Author: admin

ಗ್ರಾಹಕನ ಸೋಗಿನಲ್ಲಿ ರಾಪಿಡೊ ಬೈಕ್ ಕಾಯ್ದಿರಿಸಿದ್ದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ್ದಾನೆ’ ಎಂದು ಆರೋಪಿಸಿ ಸವಾರ ಮಣಿಕಂಠ, ಆಗ್ನೆಯ ವಿಭಾಗದ ಸೈಬರ್ ಕೈಂ ಠಾಣೆಗೆ ದೂರು ನೀಡಿದ್ದಾರೆ. ‘ಆಂಧ್ರಪ್ರದೇಶದ ಮಣಿಕಂಠ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಗ್ರಾಹಕ ರಣವೀರ್ ಎಂಬಾತ ವಂಚನೆ ಮಾಡಿರುವುದಾಗಿ ದೂರುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಎಂ. ಟೆಕ್ ಪದವೀಧರ ಮಣಿಕಂಠ, ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು. ಎಲ್ಲಿಯೋ ಕೆಲಸ ಸಿಕ್ಕಿರಲಿಲ್ಲ. ಹೀಗಾಗಿ, ರಾಪಿಡೊ ಬೈಕ್ ಟ್ಯಾಕ್ಸಿ ಸವಾರರಾಗಿ ಕೆಲಸ ಮಾಡುತ್ತಿದ್ದರು. ಜುಲೈ 27ರಂದು ರಾತ್ರಿ ಅರಕೆರೆ ಬಳಿ ಮಣಿಕಂಠ ಹೊರಟಿದ್ದರು. ಗ್ರಾಹಕ ರಣವೀರ್, ಬೈಕ್ ಟ್ಯಾಕ್ಸಿ ಕಾಯ್ದಿರಿಸಿದ್ದ. ಮಣಿಕಂಠ ಸ್ಥಳಕ್ಕೆ ಹೋಗಿದ್ದರು. ‘ ‘ಮಣಿಕಂಠ ಅವರಿಗೆ ಕರೆ ಮಾಡಿದ್ದ ಆರೋಪಿ, ‘ನನ್ನ ಪತ್ನಿಗೆ ಹುಷಾರಿಲ್ಲ. ಚಿಕಿತ್ಸೆ ವೆಚ್ಚ ಭರಿಸಬೇಕು. ನನ್ನ ಬಳಿ ಫೋನ್ ಪೇ ಇಲ್ಲ. ವೈದ್ಯರ ಮೊಬೈಲ್ ನಂಬರ್‌ಗೆ 7 4 ಸಾವಿರ ಹಣ ಕಳುಹಿಸಿ. ನಾನು ನಿಮಗೆ ಹಣ ಕೊಡುತ್ತೇನೆ’…

Read More

ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್‌ ಗೆ ಮಾಜಿ ಸಚಿವ ಡಾ. ಕೆ. ಸುಧಾಕರ್, ದೊಡ್ಡ ಸವಾಲೊಂದನ್ನು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಧಾಕರ್, ನಿಮಗೆ ತಾಕತ್ ಇದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬನ್ನಿ, ನೀವು ಪಕ್ಷೇತರರಾಗಿ ಸ್ಪರ್ಧೆ ಮಾಡಿ, ನಾನು ಕೂಡ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ. ಆಗ ಯಾರು ಜಯಗಳಿಸುತ್ತಾರೆ ನೋಡೋಣ ಎಂದು ಸವಾಲು ಹಾಕಿದ್ದಾರೆ. ಇನ್ನು ಸುಧಾಕರ್ ಸವಾಲಿಗೆ ತಿರುಗೇಟು ಕೊಟ್ಟಿರುವ ಶಾಸಕ ಪ್ರದೀಪ್ ಈಶ್ವರ್, ಚುನಾವಣೆ ನಡೆದು 2 ತಿಂಗಳಾಗಿದೆ. ಕೆಲಸವಿಲ್ಲದೇ ರಾಜೀನಾಮೆ ಏಕೆ ನೀಡಬೇಕು? ನಾನು ನಿಮ್ಮ ತರಹದ ರಾಜಕಾರಣಿ ಚುನಾವಣೆ ಅಲ್ಲ. ಅಂದರೆ, ನಡೆಯುವುದು ಜನರ ತೆರಿಗೆ ಹಣದಿಂದ. ಅದನ್ನು ಸುಖಾಸುಮ್ಮನೆ ಪೋಲು ಮಾಡಲು ನಾನು ಸಿದ್ಧನಾಗಿಲ್ಲ ಎಂದು ಸುಧಾಕರ್‌ ಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಡೂಮ್ ಕಟ್ಟಲು 20 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ. ಇಂದು ಸುಧಾಕರ್ ಅವರ ಕಾಲದಲ್ಲಿ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಅವರು ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿದ್ದಾರೆ. ಅದರಲ್ಲಿ ಕಾಲೇಜಿನ ವಿನ್ಯಾಸಕ್ಕಾಗಿ ಡೂಮ್ ಕಟ್ಟಲು 20 ಕೋಟಿ ವೆಚ್ಚವಾಗಿದೆ ಎಂದು ತೋರಿಸಿದ್ದಾರೆ. ಡೂಮ್ ಕಟ್ಟಲು ಅಷ್ಟು ಹಣ ವೆಚ್ಚವಾಗುತ್ತಾ? ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯಾಸಾಧ್ಯತೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ಮ ವಿರುದ್ಧ ಪರಾಭವಗೊಂಡಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್, ಕಾಂಗ್ರೆಸ್‌ನ ಕದ ತಟ್ಟುತ್ತಿದ್ದಾರೆ ಎಂದು, ಶಾಸಕ ಪ್ರದೀಪ್ ಈಶ್ವರ್, ಸುಧಾಕರ್‌ ಗೆ ಟಕ್ಕರ್ ಕೊಟ್ಟಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಪ್ರದೀಪ್ ಈಶ್ವರ್,…

Read More

ತುರುವೇಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಕ್ಷೇತ್ರದ 34 ಗ್ರಾಮ ಪಂಚಾಯಿತಿಗಳಲ್ಲಿ 23 ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಂದಿದೆ ಇದು ನಮಗೆ ಹೆಮ್ಮೆಯ ವಿಚಾರ ಎಂದು ಜೆಡಿಎಸ್ ವಕ್ತಾರ ವೆಂಕಟಪುರ ಯೋಗೀಶ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು ಇದು ನಮ್ಮ ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ ಟಿ ಕೃಷ್ಣಪ್ಪನವರು ಗ್ರಾಮೀಣ ಭಾಗದ ಜನರನ್ನು ತಲುಪಲು ಸಹಕಾರಿಯಾಗಿದೆ ಎಂದು ಭಾವಿಸಿದ್ದು ಹೀಗೇನು ಎರಡನೇ ಅವಧಿಯ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿಗರು ನಿಷ್ಠಾವಂತರುಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುವುದರಿಂದ ಅವರನ್ನೆಲ್ಲ ಗೌರವಿಸಬೇಕು ಉದ್ದೇಶದಿಂದ ಇದೇ ತಿಂಗಳ 31ನೇ ಸೋಮವಾರದಂದು ಬೆಳಗ್ಗೆ 9:30ಕ್ಕೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಹಾಲ್ ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಪಕ್ಷದ ತಾಲೂಕು ಅಧ್ಯಕ್ಷರಾದ ದೊಡ್ಡೇಗೌಡರು ವಹಿಸಲಿದ್ದು ಕಾರ್ಯಕ್ರಮವನ್ನು ಶಾಸಕರಾದ ಎಂಪಿ ಕೃಷ್ಣಪ್ಪನವರು ಉದ್ಘಾಟಿಸಲಿದ್ದು ಕಾರ್ಯಕ್ರಮಕ್ಕೆ ಪಕ್ಷದ…

Read More

ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಚಿಕ್ಕಬಳ್ಳಾಪುರ ಕ್ಷೇತ್ರ ಶಾಂತಿಯುತವಾಗಿತ್ತು. ಕ್ಷೇತ್ರದ ಬಿಜೆಪಿ ಮುಖಂಡರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿ ದೌರ್ಜನ್ಯ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ಕ್ಷೇತ್ರದಲ್ಲಿ ಗುಂಡಾಗಿರಿ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ದಿಸ್ಪುರ್: ಲವ್ ಜಿಹಾದ್ ವಿಚಾರವಾಗಿ ಅಸ್ಸಾಂನಲ್ಲಿ ಭಾರೀ ರಾಜಕೀಯ ನಡೆದಿದೆ. ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಕೃಷ್ಣ-ರುಕ್ಮಿಣಿ ಪ್ರೇಮಗಾಥೆಗೆ ಪರೋಕ್ಷವಾಗಿ ಲವ್ ಜಿಹಾದ್ ಟಚ್ ನೀಡಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಅಸ್ಸಾಂನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಹಿಂದೂ ಪತ್ನಿ ಮತ್ತು ಆಕೆಯ ತಂದೆ ತಾಯಿಯನ್ನು ಕೊಂದಿದ್ದ. ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಕರೆದಿದ್ದರು. ಈ ಹೇಳಿಕೆಯನ್ನು ವಿರೋಧಿಸುವ ಭರದಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಕೃಷ್ಣ-ರುಕ್ಮಿಣಿ ಮದುವೆ ವಿಚಾರವನ್ನು ಎಳೆದುತಂದಿದ್ದಾರೆ. ಲವ್ ಜಿಹಾದ್ ಮಹಾಭಾರತದಲ್ಲೂ (Mahabharat) ನಡೆದಿದೆ. ಪುರಾಣ ಗ್ರಂಥಗಳಲ್ಲಿ ಕೃಷ್ಣನು ರುಕ್ಮಿಣಿಯನ್ನು ಓಡಿಸಿಕೊಂಡು ಹೋಗಿರುವ ಉಲ್ಲೇಖವಿದೆ. ಇಂದಿನ ಕಾಲದಲ್ಲಿ ಬೇರೆ ಬೇರೆ ಧರ್ಮ, ಬೇರೆ ಬೇರೆ ಜಾತಿಗಳ ಯುವಕ-ಯುವತಿಯರು ಮದುವೆ ಆಗುವುದು ಸಾಮಾನ್ಯವಾಗಿದೆ. ಇದನ್ನು ಲವ್ ಜಿಹಾದ್‌ ಗೆ ಹೋಲಿಸುವುದು ಸರಿಯಲ್ಲ ಎಂದು ಬೋರಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕೆರಳಿದ ಹಿಮಾಂತ ಶರ್ಮಾ,…

Read More

ಬೆಳಗಾವಿ: ನದಿಗಳ ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ತಿಳಿಸಿದರು. ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು ಮತ್ತು ಕಾಳಜಿ ಕೇಂದ್ರಕ್ಕೆ ಗುರುವಾರ(ಜು.27) ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯ ಪ್ರಮಾಣ ಮತ್ತು ಮಹಾರಾಷ್ಟ್ರದಿಂದ ನೀರು ಬಿಡುಗಡೆ ಕುರಿತು ಅಲ್ಲಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದುಕೊಂಡು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಪ್ರವಾಹದಿಂದ ಉಂಟಾಗುವ ಮನೆಹಾನಿಯ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಇದಲ್ಲದೇ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿಯಾದಾಗ ತುರ್ತಾಗಿ…

Read More

ಬೆಂಗಳೂರು: ಬಿ.ಕೆ.ಹರಿಪ್ರಸಾದ್ ಕೂಡ ಕೆಲವು ಕಡೆ ಸಿಎಂ ಮಾಡಿದ್ದಾರೆ. ಅವರು ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಹರಿಪ್ರಸಾದ್ ಅವರ ಅನುಭವ ಹಂಚಿಕೊಂಡಿದ್ದಾರೆ. ಕೆಲವು ಸಮುದಾಯಗಳಿಗೆ ಅವಕಾಶ ಸಿಗಲಿಲ್ಲ. ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ, ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೈಕಮಾಂಡ್ಗೆ ಬಿಟ್ಟಿದ್ದು, ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯನವರು ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ. ನಾನು ಈ ಅವಧಿಯಲ್ಲಿ ಸಿಎಂ ರೇಸ್ನಲ್ಲಿ ಇಲ್ಲ. ಮುಂದಿನ ಅವಧಿಯಲ್ಲಿ ಇರುತ್ತೇನೆ ಎಂದು ಹೇಳಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೋಳಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರಿನ ಗುಂಜೂರು ಸೋಮೇಶ್ವರ ದೇವಸ್ಥಾನದ ಹತ್ತಿರ ವಲ್ಲಿದೇವ ಸೇನಾ ಸಮೇತ ನಾಗ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಶ್ರೀ ಸೋಮೇಶ್ವರ ದೇವಸ್ಥಾನದ ಹತ್ತಿರ ಹಮ್ಮಿಕೊಂಡ ವಲ್ಲಿದೇವ ಸೇನಾ ಸಮೇತ ನಾಗ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಇದೇ ವೇಳೆ, ನಾಗ ದೇವತೆಗಳ ಆಶೀರ್ವಾದ ಪಡೆದು ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು. ಇದೇ ಸಂದರ್ಭದಲ್ಲಿ ಅನ್ನಪ್ರಸಾದ ವಿತರಿಸಿ, ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಮನೋಹರ ರೆಡ್ಡಿ, ಸ್ಥಳೀಯ ಮುಖಂಡರು, ಅಪಾರ ಸಂಖ್ಯೆ ಭಕ್ತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಯಾದಗಿರಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಡ್ಯಾಂನಿಂದ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಪೊಲೀಸರು ಸೂಚಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More