Subscribe to Updates
Get the latest creative news from FooBar about art, design and business.
- ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
- ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ತಡೆದು ಪ್ರತಿಭಟನೆ
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
Author: admin
ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ ಆವರಣದ ಗೇಟ್ ಮುರಿದು ಕಳ್ಳರು ವಾಹನವನ್ನು ಕದ್ದು ಪರಾರಿಯಾಗಿದ್ದಾರೆ. ವಾಹನ ಕದಿಯುವ ಧಾವಂತದಲ್ಲಿ ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಕಳ್ಳರು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಡೀಸೆಲ್ ಸಮಸ್ಯೆಯಿಂದ ಕಚೇರಿ ಆವರಣದಲ್ಲೇ ನಿಂತಿದ್ದ ವಾಹನಗಳಿಗೆ ಇತ್ತೀಚೆಗಷ್ಟೇ ಹಣ ಬಿಡುಗಡೆ ಮಾಡಿ ಎಲ್ಲಾ ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸಲಾಗಿತ್ತು. 4 ಕಸ ವಿಲೇವಾರಿ ವಾಹನಗಳಲ್ಲಿ ಒಂದು ಗಾಡಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ ಕಸ ವಿಲೇವಾರಿ ವಾಹನ ಕಳ್ಳತನವಾಗಿದೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಶಿವಮೊಗ್ಗ: ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಔರಾದ್: ಬೀದರ್ ಹೆದ್ದಾರಿಯಲ್ಲಿ ಬರುವ ಕೌಠಾ ಬಿ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ಬಲೂರ್ ಜೆ ಹಾಗೂ ಕೌಠಾ ಕೆ ಗ್ರಾಮದಲ್ಲಿ ದಿನೇ ದಿನೇ ಅಪಘಾತ ಹೆಚ್ಚುತ್ತಿವೆ. ಅದನ್ನು ತಡೆಗಟ್ಟಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೌಠಾ ಗ್ರಾಮ ಪಂಚಾಯತ್ ವತಿಯಿಂದ ಬಲೂರ್ ಜೆ ಹಾಗೂ ಕೌಠಾ ಕೆ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಬ್ಯಾರಿಕೆಟ್ ಅಳವಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಕುಮಾರ್ ಘಾಟೆ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ರವೀನಾ ಗೌತಮ್ ಮೇತ್ರೆ, ಉಪಾಧ್ಯಕ್ಷರಾದ ಪ್ರಭು ಬಳತೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಾಗುನಾಥ್ ರಡ್ಡಿ,ಸಂತಪುರ ಪೊಲೀಸ್ ಅಧಿಕಾರಿಗಾದ ASI ಶೇಷಾರವಾ T.A.ಕಿರಣ್ ರಾಥೋಡ್, ಸದಸ್ಯರಾದ ಪಂಡಿತ್, ದೇವರಾಜ್, ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ರಾಜ್ಯ ಸರಕಾರದ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲಿ ಸ್ಥಾಪಿಸಿದ್ದು, ಇಂದು 500ನೇ ಕೋಟಿ ಟಿಕೆಟ್ ಉಚಿತ ವಿತರಣೆ ತಲುಪಲಿದೆ. ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ಬಂದ ನಂತರ 2023ರ ಜೂನ್ 11ರಂದು ಅನುಷ್ಠಾನಕ್ಕೆ ಬಂದ ಶಕ್ತಿ ಗ್ಯಾರಂಟಿ ಯೋಜನೆಯಡಿ, ಕಳೆದ 2 ವರ್ಷ ಒಂದು ತಿಂಗಳ ಅವಧಿಯಲ್ಲಿ ಕೆಎಸ್ ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಸರಕಾರಿ ಸಾರಿಗೆ ಸಂಸ್ಥೆಯ 4 ನಿಗಮಗಳ ಸಾಮಾನ್ಯ ಸಾರಿಗೆ ಬಸ್ಗಳಲ್ಲಿ ಇದುವರೆಗೆ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೆಟ್ ಗಳ ಸಂಖ್ಯೆ ಇಂದು 500 ಕೋಟಿ ತಲುಪಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 500ನೇ ಕೋಟಿ ಉಚಿತ ಟಿಕೆಟ್ ವಿತರಣೆಗೆ ಸಾಕ್ಷಿಯಾಗಲಿದ್ದಾರೆ. ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿಎಂಟಿಸಿ ಸಾರಿಗೆ ಸಂಸ್ಥೆಯ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿ ಇದುವರೆಗೆ…
ಆಂಧ್ರಪ್ರದೇಶ: ಮಾವಿನ ಹಣ್ಣುಗಳ ಲೋಡ್ ಸಾಗಿಸುತ್ತಿದ್ದ ಲಾರಿ ಮುಗುಚಿ ಬಿದ್ದ ಪರಿಣಾಮ 9 ಕಾರ್ಮಿಕರು ಸಾವನ್ನಪ್ಪಿ, 10 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಚಿಟ್ಟೆಮ್ಮ (25), ಸುಬ್ಬರತ್ನಮ್ಮ (45), ಗಜ್ಜಲ ದುರ್ಗಯ್ಯ (32), ಗಜ್ಜಲ ಶ್ರೀನು (33), ಗಜ್ಜಲ ಲಕ್ಷ್ಮಿ ದೇವಿ (36), ರಾಧಾ (39), ಗಜ್ಜಲ ರಮಣ (42), ವೆಂಕಟ ಸುಬ್ಬಮ್ಮ (37) ಸ್ಥಳದಲ್ಲೇ ಮೃತಪಟ್ಟರು. ವಡ್ಡಿವೇಡು ಗ್ರಾಮದ ಮುನಿಚಂದ್ರ (38) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ 10 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಾಜಂಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನ್ನಮಯ್ಯ ಜಿಲ್ಲೆಯ ರೈಲ್ವೆಕೊಡೂರು ತಾಲೂಕಿನ ಸೆಟ್ಟಿಗುಂಟ ಎಸ್ ಟಿ ಕಾಲೋನಿಯಲ್ಲಿ ದಿನಗೂಲಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುವ ಬುಡಕಟ್ಟು ಜನರು ಮಾವಿನ ಹಣ್ಣುಗಳನ್ನು ಕೀಳಲು ರಾಜಂಪೇಟೆ ಬಳಿಯ ಇಸುಕುಪಲ್ಲಿಗೆ ತೆರಳಿದ್ದರು. ಅವರು ಕೊಯ್ದ ಮಾವಿನ ಹಣ್ಣುಗಳನ್ನು ಲಾರಿಯಲ್ಲಿ ತುಂಬಿಸಿ ರೈಲ್ವೆಕೊಡೂರು ಮಾರುಕಟ್ಟೆ ಅಂಗಳಕ್ಕೆ ಸಾಗಿಸುತ್ತಿದ್ದರು. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು…
ರಾಮನಗರ: ಬಮೂಲ್ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ. ಈ ಕೆಲಸವನ್ನು ನಾನು ಮಾಡುತ್ತೇನೆ. ಇದಕ್ಕೆ ಎಲ್ಲ ನಾಯಕರ ಬೆಂಬಲ ಬೇಕು. ಎಲ್ಲರ ಜೊತೆಯೂ ನಾನು ಚರ್ಚೆ ನಡೆಸುತ್ತೇನೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸುರೇಶ್ ಅವರು ಭಾನುವಾರ ಮಾತನಾಡಿದರು. ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಮನವಿ ಎಂದರೆ ನಂದಿನಿ ಉಳಿಸಿ, ಬೆಳೆಸಿ, ಉತ್ಪನ್ನಗಳನ್ನು ಬಳಸಿ ಎಂದರು. ನಂದಿನಿ ಉತ್ಪನ್ನಗಳ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ. ಉದಾಹರಣೆಗೆ ಪನ್ನೀರಿನ ಬೇಡಿಕೆಗೆ ಶೇ.5ರಷ್ಟು ಮಾತ್ರ ನಾವು ಪೂರೈಕೆ ಮಾಡುತ್ತಿದ್ದೇವೆ. ಇದನ್ನು ಹೆಚ್ಚು ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಜನರೇ ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸುವ ಮೂಲಕ ಮಾರುಕಟ್ಟೆ ಹೆಚ್ಚು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು. ಹೊಸಕೋಟೆಯಲ್ಲಿ 22 ಎಕರೆ ಜಮೀನು,…
ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ ಅವರು, ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಾಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ ಎಂದಿದ್ದಾರೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು, ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಿಕ್ಕಿ (ಯು) ಗ್ರಾಮದ ಕಾಲೇಜು ಓದುತಿದ್ದ ಬಾಲಕಿ ವಂದನಾ ಗಣೇಶ್ ಪಾವಾರ (21) ಅನ್ನುವವಳು ಪಟ್ಟಣದ ಬಿಸಿಎಂ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ಪಟ್ಟಣದಲ್ಲಿ ಜರುಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ರಾತ್ರಿ ಊಟದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೃತ ಬಾಲಕಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ನಲ್ಲಿ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತಿದ್ದಳು ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಔರಾದ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಎಲ್ಲ ಮಾಹಿತಿಗಳನ್ನು ಕಲೆಹಾಕಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ . ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೀದರ್ : ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇ–ಪಾವತಿ ಅಭಿಯಾನ (ವಾರಸುದಾರರ ಹಕ್ಕು ಬದಲಾವಣೆ) ಆಂದೋಲನ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಔರಾದ್ ನ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮರಣ ಹೊಂದಿದ ಪಟ್ಟೆದಾರರ ಹೆಸರು ತೆಗೆದು, ಅವರ ಕಾನೂನು ಬದ್ಧ ವಾರಸುದಾರರ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲ ರೈತರು ಮೃತರ ಮರಣ ಪ್ರಮಾಣ ಪತ್ರ, ಕುಟುಂಬದ ವಂಶವೃಕ್ಷ, ಆಧಾರ್ ಕಾರ್ಡ್ ಹಾಗೂ ಪಹಣಿಯೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ. ಮರಣ ಹೊಂದಿದ ಪಟ್ಟೆದಾರರ ಹೆಸರು ಪಹಣಿಯಲ್ಲಿ ಮುಂದುವರಿದರೆ, ಬ್ಯಾಂಕ್ ಲೋನ್, ಬೆಳೆ ಪರಿಹಾರ, ಬೆಳೆ ವಿಮೆ, ಪಿಎಂ ಕಿಸಾನ್ ಯೋಜನೆ, ಬೀಜ, ಗೊಬ್ಬರ ಹಾಗೂ ಇತರೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಎಲ್ಲ ರೈತರು ಇ-ಪಾವತಿ ಖಾತೆ ಅಭಿಯಾನದ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ…