Author: admin

ತುಮಕೂರು: ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಇಂದು ಅಂಬೇಡ್ಕರ್ ಯುವ ಸೇನೆ ವತಿಯಿಂದ 208ನೇ ಭೀಮ–ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಯಿತು. ತಮ್ಮನ್ನು ಅವಮಾನ ಮಾಡಿ, ಸಮಾನತೆಯನ್ನು ನಿರಾಕರಿಸಿದ ಮರಾಠರ ಎರಡನೇ ಬಾಜೀರಾಯನ 28 ಸಾವಿರ ಮರಾಠ ಸೈನಿಕರ ವಿರುದ್ಧ ಐದು ನೂರು ಜನ ಮಹರ್ ಸೈನಿಕರು, ಸ್ವಾಭಿಮಾನಕ್ಕಾಗಿ ಭೀಮಾ ನದಿ ತೀರದ ಕೋರೆಗಾಂವ್ ಬಳಿ ನಡೆಸಿದ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ ಭೀಮಕೋರೆಗಾಂವ್ ಯುದ್ಧಸ್ಮಾರಕದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸೂಚಿಸುವ ಮೂಲಕ ಯುದ್ಧದಲ್ಲಿ ಮಡಿದ ಮಹರ್ ಸೈನ್ಯದ 22 ಜನರನ್ನು ಸ್ಮರಿಸಲಾಯಿತು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್.ಜಿ., ಭೀಮ ಕೋರೆಗಾಂವ್ ವಿಜಯೋತ್ಸವ ದೇಶದ ದಲಿತರಿಗೆ ಸ್ವಾಭಿಮಾನದ ಸಂಕೇತವಾಗಿದೆ. ದಲಿತರ ಸ್ವಾಭಿಮಾನಕ್ಕೆ, ಆತ್ಮ ಗೌರವಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂಬುದಕ್ಕೆ ಈ ಯುದ್ಧ ಸಾಕ್ಷಿಯಾಗಿದೆ. ಲಂಡನ್‌ನ ಕೊಲಂಬಿಯಾ ವಿವಿಯಲ್ಲಿ ಅಂಬೇಡ್ಕರ್ ಕಲಿಯುವ ವೇಳೆ ಅಲ್ಲಿನ ಲೈಬ್ರರಿಯಲ್ಲಿ ದೊರೆತ ಪುಸ್ತಕದಿಂದ ಎರಡನೇ ಬಾಜೀರಾಯನ ಸೈನ್ಯದ ವಿರುದ್ಧ ದಲಿತರು…

Read More

ಸರಗೂರು:  ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ಶಾಸಕ ಅನಿಲ್ ಚಿಕ್ಕಮಾದು ಶ್ರಮ ಪಡುತ್ತಿದ್ದಾರೆ. ಅದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನವನ್ನು ನೀಡಿ ತಾಲೂಕನ್ನು ಅಭಿವೃದ್ಧಿಪಡಿಸಲು ಸಹಕರಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದ್ದಾರೆ. ನಮ್ಮ ವಿಧಾನಸಭಾ ಕ್ಷೇತ್ರಕ್ಕೆ ದಿ.ಎಸ್.ಎಂ.ಕೃಷ್ಣರವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೋಟೆ ಎಂ.ಶಿವಣ್ಣ ವರಿಗೆ ಸಚಿವ ಸ್ಥಾನ ನೀಡಲಾಗಿತ್ತು.ಅಲ್ಲಿದ ಇಲ್ಲಿವರೆಗೂ ಯಾವುದೇ ಸ್ಥಾನ ಮಾನ ನೀಡಿಲ್ಲ.  ಅನೀಲ್ ಚಿಕ್ಕಮಾದು ರವರು ಹಿಂದುಳಿದ ತಾಲ್ಲೂಕು ಹಣೆಪಟ್ಟಿಯನ್ನು ಹೋಗಲಾಡಿಸಿಕೊಂಡು ಹಂತ ಹಂತವಾಗಿ ಬರುತ್ತಿದ್ದಾರೆ. ಅವರಿಗೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರವರು ಸಹಕಾರ ನೀಡುತ್ತಾ ಬರುತ್ತಿರುವುದರಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಅವುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಸಚಿವ ಸ್ಥಾನ ನೀಡಿ. ಶಾಸಕರ ರಾಜಕೀಯ ಗುರುಗಳಾದ ದಿ ಲೋಕಸಭಾ ಸದಸ್ಯ ದಿ ಆರ್.ಧ್ರುವನಾರಾಯಣ್ ಕ್ಷೇತ್ರಕ್ಕೆ ಅಭಿವೃದ್ಧಿಗೊಳಿಸಲು ಬುನಾದಿ…

Read More

ದೇವರ ಬಗ್ಗೆ ಈ ಲೌಕಿಕ ಜಗತ್ತಿನಲಲ್ಲಿ ನಾ ಕಂಡ ಕೆಲವು ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ, ನನಗೆ ಅನಿಸಿದ್ದನ್ನು ಇಲ್ಲಿ ಉಲ್ಲೇಖಿಸುತ್ತಿದ್ದೇನೆ, ಸಮಾಜದಲ್ಲಿ ನನ್ನ ಪ್ರಕಾರ 4 ವರ್ಗದ ಜನರು ಅನುಭವಿಸುತ್ತಿರುವ ಜೀವನವನ್ನು ಕಂಡಿದ್ದೇನೆ. ಒಂದೊಂದಾಗಿ ಗಮನಿಸುತ್ತಾ, ನನಗೆ ತಿಳಿದಿದ್ದನ್ನು ಇಲ್ಲಿ ತಿಳಿಸುವ ಯತ್ನ ಮಾಡಿದ್ದೇನೆ. ದೇವರನ್ನು ನಂಬಿ ಕೆಡದೇ ಹೋದವರು. ದೇವರನ್ನು ನಂಬದೇ ಕೆಡದೇ ಹೋದವರು. ದೇವರನ್ನು ನಂಬಿ ಕೆಡುಕ ಅನುಭವಿಸುವವರು. ದೇವರನ್ನು ನಂಬದೇ ಕೆಡುಕ ಅನುಭವಿಸುವವರು. ಮೊದಲನೆಯದಾಗಿ ದೇವರನ್ನು ನಂಬಿ ಕೆಡದೇ ಹೋದವರು, ಮತ್ತು ಅವರು ನಂಬಿದಷ್ಟೂ ಅವರಿಗೆ ಒಳ್ಳೆಯದು ಆಗುತ್ತಿರುವುದು, ಇವರು ಆಸ್ತಿಕರು ಎನ್ನಿಸಿಕೊಂಡವರು ಮತ್ತು ಇವರಿಗೆ ದೇವರೇ ನಮಗೆ ಎಲ್ಲವನ್ನು ಕೊಡುತ್ತಿದ್ದಾನೆ, ದೇವರಿಲ್ಲದಿದ್ದರೆ ನಮಗೆ ಜೀವನ ಕಲ್ಪಸಿಕೊಳ್ಳಲೂ ಸಾಧ್ಯವಿಲ್ಲ, ಭಯ ಭಕ್ತಿ ಪ್ರಕಟಿಸುವವರು ಮತ್ತು ದೇವರ ಬಗ್ಗೆ ಸ್ವಲ್ಪವೂ ನಕಾರಾತ್ಮ ಯೋಚನೆ ಮಾಡದಿರುವುದು, ಮತ್ತು ನಕಾರಾತ್ಮಕವಾಗಿ ಮಾತನಾಡುವವರನ್ನು ಕಂಡರೆ ಹಾಗೆಲ್ಲಾ ಮಾತನಾಡಬಾರದು ಎಂಬ ತಿಳುವಳಿಕೆ ಹೇಳುವ ಗುಣ ಹೊಂದಿರುತ್ತಾರೆ. ಇವರಿಗೆ ಸ್ವಲ್ಪ ಕಷ್ಟ ಎದುರಾದಾಗ ದೇವರಿಗೆ ನಾನು…

Read More

ಕೊರಟಗೆರೆ: ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ಡಿ.31ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ನಗರಾಭಿವೃದ್ಧಿ ಯೋಜನಾ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಯೋಗಾನಂದ್‌ ಅವರು ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿ ನೀಡಿದ್ದು, ದಿ. 31–12–2025ರಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್‌ ಅವರ ಸಹಿಯೊಂದಿಗೆ ಪ್ರಕಟಗೊಂಡಿರುವ ವಿಶೇಷ ರಾಜ್ಯ ಪತ್ರಿಕೆ ಸಂಖ್ಯೆ: ನಅಇ 73 ಎಂಎಲ್‌ ಆರ್ 2025(ಇ)ರಲ್ಲಿ ಕರ್ನಾಟಕ ಪೌರಸಭೆಗಳ ಕಾಯ್ದೆ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಘನವೆತ್ತ ರಾಜ್ಯಪಾಲರು ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಸಣ್ಣ ನಗರ ಪ್ರದೇಶವೆಂದು ಉದ್ಘೋಷಿಸಿ, ಕೊರಟಗೆರೆ ಪುರಸಭೆಯಾಗಿ ಪದನಾಮೀಕರಿಸಿ ಉದ್ಘೋಷಿಸಿರುತ್ತಾರೆ ಎಂದು ತಿಳಿಸಿದ್ದಾರೆ. 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ: ನೂತನ ಪುರಸಭೆ ವ್ಯಾಪ್ತಿಗೆ ಸದರಿ ಕೊರಟಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ 17.53 ಚದರ ಕಿಲೋಮೀಟರ್ ಪಟ್ಟಣ ಪ್ರದೇಶದ ಜೊತೆಗೆ ಕೊರಟಗೆರೆ ತಾಲ್ಲೂಕಿನ ಹೂಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ, ಹೊಸಹಳ್ಳಿ, ಕಾಮೇನಹಳ್ಳಿ, ಒಬ್ಬರದೇವರಹಳ್ಳಿ, ಗುಂಡಿನಪಾಳ್ಯ, ಹೂಲಿಕುಂಟೆ,…

Read More

ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಮತ್ತು ಮುಖಂಡರು ವಿಶೇಷ ಪೂಜೆ ಸಲ್ಲಿಸಿ 108 ತೆಂಗಿನ ಕಾಯಿ ಹೊಡೆದು ಹರಕೆಯನ್ನು ತೀರಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥನಾರಾಯಣ ಮಾತನಾಡಿ, ಡಾ.ಜಿ.ಪರಮೇಶ್ವರರವರು 8 ವರ್ಷಗಳ ಕಾಲ ಕೆ.ಪಿ.ಸಿ.ಸಿ ಅದ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ, 2013ರಲ್ಲಿ ಮತ್ತು 2018 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮವಹಿಸಿದ್ದಾರೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಿಲ್ಲ ಈಗ ಸಿದ್ದಾರಾಮಯ್ಯ ನವರು ಮುಖ್ಯಮಂತ್ರಿ ಸ್ಥಾನದಿಂದ ಬದಲಾದರೆ ಡಾ.ಜಿ.ಪರಮೇಶ್ವರ ರವರನ್ನೇ ಮುಖ್ಯಮಂತ್ರಿ ಮಾಡುವಂತೆ ಲಕ್ಷಾಂತರ ಜನರ ಕೂಗಾಗಿದೆ ಅದರಿಂದ ಹೊಸವರ್ಷದ ದಿನದಂದು ನಾವು ಕ್ಯಾಮೆನಹಳ್ಳಿ ಆಂಜಿನೇಯಸ್ವಾಮಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸದ್ದೇವೆ ಎಂದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಅರಕರೆ ಶಂಕರ್ ಮಾತನಾಡಿ, ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದ್ದು ಎಲ್ಲಾ ಜನಾಂಗದ…

Read More

ತುಮಕೂರು: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಉಪವಿಭಾಗ ಮತ್ತು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಜಿಲ್ಲೆಯ ಮಧುಗಿರಿ ಹಾಗೂ ತಿಪಟೂರು ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಕುರಿತು ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಸಭೆಗಳಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು. ಜಿಲ್ಲೆಯ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭವನಗಳ ನಿರ್ಮಾಣಕ್ಕಾಗಿ ಜಾಗವನ್ನು ಗುರುತಿಸಿ ಮಾಹಿತಿ ನೀಡುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಎಸ್‍ಸಿ/ಎಸ್‍ಟಿ…

Read More

ತುಮಕೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 1ರಿಂದ 31ರವರೆಗೆ ರಾಜ್ಯ ವ್ಯಾಪಿ ರಸ್ತೆ ಸುರಕ್ಷಾ ಮಾಸಾಚರಣೆ ನಡೆಸಲಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶಶಿಧರ್ ಶೆಟ್ಟಿ ಹೇಳಿದ್ದಾರೆ. ಬುಧವಾರ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, 2019 ರಿಂದ ಇಂದಿನವರೆಗೆ ರಾಜ್ಯದಲ್ಲಿ ಒಟ್ಟು 2,13,192 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 60,115 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಬೆಂಗಳೂರು ನಂತರ ತುಮಕೂರು ಜಿಲ್ಲೆಯಲ್ಲಿ ಹೆಚ್ಚು ಅಪಘಾತಗಳು ದಾಖಲಾಗುತ್ತಿವೆ ಎಂದ ಅವರು, ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಹಾಗೂ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ಅಧಿಕಾರಿಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ, ರ‍್ಯಾಲಿ,…

Read More

ತುಮಕೂರು: ಬೈಕ್‌ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯರನ್ನು ಕುಳ್ಳಿರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಬಳಿ ಇದ್ದ ಚಿನ್ನಾಭರಣಗಳನ್ನು ದೋಚುತ್ತಿದ್ದ ಅಂತರರಾಜ್ಯ ಕಳ್ಳನನ್ನು ವೈ.ಎನ್. ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಅನಂತಪುರ ಜಿಲ್ಲೆ ರಾಯದುರ್ಗ ಮಂಡಲದ ಸೋಮಲದೊಡ್ಡಿ ಗ್ರಾಮದ ಬಂಡಿಸುಬ್ರಹ್ಮಣ್ಯಂ (30) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 3.20 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಸೂಲನಾಯಕನಹಳ್ಳಿ ಗೇಟ್‌ನಿಂದ ನವೆಂಬರ್ 23 ರಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ದುರ್ಗಮ್ಮ ಹಾಗೂ ಡಿಸೆಂಬರ್ 8 ರಂದು ಪಳವಳ್ಳಿ ಕಟ್ಟೆಯ ಬಳಿ ಬಸ್‌ಗಾಗಿ ಕಾಯುತ್ತಿದ್ದ ದೊಡ್ಡಹಳ್ಳಿಯ ಗುಂಡಮ್ಮ ಎಂಬುವವರನ್ನು ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ, ಜಮೀನೊಂದರ ಬಳಿ ಆಕೆಯನ್ನು ಕರೆದುಕೊಂಡು ಹೋಗಿ, ಚಿನ್ನದ ಒಡವೆ ಬಿಚ್ಚಿಸಿಕೊಂಡು, ಕಿವಿಯಲ್ಲಿನ ಓಲೆ ಕಿತ್ತಿದ್ದನು. ಗುಂಡಮ್ಮ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸರದಲ್ಲಿ ಅರ್ಧ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…

Read More

ತುಮಕೂರು: ಮನೆಯ ಹಕ್ಕು ಪತ್ರ ನೀಡುವಲ್ಲಿ ತಾರತಮ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ಯಾತ್ಸಂದ್ರದ ಎಳ್ಳಾರಬಂಡೆಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹೊರವಲಯದಲ್ಲಿರುವ ಕ್ಯಾತ್ಸಂದ್ರದಲ್ಲಿರುವ ಎಳ್ಳಾರ ಬಂಡೆ, ಮಾರುತಿ ನಗರ, ಇಂದಿರಾ ನಗರ, ವಾರ್ಡ್ ನಂಬರ್ 34ರಲ್ಲಿ ಕಳೆದ 40 ವರ್ಷಗಳಿಂದ ಇದೇ ಗ್ರಾಮಗಳಲ್ಲಿ ವಾಸವಾಗಿದ್ದು, ಸದರಿ 40 ಗ್ರಾಮಸ್ಥರುಗಳಿಗೆ ಖಾತೆ ಮಾಡಿಕೊಟ್ಟು ಹಕ್ಕು ಪತ್ರಗಳನ್ನು ಪಾಲಿಕೆ ನೀಡಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇನ್ನುಳಿಕೆ 40 ಗ್ರಾಮಸ್ಥರಿಗೆ ಯಾವುದೇ ಹಕ್ಕು ಪತ್ರ ನೀಡಿಲ್ಲ. ಒಂದು ಮನೆಗಳಿಗೆ ಪಾಲಿಕೆಯು 3, 4 ಹಕ್ಕುಪತ್ರಗಳನ್ನು ನೀಡಿ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ವಂಚನೆಗೆ ಒಳಗಾಗಿರುವವರು ಪಾಲಿಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ನಿವಾರಿಸಬೇಕೆಂದು ಕೋರಿ ಮಾಜಿ ಸಚಿವ ಕೆ.ಎನ್. ರಾಜಣ್ಣರವರಿಗೆ, ಶಾಸಕ ಜ್ಯೋತಿಗಣೇಶ್‌ರವರಿಗೆ ಹಾಗೂ ಪಾಲಿಕೆ ಆಯುಕ್ತರಿಗೂ ಮನವಿ ಸಲ್ಲಿಸಿದ್ದಾಗಿ ಎಳ್ಳಾರಬಂಡೆಯ ಮುಖಂಡ ಜಯಸಿಂಹ ತಿಳಿಸಿದ್ದಾರೆ. ತಮ್ಮ ಸಮಸ್ಯೆಯನ್ನು ಪಾಲಿಕೆ ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೂ ಹೋಗಲು ಸಿದ್ಧವಿರುವುದಾಗಿ ಹೇಳಿದ್ದಾರೆ. ನಮ್ಮತುಮಕೂರಿನ…

Read More

ಶಿರಾ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಇರಬಾರದು. ಪಕ್ಷಾತೀತವಾಗಿ ಅಭಿವೃದ್ಧಿ ಆಗಬೇಕು. ಶಾಸಕರಿಗೆ ಇರುವಷ್ಟು ಅಧಿಕಾರ ಗ್ರಾಮ ಪಂಚಾಯಿತಿ ಸದಸ್ಯರಿಗೂ ಇದೆ. ಈ ನಿಟ್ಟಿನಲ್ಲಿ ಗ್ರಾಮಸಭೆಗಳನ್ನು ಪಂಚಾಯಿತಿ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕು. ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು ಎಂದು ದೆಹಲಿ ವಿಶೇಷ ಪ್ರತಿನಿಧಿ ಡಾ. ಟಿ.ಬಿ.ಜಯಚಂದ್ರ ಹೇಳಿದರು. ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹುಯಿಲ್‌ದೊರೆ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಹಾಗೂ ಎಸ್ ರಂಗನಹಳ್ಳಿ, ದೇವಿ ತಾಂಡ ಗ್ರಾಮಗಳ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಹೆಚ್ಚು ಗ್ರಾಮ ಪಂಚಾಯಿತಿ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಇದುವರೆಗೂ ಸುಮಾರು 17 ಗ್ರಾಪಂ ನೂತನ ಕಟ್ಟಡಗಳು ಪೂರ್ಣಗೊಂಡಿವೆ. ಇದು ರಾಜ್ಯದಲ್ಲಿಯೇ ಮಾದರಿ ಕೆಲಸವಾಗಿದ್ದು, ನೂತನ ಪಂಚಾಯಿತಿ ಕಟ್ಟಡಗಳಿಗೆ ಸರ್ಕಾರದಿಂದ 25 ಲಕ್ಷ ಅನುದಾನ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದರು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಗ್ರಾಮ ಲೆಕ್ಕಿಗರು, ಪಂಚಾಯಿತಿ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಇರುವಂತಾಗಬೇಕು. ಗ್ರಾಮ ಪಂಚಾಯಿತಿ ಕೆಲಸ ಹಾಗೂ ಕಂದಾಯ…

Read More