Author: admin

ಡಿ. ಜೆ ಹಳ್ಳಿ, ಕೆ. ಜೆ. ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್‌ ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ. ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ಧತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತದೆ. ಅದೊಂದು ಪ್ರಕ್ರಿಯೆ ಮಾತ್ರ ಮಾಡಿದ್ದೇವೆ.  ಈ ವಿಷಯ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಕ್ಯಾಬಿನೆಟ್‌ ಗೆ ಬರುತ್ತದೆ. ಕ್ಯಾಬಿನೆಟ್‌ ನಲ್ಲಿ ಅಂತಿಮ ತೀರ್ಮಾನ ಆಗುತ್ತದೆ. ಸತ್ಯಾಂಶವನ್ನು ನೋಡಿ ಕಾನೂನಾತ್ಮಕ ಅವಕಾಶ ಇದ್ದರೆ ಕೇಸ್ ವಾಪಸ್ ತೆಗೆದುಕೊಳ್ಳುವೆವು ಎಂದರು. ಉಡುಪಿ ವಿಡಿಯೋ ಬಗ್ಗೆ ಮಾತನಾಡಿ, ಘಟನೆ ಬಹಳ ಸಣ್ಣದು. ಸಣ್ಣ ಘಟನೆಗೆ ರಾಜಕೀಯ ಬಣ್ಣ ಕೊಡುವುದು ಯಾಕೆ? ಪ್ರಿನ್ಸಿಪಾಲ್ ಇದ್ದಾರೆ, ಕಾಲೇಜು ಸಮಿತಿ ಇದೆ. ಈ…

Read More

ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ, ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ ಮನೆಕೆಲಸ ಮಾಡುತ್ತಿದ್ದರು. ಮಗಳಿಗೆ ಕುಣಿಗಲ್‌ ನ ಹೆಟ್ಟೂರು ನಿವಾಸಿ ಗೋವಿಂದ ಗೌಡ ಎಂಬವರೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತವರು ಮನೆಗೆ ಬರುತ್ತಿದ್ದ ಮಗಳ ಕುರಿತು ಇಂದಿರಾ ಚಿಂತಾಕ್ರಾಂತರಾಗಿದ್ದರು. ಈ ಬಗ್ಗೆ ಇಂದಿರಾ ಕೂಡ ತನ್ನ ತಾಯಿಯೊಂದಿಗೆ ದುಃಖ ತೋಡಿಕೊಂಡಿದ್ದಳು. ಸಮಸ್ಯೆಗೆ ಪರಿಹಾರವೆಂಬಂತೆ ಆಕೆಯ ತಾಯಿಯು ತನಗೆ ಜ್ಯೋತಿಷಿ ಸುರೇಶ್ ಪಾಟೀಲ್ ಪರಿಚಯವಿದ್ದು, ಅವರ ಬಳಿ ವಿಚಾರಿಸು ಎಲ್ಲವೂ ಸರಿಹೋಗಲಿದೆ ಎಂದಿದ್ದಳು.…

Read More

ಬಸನಗುಡಿಯ ‘ನ್ಯಾಷನಲ್ ಕೋ- ಆಪರೇಟಿವ್ ಬ್ಯಾಂಕ್‌’ನಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಠೇವಣಿದಾರರಿಗೆ ನ್ಯಾಯ ಕಲ್ಪಿಸುವಂತೆ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ಮತ್ತು ಷೇರುದಾರರ ಹಿತರಕ್ಷಣಾ ವೇದಿಕೆಯ ಮುಖ್ಯಪೋಷಕ ಶಂಕರ್ ಗುಹಾ ದ್ವಾರಕನಾಥ್ ಒತ್ತಾಯಿಸಿದ್ದಾರೆ. ‘ಬಸವನಗುಡಿ ಐತಿಹಾಸಿಕ ಪ್ರಸಿದ್ಧಿ ಕ್ಷೇತ್ರವಾಗಿತ್ತು. ಆದರೆ, ಇದೀಗ ಬ್ಯಾಂಕ್ ಹಗರಣಗಳಿಂದ ಸುದ್ದಿ ಆಗುತ್ತಿದೆ. ಬಸವನಗುಡಿ ಸಹಕಾರಿ ಬ್ಯಾಂಕ್‌ ಹಗರಣಗಳ ಸರಮಾಲೆಗೆ ಇದು ಸೇರ್ಪಡೆಯಾಗಿದೆ’ ಎಂದು ಅವರು ಹೇಳಿದ್ದಾರೆ. ‘ಈ ಬ್ಯಾಂಕ್‌ ನ ಹೊಸ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿ, ಕೆಲವೇ ವರ್ಷಗಳಾಗಿದೆ. ಈ ಹಗರಣದ ಕುರಿತು ಹಳೇ ಆಡಳಿತ ಮಂಡಳಿ ಪದಾಧಿಕಾರಿಗಳು ಉತ್ತರ ನೀಡಬೇಕು. ಬ್ಯಾಂಕ್ ಅನ್ನು ಗ್ರಾಹಕರು ನಂಬಿ ತಾವು ಕಷ್ಟಪಟ್ಟು ಬೆವರು ಸುರಿಸಿ ದುಡಿದ ಹಣ ಠೇವಣಿ ರೂಪದಲ್ಲಿ ಇಟ್ಟಿರುತ್ತಾರೆ. ಗ್ರಾಹಕರ ನಂಬಿಕೆ ಉಳಿಸಿಕೊಳ್ಳಬೇಕಿದ್ದ ಬ್ಯಾಂಕ್‌ಗಳೇ ಹಗರಣಕ್ಕೆ ಒಳಪಡುತ್ತಿರುವುದು ಅತ್ಯಂತ ಆತಂಕಕಾರಿ’ ಎಂದು ತಿಳಿಸಿದ್ದಾರೆ. ‘ಠೇವಣಿದಾರರ ಹಿತದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರ ಹಗರಣ ನಡೆಸಿರುವ ಬ್ಯಾಂಕ್‌ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.…

Read More

ಬಸ್ ನಿಲ್ದಾಣ ಹಾಗೂ ಸಂಚರಿಸುವ ಬಸ್‌ ಗಳಲ್ಲಿ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಒಂದೇ ಕುಟುಂಬದ ಐವರನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕದರಿ ವೇಲು, ಕನ್ಯಾಕುಮಾರ್, ಮಹೇಶ್, ಸುಂದರ್ ರಾಜ್ ಹಾಗೂ ಸಲೀಂ ಬಂಧಿತರು.  ಒಂದೇ ಪ್ರದೇಶದಲ್ಲಿ ವಾಸವಿದ್ದ ಆರೋಪಿಗಳು, ಗುಂಪು ಕಟ್ಟಿಕೊಂಡು ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದರು. ಇವರನ್ನು ಬಂಧಿಸಿ  70 ಸಾವಿರ ನಗದು ಹಾಗೂ 30 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ‘ದೂರುದಾರರೊಬ್ಬರು ತಮ್ಮ ಪತ್ನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಕ್ಕಾಗಿ 1 ಲಕ್ಷ ನಗದು ಹಾಗೂ ಪತ್ನಿಯ ಚಿನ್ನದ ಮಾಂಗಲ್ಯವನ್ನು ಜೇಬಿನಲ್ಲಿ ಇಟ್ಟುಕೊಂಡು ಬಿಎಂಟಿಸಿ ಬಸ್‌ ನಲ್ಲಿ ಹೊರಟಿದ್ದರು. ಇದೇ ವೇಳೆ ಬಸ್ ಏರಿದ್ದ ಆರೋಪಿಗಳು, ದೂರುದಾರನ ಜೇಬಿನಲ್ಲಿದ್ದ ಹಣ ಕದ್ದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು’. ‘ಆರೋಪಿಗಳ ಪತ್ತೆಗಾಗಿ ಸುಮಾರು 150 ಸ್ಥಳಗಳಲ್ಲಿರುವ ಸಿ. ಸಿ. ಟಿ. ವಿ ಕ್ಯಾಮೆರಾ ಪರಿಶೀಲಿಸಲಾಗಿತ್ತು. ಕೆಲ ಸುಳಿವು ಆಧರಿಸಿ ವಶಕ್ಕೆ ಪಡೆದು…

Read More

ವಧು ಹುಡುಕಿಕೊಡುವ ನೆಪದಲ್ಲಿ ನಗರದ ನಿವಾಸಿಯೊಬ್ಬರಿಂದ 786 ಸಾವಿರ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ದೂರುದಾರ, ತಮ್ಮ ಪುತ್ರನಿಗೆ ವಧು ಹುಡುಕುತ್ತಿದ್ದರು. ಹಲವು ಸಂಬಂಧಿಕರು ಹಾಗೂ ಸ್ನೇಹಿತರ ಬಳಿ ವಧು ಬಗ್ಗೆ ವಿಚಾರಿಸುತ್ತಿದ್ದರು. ‘ಬ್ರಾಹ್ಮಣ ವೇದಿಕೆ ಟ್ರಸ್ಟ್’ನಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿ ದೂರುದಾರರನ್ನು ಪರಿಚಯ ಮಾಡಿಕೊಂಡಿದ್ದ ಸುಧಾಕರ್ ಅಲಿಯಾಸ್ ವೆಂಕಟಾಚಾರಿ, ವಧು ಹುಡುಕಿಕೊಡುವುದಾಗಿ ಹೇಳಿದ್ದ. ಅದಕ್ಕಾಗಿ ಹಂತ ಹಂತವಾಗಿ 786 ಸಾವಿರ ಪಡೆದಿದ್ದ.’ ‘ಹಲವು ತಿಂಗಳಾದರೂ ಆರೋಪಿ, ವಧು ಹುಡುಕಿಲ್ಲ. ಬೇಸತ್ತ ದೂರುದಾರ, ಹಣವನ್ನು ವಾಪಸು ನೀಡುವಂತೆ ಕೋರಿದ್ದರು. ಇದಾದ ನಂತರ, ಆರೋಪಿ ಪರಾರಿಯಾಗಿದ್ದಾನೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲ ಪ್ರತಿಭಟನೆ ನಡೆಸಿದರು. ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ‘ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿವೆ. ರಾಜಕೀಯವಾಗಿ ಪ್ರಬಲವಾಗಿರುವ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯಗಳು ಪರಸ್ಪರ ವೈರಿಗಳಂತೆ ಗಲಭೆ, ಕೊಲೆ, ಸುಲಿಗೆ, ಅತ್ಯಾಚಾರ ಹಿಂಸೆಗಳಲ್ಲಿ ತೊಡಗಿಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ದಶಕಗಳ ಕಾಲ ಮಾಡಿರುವ ಕೋಮು ಪ್ರಚೋದನೆಯಿಂದಲೇ ಈ ಎರಡು ಸಮುದಾಯಗಳ ನಡುವೆ ದ್ವೇಷ ಬೆಳೆದಿದೆ’ ಎಂದು ಆರೋಪಿಸಿದರು. ‘ಗಲಭೆಯನ್ನು ನಿಯಂತ್ರಿಸಲು ವಿಫಲವಾಗಿರುವ ಮಣಿಪುರದ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಜನರ ಬಳಿ ಇರುವ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಬೇಕು. ಅಕ್ರಮವಾಗಿ ಅರಣ್ಯದಲ್ಲಿ ಬೆಳೆಯುತ್ತಿರುವ ಗಸಗಸೆ (ಮಾದಕ ವಸ್ತು) ಕೃಷಿಯನ್ನು ನಿಯಂತ್ರಿಸಬೇಕು. ಅಕ್ರಮ ವಲಸೆ ತಡೆಯಲು ಕ್ರಮ ಕೈಗೊಳ್ಳಬೇಕು. ಮಣಿಪುರ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಿ, ಜನತೆಗೆ ಅಗತ್ಯ…

Read More

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಏಗ್ಗಿಲ್ಲದೇ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜವೆಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ಕಾಂಗ್ರೆಸ್ ನವರಿಗೆ ಕೇವಲ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಕಳ್ಳತನ ಮಾಡುವುದು ಗೊತ್ತಿದೆಯೇ ಹೊರತು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದ್ದಲ್ಲಿ ಮಾತ್ರ ಈ ರೀತಿಯ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬಹುದು ಮತ್ತು ದೆಹಲಿ ಮಾದರಿಯ ಸಾಲ ಮುಕ್ತ ಬಜೆಟ್ ಗಳನ್ನು ಘೋಷಿಸಬಹುದು ಎಂಬುದು ಗೊತ್ತಿಲ್ಲ. ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ಕೂಡಲೇ ಹೇಗಾದರೂ ಮಾಡಿ ವಸೂಲಿ ಮಾಡಿಕೊಳ್ಳಬೇಕೆಂಬ ಧಾವಂತ ಕಾಂಗ್ರೆಸ್ ಶಾಸಕರುಗಳಲ್ಲಿ ಇರುವುದು ಬಿ. ಆರ್. ಪಾಟೀಲರ ಪತ್ರದಿಂದ ಸ್ಪಷ್ಟವಾಗುತ್ತಿದೆ ಎಂಬ ಅನುಮಾನ ರಾಜ್ಯದ ಜನತೆಯಲ್ಲಿ ಹಾಗೂ ನಮ್ಮಲ್ಲೂ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು…

Read More

ಶಾಸಕ ತನ್ವಿರ್ ಸೇ‌ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟಿಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ ಕೆ. ಜೆ. ಹಳ್ಳಿ- ಡಿ. ಜೆ. ಹಳ್ಳಿ ಘಟನೆಯಡಿ ಮಾರಣಾಂತಿಕ ಹಲ್ಲೆ, ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದು, ಬಂಧನಕ್ಕೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೌಡಿಗಳನ್ನು, ಪುಡಿ ರೌಡಿಗಳನ್ನು ಬಿಡುಗಡೆ ಮಾಡಲು ಮತ್ತು ಕೇಸು ರದ್ದತಿಗೆ ತನ್ನೀರ್ ಸೇರ್ ಅವರು ಗೃಹ ಸಚಿವ ಪರಮೇಶ್ವರರಿಗೆ ವಿನಂತಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಕೇಸನ್ನೂ ರದ್ದು ಮಾಡಿ ಬಂಧಿತರನ್ನು ಬಿಡುಗಡೆ ಮಾಡಲು ಕೋರಿದ್ದಾರೆ. ಇದನ್ನು ಸರಕಾರವು ಮನ್ನಿಸಬಾರದು ಎಂದು ಆಗ್ರಹಿಸಿದ್ದಾರೆ. ಮಂಗಳೂರು ಗಲಭೆಯ ಕೇಸನ್ನೂ ರದ್ದು ಮಾಡಲು ಮನವಿ ಮಾಡಿದ್ದಾರೆ ಎಂದಿರುವ ಅವರು, ಬಿಜೆಪಿ ಸರಕಾರವು…

Read More

ಹೆಣ್ಣೂರಿನ ವಿನ್ಸೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾರ್ವೇಶ್ ಸಾವವನ್ನಪ್ಪಿದ ವಿದ್ಯಾರ್ಥಿ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹೋಗಿದ್ದ ಮಾರ್ವೇಶ್ ಮನೆಗೆ ಬಂದಿರಲಿಲ್ಲ. ಇದರಿಂದ ಪೋಷಕರು ಆತಂಕದಲ್ಲಿದ್ದರು. ಈ ವೇಳೆ ಸ್ನೇಹಿತನೋರ್ವ ಮನೆಗೆ ಬಂದು ವಿಚಾರಿಸಿ ಹೋಗಿದ್ದ. ಅನಂತರ ನಿನ್ನೆ ರಾತ್ರಿ ಜಿಹಾನ್ ಆಸ್ಪತ್ರೆಗೆ ಸುನಿಲ್ ಎಂಬಾತ ಮಾರ್ವೇಶ್ ನನ್ನ ಚಿಕಿತ್ಸೆ ಕರೆತಂದಿದ್ದ. ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಖಚಿತಪಡಿಸಿ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಆಸ್ಪತ್ರೆಗೆ ಸೇರಿಸಿದ ಸುನಿಲ್ ಎಂಬಾತನನ್ನ ವಿಚಾರಿಸಿದಾಗ ಯಾರೋ ಅಪರಿಚಿತರು ಲಿಂಗರಾಜಪುರ ಬಳಿ ಮಾರ್ವೇಶ್ ನನ್ನ ಒಪ್ಪಿಸಿದ್ದರು. ಹೀಗಾಗಿ ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಹೇಳಿಕೆ ನೀಡಿದ್ದ. ಮತ್ತೊಂದೆಡೆ ಪೋಷಕರು ಸಹ ನಿನ್ನೆ ಸಂಜೆ ಮನೆ ಬಳಿ ಮಾರ್ವೇಶ್ ಬಗ್ಗೆ ವಿಚಾರಿಸಿದ್ದ ವ್ಯಕ್ತಿ ಬಗ್ಗೆ ಅನುಮಾನವಿದ್ದು ಆತನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಗೊತ್ತಾಗಲಿದೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.…

Read More

ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. 38 ರಾಷ್ಟ್ರೀಯ ಹೆದ್ದಾರಿಗಳು ಅಪ್ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ…

Read More