Author: admin

ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮ  ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಮಿನಾಕ್ಷಿ ಅವರ ಅವಧಿಮುಗಿದ ಹಿನ್ನೆಲೆಯಲ್ಲಿ ಇಂದು  ತೆರವಾದ ಸ್ಥಾನಕ್ಕೆ ನಾಲ್ಕು ಅರ್ಜಿಹಾಕಿದ್ದರು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹೆಂದ್ರರವರು ಹಾಗೂ ಉಪಾದ್ಯಕ್ಷರಾಗಿ ಕೃಷ್ಣೇಗೌಡರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು  ತಿಳಿಸಿದರು. ಇದೇ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಹೂ ಗುಚ್ಚ ನೀಡಿ ಅಧ್ಯಕರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಶುಭ ಹಾರೈಸಿದ್ದರು. ಈ ಸಂದರ್ಭದಲ್ಲಿ ಶ್ರವಣೂರು ಗ್ರಾಮ ಪಂಚಾಯಿತಿಯ ಸದ್ಯಸರು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಗಣೇಶ್ ಕೆ.ಪಿ., ಪುತ್ತೂರು ತುಮಕೂರು ತಾಲೂಕು ಮಲ್ಲೇನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಘಟನೆ ಸಾಕಷ್ಟು ಮಾಧ್ಯಮಗಳಲ್ಲಿ ವರದಿಯಾಗಿತ್ತು.  ಅಧಿಕಾರಿಗಳ ಗಮನಕ್ಕೂ ಬಂದಿತ್ತು. ಇಷ್ಟಾಗಿದ್ದರೂ ತಾಯಿ ಮತ್ತು ಮಗುವಿನ ರಕ್ಷಣೆಗೆ ಮುಂದಾಗದೇ ಇರುವುದು ಜಿಲ್ಲಾಡಳಿತ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಾಗಿದೆ. ಇದೀಗ ಮಗು ಸಾವನ್ನಪ್ಪಿದ್ದು, ಇದನ್ನು ಸಾವು ಎನ್ನಬೇಕೋ, ಕೊಲೆ ಎನ್ನಬೇಕೋ? ಎನ್ನುವ ಪ್ರಶ್ನೆಗೆ ಜಿಲ್ಲಾಡಳಿತ ಉತ್ತರಿಸಬೇಕಿದೆ. ಮಹಿಳೆಯರನ್ನು ನಿಕೃಷ್ಟವಾಗಿ ಕಾಣುವ ಆಚರಣೆಗಳು ಈ ಸಮುದಾಯದಲ್ಲಿದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸರಿಯಾದ ಕಾನೂನು ಕ್ರಮಕೈಗೊಳ್ಳದೇ ಇರುವುದರಿಂದ ಇಂದಿಗೂ ಈ ಸಾಮಾಜಿಕ ಪಿಡುಗು ಕಾಡುಗೊಲ್ಲ ಸಮುದಾಯ ಮಹಿಳೆಯರನ್ನು ಪ್ರಾಣಿಗಿಂತಲೂ ಹೀನವಾಗಿ ಕಾಣುವಂತಹ ಸಂದರ್ಭವನ್ನು ಸೃಷ್ಟಿಸಿದೆ. ಮಹಿಳೆ ಹಾಗೂ ನವಜಾತ ಶಿಶುವನ್ನು ಹೊರಗೆ ಇಟ್ಟಿರುವ ವಿಚಾರದ ಬಗ್ಗೆ “ನಮ್ಮತುಮಕೂರು” ಮಾಧ್ಯಮ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಈ ವರದಿ ಇಡೀ ರಾಜ್ಯದಲ್ಲೇ ಸಂಚಲನವನ್ನು ಸೃಷ್ಟಿಸಿತ್ತು. ರಾಜ್ಯದಲ್ಲಿ ವ್ಯಾಪಕವಾಗಿ ಈ ಘಟನೆ ಟೀಕೆಗೆ ಗುರಿಯಾಗಿತ್ತು. ಇಷ್ಟೆಲ್ಲ ನಡೆದರೂ ಆ…

Read More

ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ವೃದ್ಧರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಬಿಎಂಆರ್‌ಸಿಎಲ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿರುವ ಟಿ. ಮುತ್ತುರಾಜು ಅವರ ತಂದೆ ತಿಮ್ಮೇಗೌಡ (67) ಮೃತಪಟ್ಟವರು. ತಿಮ್ಮೇಗೌಡ ಅವರದ್ದು ಚಾಮರಾಜನಗರ ಜಿಲ್ಲೆಯ ಕಂಡಯ್ಯನಪಾಳ್ಯ ಗ್ರಾಮ. ಬಿಎಂಆರ್‌ಸಿಎಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ದೂರು ನೀಡಲಾಗಿದೆ. ‘ತಿಮ್ಮೇಗೌಡ ಅವರು ಮಗನ ಮನೆಗೆ ಬಂದಿದ್ದರು. ಜುಲೈ 20ರಂದು ಊರಿಗೆ ವಾಪಸ್ ತೆರಳಲು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ಮಾರ್ಗ ಮಧ್ಯದಲ್ಲಿ ಮೆಟ್ರೊ ರೈಲಿನ ಒಳಗೆ ಕುಸಿದು ಬಿದ್ದಿದ್ದರು. ಅವರನ್ನು ಪ್ರಯಾಣಿಕರು ಎಂ. ಜಿ ರಸ್ತೆ ನಿಲ್ದಾಣದಲ್ಲಿ ಇಳಿಸಿದ್ದರು. ನಿಲ್ದಾಣದಲ್ಲಿದ್ದ ಪ್ರಯಾಣಿಕರೇ ಅವರನ್ನು ಆಟೊದಲ್ಲಿ ಕರೆದೊಯ್ದು ಇನ್‌ ಫೆಂಟ್ರಿ ರಸ್ತೆಯ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೆಟ್ರೊ ರೈಲಿನ ಒಳಗಡೆ ಮೆಟ್ರೊ ಅಧಿಕಾರಿಗಳು…

Read More

ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಕೊನೆಗೂ ಸರ್ಕಾರದ ಅಂಗಳಕ್ಕೆ ತಲುಪಿದೆ. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಮುಂದಿನ ಸಚಿವ ಸಂಪುಟದ ಮುಂದೆ ಗುತ್ತಿಗೆ ಅನುಮೋದನೆ ವಿಷಯ ಮಂಡಿಸಲಿದ್ದಾರೆ. ನಾಲ್ಕು ಬಾರಿ ಟೆಂಡರ್ ಕರೆದಿದ್ದ ಈ ಬಾಕಿ ಕಾಮಗಾರಿಗೆ ಮಾರ್ಚ್‌ನಲ್ಲೇ ಗುತ್ತಿಗೆದಾರರು ಅಂತಿಮಗೊಂಡಿದ್ದರು. ಅವರೊಂದಿಗೆ ಚೌಕಾಸಿ ಮಾಡುವ ಪ್ರಕ್ರಿಯೆಗೆ ಬಿಬಿಎಂಪಿ ಅಧಿಕಾರಿಗಳು ಅಧಿಕ ಸಮಯ ತೆಗೆದುಕೊಂಡಿದ್ದರು. ಈ ವಿಳಂಬ ನೀತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಆಕ್ರೋಶಗೊಂಡಿದ್ದರು. ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಮೊತ್ತಕ್ಕಿಂತ ಶೇ 18. 30ರಷ್ಟು ಹೆಚ್ಚಿನ ಮೊತ್ತಕ್ಕೆ ಗುತ್ತಿಗೆದಾರರ ಮನವೊಲಿಸಿದ್ದಾರೆ. ಜುಲೈ 17ರಂದು ಈ ಟೆಂಡರ್ ಅನುಮೋದನೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಳುಹಿಸಿಕೊಟ್ಟಿದ್ದಾರೆ. ‘ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿ ಟೆಂಡರ್ ಅನುಮೋದನೆ ಸರ್ಕಾರಕ್ಕೆ ಬಂದಿದೆ. ಈ ಮುಂದಿನ ಸಚಿವ ಸಂಪುಟದ ಮುಂದೆ ಅದನ್ನು ತರುವಂತೆ ರಾಕೇಶ್ ಸಿಂಗ್…

Read More

ತಮಿಳುನಾಡಿನ ಧರ್ಮಪುರಿಯಿಂದ ನಗರಕ್ಕೆ ಬಸ್ ನಲ್ಲಿ ಬಂದು ರಾಜಧಾನಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದು 30 ಲಕ್ಷ ತೂಕದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದ ಆರೋಪಿ ಕಳೆದ 25 ವರ್ಷಗಳ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬನಶಂಕರಿ, ಸಿ. ಕೆ. ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ, ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 2016ರಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಮಸ್ವಾಮಿ ಹಿಂದೆ ವ್ಯವಸ್ಥಿತವಾಗಿ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಧರ್ಮಪುರಿಯ ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿ ಅಲ್ಲಿಂದ ಬಸ್ ನಲ್ಲಿ ನಗರಕ್ಕೆ ಬಂದು ಬೀಗ ಹಾಕಿರುವ ಮನೆಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ. ಕದ್ದ…

Read More

ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಪಠ್ಯಕ್ರಮ ಬದಲಾಯಿಸದೆ ಹೊಸ ಪಠ್ಯಕ್ರಮದಲ್ಲಿ ಸಣ್ಣ ಬದಲಾವಣೆಗಳನ್ನು ತರಲಾಗಿದೆ ಎಂದರು. ಪಠ್ಯಕ್ರಮ ವನ್ನು ಪರಿಶೀಲಿಸಿದ ನಂತರ, ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಅಗತ್ಯವಾದ ಪಾಠಗಳನ್ನು ಮಾತ್ರ ಉಳಿಸಿಕೊಳ್ಳ ಲಾಗುತ್ತದೆ. ಪಠ್ಯಗಳನ್ನು ಪರಿಷ್ಕರಿಸುವ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಗಳಲ್ಲಿ ಶಿಕ್ಷಕರ ವರ್ಗಾವಣೆ ಆನ್‌ ಲೈನ್ ಮೂಲಕ ಮಾಡಲಾಗಿದೆ. ಈ ವಿಚಾರವಾಗಿ ನ್ಯಾಯಾಲಯವು ಅನುಮತಿ ನೀಡಿದ ನಂತರ 13,500 ಖಾಯಂ ಶಿಕ್ಷಕರನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಹೇಳಿದರು. ಕಾಂಗ್ರೆಸ್‌ ಗೆ ಜನರು ನೀಡಿ ರುವ ಉತ್ತಮ ಜನಾದೇಶವನ್ನು ಬಳಸಿಕೊಂಡು ಸಮಾಜದಲ್ಲಿರುವ ಆರ್ಥಿಕ ವರ್ಗ ಹಾಗೂ ದುರ್ಬಲ ವರ್ಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರ ಮಧು ಬಂಗಾರಪ್ಪ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಜುಲೈ 26 ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸುತ್ತೇವೆ. 1999 ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಮಡಿದ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮಕ್ಕೆ ಗೌರವ ಸಲ್ಲಿಸಲು ಪ್ರತಿವರ್ಷ ಜುಲೈ 26 ರಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999 ರಲ್ಲಿ ಪಾಕಿಸ್ತಾನಿ ಸೈನಿಕರು ಜಮ್ಮು-ಕಾಶ್ಮಿರದಲ್ಲಿ ಗಡಿ ನಿಯಂತ್ರಣಾ ರೇಖೆಯನ್ನು ದಾಟಿ ನಮ್ಮ ಬೆಟ್ಟಗಳನ್ನು ವಶಪಡಿಸಿಕೊಂಡಿದ್ದರು. ಇವರ ವಿರುದ್ಧ ಭಾರತೀಯ ಸೈನಿಕರು ವೀರಾವೇಶದಿಂದ ಹೋರಾಡಿ ವಿಜಯಶಾಲಿಯಾದರು. ಈ ಮಿಲಿಟರಿ ಕಾರ್ಯಾಚರಣೆಗೆ “ಕಾರ್ಗಿಲ್ ಯುದ್ಧ” ಎಂದು ಕರೆಯುತ್ತಾರೆ. ಇಡೀ ಕಾರ್ಯಾಚರಣೆಗೆ ಆಪರೇಷನ್‌ ವಿಜಯ್‌ ಎಂದು ಹೆಸರಿಸಲಾಗಿದೆ. 2023 ಜುಲೈ 26ರಕ್ಕೆ ಕಾರ್ಗಿಲ್ ಯುದ್ಧ ಸಂಭವಿಸಿ 24 ವರ್ಷವಾಯಿತು. 1999 ರಲ್ಲಿ ಕಾರ್ಗಿಲ್ ಯುದ್ಧವು ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಿತು. ಅಲ್ಲಿ ಭಾರತೀಯ ಸೇನೆಯು ಪಾಕಿಸ್ತಾನಿ ಸೈನಿಕರನ್ನು ಬಗ್ಗು ಬಡಿಯುವ ಮೂಲಕ ‘ಆಪರೇಷನ್ ವಿಜಯ್’ ಅಡಿಯಲ್ಲಿ ಪ್ರಸಿದ್ಧ ‘ಟೈಗರ್ ಹಿಲ್’…

Read More

ತುಮಕೂರು: ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಇರುವ ಕಾಡುಗೊಲ್ಲ ಸಮುದಾಯದ ಮೂಢನಂಬಿಕೆಗೆ ನವಜಾತ ಶಿಶು ಎಂದು ಮೃತಪಟ್ಟಿರುವ ಘಟನೆ ನಡೆದಿದೆ. ಕಾಡುಗೊಲ್ಲ ಸಮುದಾಯದವರು ಬಾಣಂದಿರನ್ನು ಗ್ರಾಮದ ಒಳಗೆ ಸೇರಿಸದೆ ಊರವರೆಗಿನ ಗುಡಿಸಿಲಿನಲ್ಲಿ ವಾಸ ಮಾಡಲು ಸೂಚಿಸುತ್ತಾರೆ ಇದು ಅವರ ಕಟ್ಟುಪಾಡು ಆಗಿದೆ. ಇದೀಗ 10 ದಿನಗಳ ಹೆಣ್ಣು ಮಗುವೊಂದು ಮೃತಪಟ್ಟಿದೆ. ಜುಲೈ 18ರಂದು ಊರ ಹೊರಗಿನ ಗುಡಿಸಿಲಿನಲ್ಲಿ ಬಾಣಂತಿ ಹಾಗೂ ಮಗುವನ್ನು ಇರಿಸಲಾಗಿತ್ತು. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಶೀತಪೀಡಿದ ವಾತಾವರಣ ಹಾಗೂ ತುಂತುರು ಮಳೆ ಆಗುತ್ತಿದ್ದು ಈ ನಡುವೆ ಮೂಡನಂಬಿಕೆ ಇನ್ನು ಪಾಲಿಸಿಕೊಂಡು ಬರುತ್ತಿರುವ ಗ್ರಾಮಸ್ಥರ ಜಿದ್ದಿಗೆ ಮಗು ಬಲಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕಾಂಗ್ರೆಸ್‌ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ. ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸಿಂಗಾಪೂರ್ ಕಾರ್ಯತಂತ್ರದ ಕಥೆ ಹೇಳಿದ್ದಾರೆ. ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸೀಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ. ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರುಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಎಂದರು. ಉಪ-ಮುಖ್ಯಮಂತ್ರಿ ಡಿ.…

Read More

ತುಮಕೂರು: ಕಳೆದ ಮೂರು ದಿನಗಳಿಂದಲೂ ತುಮಕೂರು ಜಿಲ್ಲೆಯಾದ್ಯಂತ ವಿವಿಧಡೆ ಉತ್ತಮ ಮಳೆ ಆಗುತ್ತಿದ್ದು, ಜಿಟಿ ಜಿಟಿ ಮಳೆಯಿಂದಾಗಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ದಿನವಿಡೀ ಸುರಿಯುತ್ತಿರುವ ಜಡಿ ಮಳೆಯಿಂದ ಕೆಲವೆಡೆ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಕೆಲ ಕಾಲ ಬಿಡುವು ಕೊಡುವ ಮಳೆರಾಯ ಮತ್ತೆ ಹನಿ ರೂಪದಲ್ಲಿ ಧರೆಗೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಮಳೆಯಲ್ಲಿ ಕೊಡೆ ಹಿಡಿದು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಬಿಟ್ಟು ಬಿಡದೆ ಸುರಿದ ಮಳೆ ವಿವರ ಪ್ರಕಾರ: ತುಮಕೂರು ತಾಲೂಕಿನ ವ್ಯಾಪ್ತಿಯಲ್ಲಿ 5.2 ಮಿ.ಮೀ . , ಗುಬ್ಬಿ ತಾಲೂಕಿನ 10ಮಿ.ಮೀ. , ಕುಣಿಗಲ್ ತಾಲೂಕಿನಲ್ಲಿ 5 ಮಿ.ಮೀ. , ತಿಪಟೂರು ತಾಲೂಕಿನಲ್ಲಿ 4.3 ಮಿ.ಮೀ. , ಚಿಕ್ಕನಾಯಕನಹಳ್ಳಿ. ತಾಲೂಕಿನ ಭಾಗದಲ್ಲಿ 7.3 ಮಿ.ಮೀ., ತುರುವೆಕೆರೆ 10 ಮಿ.ಮೀ., ಮಧುಗಿರಿ 3.3 ಮಿ.ಮೀ., ಶಿರಾ 5.2…

Read More