Subscribe to Updates
Get the latest creative news from FooBar about art, design and business.
- ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
Author: admin
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದ ಮೇಲೆ ಚಾಲಕ ವೃತ್ತಿ ಮಾಡುತ್ತಿರುವ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲಿಯೇ ಕಾರು ಬಿಟ್ಟು ತೆರಳಿದ್ದನು. ಪ್ರತಿಮಾ ರೈಡ್ ಹೋಗುವ ವಿಚಾರ ಲೀಕ್ ಮಾಡುತ್ತಿರುವ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿದ್ದನಂತೆ.ಆದರೆ ಆಕೆ ಅದನ್ನು ತಿರಸ್ಕರಿಸಿದರು ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದರು. ಇದೀಗ ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಮದುವೆಯಾಗುವ ಆಸೆಯಲ್ಲಿ ಆಕೆಯ ಪತಿಯನ್ನು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಕೊಲೆ ನಡೆದಿರುವುದಾಗಿ ವರದಿಯಾಗಿದೆ. ಆರೋಪಿ ವಾಹಿದ್ ಅಹಮದ್ ತನ್ನ ಸಹೋದರ, ಗಂಗೊಂಡನಹಳ್ಳಿ ನಿವಾಸಿಗಳಾದ ಮಥೀನ್ ಅಹಮದ್ (24) ಎಂಬಾತನೊಂದಿಗೆ ಗುರುವಾರ ರಾತ್ರಿ ಗಂಗೊಂಡನಹಳ್ಳಿಯ ಓಂ ಶಕ್ತಿ ದೇವಸ್ಥಾನದ ಬಳಿ ಮುದಸ್ಸಿರ್ ಖಾನ್ ಎಂಬಾತನ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಾನೆ.
ಸಾರ್ವಜನಿಕ ಕಣ್ಣಿನಿಂದ ಕಣ್ಮರೆಯಾದ ಅನೇಕ ಹಿಂದಿನ ನಟರಲ್ಲಿ ರಾಜ್ ಕಿರಣ್ ಕೂಡ ಒಬ್ಬರು. 1949ರಲ್ಲಿ ಜನಿಸಿದ ಅವರು 1975ರಲ್ಲಿ ಕಾಗಜ್ ಕಿ ನಾವೋ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು. 80ರ ದಶಕದಲ್ಲಿ ಕಾರ್ಜ್, ಬಸೇರಾ, ಅರ್ಥ್ ಹೀಗೆ ಎಂಟು ಬ್ಯಾಕ್-ಟು-ಬ್ಯಾಕ್ ಹಿಟ್ ಚಿತ್ರ ನೀಡಿದರು. ಆದರೆ 90ರ ದಶಕದ ಅಂತ್ಯದ ವೇಳೆಗೆ ಅವರ ವೃತ್ತಿಜೀವನವು ಬಹುತೇಕ ಅಂತ್ಯಗೊಂಡಿತು. ನಂತರ ರಾಜ್ ಖಿನ್ನತೆಗೆ ಒಳಗಾದರು. 2000ರಲ್ಲಿ ಅವರನ್ನು ಮುಂಬೈನ ಬೈಕುಲ್ಲಾ ಮಾನಸಿಕ ಆಶ್ರಯಕ್ಕೆ ಸೇರಿಸಲಾಗಿದ್ದು, ಅಂದಿನಿಂದ ಕಣ್ಮರೆಯಾಗಿದ್ದಾರೆ. ಆತನ ಪುತ್ರಿ ಮನೆಯವರು ಅವರನ್ನು ಹುಡುಕುತ್ತಿದ್ದಾರೆ ಎಂದು ಹೇಳಿದ್ದು, ನಟನ ಸ್ಥಳವು ಸದ್ಯಕ್ಕೆ ತಿಳಿದಿಲ್ಲ.
ವಿಪಕ್ಷ ನಾಯಕರಾಗುವುದಕ್ಕೆ ಬಿಜೆಪಿಯವರೆಲ್ಲಾ ಅಸಮರ್ಥರಾ? ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ಯತ್ನಾಳ್ ಇವರೆಲ್ಲರೂ ಅಸಮರ್ಥರಾ? ಇವರಿಗೆ ವಿರೋಧ ಪಕ್ಷದ ನಾಯಕನಾಗುವ ಸಾಮರ್ಥ್ಯ ಇಲ್ವಾ? ಈಗ ಹೆಚ್. ಡಿ. ಕುಮಾರಸ್ವಾಮಿ ವಿಪಕ್ಷ ನಾಯಕ ಅಂತ ಬಿಂಬಿಸಿದ್ದಾರೆ ಎಂದುಸಚಿವ ಎಂ. ಬಿ. ಪಾಟೀಲ್ ಪ್ರಶ್ನಿಸಿದ್ದಾರೆ. ಹಾಗೆ ಡಿ.ಕೆ. ಶಿವಕುಮಾರ್ ಸಿಎಂ ಆದರೆ ನಾವು ಬೆಂಬಲ ಕೊಡುತ್ತೇವೆ ಎಂಬ ಹೆಚ್. ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ. ಬಿ. ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.
ತನಿಖೆಯಲ್ಲಿ ಪ್ರಗತಿ ಕಾಣದೇ ತೆರೆಗೆ ಸರಿದಿದ್ದ ಹಳೇ ಪ್ರಕರಣಗಳಿಗೆ ಮರುಜೀವ ನೀಡಲಾಗಿದ್ದು, ಒಂದೇ ವಾರದಲ್ಲಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪರಾಧ ಕೃತ್ಯಗಳು ನಡೆದರೂ ಆರೋಪಿಗಳು ಪತ್ತೆಯಾಗಿರಲಿಲ್ಲ. ಹಲವು ವರ್ಷಗಳ ಹಳೇ ಪ್ರಕರಣಗಳ ಮರು ತನಿಖೆ ನಡೆಸಲು ಕಮಿಷನರ್ ಅವರು ಸೂಚಿಸಿದ್ದರು. ‘ಅದರಂತೆ, ಮರು ತನಿಖೆ ನಡೆಸಲಾಗುತ್ತಿದೆ. ಇದೇ ವಾರದಲ್ಲಿ 20 ಪ್ರಕರಣಗಳನ್ನು ಭೇದಿಸಲಾಗಿದೆ. ಈ ಪೈಕಿ 10 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ರೈಲಿನಿಂದ ಹಿಂತಿರುಗುವಾಗ ಪ್ಲಾಟ್ ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿ ತಂದೆ ದುರಂತ ಅಂತ್ಯ ಕಂಡಿದ್ದಾರೆ. ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆಗ್ರಾದ ಖ್ಯಾತ ಲ್ಯಾಪರೊಸ್ಕೋಪಿಕ್ ಸರ್ಜನ್ ಡಾ. ಲಖನ್ ಸಿಂಗ್ ಗಲಾವ್ ನಿಧನರಾದರು. ಡಾ. ಲಖನ್ ತಮ್ಮ ಮಗಳನ್ನು ರೈಲು ಹತ್ತಿಸಿ ಬಿಡಲು ನಿಲ್ದಾಣಕ್ಕೆ ಬಂದಿದ್ದರು. ಮಗಳನ್ನು ಹತ್ತಿಸಿಕೊಂಡು ರೈಲು ಚಲಿಸುತ್ತಿದ್ದಾಗ, ಚಲಿಸುತ್ತಿದ್ದ ರೈಲಿನಿಂದ ಹೊರಬರಲು ಯತ್ನಿಸಿದಾಗ ತಂದೆಗೆ ಅವಘಡ ಸಂಭವಿಸಿದೆ. ಪ್ಲಾಟ್ ಫಾರ್ಮ್ ಮತ್ತು ರೈಲಿನ ನಡುವೆ ಲಖನ್ ಸಿಕ್ಕಿ ಹಾಕಿಕೊಂಡಿದ್ದರು. ಈ ದುರಂತ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರ ಬಂದಿವೆ.
ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಸಿಖ್ಖರು ಎಚ್ಚರಿಸಿದ್ದಾರೆ ಏರ್ ಇಂಡಿಯಾ ಹೊಸ ವೀಡಿಯೋ ಬಿಡುಗಡೆ ಮಾಡಿದ್ದು, ಕಾರ್ಯಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸದಂತೆ ನಾವು ಸಿಖ್ ಜನರನ್ನು ವಿನಂತಿಸುತ್ತೇವೆ. ಜಾಗತಿಕ ಮಟ್ಟದಲ್ಲಿ ನಿರ್ಬಂಧಗಳು ಇರುತ್ತವೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಪನ್ನೂನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ನವೆಂಬರ್ 19 ರಂದು ಮುಚ್ಚಲಾಗುವುದು ಮತ್ತು ಮರುನಾಮಕರಣ ಮಾಡಲಾಗುವುದು ಎಂದು ಪನ್ನುನ್ ಹೇಳಿದ್ದಾರೆ. ಅದೇ ದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯ ನಡೆಯಲಿದೆ ಎಂದು ಪನ್ನುನ್ ಉಲ್ಲೇಖಿಸಿರುವುದು ಗಮನಾರ್ಹ. ಪಂಜಾಬ್ ವಿಮೋಚನೆಗೊಂಡಾಗ ಐಜಿಐ…
ಜಾತಿ ಗಣತಿಯ ಗೊಂದಲದ ನಡುವೆ, ನ್ಯಾಯಮೂರ್ತಿ ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಇಂದು ಮಾದಿಗ ಸಮುದಾಯದಿಂದ ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಆದಿಜಾಂಭವ ಸಾಂಸ್ಕೃತಿಕ ಸಮಿತಿ ಕರೆದಿರುವ ಸಭೆಯಲ್ಲಿ ಸಚಿವರಾದ ಕೆ. ಹೆಚ್. ಮುನಿಯಪ್ಪ, ಆರ್. ಬಿ. ತಿಮ್ಮಾಪೂರ, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕರಾದ ರೂಪಾ ಶಶಿಧರ್, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದೆ.
ಪತಿ ಅಥವಾ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗುವುದು ಅಪರಾಧ. ಇದರಲ್ಲಿ ತಪ್ಪಿತಸ್ಥ ಪತಿ ಅಥವಾ ಪತ್ನಿ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗಿಸಬಹುದೇ ವಿನಃ ಕುಟುಂಬ ಸದಸ್ಯರನ್ನು ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮರು ಮದುವೆ, ವಂಚನೆ, ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಕುಟುಂಬ ಸದಸ್ಯರನ್ನೂ ಸೇರಿಸಿ ದಾಖಲಿಸಿರುವ ಎಫ್ ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಶ್ರೀನಿವಾಸ್ ಸಾಗರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ತೀರ್ಪು ನೀಡಿದೆ.
ಹರಿಯಾಣದಲ್ಲಿ ಪ್ರಾಂಶುಪಾಲರೊಬ್ಬರು ಕ್ರೌರ್ಯ ಮೆರೆದಿದ್ದಾರೆ. ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 50 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆತನ ನಿರಂತರ ವರ್ತನೆ ಸಹಿಸಲಾಗದೆ ಬಾಲಕಿಯರು ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಧಾನಿ ಕಾರ್ಯಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದೆಯಂತೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿದ್ದ ಪ್ರಾಂಶುಪಾಲನನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಧಾನಿ ಕಾರ್ಯಾಲಯ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. 50 ಹುಡುಗಿಯರು ಕಿರುಕುಳಕ್ಕೊಳಗಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.