Author: admin

ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಆರ್. ನಾರಾಯಣ್ ಅವರನ್ನು ಅಮಾನತುಗೊಳಿಸಲಾಗಿದೆ. ಮಾರ್ಚ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ ಭಾಗವಹಿಸಲಿರಲಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ನಂತರ, ಮೇ ತಿಂಗಳಲ್ಲಿ ನಡೆಸಿದ್ದ ಸಮಾಲೋಚನಾ ಸಭೆಗೂ ಗೈರಾಗಿದ್ದರು. ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಎಂದು ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಬೆಂಗಳೂರಿನ ಬಿದರಹಳ್ಳಿ ಗ್ರಾಮಕ್ಕೆ 72 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ. ಬಿದರಹಳ್ಳಿ ಗ್ರಾಮ ಪಂಚಾಯತಿ ಸಭೆಯಲ್ಲಿ ಅವರು ಮಾತನಾಡಿದರು. ಈ ಗ್ರಾಮ ಪಂಚಾಯತಿಯು ಒಟ್ಟು 8 ಗ್ರಾಮಗಳನ್ನು ಒಳಗೊಂಡಿದ್ದು, ಈ ಹಿಂದೆ ಕ್ಷೇತ್ರದ ಶಾಸಕರಾಗಿದ್ದ ಅರವಿಂದ ಲಿಂಬಾವಳಿ ಅವರು ಕಳೆದ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ 72 ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿದ್ದು ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಆದಷ್ಟು ಶೀಘ್ರವಾಗಿ ಆ ಕಾಮಗಾರಿಗಳೆಲ್ಲ ಪೂರ್ಣಗೊಳ್ಳಲಿವೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ತಿಳಿಸಿದರು. ಬೆಂಗಳೂರಿನ ಬಿದರಹಳ್ಳಿಯಲ್ಲಿ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯತಿ ಬಳಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಬಿದರಹಳ್ಳಿ ಗ್ರಾಮ ಪಂಚಾಯತಿಯ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ನಿರ್ವಾಹಣಾಧಿಕಾರಿಗಳಾದ ವಸಂತಕುಮಾರ್,…

Read More

ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಎರಡು ವಾರ ಗಡುವು ನೀಡಿರುವ ಹೈಕೋರ್ಟ್, ‘ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶನ ನೀಡಿದೆ. ಈ ಕುರಿತಂತೆ ವಕೀಲರಾದ ಸುಧಾ ಕಾಟಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎರಡು ವಾರಗಳ ಕಾಲಾವಕಾಶ ನೀಡಲಾಗುತ್ತಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಅಥವಾ ಬಾಕಿ ಉಳಿದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಚಾರಣೆಗೆ ಖುದ್ದಾಗಿ ಹಾಜರಾಗಿ ವಿವರಣೆ ನೀಡಬೇಕು’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿತು. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು…

Read More

ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಸುಲ್ತಾನ್ ಪಾಳ್ಯದ ನಿವಾಸಿ ಜುನೇದ್ ಅಹಮ್ಮದ್ ತಾನು ತಲೆಮರೆಸಿಕೊಂಡಿದ್ದ ದೇಶದಿಂದಲೇ ಪ್ರೇಯಸಿಗೆ ಕರೆ ಮಾಡುತ್ತಿದ್ದ ಅಂಶ ತನಿಖೆಯಿಂದ ಪತ್ತೆಯಾಗಿದೆ. ಮೊಬೈಲ್ ಕರೆಗಳ ಪರಿಶೀಲನೆ ವೇಳೆ ತನಿಖಾಧಿಕಾರಿಗಳಿಗೆ ಈ ವಿಷಯ ಗೊತ್ತಾಗಿದೆ. ಪ್ರೇಯಸಿ ಇರುವ ಸ್ಥಳವನ್ನು ಸಿಸಿಬಿ ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಆಕೆಯ ಮೂಲಕ ಜುನೇದ್ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಿ ಬಂಧನಕ್ಕೆ ತಯಾರಿ ನಡೆಸುತ್ತಿದ್ದಾರೆ. ಆಕೆಗೂ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಕೊಲೆ, ದರೋಡೆ ಯತ್ನ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರು ಬಂಧಿಸುವ ಸಾಧ್ಯತೆ ತಿಳಿದಿದ್ದ ಜುನೇದ್ ಅಹಮ್ಮದ್ ವಿದೇಶಕ್ಕೆ ಪರಾರಿಯಾಗಿದ್ದ. ಅಲ್ಲಿಂದಲೇ ಪ್ರೇಯಸಿಗೆ ಕರೆ ಮಾಡುತ್ತಿದ್ದ. ಜುಲೈ 19 ರಂದು ತನ್ನ ಸಹಚರರಾದ ಸೈಯದ್ ಸುಹೇಲ್ ಖಾನ್, ಜಾಹೀದ್ ತಬ್ರೇಜ್, ಸೈಯದ್ ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಹಾಗೂ ಮಹಮ್ಮದ್ ಉಮ್ಮರ್ ನ ಬಂಧನದ ಮಾಹಿತಿ ತಿಳಿದ ಬಳಿಕ ಬೆಂಗಳೂರಿನಲ್ಲಿರುವ ಪ್ರೇಯಸಿಗೆ ಕರೆ ಮಾಡುವುದನ್ನು ಬಿಟ್ಟಿದ್ದಾನೆ ಎಂದು…

Read More

ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ) ರಜೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ಹಿರಿಯ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಎಡಿಜಿಪಿಗೆ ಸಿಬ್ಬಂದಿಯೊಬ್ಬರು ದೂರು ನೀಡಿದ್ದಾರೆ. ಆ ದೂರಿನ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೂಡ್ಲುನಲ್ಲಿರುವ 9ನೇ ಕೆಎಸ್‌ಆರ್‌ಪಿ ತುಕಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿ. ಓಂಕಾರಪ್ಪ ಅವರು ಐದು ಮಂದಿ ಮೇಲಾಧಿಕಾರಿಗಳ ವಿರುದ್ಧ 11 ಅಂಶಗಳನ್ನು ಉಲ್ಲೇಖಿಸಿ, ಕೆಎಸ್‌ಆರ್‌ಪಿ ಎಡಿಜಿಪಿಗೆ ದೂರು ಸಲ್ಲಿಸಿದ್ದಾರೆ. ಕೆಎಸ್‌ಆರ್‌ಪಿಯ ಕೆಲವು ಹಿರಿಯ ಅಧಿಕಾರಿಗಳು ಕೆಳ ಹಂತದ ಅಧಿಕಾರಿಗಳಿಂದಲೇ ಲಂಚ ಪಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ‘ಹೆಚ್ಚಿನ ರಜೆ ಬೇಕಾದಲ್ಲಿ ಹಣ ನೀಡಬೇಕು. ರಜೆಯಲ್ಲಿದ್ದರೆ ಪ್ರತಿ ದಿನಕ್ಕೆ  500ರಂತೆ ಹಣ ನೀಡಬೇಕು, ಹಣದ ಜತೆಗೆ ಖಾಲಿ ಹಾಳೆ ಮೇಲೆ ಸಹಿ ಮಾಡಿಸಿಕೊಳ್ಳುತ್ತಾರೆ. ಹಣ ಕೊಡದಿದ್ದರೆ ಪರೇಡ್ ಮಾಡಿಸಿ ಕಿರುಕುಳ ನೀಡುತ್ತಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಣ ಪಡೆದು ಕೆಲವು ಸಿಬ್ಬಂದಿಗೆ ಊರಿನಲ್ಲಿರಲು ಅವಕಾಶ ನೀಡಿದ್ದಾರೆ ಎಂದು ಓಂಕಾರಪ್ಪ ನಾಲ್ಕು ಪುಟಗಳ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.…

Read More

ಕೇಳಿದಷ್ಟು ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡದಿದ್ದರೆ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ವಾಟ್ಸ್ ಆ್ಯಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ತಾವು ಸೂಚಿಸಿದ ಬ್ಯಾಂಕ್ ಖಾತೆಗೆ 750 ಲಕ್ಷ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಆರು ನ್ಯಾಯಮೂರ್ತಿಗಳನ್ನು ಕೊಲೆ ಮಾಡಲಾಗುವುದೆಂದು ಬೆದರಿಕೆ ಬಂದಿದೆ’ ಎಂದು ನ್ಯಾಯಾಲಯದ ಅಧಿಕಾರಿ ಕೆ. ಮುರಳೀಧರ್ ದೂರು ನೀಡಿದ್ದಾರೆ. ಜುಲೈ 14 ರಂದೇ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೈಬರ್ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ‘ಜುಲೈ 12 ರಂದು ರಾತ್ರಿ 7ರ ಸುಮಾರಿಗೆ ವ್ಯಕ್ತಿಯೊಬ್ಬ, ಮುರಳೀಧರ್ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದಾನೆ. ಪಾಕಿಸ್ತಾನ ಮೂಲದ ಎಬಿಎಲ್ ಅಲೈಡ್ ಬ್ಯಾಂಕ್ ಖಾತೆ ಸಂಖ್ಯೆಯನ್ನು ಉಲ್ಲೇಖಿಸಿ ಸಂದೇಶ ಕಳುಹಿಸಲಾಗಿದೆ. ಆ ಖಾತೆಗೆ ಹಣ ವರ್ಗಾವಣೆ ಮಾಡದಿದ್ದರೆ ನಿನ್ನನ್ನು (ಮುರಳೀಧರ್) ಹಾಗೂ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್,…

Read More

ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಅಷ್ಟೇ ಕಳೆದಿದೆ. ಆದ್ರೆ, ಇದು ಸಾಮಾನ್ಯ ಸರ್ಕಾರ ಅಲ್ಲ. 60% ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಈಗಾಗಲೇ 60% ಸರ್ಕಾರ ಅಂತಾ ಕರೆಯಲಾಗುತ್ತಿದೆ. ಕಾಂಗ್ರೆಸ್ ಶಾಸಕರೇ ಈಗ ಬಂಡಾಯ ಎದ್ದಿದ್ದಾರೆ. ರಾಜ್ಯದಲ್ಲಿ ಯಾವುದೇ ಸರಿ ಇಲ್ಲ ತೋರಿಸುತ್ತಿದೆ. ಕಾಂಗ್ರೆಸ್ ಆತಂರಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡುವುದು ಬಿಟ್ಟು, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಆ ಗ್ಯಾರೆಂಟಿ ಕೂಡಾ ಸರಿಯಾಗಿ ಜಾರಿಯಾಗುತ್ತಿಲ್ಲ. ಇನ್ನು ಕಾಂಗ್ರೆಸ್ ಶಾಸಕರ ಪತ್ರಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…

Read More

ಕಳೆದೊಂದು ತಿಂಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದ ಕೃಷ್ಣರಾಜಸಾಗರ, ಕೊನೆಗೂ ಬೆಂಗಳೂರಿನ ಜನತೆಗೆ ಗುಡ್‌ ನ್ಯೂಸ್ ಕೊಟ್ಟಿದೆ. ಕಳೆದ ಜೂನ್ ತಿಂಗಳ ಆರಂಭದಲ್ಲಿಯೇ ಮುಂಗಾರು ಮಳೆ ಆರಂಭವಾಗಬೇಕಿತ್ತು. ಆದ್ರೆ, ಸರಿಯಾದ ಸಮಯಕ್ಕೆ ಮುಂಗಾರು ಆರಂಭವಾಗದೇ ಇದ್ದದ್ದು, ಬೇಸಿಗೆಗಾಲದಲ್ಲಿ ಈ ಬಾರಿ ಬೆಂಗಳೂರಿನ ಜನತೆ ಕುಡಿಯುವ ನೀರಿಗೂ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಕಾವೇರಿ, ಕೆಆರ್‌ಎಸ್ ಮೂಲಕ ಬೆಂಗಳೂರಿನ ಜನತೆಗೆ ಗುಡ್‌ ನ್ಯೂಸ್ ನೀಡಿದ್ದಾಳೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಈಗಾಗಲೇ ಜಲಾಶಯ ಮಟ್ಟ 124. 80 ಅಡಿಗಳ ಪೈಕಿ 100 ಅಡಿಗಳ ಗಡಿಯನ್ನು ಜಲಾಶಯ ದಾಟಿದೆ. ಇನ್ನು ಇದೇ ಪ್ರಮಾಣದಲ್ಲಿ ಮುಂದಿನ ನಾಲ್ಕೈದು ದಿನಗಳು ಮಳೆ ಸುರಿದ್ರೆ, ಜಲಾಶಯ ಭರ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೂಲಗಳು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ದೇಶದ ನಾನಾ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಲನಾಡಿನಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಇನ್ನು ನಿನ್ನೆ ಇಡೀ ದಿನ ಬೆಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿದಿದ್ದು, ಇನ್ನು ಎರಡು ದಿನಗಳ ಕಾಲ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ವಾತಾವರಣ ಬದಲಾಗಿದೆ. ಕಳೆದ ಎರಡೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬೆಳ್ಳಂಬೆಳಿಗ್ಗೆ ಹಾಗೂ ರಾತ್ರಿಯ ಸಂದರ್ಭದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು, ಇದು ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂಬ ಮಾಹಿತಿ ಇದೆ. ಇನ್ನು ಇಷ್ಟು ದಿನ ಹಾಕದೇ ಸ್ಟೇಟರ್‌ ಗಳನ್ನು ಜನರ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕನಕಪುರ ಮುಖ್ಯರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ ಮೂರು ಬಾಕ್ಸ್ ನೋಟುಗಳು ಪತ್ತೆಯಾಗಿದೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್ ಹಾಗೂ ಒಂದು ಸೂಟ್ ಕೇಸ್ ನಲ್ಲಿ ಕಲರ್ ಜೆರಾಕ್ಸ್ ನೋಟುಗಳು ಮಂಗಳವಾರ ಪತ್ತೆಯಾಗಿವೆ. ಸಾರ್ವಜನಿಕರು ನೋಡಿ ಸಂಚಾರಿ ಪೋಲೀಸರ ಗಮನಕ್ಕೆ ತಂದಿದ್ದು, ಸಂಚಾರಿ ಪೊಲೀಸ್ ರಿಂದ ಕೂಡಲೇ ತಲಘಟ್ಟಪುರ ಠಾಣೆ ಪೊಲೀಸಿಗೆ ಮಾಹಿತಿ ಕೊಟ್ಟಿದ್ದರು. ಕೂಡಲೆ ಸ್ಥಳಕ್ಕೆ ಹೋಗಿ ಜೆರಾಕ್ಸ್ ನೋಟುಗಳನ್ನ ಪರಿಶೀಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್ ನೋಟುಗಳು ಅಲ್ಲಿಗೆ ಹೇಗೆ ಬಂದವು ಎಂಬುದರ ಬಗ್ಗೆ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More