗಚಿ ಸೇತುವೆ ಬಳಿ ನಡೆದಿದೆ. ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ಆನಂದ್ (52) ಮೃತ ದುದೈವಿ ಎಂದು ಗುರುತಿಸಲಾಗಿದೆ. ಅವರು ಟ್ರ್ಯಾಕ್ಟರ್‌ನಲ್ಲಿ ಉಳುಮೆ ಮಾಡಿ ಬೇಲೂರು ಸಂತೆಗೆ ಬಂದಿದ್ದರು. ಸಂತೆಯಲ್ಲಿ ತರಕಾರಿ, ದಿನಸಿ ಖರೀದಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯಗಚಿ ಸೇತುವೆ ಬಳಿ ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಬೇಲೂರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ ಆವರಣದ ಗೇಟ್ ಮುರಿದು ಕಳ್ಳರು ವಾಹನವನ್ನು ಕದ್ದು ಪರಾರಿಯಾಗಿದ್ದಾರೆ. ವಾಹನ ಕದಿಯುವ ಧಾವಂತದಲ್ಲಿ ಕಾಂಪೌಂಡ್‌ ಗೆ ಡಿಕ್ಕಿ ಹೊಡೆದ ಕಳ್ಳರು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಡೀಸೆಲ್ ಸಮಸ್ಯೆಯಿಂದ ಕಚೇರಿ ಆವರಣದಲ್ಲೇ ನಿಂತಿದ್ದ ವಾಹನಗಳಿಗೆ ಇತ್ತೀಚೆಗಷ್ಟೇ ಹಣ ಬಿಡುಗಡೆ ಮಾಡಿ ಎಲ್ಲಾ ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸಲಾಗಿತ್ತು. 4 ಕಸ ವಿಲೇವಾರಿ ವಾಹನಗಳಲ್ಲಿ ಒಂದು ಗಾಡಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ ಕಸ ವಿಲೇವಾರಿ ವಾಹನ ಕಳ್ಳತನವಾಗಿದೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More