Author: admin

ಖಾನಾಪುರ: ಭತ್ತದ ನಾಟಿಗೆ ಸಿದ್ದತೆ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಮೃತಪಟ್ಟ ಘಟನೆ ಖಾನಾಪುರ ತಾಲ್ಲೂಕಿನ ತಿವೋಲಿ ಎಂಬ ಗ್ರಾಮದಲ್ಲಿ ಸಂಭವಿಸಿದೆ. ಪಾಂಡುರಂಗ ಸದೋಬಾ ಲಾಡಗಾಂವ್ಕರ್ (ನಿವೃತ್ತ ಶಿಕ್ಷಕ) ಮೃತ ದುರ್ದೈವಿಯಾಗಿದ್ದು ಅವರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ‌. ಸ್ಥಳಕ್ಕಾಗಮಿಸಿದ ಮಾಜಿ ಶಾಸಕಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಹಾಗೂ ಖಾನಾಪುರ ಪೊಲೀಸರು ಒಳಗೊಂಡು ಪಾರ್ಥಿವ ಶರೀರವನ್ನು ತಿವೋಲಿವಾಡಕ್ಕೆ ತರಲಾಗಿದ್ದು, ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ಆಂಬ್ಯುಲೆನ್ಸ್‌ ನಲ್ಲಿ ಕಳುಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಸಚಿವರು ಸಂದೇಶ ರವಾನಿಸಿದ್ದಾರೆ. ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲಾಡಳಿತ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರೂ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ. ಇಂತಹ ಸಂದರ್ಭಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ಗುಡ್ಡದ ಮೇಲೆ ವಾಸಿಸುವ…

Read More

ತುಮಕೂರು: ಕಾಂಗ್ರೆಸ್ ಶಾಸಕರಿಗೆ ಸಚಿವರ ಮೇಲೆ ಅಸಮಾಧಾನ, ಸಿಎಂ‌ಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನನಗೆ ಅದರ ಬಗ್ಗೆ ಗೊತ್ತಿಲ್ಲ, ನಿನ್ನೆ ಸಿಎಂ ಸಿಕ್ಕಿದ್ರು, ಅದರ ಬಗ್ಗೆ ಏನೂ ಮಾತಾಡಿಲ್ಲ ಎಂದು ತಿಳಿಸಿದ್ರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಆಪರೇಷನ್ ವಿಚಾರದಲ್ಲಿ ಅದರ ಬಗ್ಗೆ ನಮ್ಮ ಅಧ್ಯಕ್ಷರು ಮಾತನಾಡಿದಾರಲ್ಲ, ಅವರಿಗೆ ಅದರ ಬಗ್ಗೆ ವಿಶೇಷವಾಗಿ ಮಾಹಿತಿ ಇರಬಹುದು ಅಲ್ಲಿ ಏನೇನಾಗ್ತಾ ಇದೆ ಅನ್ನೋದು, ಖಂಡಿತವಾಗಿಯೂ ಜೆಡಿಎಸ್ ಬಿಜೆಪಿ ಒಂದಾಗಿರೋದು ಸತ್ಯ, ಅವರು ಷಡ್ಯಂತ್ರ ಮಾಡ್ತಾ ಇರಬಹುದು. ಆದರೆ ನಾವು ಒಗ್ಗಟ್ಟಾಗಿದ್ದೇವೆ ಎಂದರು. ಐದು ವರ್ಷ ನಾವು ಅಧಿಕಾರ ನಡೆಸ್ತಿವಿ. ಒಳ್ಳೆ ಆಡಳಿತ ಕೊಡ್ತಿವಿ, ಆ ಆತಂಕ ಯಾವುದೂ ಇಲ್ಲ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು. ಕೋವಿಡ್ ಕಾಲದಲ್ಲಿ ನಡೆದ ಎಲ್ಲ ಅವ್ಯವಹಾರಗಳನ್ನು ತನಿಖೆ ಮಾಡಿಸುತ್ತೇವೆ. ಇದು ದ್ವೇಷದ ರಾಜಕಾರಣ ಅಲ್ಲ,  ತನಿಖೆ ಮಾಡಿಸುವ ಬಗ್ಗೆ ನಾವು ಚುನಾವಣೆಯಲ್ಲೇ…

Read More

ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿಯ ಪುರ ಗ್ರಾಮದ ಬಳಿ ಇರುವ ತೊರೆಯಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದ ಪುರ ಗ್ರಾಮದ ರೈತ ಗೋವಿಂದಯ್ಯ ಬಿನ್ ಮೂಡಲಗಿರಿ ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ತೊರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಉಪ ವಿಭಾಗದ ಡಿವೈಎಸ್ಪಿ ಲಕ್ಷ್ಮಿಕಾಂತ್, ತುರುವೇಕೆರೆ ಪೊಲೀಸ್ ಉಪ ನಿರೀಕ್ಷಕ ಕೆ.ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತದೇಹವನ್ನು ನೀರಿನಿಂದ ಹೊರಕ್ಕೆತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ , ಮೃತ ವ್ಯಕ್ತಿಯ ಕುಟುಂಬದವರ ಹಾಗೂ ಆಕ್ರಂದನ ಮುಗಿಲು ಮುಟ್ಟಿತ್ತು.  ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿದರೆ ಹಿಂದೂ, ಕ್ರೈಸ್ತ ಸಮುದಾಯಕ್ಕಿಂತ ಮುಸ್ಲಿಮರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಸುಪ್ರೀಂ ಕೋರ್ಟ್‌ ವಕೀಲ ಅಶ್ವಿನಿ ಉಪಾಧ್ಯಾಯ ಹೇಳಿದರು. ಸ್ಪಂದನ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಏಕರೂಪ ನಾಗರಿಕ (ಯುಸಿಸಿ) ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಪರ ಮತ್ತು ವಿರೋಧ ವ್ಯಕ್ತಪಡಿಸುತ್ತಿರುವ ಹಲವರಿಗೆ ಸಮರ್ಪಕ ಮಾಹಿತಿ ಇಲ್ಲ. ಈ ಸಂಹಿತೆ ಜಾರಿಯಾದರೆ ಹಿಂದೂಗಳು ಸೇರಿ ಎಲ್ಲರ ಮದುವೆ ನೋಂದಣಿ ಕಡ್ಡಾಯವಾಗಲಿದೆ. ಪಾರ್ಸಿ ಸಮುದಾಯದ ಮಹಿಳೆಯರು ಅನ್ಯ ಧರ್ಮಿಯರೊಂದಿಗೆ ಮದುವೆಯಾದರೂ ಸಹ ಆಸ್ತಿ ಹಕ್ಕು ದೊರೆಯಲಿದೆ. ಜತೆಗೆ ಮುಸ್ಲಿಂ ಮಹಿಳೆಯರಿಗೆ ಈ ಎಲ್ಲ ಹಕ್ಕುಗಳ ಜತೆಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದು ಪ್ರತಿಪಾದಿಸಿದರು. ‘ಭಾರತದ ನಾಗರಿಕತ್ವ ಪಡೆದುಕೊಳ್ಳಲು ಸ್ಪಷ್ಟ ವ್ಯಾಖ್ಯಾನ ರೂಪಿಸಬೇಕು. ಮತದಾನದ ಹಕ್ಕು ಪಡೆಯಬೇಕಾದರೆ ಸಂವಿಧಾನ ನಿಷ್ಠೆ ಪ್ರದರ್ಶಿಸುವ ಅರ್ಜಿ ತುಂಬಬೇಕು. ದೇಶದಲ್ಲಿ ಧರ್ಮದ ವಿಜಯವಾಗಬೇಕಾದರೆ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ, ಏಕಧರ್ಮ ಸಂಹಿತೆ, ಸಮಾನ ಜನಸಂಖ್ಯೆ ಸಂಹಿತೆ ಎಂಬ ಮೂರು…

Read More

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ಹೊಸಕೆರೆ, ಮಲ್ಲತ್ತಹಳ್ಳಿ ಕೆರೆ, ಜೆ. ಪಿ. ಪಾರ್ಕ್ ಅಭಿವೃದ್ಧಿ ಹೆಸರಿನಲ್ಲಿ ಕೆರೆ ಕಣ್ಮರೆ, ಈಜುಕೊಳ ಮರು ನಿರ್ಮಾಣ, ಉದ್ಯಾನಗಳ ಅಭಿವೃದ್ಧಿ ಹೆಸರಿನಲ್ಲಿ ನಡೆದಿದೆ ಎನ್ನಲಾದ ಎಲ್ಲ ಅಕ್ರಮಗಳನ್ನು ಬಯಲಿಗೆ ಎಳೆಯುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಮತ್ತಿಕೆರೆಯ ಜೆಪಿ ಪಾರ್ಕ್‌ ಚೌಡೇಶ್ವರಿ ಬಸ್‌ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಆರ್. ಆರ್. ನಗರ ಕ್ಷೇತ್ರ ವ್ಯಾಪ್ತಿಗೆ ಬರುವ ಹೊಸಕೆರೆ ಹಳ್ಳಿಯ ಹೊಸಕೆರೆ ಬಳಿ ಬೇನಾಮಿ ಹೆಸರಿನಲ್ಲಿ ಶಾಸಕರು ಜಮೀನು ಖರೀದಿ ಮಾಡಿದ್ದಾರೆ. ಆ ಜಮೀನಿಗೆ ಹೋಗಲು ಕೆರೆ ಮಧ್ಯದಲ್ಲಿಯೇ ರಸ್ತೆ ಮಾಡಿದ್ದಾರೆ. ಕೆರೆ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನೋಡಿಕೊಂಡು ಸುಮ್ಮನಿರುವುದೇ? ಅಭಿವೃದ್ಧಿ ಮಾಡದೆ ನೂರಾರು ಕೋಟಿ ಹಣ ಲೂಟಿ ಮಾಡಲಾಗಿದೆ’ ಎಂದು ದೂರಿದರು. ‘ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಆರ್. ಆರ್. ನಗರದಲ್ಲಿ ನಡೆದಿರುವ ಅಕ್ರಮ, ಕಳಪೆ ಕಾಮಗಾರಿ ತನಿಖೆ ನಡೆಸಲು ಸಿದ್ಧ. ಯಾವ ರೀತಿಯಲ್ಲಿ ಬಿಜೆಪಿ ಶಾಸಕರು ಮೋಸ ಮಾಡಿ ಗೆಲುವು…

Read More

ತಿಪಟೂರು: ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಲಾರಿ ಮಾಲೀಕರ ಹೈರಾಣಾಗಿದ್ದು ಬೆಲೆ ಏರಿಕೆ ನಡುವೆ ಕೆ.ಬಿ.ಕ್ರಾಸ್ ಮೈನ್ಸ್ ಟ್ರಾನ್ಸ್ ಪೋರ್ಟ್ ಮಾಲೀಕರು ಲಾರಿ ಮಾಲೀಕರಿಗೆ ಟೆನೇಜ್ ಹಣ ಕಡಿತಗೊಳಿಸಿ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಕೆ.ಬಿ ಕ್ರಾಸ್ ನಲ್ಲಿ ಚಿಕ್ಕನಾಯ್ಕನಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಸೇವಾ ಅಭಿವೃದ್ದಿ ಸಂಘದಿಂದ  ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಟ್ರಕ್ ಮಾಲೀಕರ ಸಂಘದ ಅಧ್ಯಕ್ಷ ಮುಜಾಮಿಲ್ ಪಾಷ,  ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಭರತ್ ರಾಜ್ ಮೈನ್ಸ್ ನಿಂದ ಬಳ್ಳಾರಿ ಹೊಸಪೇಟೆಗೆ ಟನ್ ಅದಿರು ಸಾಗಿಸಲು ಎಂಟುನೂರು ರೂಪಾಯಿ ನಿಗದಿಗೊಳಿಸಲಾಗಿತ್ತು, ಆರುತಿಂಗಳ ಕಾಲಾ ಎಂಟುನೂರು ರೂಪಾಯಿ ನೀಡಿದ, ಟ್ರಾನ್ಸ್ ಪೋರ್ಟ್ ಕಂಪನಿ ಮಾಲೀಕರು ಏಕಾಏಕಿಯಾಗಿ ಏಳುನೂರು ರೂಪಾಯಿ ಟನ್ ಗೆ ನೀಡಲು ಮುಂದಾಗಿರುವುದು ಸರಿಯಲ್ಲ, ಇತ್ತಿಚಿನ ದಿನಗಳಲ್ಲಿ ಡಿಸೇಲ್ ಬೆಲೆ ಏರಿಕೆ, ಸ್ಪೇರ್ ಸ್ಪಡ್ಸ್ ಬೆಲೆ ಏರಿಕೆ , ಟಯರ್ ಬೆಲೆ ಏರಿಕೆಯಾಗಿದೆ…

Read More

ಬೆಂಗಳೂರಿನ ಪ್ರೆಸ್ ಕ್ಲಬ್ ಆಫ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಳಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ ಎಂದರು. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಪಿ. ರಾಮಯ್ಯ, ಡಾ. ಆರ್. ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ. ಉಮಾಪತಿ, ಸುವರ್ಣ ನ್ಯೂಸ್…

Read More

ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ. ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‌ ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತೋದ್ದಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು. ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ…

Read More