Subscribe to Updates
Get the latest creative news from FooBar about art, design and business.
- ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
- ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
- ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
- ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
- 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
- ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
Author: admin
ಡಾ.ವಡ್ಡಗೆರೆ ನಾಗರಾಜಯ್ಯ ಕಾಡುಗೊಲ್ಲ ಸಮುದಾಯದ ಪುರಾತನ ಪದ್ದತಿಯ ಪ್ರಕಾರ ಊರಾಚೆ ಪ್ರತ್ಯೇಕವಾದ ತಾತ್ಕಾಲಿಕ ಗುಡಿಸಲಿನಲ್ಲಿ ಬಾಣಂತಿಯೊಬ್ಬಳು ತನ್ನ ನವಜಾತ ಶಿಶುವಿನೊಂದಿಗೆ ವಾಸವಿದ್ದಾಗ ಮಳೆಗೆ ಸಿಕ್ಕಿ ನವಜಾತ ಶಿಶು ಸತ್ತುಹೋಗಿರುವ ಸುದ್ದಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಕಾಡುಗೊಲ್ಲರ ಹಟ್ಟಿಯಲ್ಲಿ ಸಂಭವಿಸಿರುವ ಈ ಘಟನೆ ಕರ್ನಾಟಕ ಮತ್ತು ಕರ್ನಾಟಕದ ಆಚೆಗೂ ನೆಲೆಸಿರುವ ಎಲ್ಲಾ ಕಾಡುಗೊಲ್ಲ ಸಮುದಾಯದ ಜನರ ಸಾಮಾಜಿಕ ವಾಸ್ತವತೆಗೆ ಕನ್ನಡಿ ಹಿಡಿಯುತ್ತದೆ. ಕರ್ನಾಟಕದ ರಾಜಧಾನಿಯಾಗಿರುವ ಬೆಂಗಳೂರು ಮೆಟ್ರೋಪಾಲಿಟನ್ ಮಹಾನಗರದ ನಾಗದೇವನಹಳ್ಳಿಯ ಕಾಡುಗೊಲ್ಲರು ಈಗಲೂ ತಮ್ಮ ಹೆಣ್ಣುಮಕ್ಕಳು ಮುಟ್ಟಾದಾಗ ಮತ್ತು ಹೆರಿಗೆಯ ಸಮಯದಲ್ಲಿ ಮೂರು ತಿಂಗಳು ಮನೆಯಾಚೆ ಪ್ರತ್ಯೇಕವಾದ ಗುಡಿಸಲು ಅಥವಾ ಕುಟೀರಗಳಲ್ಲಿರಿಸುವ ಪದ್ದತಿಯನ್ನು ಅನುಸರಿಸುತ್ತಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಕಾಡುಗೊಲ್ಲ ಸಮುದಾಯದ ಬಹುತೇಕ ಜನ ಇಂದಿಗೂ ಕಳ್ಳೆಬೇಲಿಯೊಳಗಿನ ಹಟ್ಡಿಗಳಲ್ಲಿ ಹುಲ್ಲುಗುಡಿಸಲಿನ ಗುಡಿಗಳಲ್ಲಿ ತಮ್ಮದೇ ಸಾಂಸ್ಕೃತಿಕ ನಾಯಕರನ್ನು ದೇವರುಗಳೆಂದು ಆರಾಧಿಸುತ್ತಾ ಹುಲ್ಲುಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಹೆಣ್ಣುಮಕ್ಕಳನ್ನು ಮುಟ್ಟುಚೆಟ್ಟು, ಬಾಣಂತಿ ಸಮಯಗಳಲ್ಲಿ ಮಡಿಮೈಲಿಗೆ ಸೂತಕವೆಂದು ಮನೆಯಾಚೆ ಪ್ರತ್ಯೇಕವಾಗಿ ಗುಡಿಸಲುಗಳಲ್ಲಿರಿಸುವ ಮೂಢ…
ತುಮಕೂರು: ಸಂಪನ್ಮೂಲ ಕೊರತೆಯಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಿತ್ತು ಹೀಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಇದಕ್ಕಾಗಿ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಎಂಟು ವರ್ಷಗಳ ಅಧಿಕಾರ ನಡೆಸಿರುವ ಮಾದರಿಯ ಆಡಳಿತ ಕುರಿತು ರಾಜ್ಯದಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. ದೆಹಲಿ ಸರ್ಕಾರದಲ್ಲಿ ಕೇಜ್ರಿವಾಲ್ ಅವರ ಯೋಜನೆಗಳನ್ನು ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅನುಷ್ಠಾನಗೊಳಿಸಿರುವಂತಹ, ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಅನುಷ್ಠಾನಕ್ಕೆ ಸುಳ್ಳು ಹೇಳಿರುವಂತಹುದು ಸ್ಪಷ್ಟವಾಗಿದೆ ಎಂದು ತಿಳಿಸಿದರು. ಈ ಹಿಂದಿನ ಸರ್ಕಾರದಲ್ಲಿ 40 ಪರ್ಸೆಂಟ್ ಸರ್ಕಾರ ಎಂದು ದೂರಿದ ಕಾಂಗ್ರೆಸ್ಸಿಗರು ಇದೀಗ ಯಾವುದೇ ಬಿಲ್ ಗಳು ಇಲ್ಲದೆ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಪರೀತ ಸಾಲ ಮಾಡಿದೆ ಈ ಮೂಲಕ ಜನರ ಮೇಲೆ ಇದರ ಹೊರೆಯನ್ನು…
ನಮ್ಮತುಮಕೂರು ವರದಿ: ಹೆರಿಗೆ ನಂತರ ಬಾಣಂತಿ ಜೊತೆಗೆ ಬೆಳ್ಳಾವಿ ಹೋಬಳಿ ಮಲ್ಲೇನಹಳ್ಳಿ ಊರಾಚೆ ಜಮೀನಿನ ಗುಡಿಸಲಿನಲ್ಲಿ ಇಡಲಾಗಿದ್ದ ನವಜಾತ ಶಿಶು ಅನಾರೋಗ್ಯದಿಂದ ಸಾವನ್ನಪ್ಪಿದ ಹಿನ್ನಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ನೂರುನ್ನೀಸ ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೃತ ಮಗುವಿನ ಪೋಷಕರ ಆಹವಾಲು ಸ್ವೀಕರಿಸಿದ ನ್ಯಾಯಾಧೀಶರು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ, ಮಗು ಮೃತಪಟ್ಟ ನಂತರವೂ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯನ್ನು ಲೆಕ್ಕಿಸದೆ ತಾಯಿಯನ್ನು ಹಟ್ಟಿಯ ಒಳಗಡೆ ವಾಸ ಮಾಡಲು ಬೀಡದೆ ಊರಾಚೆಯ ಗುಡಿಸಿಲಿನಲ್ಲಿಯೇ ಒಂಟಿಯಾಗಿ ಇರಿಸಲಾಗಿರುವ ಮಾಹಿತಿ ಪಡೆದ ಅವರು, ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು ಕೆಡವಿಸಿ, ಬಾಣಂತಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ ನ್ಯಾಯಾಧೀಶರು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು. ಆರೋಗ್ಯದ ಹೆಚ್ಚಿನ ನಿಗಾ ಅವಶ್ಯಕತೆ ಇರುವ ಬಾಣಂತಿ ಮತ್ತು ಮಗುವನ್ನು ಊರಾಚೆಯ ಗುಡಿಸಲಿನಲ್ಲಿಯೇ…
ಬೆಂಗಳೂರು: ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕ, ಮಣ್ಣು ಪರೀಕ್ಷೆ ಈ ರೀತಿ ಹಲವಾರು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ದೇಶದಾದ್ಯಂತ ಸುಮಾರು ಒಂದು ಲಕ್ಷ ಇಪ್ಪತೈದು ಸಾವಿರ (1.25) ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮ ಸ್ವಾಗತಾರ್ಹ ಮತ್ತು ಅವರಿಗೆ ರಾಜ್ಯದ ರೈತರ ಪರವಾಗಿ ಧನ್ಯವಾದಗಳು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಮೂಲಕ ಎಲ್ಲ ಕೇಂದ್ರಗಳಲ್ಲಿ ರೈತರಿಗೆ ಈ ರೀತಿ ಒಂದೇ ಸೂರಿನಡಿ ಹಲವಾರು ಸೇವೆಗಳ ಸೌಲಭ್ಯ ದೊರೆಯಲಿದೆ. ಈ ಸಮೃದ್ದಿ ಕೇಂದ್ರಗಳನ್ನು ದೇಶದ ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಕೃಷಿ ವಿಶ್ವವಿದ್ಯಾಲಯದೊಂದಿಗೆ ನೇರವಾಗಿ ಸಂಪರ್ಕ ಹೊಂದುವ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ರೈತರು ಸ್ಪರ್ಧೆ ಮಾಡುವ ದೃಷ್ಟಿಯಿಂದ ಅವರಿಗೆ ಬೇಕಾದ ಅಗತ್ಯ ತಾಂತ್ರಿಕ ಸಲಹೆಗಳು, ಉಳಿದ ಎಲ್ಲ ಸೌಲಭ್ಯಗಳನ್ನು ಈ…
ತುಮಕೂರು: ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ ಎನ್ನಲಾದ ಶೌಚಗೃಹದಲ್ಲಿ ವೀಡಿಯೋ ಮಾಡಿರೋ ಕುರಿತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಬಿಜೆಪಿ ಮುಖಂಡರು ಗೃಹ ಸಚಿವರು ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸುತ್ತಿದೆ. ಹೀಗಾಗಿ ಇದರಲ್ಲಿ ಆರೋಪಿಗಳನ್ನು ರಕ್ಷಿಸುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಾವೇರಿ ಕೊಳ್ಳದ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆ ಆರ್ ಎಸ್ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಇನ್ನು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ಜಲಾಶಯದಲ್ಲಿ ನೀರಿನ ಮಟ್ಟ 108. 18 ಅಡಿಗಳಿದೆ ಏರಿಕೆಯಾಗಿದೆ. ಇತ್ತ ಜಲಾಶಯದ ಸಂಪೂರ್ಣ ಚಿತ್ರಣ ನೋಡುವುದಾದ್ರೆ, ಗರಿಷ್ಠ ಮಟ್ಟ – 124.80 ಅಡಿಗಳು. ಇಂದಿನ ಮಟ್ಟ – 108. 18. ಗರಿಷ್ಠ ಸಾಂದ್ರತೆ – 49.452 ಟಿಎಂಸಿ. ಇಂದಿನ ಸಾಂದ್ರತೆ – 29.931 ಟಿಎಂಸಿ. ಒಳ ಹರಿವು – 40, 341 ಕ್ಯೂಸೆಕ್, ಹೊರ ಹರಿವು – 4, 106 ಕ್ಯೂಸೆಕ್ ಎಂದು ಮಾಹಿತಿ ಬಿಡುಗಡೆಯಾಗಿದೆ. ಇನ್ನು ಇದೇ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಬಂದರೆ, ಮುಂದಿನ 15 ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಅಭಾವವು ದೂರಾಗಲಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ರಾಜಧಾನಿಯಲ್ಲಿ ಉಗ್ರ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪದಡಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಇಂದು ಅಂತ್ಯ ಹಿನ್ನೆಲೆ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಹಾಜರುಪಡಿಸಲಾಗಿತ್ತು. ಬಳಿಕ ಎನ್‌ಐಎ ವಿಶೇಷ ನ್ಯಾಯಾಲಯ ಆರೋಪಿಗಳನ್ನು ಮತ್ತೆ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತು. ನಗರದಲ್ಲಿ ವಿಧ್ವಂಸಕ ಕೃತ್ಯವೆಸಲು ಸಂಚು ರೂಪಿಸಿದ್ದು, ಈ ಸಂಬಂಧ ಶಂಕಿತರಿಂದ ಗ್ರೆನೇಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಉಗ್ರ ಕೃತ್ಯವೆಸಗಲು ತಯಾರಿ ನಡೆಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಶಂಕಿತರನ್ನ ತೀವ್ರ ವಿಚಾರಣೆಗೊಳಪಡಿಸಬೇಕಿದೆ. ಅಲ್ಲದೇ ಶಂಕಿತರ ಹಿಂದೆ ಹಲವು ವ್ಯಕ್ತಿಗಳ ಕೈವಾಡವಿದೆ. ಹೀಗಾಗಿ ಆರೋಪಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕಿದೆ. ಹೀಗಾಗಿ 15 ದಿನಗಳ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿ ಅಂತಿಮವಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಲಯ ಸಮ್ಮತಿಸಿತು. ಸದ್ಯ ಮಡಿವಾಳದ ಎಫ್‌ಎಸ್‌ಎಲ್ ನ ವಿಚಾರಣಾ ಕೊಠಡಿಯಲ್ಲಿ ಸಿಸಿಬಿ ಶಂಕಿತರನ್ನು…
ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಗೆ ಪಿಂಚಣಿ ಮತ್ತು ಹಿಂಬಾಕಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿ ಆದೇಶಿಸಿದೆ. ಪಿಂಚಣಿ ಮತ್ತು ಹಿಂಬಾಕಿ ಪಾವತಿಸಲು ಸೂಚನೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಮತ್ತು ಕೆ. ರಾಜೇಶ್ ರೈ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೇ, ಕೇಂದ್ರ ಸರ್ಕಾರಿ ಸನ್ಮಾನ್ ಪಿಂಚಣಿ ಯೋಜನೆಯ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 2014ರಲ್ಲಿ ಮಾರ್ಗಸೂಚಿ ಪ್ರಕಟಿಸಿದೆ. ಅದನ್ನು ರಾಜ್ಯ ಸರ್ಕಾರ ಸಹ ಪಾಲಿಸುತ್ತಿದೆ. ಆ ಮಾರ್ಗಸೂಚಿ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಅಥವಾ ಹೋರಾಟಗಾರ್ತಿ ಸಾವನ್ನಪ್ಪಿದ ನಂತರ ಅವರ ಹೆಸರಿನಲ್ಲಿ ಪಿಂಚಣಿ ವಿತರಿಸುವಂತಿಲ್ಲ. ಜತೆಗೆ, ಹೋರಾಟಗಾರ ಮತ್ತು ಹೋರಾಟಗಾರ್ತಿ ವಿಷಯವು ಪರಿಶೀಲನೆಯಲ್ಲಿದ್ದರೂ ಸಹ ಪಿಂಚಣಿ ಪಾವತಿಸುವಂತಿಲ್ಲ. ಅದರಂತೆ ರಾಜ್ಯ ಸರ್ಕಾರವು ಪ್ರಕರಣದಲ್ಲಿ…
ಬೆಂಗಳೂರಿನ ಸೂಲಿಕುಂಟೆ ಸ್ಲಂ ಬೋರ್ಡ್ ಮನೆಗಳ ಬಳಿ ಸ್ಥಳೀಯರೊಂದಿಗೆ ಕೂಡಿ ಪ್ರತಿಭಟನೆ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಕೊಡತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲಿಕುಂಟೆ ಗ್ರಾಮದಲ್ಲಿ 50% ಮೀಸಲಾತಿ ಅಡಿ ಬರುವ ಸ್ಲಂ ಬೋರ್ಡ್ ಮನೆಗಳನ್ನು ಸ್ಥಳೀಯರಿಗೆ ನೀಡದಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಸೂಲಿಕುಂಟೆ ಸ್ಲಂ ಬೋರ್ಡ್ ಮನೆಗಳ ಬಳಿ ಸ್ಥಳೀಯರೊಂದಿಗೆ ಕೂಡಿ ಶಾಸಕಿ ಮಂಜುಳಾ ಲಿಂಬಾವಳಿ ಪ್ರತಿಭಟನೆ ನಡೆಸಿದರು. ಈ ವೇಳೆ ನಗರ ಮಂಡಲ ಅಧ್ಯಕ್ಷರಾದ ಮನೋಹರ ರೆಡ್ಡಿ, ಮಹದೇವಪುರ ಟಾಸ್ಕ್ ಫೋರ್ಸ್‌ನ ಸಾಮಾಜಿಕ ಮತ್ತು ಸಬಲೀಕರಣ ಅಧ್ಯಕ್ಷರಾದ ವೆಂಕಟಸ್ವಾಮಿ ರೆಡ್ಡಿ ಸೇರಿದಂತೆ ಮುಖಂಡರು ಸ್ಥಳೀಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾಗುವ ಬೆಳೆಗೆ ವಿಪತ್ತು ಪ್ರತಿಕ್ರಿಯೆ ನಿಧಿಯಡಿ ನೀಡುವ ಇನ್ ಪುಟ್ ಸಬ್ಸಿಡಿ ಪರಿಷ್ಕರಿಸಿ ಹೆಚ್ಚವರಿ ಮೊತ್ತದೊಂದಿಗೆ ಪರಿಷ್ಕತ ಪರಿಹಾರದ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪ್ರವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತಿದೆ. ಪ್ರತಿ ವರ್ಷ ಬೆಳೆಹಾನಿ ಆಗುವ ಪ್ರಕರಣಗಳಿಗೆ ವಿಪತ್ತು ಪ್ರತಿಕ್ರಿಯೆ ನಿಧಿಯ ಮಾರ್ಗಸೂಚಿಯಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರವನ್ನು(ಇನ್ ಪುಟ್ ಸಬ್ಸಿಡಿ) ಪಾವತಿಸಲಾಗುತ್ತಿದೆ. 2023ನೇ ಸಾಲಿನ ಮುಂಗಾರ ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ, ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ವಿಪತ್ತ ಪ್ರತಿಕ್ರಿಯೆ ನಿಧಿ ಮಾರ್ಗಸೂಚಿಯಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ, ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ ಪುಟ್ ಸಬ್ಸಿಡಿ…