Author: admin

ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ಜೆ ಎಸ್ ನಗರದಲ್ಲಿ ನಡೆದಿದೆ. ನವೀನ್ (27) ಆತ್ಮಹತ್ಯೆಗೆ ಶರಣಾದ ಯುವಕ. ಚಾಮರಾಜನಗರ ಜಿಲ್ಲೆಯ ಚಿಕ್ಕಲೂರು ಮೂಲದ ನವೀನ್ ಕುಟುಂಬದವರೊಂದಿಗೆ ಬೆಂಗಳೂರಲ್ಲಿ ವಾಸವಿದ್ದ. ಬಾಳೆಕಾಯಿ ಮಂಡಿ ಇಟ್ಟುಕೊಂಡು ವ್ಯವಹಾರ ಮಾಡುತ್ತಿದ್ದ. ಯುವತಿಯೊಬ್ಬಳನ್ನು ನವೀನ್ ಪ್ರೀತಿಸುತ್ತಿದ್ದು, ಆಕೆ ಪ್ರೀತಿ ನಿರಾಕರಿಸಿದ ಕಾರಣ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ ಪ್ರೇಮ ವೈಫಲ್ಯದ ಬಗ್ಗೆ ಡೆತ್ ನೋಟ್‌ ನಲ್ಲಿ  ಬರೆದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಾಣ ಕಳೆದುಕೊಂಡಿದ್ದಾನೆ. ಮೃತ ನವೀನ್ ಕುಟುಂಬಸ್ಥರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಂಗಳೂರು ಮೂಲದ ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಸಂಕಷ್ಟಕ್ಕೆ ಸಿಲುಕುವ ಲಕ್ಷಣಗಳು ಗೋಚರಿಸುತ್ತಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ಮೂಲದ ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್‌ ನ ಕಾರ್ಯ ನಿರ್ವಹಣೆಗೆ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ನಿನ್ನೆಯಿಂದಲೇ ಜಾರಿಗೆ ಬರುವ ಕೆಲ ನಿರ್ಬಂಧಗಳನ್ನು ಹೇರಿದೆ. ಯಾವುದೇ ಹೂಡಿಕೆಗೆ ನಿರ್ಬಂಧ, ಸಾಲ ಎರವಲು ಪಡೆಯುವಂತಿಲ್ಲ, ಹೊಸದಾಗಿ ಠೇವಣಿ ಸ್ವೀಕರಿಸುವಂತಿಲ್ಲ, ಯಾವುದೇ ದೊಡ್ಡ ಮೊತ್ತದ ಪಾವತಿ ಮಾಡುವಂತಿಲ್ಲ. ಆರ್‌ಬಿಐ ಅನುಮತಿ ಇಲ್ಲದೇ ಬ್ಯಾಂಕ್‌ ನ ಆಸ್ತಿ ಮಾರಾಟ ಮಾಡುವಂತಿಲ್ಲ. ಪರಭಾರೆಯನ್ನು ಮಾಡುವಂತಿಲ್ಲ. ಒಪ್ಪಂದಗಳನ್ನು ಮಾಡಿಕೊಳ್ಳುವಂತಿಲ್ಲ. ಇನ್ನು ಗ್ರಾಹಕರು ತಮ್ಮ ಖಾತೆಯಿಂದ 50 ಸಾವಿರಕ್ಕಿಂತ ಹೆಚ್ಚು ಹಣ ಹಿಂಪಡೆಯುವಂತಿಲ್ಲ. ಹೀಗೆ ಹಲವು ನಿರ್ಬಂಧಗಳನ್ನು ಆರ್‌ಬಿಐ ಹೇರಿದ್ದು, ಬೆಂಗಳೂರು ಮೂಲದ ಮತ್ತೊಂದು ಬ್ಯಾಂಕ್ ಮುಳುಗಿ ಹೋಗುವ ಆತಂಕ ಸೃಷ್ಠಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ. ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು…

Read More

ಮೈಸೂರು: ಕೇರಳದ ವಯನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.ಹೆಚ್ ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಬಳಿ ಇರುವ ಕಬಿನಿ ಜಲಾಶಯ 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ‌ ‌ನೀರಿನ ಮಟ್ಟ 78.31 ಅಡಿ, ಜಲಾಶಯದ ಇಂದಿನ‌ ಒಳಹರಿವು 20,749 ಕ್ಯೂಸೆಕ್‌, ಜಲಾಶಯದ ಹೊರಹರಿವು 3333 ಕ್ಯೂಸೆಕ್, ಗರಿಷ್ಠ 19.52 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಇದೆ. ಜಲಾಶಯದಲ್ಲಿ ಸದ್ಯಕ್ಕೆ 16.09 ಟಿಎಂಸಿ ನೀರು ಸಂಗ್ರಹವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ನದಿಗೆ ಒಳಹರಿವು ಹೆಚ್ಚಳವಾಗಿದೆ. ಕೊಯ್ನಾ ಜಲಾಶಯ ಪ್ರದೇಶ 150 ಮಿಮೀ, ಮಹಾಬಳೇಶ್ವರ 185 ಮಿಮೀ, ನವಜಾ 201ಮಿಮೀ ಮಳೆಯಾಗುತ್ತಿರುವ ಹಿನ್ನೆಲೆ ಕೊಯ್ನಾ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಕೃಷ್ಣಾ ನದಿಗೆ 1 ಲಕ್ಷ 14 ಸಾವಿರ ಕ್ಯೂಸೆಕ್‌ ಕ್ಕಿಂತ ಹೆಚ್ಚು ನೀರು ಬಿಡಲಾಗುತ್ತಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 9 ಕೆಳಹಂತದ ಸೇತುವೆಗಳ ಜಲಾವೃತವಾಗಿದ್ದು, ಕುಡಚಿ – ಉಗಾರ ಸೇತುವೆ ಮುಳುಗಡೆ ಹಂತ ತಲುಪಿದೆ. ಕುಡಚಿ – ಉಗಾರ ಸೇತುವೆ ಮುಳುಗಡೆಗೆ ಕೇವಲ 5 ಅಡಿ ಮಾತ್ರ ಬಾಕಿ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ದಿವಂಗತ ಹಾಸ್ಯ ಚಕ್ರವರ್ತಿ ನರಸಿಂಹ ರಾಜು ರವರ 100ನೇ ವರ್ಷದ ಹುಟ್ಟುಹಬ್ಬವನ್ನು ಅವರು ಜನಿಸಿದ ತಿಪಟೂರು ನಗರದ ಕೋಟೆ ಭಾಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಾಸ್ಯ ಚಕ್ರವರ್ತಿ ಕರ್ನಾಟಕದ ಚಾರ್ಲಿ ಚಾಂಪಿಯನ್ ನರಸಿಂಹರಾಜುರವರ ಇಬ್ಬರು ಪುತ್ರಿಯರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು, ಜೊತೆಯಲ್ಲಿ ನರಸಿಂಹರಾಜುರವರ  ಅಳಿಯಂದಿರು   ಮೊಮ್ಮಕ್ಕಳು ಸಹ ಇದ್ದರು.   ಈ ಸಂದರ್ಭದಲ್ಲಿ ವಾರ್ಡ್ ನಂಬರ್ 2ರ ನಗರಸಭಾ ಸದಸ್ಯರಾದ  ಡಾ.ಓಹಿಲಾ ತರಕಾರಿ ಗಂಗಾಧರ್, ಮಾಜಿ ನಗರಸಭಾ ಸದಸ್ಯರಾದ ಪ್ರಸನ್ನ ಕುಮಾರ್, ಗುಡಿ ಗೌಡರಾದ ಪ್ರಕಾಶಣ್ಣನವರು, ಎಲೆ ಕಮಲಮ್ಮ, ಬದ್ರಿ, ಎಲೆ ಭಾಸ್ಕರ್,  ಕೋಟಿ ನಿವಾಸಿ ಪರಿಸರ ಪ್ರೇಮಿ ಬಾವಿಮನೆ ಶಿವಣ್ಣ, ಕಿರ ತೆರೆ ಚಿತ್ರನಟ ದಯಾನಂದ್ ಸಾಗರ್, ವಿಜಯ್ ಕುಮಾರ್, ಹಾಗೂ ಕೋಟೆ ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಜಿಲ್ಲಾ ವ್ಯಾಪ್ತಿಯ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಕನಿಷ್ಠ ರಕ್ಷಣೆ ಒದಗಿಸದೆ ಇರುವುದನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತುಮಕೂರು ಜಿಲ್ಲಾ ಘಟಕ ಖಂಡಿಸಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಗೇಟ್ ಹಾರಿ ಕಾರೊಂದರಲ್ಲಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿರುವುದು ಆ ಬಡ ಹೆಣ್ಣುಮಕ್ಕಳನ್ನು ನಿಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿ ನಿಲಯದಲ್ಲಿ ನಿಮ್ಮನ್ನು ಮತ್ತು ಇಲಾಖೆಯನ್ನು ನಂಬಿ ಬಿಟ್ಟಿರುವ ಪೋಷಕರಿಗೆ ಅಲ್ಪವಾದರೂ ಸಮಾಧಾನ ತಂದು ಕೊಟ್ಟಿದ್ದರೂ  ಸಹ ನಿಮ್ಮ ಇಲಾಖೆಯ ಮೇಲೆ ನಂಬಿಕೆ ಕಡಿಮೆ ಆಗಿದೆ ಎಂದಿದೆ. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯೋರ್ವಳು ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಹಾರಿ ಯಾವುದೋ ಕಾರಿನಲ್ಲಿ ಹೊರಗೆ ಹೋಗಿ ನಂತರ ಬೆಳಗಿನ ಜಾವ 5 ಗಂಟೆಗೆ ಅದೇ ಕಾಂಪೌಂಡ್ ಹಾರಿ ಬಂದಿರುವುದು ಪತ್ರಿಕೆಗಳಲ್ಲಿ ಪ್ರಕಟವಾಗಿದೆ.  ವಿಪರ್ಯಾಸವೆಂದರೆ …

Read More

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡೂ ಜಿಲ್ಲೆಗಳಲ್ಲಿ ಜುಲೈ 25ರಂದು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಇಲ್ಲಿನ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ…

Read More

ತುಮಕೂರು: ಬಸ್ಸಿನಲ್ಲಿ ಮಹಿಳೆಯರ ಹೊಡೆದಾಟ ಘಟನೆಯ ಬಗ್ಗೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತುಮಕೂರು ಬಸ್ ನಿಲ್ದಾಣ ತಲುಪುತ್ತಿದ್ದಂತೆ ಮಹಿಳೆಯರಿಬ್ಬರು ಸಿಟಿಗಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಮಹಿಳೆ ಒಬ್ಬರು ತುಮಕೂರು ಬಸ್ ನಿಲ್ದಾಣದಿಂದ ಬೆಳಗಾವಿಗೆ ಸೀಟನ್ನು ಕಾಯ್ದಿರಿಸಿದ್ದರು. ಆ ಸೀಟಿನಲ್ಲಿ ಬೆಂಗಳೂರಿನಿಂದ ಬಂದಂತಹ ಮಹಿಳೆಯೊಬ್ಬರು ಕುಳಿತಿದ್ದರು ಅದನ್ನು ಬಿಟ್ಟು ಕೊಡುವಂತೆ ಕೇಳಿದರೂ ಬಿಟ್ಟು ಕೊಟ್ಟಿಲ್ಲ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಒಂದು ಹಂತದಲ್ಲಿ ಇಬ್ಬರೂ ತಲೆ ಕೂದಲನ್ನು ಹಿಡಿದುಕೊಂಡು ಕಿತ್ತಾಡಿಕೊಂಡಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಹಾಗೂ ಚಾಲಕ ಇವರಿಬ್ಬರ ಜಗಳವನ್ನು ಬಿಡಿಸಲು ಎಷ್ಟೇ ಪ್ರಯತ್ನ ಪಟ್ಟರು ಸಾಧ್ಯವಾಗಲಿಲ್ಲ. ಬದಲಾಗಿ ಜಗಳ ಬಿಡಿಸಲು ಹೋದ ವ್ಯಕ್ತಿಗೆ ನೀನ್ಯಾವನೋ ಕೇಳಲು ಬೇವ*** ಎಂದು ಅವಾಚ್ಯ ಶಬ್ದಗಳಿಂದ ಮಹಿಳೆ ಬೈದಿದ್ದು, ಮತ್ತೆ ತನ್ನ ರೌದ್ರಾವತಾರ ತೋರಿದ್ದಾಳೆ. ಮಹಿಳೆಯರ ಜಗಳ ನಿಲ್ಲದ ಹಿನ್ನೆಲೆಯಲ್ಲಿ  ಬೇಸತ್ತ ಬಸ್…

Read More

ತುಮಕೂರು:  ಸೀಟ್ ಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದ್ದು ಬಿಡಿಸಲು ಹೋದ ಕಂಡೆಕ್ಟರ್ ಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ತುಮಕೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ ನಲ್ಲಿ ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ  ಕಾದಾಟ ಆರಂಭಿಸಿದ್ದಾರೆ. ಮಹಿಳೆಯರ ಜಗಳ ತಡೆಯಲು ಹೋದ ಕಂಡೆಕ್ಟರ್ ಗೆ ಚಪ್ಪಲಿಯಿಂದ ಥಳಿಸಿದ್ದಾಳೆ. ಮಹಿಳೆ ಹಲ್ಲೆ ನಡೆಸಿದ್ದರಿಂದಾಗಿ ಕಂಡೆಕ್ಟರ್ ತುಮಕೂರು ಟೌನ್ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More