Subscribe to Updates
Get the latest creative news from FooBar about art, design and business.
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
Author: admin
ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ ಸಿ ಕೇಬಲ್ ತೆರವು ಪ್ರಾರಂಭಿಸಲಾಗಿದೆ. ಅನಧಿಕೃತ ಓಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಸಲು ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ಹೀಗಾಗಿ ವಲಯ ಆಯುಕ್ತ ಇಬ್ರಾಯಿಮ್ ಮೈಗುರ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅನಧಿಕೃತವಾಗಿ ಅಳವಡಿಸಿರುವ ಓ. ಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಯಲಿದೆ.
ತನ್ನ ಪತ್ನಿಗೆ ಹಲ್ಲೆ ಮಾಡುವ ದೃಶ್ಯ ಕಂಡು, ಪತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಂದ್ರಲೇಔಟ್ ನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಮುದಾಸೀರ್ ಖಾನ್ ಮೃತ ವ್ಯಕ್ತಿ. ನನ್ನ ಮೇಲೆ ವಾಹಿದ್ ಅಹ್ಮದ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದರು. ಇದನ್ನ ನೋಡಿದ ನನ್ನ ಪತಿ ಮುದಾಸೀರ್ ಖಾನ್ ಗೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ಗಂಡನ ಸಾವಿನ ಬಗ್ಗೆ ಮಹಿಳೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಾಹಿದ್ ಹಾಗೂ ಆತನ ಸಹೋದರ ಮತಿನ್ ಎಂಬುವವರನ್ನು ಬಂಧಿಸಲಾಗಿದೆ.
ಸುರಕ್ಷಿತ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 70 ಆಟದ ಮೈದಾನಗಳಲ್ಲಿ 426 ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆಟದ ಮೈದಾನ ಮತ್ತು ಅಲ್ಲಿ ತೆರೆಯಲಿರುವ ತಾತ್ಕಾಲಿಕ ಮಳಿಗೆಗಳ ಪಟ್ಟಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ರವಾನಿಸಿದೆ. ಅತ್ತಿಬೆಲೆಯಲ್ಲಿ ಸಂಭವಿಸಿದ ಭೀಕರ ಪಟಾಕಿ ದುರಂತದಿಂದ ಎಚ್ಚೆತ್ತುಕೊಂಡ ಪಾಲಿಕೆ ಈ ನಿರ್ಧಾರಕ್ಕೆ ಬಂದಿದೆ.
ಶಿವಾಜಿನಗರ ಠಾಣೆ ವ್ಯಾಪ್ತಿಯ ಕಂಟೋನ್ಮಂಟ್ ರೈಲು ನಿಲ್ದಾಣ ಬಳಿ ಪತ್ರಿಕಾ ವಿತರಕ ಆಂಥೋನಿ ಸಿ. (75) ಅವರನ್ನು ಅಡ್ಡಗಟ್ಟಿ ತೊಡೆಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಠಾಣೆ ವ್ಯಾಪ್ತಿಯ ಸರಸ್ವತಿಪುರದಲ್ಲಿ ಪತ್ರಿಕಾ ವಿತರಕರೊಬ್ಬರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಪೊಲೀಸರು ಸಮರ್ಪಕವಾಗಿ ಗಸ್ತು ತಿರುಗುತ್ತಿಲ್ಲವೆಂಬ ಆರೋಪ ವ್ಯಕ್ತವಾಗಿದೆ.
ಒಡಿಶಾದಿಂದ ರೈಲಿನಲ್ಲಿ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರುತ್ತಿದ್ದ ಆರೋಪಿ ಹರ್ಷವರ್ಧನ್(25) ನನ್ನು ಆಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹರ್ಷವರ್ಧನ್, ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ, ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಈತನಿಂದ 12 ಕೆ. ಜಿ 50 ಗ್ರಾಂ ಗಾಂಜಾ ಹಾಗೂ ಸರಕು ಸಾಗಣೆ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ರಾಜ್ಯ ರಾಜಧಾನಿಯಲ್ಲಿ ಕ್ವಾರ್ಟರ್ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಕಳ್ಳನ ಬಂಧನವಾಗಿದೆ. ಲಕ್ಷ್ಮಣ್ ಬಂಧಿತ ಆರೋಪಿಯಾಗಿದ್ದಾನೆ. ದಿನ ಮದ್ಯ ಸೇವಿಸಬೇಕೆಂದು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಒಂದು ಕ್ವಾರ್ಟರ್ ಎಣ್ಣೆಗಾಗಿ ಕಳ್ಳತನ ಮಾಡಿದ್ದ ಅಪಾಚಿ ಬೈಕ್ ಮಾರಿದ್ದ ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿ ಮಾರುತ್ತಿದ್ದ ಆಸಾಮಿ, ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಬಿಟ್ಟು ಹೋಗುತ್ತಿದ್ದ.
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎರಡು ವರ್ಷದ ಯಾದ್ವಿ ಎಂಬ ಹೆಣ್ಣುಮಗುವನ್ನು ಪೋಷಕರು ಸಂಜೀವಿನಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಈ ವೇಳೆ ಜ್ವರ ಹೆಚ್ಚಾಗಿದ್ದರಿಂದ ವೈದ್ಯರು, ಡ್ರಿಪ್ಸ್ ಮೂಲಕ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭೂಕಂಪದಲ್ಲಿ ಭಾರಿ ಹಾನಿಗೊಳಗಾದ ನೇಪಾಳಕ್ಕೆ ಭಾರತ ಸಕಲ ನೆರವು ನೀಡಿದೆ. ಭಾರತದ ಪ್ರಕಾರ, ಕಳೆದ ರಾತ್ರಿಯ ಭೂಕಂಪವು 2015 ರಿಂದ ಪ್ರಬಲವಾಗಿದೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನಾ ಹೆಲಿಕಾಪ್ಟರ್‌ಗಳು ಪರಿಹಾರ ಕಾರ್ಯಕ್ಕಾಗಿ ನೇಪಾಳ ತಲುಪಿವೆ. ಭೂಕಂಪದಲ್ಲಿ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಇದುವರೆಗೆ 125 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನಿನ್ನೆ ರಾತ್ರಿ 11.30ಕ್ಕೆ ಭೂಕಂಪದ ಅನುಭವವಾಗಿದೆ. ಹಲವೆಡೆ ವಿದ್ಯುತ್ ಸರಬರಾಜು ವ್ಯವಸ್ಥೆ ಮತ್ತು ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಭೂಕಂಪ ಪೀಡಿತ ಪ್ರದೇಶಗಳಿಗೆ ನೇಪಾಳ ಪ್ರಧಾನಿ ಭೇಟಿ. ಅದೇ ಸಮಯದಲ್ಲಿ, ಭಾರತ ಸೇರಿದಂತೆ ರಾಜ್ಯಗಳಲ್ಲಿಯೂ ಭೂಕಂಪದ ಕಂಪನದ ಅನುಭವವಾಯಿತು. ರಾತ್ರಿ ವೇಳೆ ಅವಘಡ ನಡೆದಿದ್ದರಿಂದ ರಕ್ಷಣಾ ಕಾರ್ಯ ತುಂಬಾ ಕಷ್ಟಕರವಾಗಿತ್ತು. 6.4 ತೀವ್ರತೆಯ ಭೂಕಂಪವು ಒಂದು ತಿಂಗಳಲ್ಲಿ ಈ ಪ್ರದೇಶದಲ್ಲಿ ಮೂರನೇ ಭೂಕಂಪವಾಗಿದೆ. ಏತನ್ಮಧ್ಯೆ, ನಿನ್ನೆಯ ದುರಂತದಲ್ಲಿ ನೇಪಾಳದ ಉಪ ಮೇಯರ್ ನಲ್ಗಢ್ ಮತ್ತು ಅವರ ಕುಟುಂಬ…
ಜೆಡಿಯು ನಾಯಕ ಮಹಿಳಾ ಪೇದೆ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಲು ಯತ್ನಿಸಿದ್ದಾರೆ. ಬಿಹಾರದ ಸಹರ್ಸಾದಲ್ಲಿ ನಾಟಕೀಯ ಘಟನೆಗಳು ತೆರೆದುಕೊಂಡಿವೆ. ಆರೋಪಿ ಜೆಡಿಯು ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಬಿಡುಗಡೆಯಾಗಿದೆ. ನವೆಂಬರ್ 1ರ ರಾತ್ರಿ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು. ಇದೇ ವೇಳೆ ಪೊಲೀಸರು ಕೆಲವರನ್ನು ತಡೆಯಲು ಯತ್ನಿಸಿದರು. ಆದರೆ ಪೊಲೀಸರ ತಪಾಸಣೆಯಿಂದ ಬ್ಯಾರಿಕೇಡ್ ಮುರಿದು ಪರಾರಿಯಾಗಿದ್ದಾರೆ. ಪೊಲೀಸರು ಬುಧವಾರ ರಾತ್ರಿ ಅವರ ಮನೆಗಳಲ್ಲಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಜೆಡಿಯು ಮುಖಂಡ ಚುನ್ನ ಮುಖ್ಯ ಆರೋಪಿಯನ್ನು ಬಚ್ಚಿಟ್ಟಿರುವ ಮಾಹಿತಿ ಮೇರೆಗೆ ಪೊಲೀಸರು ಆತನ ಮನೆಗೆ ಆಗಮಿಸಿದ್ದಾರೆ. ಪೊಲೀಸರನ್ನು ಕಂಡ ಮುಖ್ಯ ಮತ್ತು ಆತನ ಅನುಯಾಯಿಗಳು ಅಧಿಕಾರಿಗಳನ್ನು ನಿಂದಿಸಿ ಹಲ್ಲೆ ನಡೆಸುತ್ತಿದ್ದರು. ನಂತರ ಸಮೀಪದ ಪೆಟ್ರೋಲ್ ಪಂಪ್‌ನಿಂದ ಪೆಟ್ರೋಲ್ ತುಂಬಿದ ಬಕೆಟ್ ತೆಗೆದುಕೊಂಡು ಮಹಿಳಾ ಕಾನ್ ಸ್ಟೆಬಲ್ ಮೇಲೆ ಸುರಿದಿದ್ದಾನೆ. ಪತ್ನಿಗೆ ಬೆಂಕಿಕಡ್ಡಿ ತರುವಂತೆ ಹೇಳಿ ಕಾನ್ ಸ್ಟೇಬಲ್ ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಪೊಲೀಸರು ದಿಟ್ಟತನದಿಂದ ಜೆಡಿಯು ನಾಯಕನನ್ನು…
ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡುವಂತಿಲ್ಲ. ಪ್ರಾಯೋಗಿಕ ತೊಂದರೆಗಳಿವೆ ಎಂದು ನ್ಯಾಯಾಲಯವು ಸೂಚಿಸಿದೆ. ಮುಂದಿನ ಜನಗಣತಿಯ ನಂತರ ಕ್ಷೇತ್ರಗಳ ಮರುನಿರ್ಣಯ ಪೂರ್ಣಗೊಂಡ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ತರಲು ಸಾಧ್ಯ. ಹಾಗಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ನಿರ್ಧಾರ ಕೈಗೊಂಡಿದೆ. ಮಹಿಳಾ ಮೀಸಲಾತಿ ಜಾರಿ ವಿಳಂಬವಾಗುತ್ತಿದ್ದು, ಮುಂಬರುವ ಚುನಾವಣೆಗೂ ಮುನ್ನ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಜಯ ಠಾಕೂರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ಜನಗಣತಿಗೂ ಪುನರ್‌ವಿಂಗಡಣೆಗೂ ಏನು ಸಂಬಂಧ ಎಂದು ಅರ್ಜಿಯಲ್ಲಿ ಕೇಳಲಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಆದರೆ ಈ ಹಸ್ತಕ್ಷೇಪವು ಹೊಸ ಕಾನೂನನ್ನು ಜಾರಿಗೆ ತರಲು ಸಮಾನವಾಗಿದೆ ಎಂದು ಸುಪ್ರೀಂ…