Author: admin

ಮಧುಗಿರಿ: ಕಸಬಾ ಬಸವನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎನ್.ಹನುಮಂತರಾಯಪ್ಪ ಶಾಲಾ ವಿದ್ಯಾರ್ಥಿಗಳಿಗೆ  ತಟ್ಟೆ ಲೋಟ ವಿತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಎಲ್ಲರೂ ಸಹ ದಾನ ಮಾಡುವುದಿಲ್ಲ, ಹೃದಯ ಇರುವಂತಹವರು ಅಥವಾ ಮಕ್ಕಳ ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಬೇಕೆಂಬ ಮನೋಭಾವನೆ ಇರುವವರು ಅಥವಾ  ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂಬ ಮನಸ್ಸುಳ್ಳವರು ದಾನ ಧರ್ಮ ಮಾಡುತ್ತಾರೆ, ಆ ನಿಟ್ಟಿನಲ್ಲಿ ಮಧುಗಿರಿಯ ಶ್ರೀವಾರು ಹೋಟೆಲ್ ಮಾಲೀಕರಾದ ರಘು ಹಾಗೂ ಶ್ರೀನಿವಾಸ್ ಶೆಟ್ಟಿ ಬಹಳ ದೊಡ್ಡ ಮನಸ್ಸು ಮಾಡಿದ್ದು ಜೊತೆಗೆ  ಶಿಕ್ಷಕಿ ಶೋಭಾ ರವರ ಕಾಳಜಿಯಿಂದ  ನಾಲ್ಕು ಶಾಲೆ ಮಕ್ಕಳಿಗೆ ಉಚಿತವಾಗಿ ಊಟ ಮಾಡಲಿಕ್ಕೆ  ಅನುಗುಣವಾಗಿ ತಟ್ಟೆ ಹಾಗು ಹಾಲು ಕುಡಿಯಲು ಲೋಟದ ವ್ಯವಸ್ಥೆ ಮಾಡಿಕೊಟ್ಟಿದ್ದು ಇದು ತುಂಬಾನೇ ಒಳ್ಳೆಯ  ಸಮಾಜಮುಖಿ ಕಾರ್ಯ ಇಂತಹ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಆಶಿಸಿದರು. ಮಧುಗಿರಿ ರೋಟರಿ ಕ್ಲಬ್ ಅಧ್ಯಕ್ಷರಾದ ಶಿವಲಿಂಗಪ್ಪ ಮಾತನಾಡಿ, ಸರಕಾರಿ ಶಾಲಾ ಶಿಕ್ಷಕರ ಮುತವರ್ಜಿಯಿಂದ ಗ್ರಾಮೀಣ ಭಾಗದ ಮಕ್ಕಳು…

Read More

ತುರುವೇಕೆರೆ:ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪ ತುರುವೇಕೆರೆ 2023– 24ನೇ ಸಾಲಿನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಡೆಯಿತು. ಪಟ್ಟಣದ ರೋಟರಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದ  ಅಧ್ಯಕ್ಷೆ ಗೀತಾ ಸುರೇಶ್ ನಂತರ ಮಾತನಾಡಿದ ಅವರು, ನಮ್ಮ ಸದಸ್ಯರುಗಳು ಬೇರೆ ಕ್ಲಬ್ ಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋದಾಗ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಹಾಗೂ ಸಮಾಜದಲ್ಲಿನ ನ್ಯೂನತೆಗಳ ಬಗ್ಗೆ ಬೆಳಕು ಚೆಲ್ಲಲು ಸಹಾಯವಾಗುತ್ತದೆ ಹಾಗೂ ಸಮುದಾಯದ ಸೇವೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಇಂದಿನ ಎಲ್ಲಾ ಪದಾಧಿಕಾರಿಗಳು ನನ್ನ ಹೆಗಲಿಗೆ ಹೆಗಲು ಕೊಟ್ಟು ಜೊತೆಯಲ್ಲಿ ಹೆಚ್ಚಿನದಾಗಿ ತುಂಬಾ ಸಹಾಯ ಮಾಡಿದ್ದೀರಿ ನಾನು ನಿಮಗೆ ತುಂಬಾ ಚಿರಋಣಿಯಾಗಿದ್ದೇನೆ. ಕೆಲವು ಯೋಜನೆಗಳಲ್ಲಿ ಕೆಲಸ ಮಾಡುವಾಗ ಎಲ್ಲರೂ ತುಂಬಾ ಸಹಾಯ ಮಾಡಿರುತ್ತೀರ ಅದರಲ್ಲಿ ವೃದ್ಧರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಿಂದ ಹಿಡಿದು ಶಾಲೆಗಳಿಗೆ ಪೀಠೋಪಕರಣಗಳನ್ನು ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವಂತಹ ಸೇವೆಗಳಲ್ಲಿ ನೀವು ಸಹ ಕೈಜೋಡಿಸಿದ್ದೀರಿ…

Read More

ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, 435 ಹುಲಿಗಳು ಪತ್ತೆಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಹುಲಿ ದಿನಕ್ಕೆ 2 ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್. ಟಿ. ಸಿ. ಎ) ಮಾರ್ಗಸೂಚಿಯ ಪ್ರಕಾರ, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಹುಲಿ ಗಣತಿ ಮಾಡಲಾಗುತ್ತದೆ. ಇದರ ಭಾಗವಾಗಿ ಆನೆ ಸೇರಿ ಮಾಂಸಹಾರಿ ಮತ್ತು ಸಸ್ಯಹಾರಿ ಪ್ರಾಣಿಗಳ ಗಣತಿಯನ್ನೂ ದೇಶಾದ್ಯಂತ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಪಶ್ಚಿಮ ಘಟ್ಟದ ಹೆಚ್ಚಿನ ಭಾಗ ಹೊಂದಿರುವ ಕರ್ನಾಟಕ ಹುಲಿಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ. 2021-22ರ ಅವಧಿಯಲ್ಲಿ ಹುಲಿ ಗಣತಿಯನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಲಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಿವೆ. ನಾಗರಹೊಳೆ, ಬಂಡೀಪುರ, ಭದ್ರಾ, ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಹಾಗೂ ಕಾಳಿ ಕಾನನ ಸೇರಿದಂತೆ 37 ವನ್ಯಜೀವಿ ಧಾಮಗಳಲ್ಲಿ…

Read More

ಬೆಂಗಳೂರಿನ ಖಾಸಗಿ ಹೊಟೇಲ್‌ ನಲ್ಲಿ ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ಕಾಂಗ್ರೆಸ್‌ ನ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಇನ್ನು ಸಭೆಯ ಆರಂಭದಲ್ಲಿ ತಮ್ಮ ಮಾತು ಆರಂಭಿಸಿರುವ ಸಿಎಂ ಸಿದ್ದರಾಮಯ್ಯ, ಸಭೆ ಕರೆದಿರುವ ಔಚಿತ್ಯದ ಬಗ್ಗೆ ತಿಳಿಸಿದ್ದಾರೆ. ಶಾಸಕರನ್ನ ಕುರಿತು ತಮ್ಮ ಮಾತು ಆರಂಭಿಸಿರುವ ಸಿದ್ಧರಾಮಯ್ಯ, ಹಲವು ದಿನಗಳಿಂದ ಸಭೆ ಕರೆಯಬೇಕಿತ್ತು. ಈ ಹಿಂದೆಯೂ ಕೂಡ ಸಭೆ ನಿಗದಿಯಾಗಿತ್ತು. ಅನಿವಾರ್ಯ ಕಾರಣಗಳಿಂದ ಸಭೆಯನ್ನ ಮುಂದೂಡಲಾಗಿತ್ತು. ನಿಮ್ಮೆಲ್ಲರ ಒತ್ತಡದ ಕಾರಣ ಈಗ ಸಭೆ ಕರೆದಿದ್ದೇವೆ. ಸರ್ಕಾರ ಬಂದು ಎರಡು ತಿಂಗಳು ಮಾತ್ರ ಕಳೆದಿದೆ. ಜನರಿಗೆ ಮಾತು ಕೊಟ್ಟಂತೆ ಐದು ಗ್ಯಾರಂಟಿಗಳನ್ನ ಜಾರಿಗೆ ತರುತ್ತಿದ್ದೇವೆ. ಈಗಾಗಲೇ ಮೂರು ಗ್ಯಾರಂಟಿಗಳ ಜಾರಿಯಿಂದ ಜನರು ಖುಷಿಯಾಗಿದ್ದಾರೆ. ಇತ್ತೀಚೆಗೆ ಬಂದ ಒಂದು ಸಮೀಕ್ಷೆಯಿಂದ ಇದು ಗೊತ್ತಾಗಿದೆ. ನಮ್ಮದು ಜನಪ್ರಿಯ ಸರ್ಕಾರ. ಆದರೆ, ಕೆಲ ಸಚಿವರ ಮೇಲೆ ಶಾಸಕರು ಅಸಮಾಧಾನಗೊಂಡಿದ್ದಾರೆ. ಹಲವು ವಿಚಾರವಾಗಿ ಶಾಸಕರು ಅಸಮಾಧಾನಗೊಂಡಿದ್ದಾರೆ. ನಮಗೆ ಪತ್ರ ಬರೆದು ಸಭೆ ಕರೆಯಲು ಹೇಳಿದ್ದರು. ಏನೇ ಅಸಮಾಧಾನ ಇದ್ದರು, ನಮ್ಮ ಗಮನಕ್ಕೆ…

Read More

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು. ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ನಾಗರತ್ನಮ್ಮ, ‘ದೇಶದ ಸಂವಿಧಾನದ ಪ್ರಕಾರ ಮಹಿಳೆಯರು ಮತ್ತು ಪುರುಷರು ಸಮಾನರು. ಆದರೆ, ಮಹಿಳೆಯರು ಕೀಳು, ಪುರುಷರು ಮೇಲು ಎಂಬ ಭಾವನೆಯಿಂದ ನೋಡುವ ಪ್ರವೃತ್ತಿ ಇಂದಿಗೂ ಬದಲಾಗಿಲ್ಲ. ಅದಕ್ಕೆ, ಮಣಿಪುರದಲ್ಲಿ ನಡೆದ ಘಟನೆಯೇ ಸಾಕ್ಷಿ. ಈ ಮನಸ್ಥಿತಿ ಬದಲಾಗಬೇಕು’ ಎಂದರು. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಸಿ. ಬಿ. ಹೊನ್ನು ಸಿದ್ದಾರ್ಥ, ‘ಮಣಿಪುರದಲ್ಲಿ ಜುಲೈ 19ರಂದು ಮೈತ್ರಿ ಸಮುದಾಯದವರು ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಮಾಡುವ ಮೂಲಕ ಅಮಾನವೀಯ ಕೃತ್ಯವೆಸಗಿದ್ದಾರೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಶಾಂತಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ವೇದಿಕೆ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶೇಖ್ ಲತೀಫ್ ಅವರ…

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೊಳಿಸಲು ಎಲ್ಲಾ ವಾರ್ಡ್ ಕಚೇರಿಗಳಲ್ಲಿ ನೋಂದಣಿ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಪಾಲಿಕೆಯ ಎಲ್ಲಾ ವಾರ್ಡ್ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ವಲಯ ಮಟ್ಟದ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೊತೆ ಸಮನ್ವಯ ಸಾಧಿಸಬೇಕು. ಕಂದಾಯ ವಿಭಾಗದ ಉಪ ಆಯುಕ್ತರಾದ ಲಕ್ಷ್ಮೀದೇವಿ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ವರ್ಚ್ಯುಯಲ್ ಸಭೆಯಲ್ಲಿ ವಲಯ ಆಯುಕ್ತರಿಗೆ ತಿಳಿಸಿದರು. ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ನೋಂದಾಯಿಸಿಕೊಳ್ಳುವ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲು ತರಬೇತಿ ನೀಡಬೇಕು ಎಂದರು. ಪ್ರತಿ ವಾರ್ಡ್ ಕಚೇರಿ ಮುಂಭಾಗವೂ ‘ಗೃಹಲಕ್ಷ್ಮಿ’ ಯೋಜನೆ ನೋಂದಣಿ ಕೇಂದ್ರ ಎಂಬ ಬ್ಯಾನರ್ ಅಳವಡಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಡಿಯೊ, ವಿಡಿಯೊ ಕ್ಲಿಪ್ಸ್ ಪಡೆದು ನಗರದ ಜನದಟ್ಟಣೆ ಪ್ರದೇಶ,…

Read More

ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್. ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್. ಟಿ)ಮಕ್ಕಳ ಶಾಲಾ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್‌ಪಿ) ಅನುದಾನ ಹಂಚಿಕೆ ಕುರಿತು ಬುಧವಾರ ನಡೆದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಎಸ್. ಸಿ ಮತ್ತು ಎಸ್. ಟಿ ಮಕ್ಕಳ ಶಾಲಾ ಪ್ರವೇಶಾತಿಯ ಪ್ರಮಾಣವು ಕರ್ನಾಟಕದಲ್ಲಿ ಉಳಿದ ರಾಜ್ಯಗಳಿಗಿಂತ ಕಡಿಮೆ ಇದೆ. ಈ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸಬೇಕು’ ಎಂದರು. ಶಿಕ್ಷಣ ಹಕ್ಕು ಕಾಯ್ದೆಯ ಅಡಿಯಲ್ಲಿ ಈಗ ಒಂದರಿಂದ ಎಂಟನೇ ತರಗತಿಯವರೆಗೆ ಉಚಿತ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಅದನ್ನು ಒಂಬತ್ತು ಮತ್ತು ಹತ್ತನೇ ತರಗತಿಗಳಿಗೂ ವಿಸ್ತರಿಸುವ ಕುರಿತು ಪರಿಶೀಲಿಸಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್ಎಪಿ ಅನುದಾನವನ್ನು ಶಿಕ್ಷಣಕ್ಕೆ ಸಂಬಂಧಿಸಿದ ಕೆಲಸಗಳಿಗೆ ಹೆಚ್ಚು ಬಳಕೆ ಮಾಡಬೇಕು. ವಿದ್ಯಾರ್ಥಿನಿಲಯಗಳ ನಿರ್ಮಾಣ ಹಾಗೂ…

Read More

ಬೆಂಗಳೂರಿನ ಖಾಸಗಿ ಹೊಟೇಲ್‌ ನಲ್ಲಿ ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಇನ್ನು ಸಭೆಯ ಆರಂಭದಲ್ಲಿ ತಮ್ಮ ಮಾತು ಆರಂಭಿಸಿರುವ ಸಿಎಂ ಸಿದ್ದರಾಮಯ್ಯ, ಸಭೆ ಕರೆದಿರುವ ಔಚಿತ್ಯದ ಬಗ್ಗೆ ತಿಳಿಸಿದ್ದಾರೆ. ಶಾಸಕರನ್ನ ಕುರಿತು ತಮ್ಮ ಮಾತು ಆರಂಭಿಸಿರುವ ಸಿದ್ಧರಾಮಯ್ಯ, ಹಲವು ದಿನಗಳಿಂದ ಸಭೆ ಕರೆಯಬೇಕಿತ್ತು. ಈ ಹಿಂದೆಯೂ ಕೂಡ ಸಭೆ ನಿಗದಿಯಾಗಿತ್ತು. ಅನಿವಾರ್ಯ ಕಾರಣಗಳಿಂದ ಸಭೆಯನ್ನ ಮುಂದೂಡಲಾಗಿತ್ತು. ನಿಮ್ಮೆಲ್ಲರ ಒತ್ತಡದ ಕಾರಣ ಈಗ ಸಭೆ ಕರೆದಿದ್ದೇವೆ. ಸರ್ಕಾರ ಬಂದು ಎರಡು ತಿಂಗಳು ಮಾತ್ರ ಕಳೆದಿದೆ. ಜನರಿಗೆ ಮಾತು ಕೊಟ್ಟಂತೆ ಐದು ಗ್ಯಾರಂಟಿಗಳನ್ನ ಜಾರಿಗೆ ತರುತ್ತಿದ್ದೇವೆ. ಈಗಾಗಲೇ ಮೂರು ಗ್ಯಾರಂಟಿಗಳ ಜಾರಿಯಿಂದ ಜನರು ಖುಷಿಯಾಗಿದ್ದಾರೆ. ಇತ್ತೀಚೆಗೆ ಬಂದ ಒಂದು ಸಮೀಕ್ಷೆಯಿಂದ ಇದು ಗೊತ್ತಾಗಿದೆ. ನಮ್ಮದು ಜನಪ್ರಿಯ ಸರ್ಕಾರ.ಆದರೆ, ಕೆಲ ಸಚಿವರ ಮೇಲೆ ಶಾಸಕರು ಅಸಮಾಧಾನಗೊಂಡಿದ್ದಾರೆ. ಹಲವು ವಿಚಾರವಾಗಿ ಶಾಸಕರು ಅಸಮಾಧಾನಗೊಂಡಿದ್ದಾರೆ. ನಮಗೆ ಪತ್ರ ಬರೆದು ಸಭೆ ಕರೆಯಲು ಹೇಳಿದ್ದರು. ಏನೇ ಅಸಮಾಧಾನ ಇದ್ದರು, ನಮ್ಮ ಗಮನಕ್ಕೆ ತೆಗೆದುಕೊಂಡು ಬನ್ನಿ,…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ತುಮಕೂರಿನಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿವಾದಾತ್ಮಕವಾಗಿ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ‘ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ Or ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಶಕುಂತಲಾ ಪ್ರಶ್ನಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕೆ. ಜಿ. ಹಳ್ಳಿ- ಡಿ. ಜೆ. ಹಳ್ಳಿ ಗಲಭೆಯಲ್ಲಿ ಪಾಲ್ಗೊಂಡವರು ‘ಅಮಾಯಕರು’ ಎಂದು ರಾಜ್ಯದ ಗೃಹ ಸಚಿವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2020ರ ಆಗಸ್ಟ್ 11ರಂದು ರಾತ್ರಿ 9. 30ರಿಂದ 12. 30ರವರೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಯ ಮೇಲೆ ನಡೆದ ದಾಳಿಯ ಘಟನೆಯನ್ನು ಎಲ್ಲ ಮಾಧ್ಯಮದವರು ತಮ್ಮ ಪ್ರಾಣವನ್ನು ಒತ್ತೆ ಇಟ್ಟಾದರೂ ದೇಶದ ಎಲ್ಲರಿಗೆ ತಲುಪಿಸಿದ್ದರು. ಅಲ್ಲದೆ ಸಂತ್ರಸ್ತರ ನೆರವಿಗೆ ಧಾವಿಸಿದ್ದರು ಎಂದು ವಿವರಿಸಿದರು. ಪೊಲೀಸ್ ವಾಹನಗಳನ್ನು ಸುಡಲಾಗಿತ್ತು. ಪೊಲೀಸ್ ಅಧಿಕಾರಿಗಳಿಗೆ ಹೊಡೆಯಲಾಯಿತು. ಅಮಾಯಕ ಜನರ ಮೇಲೆ ಹಲ್ಲೆ ಮಾಡಿದ್ದರು. ಅಂಥವರ ಬಗ್ಗೆ ‘ಸುಳ್ಳು ಮೊಕದ್ದಮೆಯಲ್ಲಿ ಬಂಧಿತರಾದ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳು ಎಂದು ಗೃಹ ಸಚಿವ ಡಾ. ಪರಮೇಶ್ವರ ಅವರು ತಿಳಿಸಿ ಮೊಕದ್ದಮೆ ವಾಪಸಾತಿಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ’…

Read More