Subscribe to Updates
Get the latest creative news from FooBar about art, design and business.
- ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
- ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
- 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
- ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
Author: admin
ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಅವರಿಗೆ ವಾಟ್ಸ್ ಆ್ಯಪ್ ನಲ್ಲಿ ಕರೆ ಮಾಡಿದ ಮಹಿಳೆಯೊಬ್ಬರು ಪೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದು, ಈ ಸಂಬಂಧ ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಜುಲೈ 21ರಂದು ಪ್ರಕರಣ ದಾಖಲಿಸಿಕೊಂಡು ಕರೆ ಮಾಡಿರುವ ಮೊಬೈಲ್ ಸಂಖ್ಯೆ ಆಧರಿಸಿ ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಜುಲೈ 20ರಂದು ಬೆಂಗಳೂರಿನಲ್ಲಿರುವಾಗ ರಾತ್ರಿ 10. 16ರ ಸುಮಾರಿಗೆ ಮಹಿಳೆಯೊಬ್ಬರು ವಾಟ್ಸ್ಆ್ಯಪ್‌ನಲ್ಲಿ ಹೇಗಿದ್ದೀರಾ ಎನ್ನುವ ಸಂದೇಶ ಕಳುಹಿಸಿದ್ದರು. ಇದಕ್ಕೆ ನಾನು ಯಾವುದೇ ರೀತಿಯಲ್ಲೂ ಪ್ರತಿಕ್ರಿಯೆ ನೀಡಿರಲಿಲ್ಲ. ನಂತರ, 10. 22ಕ್ಕೆ ವಿಡಿಯೊ ಕರೆ ಮಾಡಿ ಹಿಂದಿ ಭಾಷೆಯಲ್ಲಿ ಮಾತನಾಡಲು ಆರಂಭಿಸಿದರು. ಕರೆ ಮಾಡುತ್ತಿರುವ ಉದ್ದೇಶದ ಬಗ್ಗೆ ಹಿಂದಿಯಲ್ಲೇ ಪ್ರಶ್ನಿಸಿದೆ. ಆಗ ಅಶ್ಲೀಲ ಪದ ಬಳಕೆ ಮಾಡಿದ್ದರು. ತಕ್ಷಣವೇ ಕರೆ ಕಡಿತಗೊಳಿಸಿದೆ ‘ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ಮತ್ತೆ ವಿಡಿಯೊ ಕರೆ ಮಾಡಿ ಆಕೆಯ ಮುಖ ಹಾಗೂ ಖಾಸಗಿ ಅಂಗಾಂಗ ಪ್ರದರ್ಶನ ಮಾಡಲಾಯಿತು. ಅಸಭ್ಯವಾಗಿ…
ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಾರ್ವೇಶ್ (19) ಎಂಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹೆಣ್ಣೂರು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ‘ಅಸ್ವಸ್ಥಗೊಂಡಿದ್ದ ಮಾರ್ವೇಶ್ ನನ್ನು ಜಿಯಾನ್ ಆಸ್ಪತ್ರೆಗೆ ಸುನೀಲ್ ಎಂಬಾತ ಕರೆ ತಂದು ದಾಖಲಿಸಿದ್ದ. ಅಷ್ಟರಲ್ಲಿಯೇ ವಿದ್ಯಾರ್ಥಿ ಮೃತಪಟ್ಟಿದ್ದ. ಸ್ಥಳಕ್ಕೆ ತೆರಳಿದ ಬಾಣಸವಾಡಿ ಪೊಲೀಸರು, ಪರಿಶೀಲಿಸಿ ಪೋಷಕರಿಗೆ ಮಾಹಿತಿ ನೀಡಿದ್ದರು. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಗೊತ್ತಿದ್ದವರೇ ಮನೆಯ ಬಳಿಗೆ ಮಾರ್ವೇಶ್ ಬಗ್ಗೆ ವಿಚಾರಿಸಿದ್ದರು. ಯುವತಿ ವಿಚಾರಕ್ಕೆ ಗಲಾಟೆ ನಡೆದಿರುವ ಅನುಮಾನವಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಆಗಸ್ಟ್ 4ರಿಂದ 15ರವರೆಗೆ ಲಾಲ್ ಬಾಗ್ ನಲ್ಲಿ ‘ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ’ ಅವರ ವಿಷಯಾಧಾರಿತ 214ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ಕೆಂಗಲ್ ಹನುಮಂತ್ಯಯ ಅವರ ಸಾಧನೆಯನ್ನು ಬಣ್ಣ-ಬಣ್ಣದ ಪುಷ್ಪಗಳಲ್ಲಿ ಅನಾವರಣಗೊಳಿಸಲು ತೋಟಗಾರಿಕೆ ಇಲಾಖೆ ಸಜ್ಜಾಗುತ್ತಿದೆ. ‘ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12. 5 ಕೋಟಿ ವೆಚ್ಚವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ದೇಶದ ಬೇರೆ ಬೇರೆ ರಾಜ್ಯಗಳಿಂದ ತರಹೇವಾರಿ ಹೂವಿನ ಕುಂಡಗಳನ್ನು ಈಗಾಗಲೇ ತೆಗೆದುಕೊಂಡು ಬರಲಾಗಿದೆ. ಗಾಜಿನ ಮನೆಯ ಒಳಾಂಗಣದಲ್ಲಿ ವಿಧಾನಸೌಧ, 14 ಅಡಿ ಎತ್ತರದ ಕೆಂಗಲ್ ಹನುಮಂತಯ್ಯ ಪ್ರತಿಮೆ, ಶಿವಪುರ ಸತ್ಯಾಗ್ರಹ ಸೌಧ, ಕೋಲಾರದ ಹಟ್ಟಿ ಚಿನ್ನದ ಗಣಿ ರಾಷ್ಟ್ರೀಕರಣದಂತಹ ಐತಿಹಾಸಿಕ ಘಟನೆಗಳನ್ನು ಹೂವಿನ ಕಲಾಕೃತಿಗಳಲ್ಲಿ ಮರುಸೃಷ್ಟಿಸಲಾಗುವುದು’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ. ಜಗದೀಶ್ ಮಾಹಿತಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು. ‘ಕೆಂಗಲ್ ಹನುಮಂತಯ್ಯ ಅವರು ರೈಲ್ವೆ…
ಬಿಜೆಪಿಯ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಿಗೆ ಕಿರುಕುಳ ನೀಡಲಾಗಿದೆ ಎಂಬ ಬಗೆಗಿನ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್ಎಲ್) ಹಾಗೂ ಎನ್‌ಐಎ ಕಚೇರಿಯಲ್ಲಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು ವಿಶೇಷ ಕೋರ್ಟ್‌ಗೆ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಬೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಎಫ್‌ಎಸ್ಎಎಲ್ ಮತ್ತು ಎನ್ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು ವಿಶೇಷ ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಎನ್‌ಐಎ ಕಂಪ್ಯೂಟರ್ ಕೋಶ ಮತ್ತು ಸಿಬ್ಬಂದಿಗೆ ಆದೇಶಿಸಿದ್ದು ಅರ್ಜಿ ವಿಲೇವಾರಿ ಮಾಡಿದೆ. ‘ಭಾರತೀಯ ಸಾಕ್ಷ್ಯ ಕಾಯ್ದೆ-1872ರ ಕಲಂ 124 ಮತ್ತು 126ರ ಪ್ರಕಾರ, ಅಧಿಕಾರಿಗಳ ನಡುವೆ ಹಲವು ಗೋಪ್ಯವಾದ ಅಧಿಕೃತ ಸಂವಹನ ನಡೆದಿರುತ್ತದೆ. ಅದನ್ನು ಬಹಿರಂಗಪಡಿಸಲು ಆಗದು’ ಎಂದು…
ಬಾಣಸವಾಡಿಯ ಎಚ್‌ಆರ್‌ಬಿಆರ್ ಲೇಔಟ್ ನಲ್ಲಿ ಪತ್ನಿಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೆಂಚಮ್ಮ(20) ಕೊಲೆಯಾದವರು. ಕೃತ್ಯ ಎಸಗಿದ ಈಕೆಯ ಪತಿ ಸಿದ್ದಪ್ಪ(25) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಆರು ತಿಂಗಳ ಹಿಂದೆ ಕೆಂಚಮ್ಮ ಅವರನ್ನು ಮದುವೆಯಾಗಿದ್ದರು. ಎಚ್‌ಆರ್‌ಬಿಆರ್ ಲೇಔಟ್ ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಸಿದ್ದಪ್ಪ ಗ್ಯಾಸ್ ಸಿಲಿಂಡರ್ ಡೆಲಿವರಿ ಕೆಲಸ ಮಾಡುತ್ತಿದ್ದರೆ ಕೆಂಚಮ್ಮ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ‘ಮಂಗಳವಾರ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಸಿದ್ದಪ್ಪ ಜತೆ ಕೆಂಚಮ್ಮ ಜಗಳವಾಡಿದ್ದರು. ಆಗ ಕೋಪಗೊಂಡ ಕೆಂಚಮ್ಮ ಪತಿಗೆ ಥಳಿಸಿದ್ದರು. ಆಕ್ರೋಶಗೊಂಡ ಆರೋಪಿ, ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಸಂಬಂಧಿಕರಿಗೆ ಕರೆ ಮಾಡಿ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿಸಿದ್ದ’ ಎಂದು ಪೊಲೀಸರು ಹೇಳಿದರು. ಅನುಮಾನಗೊಂಡ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಆರೋಪಿ ತಪ್ಲೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ…
ವರದಕ್ಷಿಣೆ ಕಿರುಕುಳಕ್ಕೆ ಬಿ ಇ ಪದವೀಧರೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಬ್ಬನ್ ಪೇಟೆಯ 2ನೇ ಮುಖ್ಯ ರಸ್ತೆಯ ಮನೆಯಲ್ಲಿ ಘಟನೆ ನಡೆದಿದೆ. 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ. ಮೂಲತಃ ಹೊಸೂರಿನವಳಾದ ಐಶ್ವರ್ಯಳನ್ನು 2020 ರಲ್ಲಿ ಕಬ್ಬನ್ ಪೇಟೆಯ ರಾಜೇಂದ್ರನ್ ಮತ್ತು ರತ್ನಾ ದಂಪತಿ ಪುತ್ರ ಮಂಜುನಾಥ್ ಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ವೇಳೆ 240. ಗ್ರಾಂ ಚಿನ್ನಾಭರಣ ಮತ್ತು 2 ಲಕ್ಷ ವರದಕ್ಷಿಣೆ ನೀಡಲಾಗಿತ್ತು. ಆದರೆ ಮದುವೆ ಬಳಿಕ ಮಂಜುನಾಥ್ ಕುಟುಂಬಸ್ಥರು ಹೆಚ್ಚಿನ ವರದಕ್ಷಿಣೆ ತರುವಂತೆ ಕಾಟ ಕೊಡುತ್ತಿದ್ದರು. ಹೀಗಾಗಿ ಕಳೆದ ಎಂಟು ತಿಂಗಳ ಹಿಂದೆ ಐಶ್ವರ್ಯಾ ತಾಯಿ ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಬಿಚ್ಚಿಕೊಟ್ಟು, 5 ಲಕ್ಷ ಹಣ ನೀಡಿ, ಮಗಳನ್ನ ಚೆನ್ನಾಗಿ ನೋಡಿಕೊಳ್ಳುವಂತೆ ಹೇಳಿ ಹೋಗಿದ್ದರಂತೆ. ಆದರೆ ಧನದಾಹಿ ಕುಟುಂಬದವರು ಮತ್ತಷ್ಟು ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಕಬ್ಬನ್ ಪೇಟೆಯ ಪತಿ ಮನೆಯಲ್ಲಿ ಡೆತ್ ನೋಟ್…
ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿ ಎಂದು ರಾಜ್ಯದ ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಘಟನೆ ನಡೆದ ಕುರಿತು ಆರೋಪಿತ ವಿದ್ಯಾರ್ಥಿನಿಯರೇ ತನ್ನೊಪ್ಪಿಗೆ ಪತ್ರ ನೀಡಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಘಟನೆ ನಡೆದುದು ನಿಜ. ಇದನ್ನು ಹಗುರವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗುತ್ತಿದೆ. ಇದಕ್ಕೆ ಓಲೈಕೆ, ಜಿಹಾದಿ ರಾಜಕಾರಣ ಕಾರಣ ಎಂದು ಟೀಕಿಸಿದರು. ಕಂಡಿಷನ್ ಇಲ್ಲದೆ ಮತ ಹಾಕಿಸಿಕೊಂಡಿದ್ದೀರಿ. ಎಲ್ಲರಿಗೂ ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಕೊಡಿ ಎಂದ ಅವರು, ಕೇಂದ್ರದ ಅನುದಾನ, ರಾಜ್ಯದ ಕರ ಸಂಗ್ರಹಗಳನ್ನು ಬಳಸಿಕೊಳ್ಳಿ.…
ಚಾಮರಾಜಪೇಟೆ ಕ್ಷೇತ್ರದ ಜಾಲಿ ಮೊಹಲ್ಲಾ ಹಾಗೂ ಭಕ್ಷಿ ಗಾರ್ಡನ್ ಕೊಳೆಗೇರಿಯಲ್ಲಿ ವಾಸಿಸುವ 262 ಕುಟುಂಬಗಳಿಗೆ ಶಾಶ್ವತ ವಸತಿ ವ್ಯವಸ್ಥೆ ಕಲ್ಪಿಸುವ ಬೇಡಿಕೆ ಕುರಿತು ಸ್ಥಳೀಯ ಶಾಸಕರು ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಪ್ರಧಾನ ಅಭಿಯಂತರ ಬಲರಾಜು, ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್ ಅವರೊಂದಿಗೆ ಪರಿಶೀಲನೆ ನಡೆಸಿ, ಭಕ್ಷಿ ಗಾರ್ಡನ್ ನಲ್ಲಿ ರಾಜಕಾಲುವೆ ಮೇಲೆ 52 ಕುಟುಂಬ ಗುಡಿಸಲು ನಿರ್ಮಿಸಿಕೊಂಡಿರುವ ಹಿನ್ನೆಲೆ ಯಲ್ಲಿ ಪರ್ಯಾಯ ಜಾಗದ ಬಗ್ಗೆಯೂ ಸಮೀಕ್ಷೆ ನಡೆಸುವಂತೆ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸಮಯ ಬೇಕಾದ ಕಾರಣ ಬೇರೆ ಕಡೆ ತಾತ್ಕಾಲಿಕವಾಗಿ ಶಿಫ್ಟ್ ಮಾಡುವ ಬಗ್ಗೆಯೂ ಪರಿಶೀಲಿಸಿ ಹದಿನೈದು ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದರು. ಹತ್ತಾರು ವರ್ಷಗಳಿಂದ ಇದೇ ಸ್ಥಳದಲ್ಲಿ ವಾಸಿಸುತ್ತಿದ್ದು ಶಾಶ್ವತ ಸೂರು ಕಲ್ಪಿಸಬೇಕು ಎಂದು ಸ್ಥಳೀಯರು ಸಚಿವರಲ್ಲಿ ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಪಿಡಿಒ ವರ್ಗಾವಣೆ ಸಂಬಂಧ ಹೆಚ್.ಡಿ.ರೇವಣ್ಣ ಬಳಿ ಯಾವ ಪೆನ್ ಡ್ರೈವ್ ಇದೆಯೋ ಅದನ್ನು ಕೊಡಲಿ” ಎಂದು ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಸಚಿವರೇ ಡೀಲ್ ಮಾಡ್ತಿದ್ದಾರೆ ಎಂಬ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ”ರೇವಣ್ಣ ಬಹಳ ಹುಷಾರು ಅನ್ನೊಂಡಿದ್ದೆ. ಹೌದು, ನೇರವಾಗಿ ಪಿಡಿಒ ವರ್ಗಾವಣೆ ಸರ್ಕಾರದ ಮಟ್ಟದಲ್ಲಿ ಆಗುತ್ತದೆ. ಪಿಡಿಒಗಳು ಈಗ ಸ್ಟೇಟ್ ಕೇಡರ್‌ನಲ್ಲಿ ಬರುತ್ತಾರೆ. ಮೊದಲು ಸಿಇಒ ಹಾಗೂ ಕಮಿಷನರ್ ಹಂತದಲ್ಲಿ ಪಿಡಿಒ ಆಗುತ್ತಿತ್ತು. ಈ ಕುರಿತು ಡೀಲ್ ಏನಾದ್ರೂ ನಡೆದಿದ್ದರೆ, ದಾಖಲೆ ಇದ್ದರೆ ಕೊಡಿ” ಎಂದರು. ವರ್ಗಾವಣೆ ಮಾಡಬೇಕು, ಕಾನೂನು ಪ್ರಕಾರವೇ ಅದು ಆಗುತ್ತೆ. ಪಿಡಿಒ ಅಸೋಸಿಯೇಷನ್ ಅವರನ್ನು ಕರೆದು ಕೇಳಲಿ. ರೇವಣ್ಣ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾರೆ. ಪ್ರಸ್ತುತ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಹೀಗೆಲ್ಲ ಮಾತನಾಡುತ್ತಾರೆ’ ಎಂದು ತಿರುಗೇಟು ನೀಡಿದರು. ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ”ಈ ಹಿಂದೆ, ಎರಡು ಬಾರಿ ಶಾಸಕಾಂಗ ಸಭೆ ಮುಂದೂಡಿದ್ದರು. ಬಿ.…
ವಿವಾಹ ವಿಚ್ಛೇದನ ಸೇರಿದಂತೆ ವೈವಾಹಿಕ ಪ್ರಕರಣಗಳ ವಿಲೇವಾರಿಗೆ ವಿಳಂಬವಾಗದಂತೆ ಗರಿಷ್ಠ ಒಂದು ವರ್ಷದ ಮಿತಿಯಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ತನ್ನ ವಿವಾಹ ವಿಚ್ಚೇದನ ಅರ್ಜಿಯನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್ ರಾಜೀವ್ ಎಂಬುವರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಮನುಷ್ಯ ಜೀವನದ ಅಲ್ಪಾವಧಿ ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ರೀತಿ ಕೌಟುಂಬಿಕ ಪ್ರಕರಣಗಳು ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ತಿಳಿಸಿದೆ. ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಸ್ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲ ಇತಿಹಾಸಕಾರರೊಬ್ಬರ ಹೇಳಿಕೆಯನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಗರಿಷ್ಠ ಒಂದು ವರ್ಷದ ಮಿತಿಯೊಳಗೆ…