Author: admin

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಹತ್ತಿರದ ದೊಡ್ಡೇಗೌಡನ ಪಾಳ್ಯದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಕರಡಿಯೊಂದು, ಸೋಮವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ತಾಲ್ಲೂಕಿನ ಸಿ.ಎನ್. ದುರ್ಗಾ ಹೋಬಳಿ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡು, ಬೆಳೆಗಳನ್ನು ನಾಶ ಮಾಡುತ್ತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಮತ್ತು ರೈತರು ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿ ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು.  ಜಮೀನಿನಲ್ಲಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಟ್ಟು ಅದರೊಳಗೆ ಹಲಸಿನ ಹಣ್ಣು ಮತ್ತು ಜೇನುತುಪ್ಪವನ್ನು ಇಡಲಾಗಿತ್ತು. ತಡರಾತ್ರಿ ಆಹಾರ ಹರಿಸಿ ಬಂದ ಕರಡಿಯು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಕರಡಿಯನ್ನು ಕಂಡು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ , ತಾಲ್ಲೂಕಿನ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದಲ್ಲಿ…

Read More

ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಬ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆಗುರುತಾಗಲಿದೆ.ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ…

Read More

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ. ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಸಂಚಾರಕ್ಕೆ ಎಕ್ಸ್‌ಪ್ರೆಸ್ ವೇ ಮುಕ್ತವಾದಾಗಲೇ ಬೈಕ್, ಆಟೊ ಹಾಗೂ ಕೃಷಿಗೆ ಬಳಸುವ ವಾಹನಗಳ ಸಂಚಾರವನ್ನು ನಿಷೇಧಿಸಬೇಕು ಎಂಬು ಮಾತು ಕೇಳಿ ಬಂದಿತ್ತು. ಈ ಕುರಿತು, ಪ್ರಾಧಿಕಾರ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಕಳಿಸಿ ಕೊಟ್ಟಿತ್ತು. ಆಗ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ನಂತರ ವಿಷಯ ತಣ್ಣಗಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ ಎಂದರು. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ. ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ.? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ.? ಎಂದು ಪ್ರಶ್ನೆ ಮಾಡಿದರು. ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ.? ಎಂದು ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ ಎಂದು…

Read More

ದಲಿತ ಸಮುದಾಯದಲ್ಲಿ ಭೂಮಿ ಶೇ 6ರಷ್ಟು ಇದ್ದರೆ, ಶೇ 78 ಭಾಗ ಮೇಲ್ಟಾತಿ ಕೈಯಲ್ಲಿದೆ. ಇದು ರಾಜಕೀಯ ಶಕ್ತಿಯನ್ನು ಅವರಿಗೆ ತಂದುಕೊಟ್ಟಿದೆ’ ಎಂದು ವಕೀಲ ಹರಿರಾಮ್ ತಿಳಿಸಿದರು. ದಲಿತ ವಿಮೋಚನಾ ಸೇನೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜಯಂತ್ಯುತ್ಸವದ ಅಂಗವಾಗಿ ನಡೆದ ಬಹುಜನ ಸ್ವಾಭಿಮಾನ ದಿನಾಚರಣೆ ಮತ್ತು ಮಾಳವ ನಾರಾಯಣ ಅವರು ರಚಿಸಿರುವ ‘ಕರ್ನಾಟಕದ ಅಂಬೇಡ್ಕರ್ ಪ್ರೊ. ಬಿ. ಕೃಷ್ಣಪ್ಪ’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಕೈಗಾರಿಕೆ, ಉದ್ಯಮ, ಮಾಧ್ಯಮ, ಸಹಕಾರಿ ಕ್ಷೇತ್ರಗಳಲ್ಲಿ ದಲಿತರಿಗೆ ನಿರೀಕ್ಷಿತ ಪ್ರಾತಿನಿಧ್ಯ ದೊರೆತಿಲ್ಲ. ಇದರಿಂದಾಗಿ ಆರ್ಥಿಕವಾಗಿಯೂ ಶೂನ್ಯವಾಗಿದ್ದಾರೆ ಎಂದರು. ‘ಶಿಕ್ಷಣ ಪಡೆಯುತ್ತಿರುವ ದಲಿತ ಯುವಸಮುದಾಯದವರಲ್ಲಿ ನಿಮ್ಮ ಗುರಿ ಏನು ಎಂದು ಕೇಳಿದರೆ ಸರ್ಕಾರಿ ಉದ್ಯೋಗ ಪಡೆಯುವುದು ಎಂದು ಹೇಳುತ್ತಿದ್ದಾರೆ. ಆದರೆ, ಈಗಿನ ಉದ್ಯೋಗಗಳಲ್ಲಿ ಶೇ 0. 6ರಷ್ಟು ಮಾತ್ರ ಸರ್ಕಾರಿ ಉದ್ಯೋಗವಾಗಿದೆ. ಅದರಲ್ಲಿ ದಲಿತರಿಗೆ ಶೇ 0. 2ರಷ್ಟು ಮಾತ್ರ ಸಿಗುತ್ತಿದೆ ಎಂದು ತಿಳಿಸಿದರು. ನಿವೃತ್ತ ಪ್ರಾಧ್ಯಾಪಕ ಎಚ್. ಗೋವಿಂದಯ್ಯ…

Read More

ರಾಜ್ಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತುರ್ತು ಸಭೆ ನಡೆಸುವ ಮೂಲಕ ಮಳೆಯ ಮಾಹಿತಿ ಕಲೆ ಹಾಕಿದ್ದಾರೆ. ಕಂದಾಯ ಸಚಿವ ಕೃಷ್ಣಭೈರೇಗೌಡ ವಿಕಾಸಸೌಧದಲ್ಲಿ ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಹಿಂದೆ ಹೇಳಿದ್ದೆ ಜುಲೈ ತಿಂಗಳಲ್ಲಿ ಮಳೆಯಾಗುತ್ತೆ ಅಂತ ಹವಾಮಾನ ಇಲಾಖೆ ಹೇಳಿತ್ತು. ಜೂನ್ ತಿಂಗಳಲ್ಲಿ 56 % ಮಳೆ ಕೊರತೆ ಇತ್ತು. ಒಂದು ವಾರದ ಹಿಂದೆ 29% ಇಳಿದಿತ್ತು. ನಿನ್ನೆಗೆ 19% ಮಳೆ ಕೊರತೆ ಕಡಿಮೆ ಆಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ಶೇ 14% ಕೊರತೆ ಇದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಸ್ತಿ ಕೊರತೆ ಇದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಕೊರತೆ ಇದೆ. ಒಂದು ವಾರದಲ್ಲಿ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ರಾಜ್ಯದ ಬಹುತೇಕ ಮಳೆ ಕೊರತೆ ಇತ್ತು.…

Read More

ಬೆಂಗಳೂರು ದಕ್ಷಿಣ ವಲಯ – 1ರ ಹನುಮಂತನಗರದ ಸುಂಕೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಐನೂರಕ್ಕೂ ಹೆಚ್ಚು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆಯನ್ನು ಗೋ ಸಂರಕ್ಷಕ, ಸಮಾಜ ಸೇವಕರಾದ ಮಹೇಂದ್ರ ಮುನ್ನೋತ್ ಅವರು ಮಾಡಿದರು. ನಂತರ ಅವರು ಮಾತನಾಡಿ ಉಳ್ಳವರು ತಮ್ಮ ಗಳಿಕೆಯಲ್ಲಿ ಇಂತಿಷ್ಟು ಎಂದು ಸ್ವಲ್ಪ ಹಣವನ್ನು ಉಳಿಸಿ ಅದನ್ನು ಸಮಾಜದ ಅವಶ್ಯಕತೆ ಇರುವವರಿಗೆ ನೀಡಿ ಜನ್ಮ ಸಾರ್ಥಕ ಪಡಿಸಿಕೊಳ್ಳಿ ಎಂದರು. ಪ್ರತಿ ವರ್ಷ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಲಕ್ಷಾಂತರ ನೋಟ್ ಪುಸ್ತಕವನ್ನು ನೀಡುತ್ತು ಬಂದಿದ್ದೇನೆ ಎಂದರು. ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯೆ ಹಾಗೂ ಗ್ರೇನ್ ಮರ್ಚೆಂಟ್ ಕೋ-ಅಪರೆಟಿವ್ ಬ್ಯಾಂಕ್ ನ ನಿರ್ದೇಶಕಿ ಎನ್. ಮಾಲಿನಿ ಮಾತನಾಡಿ ಸರಕಾರಿ ಶಾಲೆಯ ಮಕ್ಕಳಿಗೆ ಅವಶ್ಯಕತೆ ಇರುವ ಸಾಮಗ್ರಿಗಳನ್ನು ದಾನಿಗಳು ನೀಡಿ ಆ ಮಕ್ಕಳ ಓದಿಗೆ ನೇರವಾಗುತ್ತಿರುವುದು ಅಭಿನಂದನೀಯವದದು ಎಂದರು, ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ವಿದ್ಯಾ ದಾನ. ಅದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ನಮ್ಮ ಕೋಟಿ ನಮನಗಳು…

Read More

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1923 ರಲ್ಲಿ ಬ್ರಿಟಿಷರು ನಿರ್ಮಿಸಿದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹವು ದೇಶದ ಅತಿದೊಡ್ಡ ಜೈಲುಗಳಲ್ಲಿ ಒಂದಾಗಿದೆ. 100 ವರ್ಷಗಳ ಹಳೆಯದಾದ ಈ ಜೈಲು ನಮ್ಮ ರಾಷ್ಟ್ರದ ಇತಿಹಾಸದ ಭಾಗವಾಗಿದೆ. ಬೆಳಗಾವಿಯಿಂದ 6 ಕಿಮೀ ದೂರದಲ್ಲಿ, ಹಿಂಡಲಗಾ ಜೈಲನ್ನು ಸುಮಾರು 99 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. 99 ಎಕರೆಯಲ್ಲಿ 30 ಎಕರೆಯಷ್ಟು ಭೂಮಿಯನ್ನು ಕೃಷಿ ಮತ್ತು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಲಾಗಿದೆ. ಇದು ಹಸಿರು ಸೆರೆಮನೆಯಾಗಿದ್ದು, ವಿಭಾಗಗಳ ನಡುವಿನ ತೆರೆದ ಸ್ಥಳಗಳಲ್ಲಿ ಹೇರಳವಾದ ಮರಗಳು ಮತ್ತು ಸಸ್ಯವರ್ಗವನ್ನು ಹೊಂದಿದೆ. ಈ ಪರಿಸರವನ್ನು ಕಾಪಾಡಿಕೊಳ್ಳಲು ಸಿಬ್ಬಂದಿ ಮತ್ತು ಕೈದಿಗಳ ಪರಿಶ್ರಮವಿದೆ. ಜೈಲು ಎರಡು ದೊಡ್ಡ ಸಂಕೀರ್ಣಗಳನ್ನು ಒಳಗೊಂಡಿದೆ. ಒಂದು ಸಂಕೀರ್ಣವು ಪುರುಷ ಅಪರಾಧಿಗಳಿಗೆ ಬ್ಯಾರಕ್‌ ಗಳನ್ನು ಹೊಂದಿದೆ. ಇನ್ನೊಂದು ವಿಚಾರಣಾಧೀನ ಕೈದಿಗಳಿಗೆ. ಅಪರಾಧಿಗಳ ಕೆಲಸಕ್ಕೆ ನೇಕಾರಿಕೆ, ಮತ್ತು ಟೈಲರಿಂಗ್ ಸೌಲಭ್ಯವಿದೆ. ಅಂಡರ್ ಟ್ರಯಲ್ ವಿಭಾಗದಲ್ಲಿ ಸೆಲ್‌ ಗಳು ಮತ್ತು ಬ್ಯಾರಕ್‌ ಗಳಿವೆ. ಇಲ್ಲಿ ಗ್ರಂಥಾಲಯ, ಮರಗೆಲಸ ವಿಭಾಗ, ಟೈಲರಿಂಗ್…

Read More

ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಲ್ಲಿ ಕೆಲವೊಂದು ಮಹತ್ವದ ಮಾರ್ಪಾಡುಗಳನ್ನು ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದು, ಇದರ ಬಗ್ಗೆ ಇಲಾಖೆಯ ಹಿರಿಯ ಅಧಿಜಾರಿಗಳ ಜೊತೆಗೆ ಚರ್ಚೆ ನಡೆಯುತ್ತಿದೆ ಎಂದು ಖುದ್ದು ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಏನಿದು ಪೂರಕ ಪರೀಕ್ಷೆಯಲ್ಲಿ ಹೊಸದಾದ ಮಾರ್ಪಾಡು ಎಂಬುದನ್ನು ನೋಡುವುದಾದ್ರೆ, ಈವರೆಗೂ ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಶೈಕ್ಷಣಿಕ ವರ್ಷದಲ್ಲಿ ಬರುವ ಪರೀಕ್ಷೆಯಲ್ಲಿ ಅನುತ್ತೀರ್ಣರಾದ್ರೆ, ಅಂತಹ ವಿದ್ಯಾರ್ಥಿಗಳಿಗೆ ಒಂದು ವರ್ಷ ಹಾಳಾಗದಂತೆ ಇಲಾಖೆ ಎರಡು ತಿಂಗಳೊಳಗೆ ಪರೀಕ್ಷೆ ನಡೆಸಿ, ಅವರು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿತ್ತು. ಇದೀಗ ಇದೇ ಪದ್ಧತಿಯಂತೆ ಒಂದು ಪೂರಕ ಪರೀಕ್ಷೆಯ ಬದಲಿಗೆ ಎರಡು ಪೂರಕ ಪರೀಕ್ಷೆಗಳನ್ನು ನಡೆಸಿ, ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುವ ಹೊಸ ಕ್ರಮದ ಬಗ್ಗೆ ಇಲಾಖಾ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಒಮ್ಮೆ ಇದು ಅಂತಿಮವಾದ್ರೆ, ಸಿಎಂ ಗಮನಕ್ಕೆ ಇದನ್ನು ತಂದು ಬಳಿಕ ಅನುಷ್ಠಾನ ಮಾಡಲು ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನ ವಿವಿ ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜಾನ್ ಇಗ್ವಾಯತ್ (30) ಬಂಧಿತ ಆರೋಪಿ. ಆರೋಪಿ ಹಾಗೂ ಮತ್ತೋರ್ವ ನೈಜೀರಿಯಾ ಪ್ರಜೆ ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದರು. ಆದರೆ ಗೋವಾದಿಂದ ಮಾದಕ ವಸ್ತುಗಳನ್ನು ತಂದು ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್ ವೇರ್ ಉದ್ಯೋಗಿಗಳಿಗೆ ಹಾಗೂ ಪಾರ್ಟಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ವಿವಿ ಪುರಂ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಗಳು ಶೌಚಾಲಯದಲ್ಲಿ ಅಡಗಿಸಿಟ್ಟಿದ್ದ ಮಾದಕ ಪದಾರ್ಥ ಸೇರಿದಂತೆ ಸುಮಾರು 2 ಕೋಟಿ ಮೌಲ್ಯದ 1 ಕೆ. ಜಿ 20 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ, ಮೊಬೈಲ್ ಫೋನ್‌ ಗಳನ್ನ ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More