Subscribe to Updates
Get the latest creative news from FooBar about art, design and business.
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
Author: admin
ಚಿಕ್ಕಬಳ್ಳಾಫುರ: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬುವ ರಮೇಶ ಜಾರಕಿಹೊಳೆ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ಗೆ ಅಜೀರ್ಣವಾಗುವಷ್ಟು ಬಹುಮತ ಇದೆ. ಇದು ಸಾಲದು ಅಂತ ಬೇರೆ ಬೇರೆ ಪಕ್ಷಗಳ ಶಾಸಕರ ಸಂಪರ್ಕದಲ್ಲಿ ಇರುವುದಾಗಿ ಹೇಳಿದ್ದಾರೆ. ಕಾಂಗ್ರೇಸ್ ಗೆ ಬೇರೆಯವರ ಹಂಗು ಯಾಕೆ? ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು.
ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು. ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು…
ಬೆಳಗಾವಿ: ವಿಶ್ವ ಖಾತ್ಯ ಹಾಗೂ ಗಿನಿಸ್ ದಾಖಲೆ ಸೃಷ್ಟಿಸಿದ ಪುಟ್ಬಾಲ್ ಆಟಗಾರ ಜಿಮ್ಮಿ ಕ್ಯಾಟ್ ಶಾಲಾ ಮಕ್ಕಳಿಗೆ ಫುಟ್ಬಾಲ್ ತರಬೇತಿ ಹಾಗೂ ಕ್ರೀಡೆಯ ಕುರಿತು ಆಸಕ್ತಿ ಮೂಡಿಸಲು ಪೋತದಾರ್ ಶಿಕ್ಷಣ ಸಂಸ್ಥೆ ಶಾಲೆ ಮಕ್ಕಳಿಗೆ ಫುಟ್ಬಾಲ್ ತರಬೇತಿ ನೀಡುತ್ತಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿನ್ಸಿಪಾಲ್ ಅವರು, ಪ್ಯಾನಿಕ್ ಇಂಡಿಯಾ 140 ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಲೆಗಳನ್ನು ಹೊಂದಿದ್ದು, ಅದರಲ್ಲಿ ಬೆಳಗಾವಿ ಕೂಡ ಒಂದು. 1927 ರಲ್ಲಿ ಸ್ಥಾಪನೆಗೊಂಡ ಪೋತದಾರ್ ಅಂತರಾಷ್ಟ್ರೀಯ ಶಾಲೆ ಶತಮಾನೋತ್ಸವದ ಸನ್ನಿಯದಲ್ಲಿದ್ದೇವೆ, ಎಲ್ಲಾ ರಂಗದಲ್ಲಿ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ ವಿಶೇಷವಾಗಿ ಕ್ರೀಡೆಗೆ ಹೆಚ್ಚಿನ ಆಸಕ್ತಿ ನೀಡಿದ್ದೇವೆ. ಖಾತ್ಯ ಕ್ರೀಡಾಪಟುಗಳಾದ ಜಿಮ್ಮಿ ಕ್ಯಾಟ್ಸ ಅವರಿಂದ ನಮ್ಮ ಶಾಲಾ ಮಕ್ಕಳು ಫುಟ್ಬಾಲ್ ತರಬೇತಿ ಪಡೆಯುತ್ತಿದ್ದಾರೆ ಎಂದರು. ಜಿಮ್ಮಿ ಕ್ಯಾಟ್ಸ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಕ್ಕಳೊಂದಿಗೆ ಫುಟ್ಬಾಲ್ ಕುರಿತು ಹೆಚ್ಚಿನ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದೇನೆ ನನಗೆ ಇಲ್ಲಿ ಸಂತೋಷವಾಗಿದೆ ಮಕ್ಕಳೊಂದಿಗೆ ಆಟವಾಡುತ್ತಾ ಇದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿ ಪರಿಚಿತರಿಗೆ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆಯಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಹಾವೇರಿ: ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಸ್ವಂತ ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿಯಾದ ಘಟನೆ ನಡೆದಿದೆ. ಗೀತಾ ಮರಿಗೌಡ(32), ಮಕ್ಕಳಾದ ಅಕುಲ್(10), ಅಂಕಿತಾ(7) ಕೊಲೆಯಾದವರು. ಮೂವರನ್ನು ಕೊಲೆ ಮಾಡಿ ಮೈದುನ ಕುಮಾರಗೌಡ್(35) ಪರಾರಿಯಾಗಿದ್ದಾನೆ. ಮೃತ ಗೀತಾ ಗಂಡ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳಕ್ಕೆ ಹಾನಗಲ್ ಠಾಣೆ ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ದರ್ಶನ್ ಮನೆ ನಾಯಿ ಮಹಿಳೆಗೆ ಕಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಗೆ ನೋಟಿಸ್ ನೀಡಲು ಆರ್.ಆರ್.ನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಅವರ ಮನೆಯಲ್ಲಿನ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಟ ದರ್ಶನ್ ಪ್ರಕರಣದ ಎರಡನೇ ಆರೋಪಿಯಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದ್ದಾರೆ.
ಛತ್ತೀಸ್ ಗಢದಲ್ಲಿ ಬಿಜೆಪಿ ನಾಯಕ ರತನ್ ದುಬೆ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾವೋವಾದಿಗಳ ದಾಳಿಯಲ್ಲಿ ರತನ್ ದುಬೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾರಾಯಣಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹತ್ಯೆಯ ಹಿಂದೆ ಮಾವೋವಾದಿಗಳ ದಾಳಿ ಇದೆಯೇ ಎಂಬುದು ತನಿಖೆಯ ನಂತರವಷ್ಟೇ ದೃಢಪಡಬಹುದು ಎಂದು ಬಸ್ತಾರ್ ಐಜಿ ಹೇಳಿದ್ದಾರೆ. ಬಿಜೆಪಿ ನಾಯಕ ರತನ್ ದುಬೆ ಅವರನ್ನು ಚುನಾವಣೆಗೆ ಮೂರು ದಿನಗಳ ಮೊದಲು ಹತ್ಯೆ ಮಾಡಲಾಗಿದೆ. ರತನ್ ದುಬೆ ಅವರ ಮೃತದೇಹವನ್ನು ಛತ್ತೀಸ್ ಗಢದ ನಾರಾಯಣಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಭಾರತ ಇಂದು ದುರ್ಬಲ ರಾಷ್ಟ್ರವಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಗತ್ತಿನ ಯಾವುದೇ ಶಕ್ತಿ ಭಾರತಕ್ಕೆ ಬೆದರಿಕೆ ಹಾಕಲು ಧೈರ್ಯ ಮಾಡುವುದಿಲ್ಲ. ಯಾರಾದರೂ ಯಾವುದೇ ದುಷ್ಕೃತ್ಯವನ್ನು ಮಾಡಲು ಪ್ರಯತ್ನಿಸಿದರೆ, ಭಾರತವು ಅವರನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಭಾರತವನ್ನು ವಿದೇಶಿಗರು ದುರ್ಬಲ ರಾಷ್ಟ್ರವಾಗಿ ಕಾಣುತ್ತಿದ್ದರು. ಜಗತ್ತು ನಮ್ಮ ಮಾತನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಇಂದು ಭಾರತದ ಹೆಮ್ಮೆ ಪ್ರಪಂಚದಾದ್ಯಂತ ಏರುತ್ತಿದೆ ಎಂದು ರಕ್ಷಣಾ ಸಚಿವರು ಹೇಳಿದರು. ಇಂದು, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಮಾತುಗಳನ್ನು ಕೇಳಲು ಜಗತ್ತು ಕಾಯುತ್ತಿದೆ. ಈಗ ಭಾರತ ದುರ್ಬಲ ರಾಷ್ಟ್ರವಲ್ಲ. ಜಗತ್ತಿನ ಯಾವುದೇ ಶಕ್ತಿ ಭಾರತಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಯಾರಾದರೂ ಯಾವುದೇ ನೀಚ ಕೃತ್ಯಕ್ಕೆ ಪ್ರಯತ್ನಿಸಿದರೆ, ಭಾರತವು ಗಡಿಯನ್ನು ಲೆಕ್ಕಿಸದೆ ಅವರನ್ನು ನಿರ್ನಾಮ ಮಾಡಬಹುದು ಎಂದರು.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ತೆಲಂಗಾಣ ಮೂಲದ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕಳೆದ ವಾರ ಅಂಬಾನಿಗೆ ಮೂರು ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಪ್ರತಿ ಬಾರಿ ಬೆದರಿಕೆ ಸಂದೇಶದಲ್ಲಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮುಂಬೈ ಗಾಂದೇವಿ ಪೊಲೀಸರು ಗಣೇಶ್ ರಮೇಶ್ ವನಪರ್ಧಿ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 28 ರಂದು ಮೊದಲ ಇಮೇಲ್ ಬಂದಿದೆ. ಅಕ್ಟೋಬರ್ 31ರಿಂದ ನವೆಂಬರ್ 1ರ ನಡುವೆ ಮತ್ತೆರಡು ಬೆದರಿಕೆ ಸಂದೇಶಗಳು ಬಂದಿದ್ದವು. ತನ್ನನ್ನು ಶಹದಾಬ್ ಖಾನ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ಈ ಸಂದೇಶವನ್ನು ಕಳುಹಿಸಿದ್ದಾರೆ. 20 ಕೋಟಿ ನೀಡದಿದ್ದರೆ ಮುಖೇಶ್ ಅಂಬಾನಿ ಅವರನ್ನು ಕೊಲ್ಲುವುದಾಗಿ ಮೊದಲ ಇಮೇಲ್‌ನಲ್ಲಿ ಬೆದರಿಕೆ ಹಾಕಲಾಗಿತ್ತು. ನಂತರದ ಇಮೇಲ್‌ಗಳಲ್ಲಿ ಮೊತ್ತವು 200 ಕೋಟಿ ಮತ್ತು…