Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಹಾವೇರಿ: ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯ ವಿಷಯವಾಗಿರುವ ‘ಅಧಿಕಾರ ಹಂಚಿಕೆ’ ಅಥವಾ ‘ಅಧಿಕಾರ ಹಸ್ತಾಂತರ’ದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಸರ್ಕಾರದ ‘ಸಾಧನಾ ಸಮಾವೇಶ’ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. “ಅಧಿಕಾರ ಹಂಚಿಕೆಯ ಬಗ್ಗೆ ನಾನು ಈಗಾಗಲೇ ಮಾತನಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಆದರೂ ನೀವು ಯಾಕೆ ಪದೇ ಪದೇ ಅದೇ ಪ್ರಶ್ನೆಯನ್ನು ಕೇಳುತ್ತೀರಿ?” ಎಂದು ಮಾಧ್ಯಮದವರ ವಿರುದ್ಧ ಆಕ್ರೋಶ ಹೊರಹಾಕಿದರು. ಇದೇ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಶ್ರಮಕ್ಕೆ ತಕ್ಕ ಫಲ ಸಿಗಲಿದೆ” ಎಂದು ಮಾಡಿದ್ದ ಟ್ವೀಟ್ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹೈಕಮಾಂಡ್ ಏನಾದರೂ ಟ್ವೀಟ್ ಮಾಡಿದೆಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಸಂದೇಶ ನೀಡಿದರು. ಇದೇ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಈ ವಿಷಯದ…
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದ ನಿವಾಸಿ ಪ್ರಿಯಾಂಕ (29) ನಾಪತ್ತೆಯಾದ ಮಹಿಳೆ. ಇವರು ಫೆಬ್ರವರಿ 12ರಂದು ಚಿಕ್ಕಮಗಳೂರಿನಲ್ಲಿ ನಡೆದ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಮದುವೆ ಮುಗಿಸಿ ತವರು ಮನೆ ಮತ್ತಾವರಕ್ಕೆ ಬಂದಿದ್ದ ಅವರು, ಅಲ್ಲಿಂದ ಬೇಲೂರಿಗೆ ಬಸ್ ಹತ್ತಿದ್ದರು. ಬೇಲೂರಿನಲ್ಲಿ ಬಸ್ ಇಳಿದ ನಂತರ ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿದ್ದ ಪ್ರಿಯಾಂಕ, “ಪರಿಚಯಸ್ಥರು ಸಿಕ್ಕಿದ್ದಾರೆ, ಅವರ ಜೊತೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದರು. ಅತ್ತ ಪತಿ ರುದ್ರೇಶ್ ಅವರಿಗೆ ಕರೆ ಮಾಡಿ ಕುಣಿಗಲ್ ಗೆ ಬಂದು ಪಿಕಪ್ ಮಾಡಿಕೊಳ್ಳುವಂತೆ ತಿಳಿಸಿದ್ದರು. ಆದರೆ, ರಾತ್ರಿ 8:30ರ ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಕೊಲೆ ಶಂಕೆ ಏಕೆ? ಪ್ರಿಯಾಂಕ ನಾಪತ್ತೆಯಾದ ನಂತರ ಹುಡುಕಾಟ ನಡೆಸಿದಾಗ, ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಅವರ ಒಳ ಉಡುಪು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್…
ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ‘ಸಾಧನಾ ಸಮಾವೇಶ’ದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನು “ಶೂನ್ಯ ಸಾಧನೆಯ ಹಾಗೂ ಭ್ರಷ್ಟಾಚಾರದ ಸಮಾವೇಶ” ಎಂದು ಅವರು ಟೀಕಿಸಿದ್ದಾರೆ. ಶನಿವಾರ ಹಾವೇರಿಯಲ್ಲಿ ನಡೆದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,000 ದಿನಗಳ ಆಡಳಿತದಲ್ಲಿ ಸರ್ಕಾರ ಯಾವುದೇ ಗಣನೀಯ ಸಾಧನೆ ಮಾಡಿಲ್ಲ. ಇದೊಂದು ವ್ಯರ್ಥ ಆಡಳಿತದ ಪ್ರದರ್ಶನ ಎಂದು ಅವರು ಕಿಡಿಕಾರಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಹಕ್ಕು ಪತ್ರ ನೀಡುವ ನೆಪದಲ್ಲಿ ನೋಂದಣಿ ಶುಲ್ಕದ ಹೆಸರಿನಲ್ಲಿ ಬಡವರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಬಡವರ ತಲೆ ಮೇಲೆ 3-4 ಲಕ್ಷ ರೂ.ಗಳ ಹೊರೆ ಹಾಕುತ್ತಿದೆ ಎಂದು ದೂರಿದ್ದಾರೆ. ಕಂದಾಯ ಇಲಾಖೆಯಲ್ಲಿ ಹಕ್ಕು ಪತ್ರ ನೀಡುವ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಸಾಧನೆಯ ಸಮಾವೇಶವಲ್ಲ, ಬದಲಿಗೆ…
ತಿಪಟೂರು: ನಗರದ ಹೊರವಲಯದ ಗಾಂಧಿನಗರದ ಬಳಿ ಇರುವ ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ತೋಟದ ಬಾವಿಯೊಂದಕ್ಕೆ ಇಂದು ಬೆಳಗ್ಗೆ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ತೋಟದ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾವಿಯೊಳಗೆ ಚಿರತೆ ಬಿದ್ದಿರುವುದು ಪತ್ತೆಯಾಗಿದೆ. ಬಾವಿಯೊಳಗೆ ಬಿದ್ದಿರುವ ಚಿರತೆಯನ್ನು ಕಂಡು ಸ್ಥಳೀಯರು ಮತ್ತು ತೋಟದ ಮಾಲೀಕರು ಆತಂಕಕ್ಕೊಳಗಾಗಿದ್ದಾರೆ. ಚಿರತೆಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಚಿರತೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಮಾಹಿತಿ ನೀಡಿ ಹಲವು ಗಂಟೆಗಳಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಮಧ್ಯಾಹ್ನವಾದರೂ ಚಿರತೆಯನ್ನು ರಕ್ಷಿಸುವ ಅಥವಾ ಹಿಡಿಯುವ ಕಾರ್ಯಾಚರಣೆ ಆರಂಭಿಸದ ಕಾರಣ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಬಾವಿಯಿಂದ ಮೇಲೆ ಬಂದರೆ ಅಪಾಯ ಸಂಭವಿಸಬಹುದು ಎಂಬ ಭೀತಿಯಲ್ಲಿರುವ ಜನರು, ಕೂಡಲೇ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ…
ಬಹಳ ಹಿಂದೆ ಸೂರ್ಯಕೇತು ಎಂಬ ವ್ಯಕ್ತಿಯಿದ್ದ. ಇವನು ತುಂಬಾ ಬಡವ ಮತ್ತು ಮಹಾನ್ ದೈವಭಕ್ತ. ದೇವರ ಧ್ಯಾನಕ್ಕೆ ಕುಳಿತು ಬಹಳ ಹೊತ್ತು ಧ್ಯಾನ ಮಾಡಿ ನಂತರ ಸಿಕ್ಕ ಕೆಲಸ ಮಾಡಿಕೊಂಡು ಬಂದ ಹಣದಿಂದ ಜೀವನ ನಡೆಸುತ್ತಿದ್ದ. ಒಂದು ದಿನ ಅವನಿಗೆ ತಾನೂ ಕೂಡ ಶ್ರೀಮಂತನಾಗಬೇಕು ಎಂದು ಆಸೆ ಪಟ್ಟ ಅದಕ್ಕಾಗಿ ಯೋಚಿಸಿದ ದೇವರಲ್ಲಿ ಬೇಡಿದರೆ ತಾನೇ ದೇವರು ನಮಗೆ ಬೇಡಿದ್ದು ನೀಡುವುದು, ನಾವು ಏನನ್ನೂ ಕೇಳಿಕೊಳ್ಳದಿದ್ದರೆ ನಮ್ಮ ಮೊರೆ ಅವನಿಗೆ ಹೇಗೆ ತಿಳಿಯುತ್ತದೆ ಎಂದು ಕೊಂಡು ಅಂದು ಬೆಳಗ್ಗೆ ಬೇಗ ಎದ್ದವನು ಬೇಗ ಸ್ನಾನ ಮುಗಿಸಿ ಧ್ಯಾನ ಮಾಡುತ್ತಾ ಅಮ್ಮಾ ದೇವಿ ಇಂದು ನನಗೆ ನಿಧಿ ಸಿಗುವಂತೆ ಮಾಡು ಎಂದು ಕೇಳಿಕೊಂಡು ಅಂದು ಕೆಲಸ ಹುಡುಕಿಕೊಂಡು ಹೊರಟ, ಅವನ ಮುಗ್ದ ಬೇಡಿಕೆಗೆ ಮನ ಸೋತ ದೇವಿ ತನ್ನ ಸೇವಕರಾದ ಭವ ಮತ್ತು ವಿಭ ಎಂಬುವರನ್ನು ಕಳುಹಿಸಿ ಸೂರ್ಯ ಕೇತುವಿಗೆ ನಿಧಿ ಸಿಗುವಂತೆ ಮಾಡಿಬನ್ನಿ ಎಂದು ಕಳುಹಿಸಿದರು. ಭವನು ಸೂರ್ಯಕೇತು ಬರವು ಜಾಗದಲ್ಲಿ…
ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ. ತುರುವೇಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭಾ ಕ್ಷೇತ್ರ ಚುನಾವಣೆ ಟಿಕೆಟ್ ಗಾಗಿ ಈಗಲೇ ಸ್ಪರ್ಧೆ ಆರಂಭಗೊಂಡಿದೆ. ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ನಡುವೆ ಬಿಜೆಪಿ –ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸ್ಪರ್ಧೆ ಸೃಷ್ಟಿಯಾದ ಬೆನ್ನಲ್ಲೇ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಅಖಾಡಕ್ಕಿಳಿದಿದ್ದು, ತುರುವೇಕೆರೆ ತಾಲೂಕಿನ ಮಾಯಸಂದ್ರ ರಸ್ತೆಯಲ್ಲಿರುವ ಚಿಕ್ಕೋನಹಳ್ಳಿ ಗೇಟ್ ಬಳಿಯಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಎಲ್ಲರಿಗೂ ತಿಳಿದಿರುವ ವಿಚಾರ, ಆದರೆ ಕೆಲವರು ತಾಲೂಕಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಸ್ವಯಂ ಘೋಷಿತ ಹೇಳಿಕೆಯನ್ನು…
ತುಮಕೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ರಸ್ತೆ ಉಬ್ಬುಗಳು (ಹಂಪ್ ಗಳು) ಸಾರ್ವಜನಿಕರ ಪಾಲಿಗೆ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ, ಅತಿಯಾದ ಎತ್ತರದ ಹಂಪ್ ಮೇಲೆ ಆಟೋ ರಿಕ್ಷಾ ಹಾರಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮಸ್ಯೆಗಳ ಸರಮಾಲೆ: ಈ ಭಾಗದಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸುವಾಗ ಯಾವುದೇ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಂಪ್‌ಗಳಿಗೆ ಎಚ್ಚರಿಕೆ ನೀಡುವ ಬಣ್ಣದ ಪಟ್ಟಿಗಳನ್ನು (Reflective paint) ಬಳಿದಿಲ್ಲ ಮತ್ತು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರ ಜೊತೆಗೆ, ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದು ರಾತ್ರಿಯ ಸಂಚಾರವನ್ನು ಇನ್ನಷ್ಟು ದುಸ್ತರಗೊಳಿಸಿದೆ. ಹಗಲಿನಲ್ಲಿ ರಸ್ತೆ ಬದಿಯ ಮರದ ನೆರಳು ಹಂಪ್‌ಗಳ ಮೇಲೆ ಬೀಳುವುದರಿಂದ ವಾಹನ ಸವಾರರಿಗೆ ರಸ್ತೆ ಉಬ್ಬುಗಳು ಗೋಚರಿಸದೆ ಸರಣಿ ಅಪಘಾತಗಳು ಸಂಭವಿಸುತ್ತಿವೆ. ಸರಿಯಾದ ಡಿವೈಡರ್ ಇಲ್ಲದಿರುವುದು ಸಂಚಾರ ದಟ್ಟಣೆ ಮತ್ತು ಗೊಂದಲಕ್ಕೆ…
ತುಮಕೂರು: ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಭೇಟಿ ನೀಡಿ, ಆಹಾರ ಪದಾರ್ಥಗಳ ಸಂರಕ್ಷಣೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಮಾತನಾಡಿದ ಅವರು, “ಮಕ್ಕಳ ಆರೋಗ್ಯ ಮತ್ತು ಭವಿಷ್ಯ ಉಗ್ರಾಣದಲ್ಲಿರುವ ಪ್ರತಿಯೊಂದು ಧಾನ್ಯದ ಚೀಲದ ಮೇಲೂ ಅವಲಂಬಿತವಾಗಿದೆ. ಆದ್ದರಿಂದ ಗುಣಮಟ್ಟದ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು,” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತೀ ಸೂಕ್ಷ್ಮ ವರ್ಗ (Sensitive Category): ಶಾಲಾ ಮತ್ತು ಅಂಗನವಾಡಿ ಮಕ್ಕಳಿಗೆ ಸರಬರಾಜು ಮಾಡುವ ಆಹಾರವನ್ನು ‘ಅತೀ ಸೂಕ್ಷ್ಮ ವರ್ಗ’ ಎಂದು ಪರಿಗಣಿಸಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 (FSSAI) ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಆಶಯದಂತೆ ಈ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಅವರು ತಿಳಿಸಿದರು. ಸರ್ಕಾರದ ಕರ್ತವ್ಯ: ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಪ್ಪಂದಕ್ಕೆ (UNCRC) ಭಾರತ ಬದ್ಧವಾಗಿದೆ. ಅದರಂತೆ ಮಕ್ಕಳಿಗೆ ಸುರಕ್ಷಿತ ಮತ್ತು…
ತುರುವೇಕೆರೆ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ತುರುವೇಕೆರೆ ತಾಲೂಕಿನ ತಹಶೀಲ್ದಾರ್ ಕುಂಞಿ ಅಹಮದ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕ (ADLR) ಸಿ. ಜಗದೀಶ್ ಅವರು ರಾಜ್ಯ ಸರ್ಕಾರದ ಅಭಿನಂದನಾ ಪತ್ರಕ್ಕೆ ಭಾಜನರಾಗಿದ್ದಾರೆ. ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ, ದರಖಾಸ್ತು ಪೋಡಿ (1.5) ತಂತ್ರಾಂಶದ ಬಳಕೆ ಹಾಗೂ ಇ-ಪೌತಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ನೀಡಿದೆ. ರಾಜ್ಯಾದ್ಯಂತ ಆಯ್ದ ಅಧಿಕಾರಿಗಳ ಪಟ್ಟಿಯಲ್ಲಿ ತುರುವೇಕೆರೆ ತಾಲೂಕಿನ ಈ ಇಬ್ಬರು ಅಧಿಕಾರಿಗಳ ಹೆಸರು ಪ್ರಕಟವಾಗಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ಅಧಿಕಾರಿಗಳ ಈ ಸಾಧನೆಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಎಚ್.ಡಿ. ಹಾಗೂ ತುರುವೇಕೆರೆ ತಾಲೂಕು ಅಧ್ಯಕ್ಷ ದೊರೆಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅಭಿನಂದನಾ ಪತ್ರಕ್ಕೆ ಆಯ್ಕೆಯಾದ ತಹಶೀಲ್ದಾರ್ ಕುಂಞಿ ಅಹಮದ್ ಮತ್ತು ಭೂ…
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ ಜೋಸೈಮನ್ ಗೆ ಹೃದಯಾಘಾತವಾಗಿದೆ. ಕೂಡಲೆೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜೋಸೈಮನ್ ನಿಧನರಾಗಿದ್ದಾರೆ. ವಿಷ್ಣುವರ್ಧನ್ ಗೆ ‘ಸಾಹಸಸಿಂಹ’ ಬಿರುದು ನೀಡಿದ್ದ ಜೋಸೈಮನ್, ವಿಷ್ಣು, ಅಂಬರೀಶ್ ಸೇರಿದಂತೆ ಹಲವು ಖ್ಯಾತ ನಟರ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು. ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಅವರು ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೇವೆ ಸಲ್ಲಿಸಿ, ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದರು. 1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ಜೋ ಸೈಮನ್ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಮೊದಲ ಚಿತ್ರವೇ ಪ್ರೇಕ್ಷಕರ ಗಮನ ಸೆಳೆದಿದ್ದು, ನಂತರ ಅವರು ಆಕ್ಷನ್ ಹಾಗೂ ಪ್ರೇಮಕತೆಗಳ ಮೂಲಕ ಜನಪ್ರಿಯತೆ ಗಳಿಸಿದರು. ವಿಶೇಷವಾಗಿ ಆಕ್ಷನ್ ಶೈಲಿಯ ಚಿತ್ರಗಳಲ್ಲಿ ಅವರದೇ ಆದ ಸ್ಟೈಲ್ ಕಂಡುಬರುತ್ತಿತ್ತು. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ…