Author: admin

ಬೆಂಗಳೂರು ನಗರದ ಗಂಗಮ್ಮನ ಗುಡಿ ಬಳಿ ಕಾರ್ಖಾನೆಯೊಂದರ ಕೌಂಪೌಂಡ್ ‌ನಲ್ಲಿದ್ದ ಸ್ಪಾಂಜ್ ತ್ಯಾಜ್ಯಕ್ಕೆ ಬುಧವಾರ ಸಂಜೆ ಬೆಂಕಿ ತಗುಲಿ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು. ಅಪಾರ ಪ್ರಮಾಣದ ತ್ಯಾಜ್ಯವನ್ನು ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಬೆಂಕಿ ಎತ್ತರಕ್ಕೆ ಹೊತ್ತಿ ಉರಿಯಿತು. ದಟ್ಟಿಸಿದ ಹೊಗೆಯೂ ಆತಂಕ ಸೃಷ್ಟಿಸಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದವು. ಸ್ಥಳೀಯರೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಗೆ ನೆರವು ನೀಡಿದರು.

Read More

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ. ನೇಪಾಳ ರಾಜಧಾನಿ ಕಲ್ಮಂಡುವಿನಿಂದ 33 ವರ್ಷದ ನಿಶಾ ಮಿತ್ತಲ್ ಅಗರ್ವಾಲ್ ಅವರು ಕುಟುಂಬದೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಟರ್ಮಿನಲ್ 2 ನಲ್ಲಿ ಗಾಜಿನ ಬಾಗಿಲನ್ನು ಗಮನಿಸದ ನಿಶಾ ಅವರು ಗುದ್ದಿಕೊಂಡಿದ್ದರು.

Read More

ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರನ್ನು ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಗುಂಟೆ, ವರ್ತೂರು, ಕೆ. ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Read More

ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಯಿತು. ಬಳಿಕ ಮಾತನಾಡಿದ ಸಚಿವರು, ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು. ಮುಂದಿನ ಉಡುಪಿ ಭೇಟಿ ವೇಳೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗುವುದು ಎಂದರು. ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ‌ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ, ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ…

Read More

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?: ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಏನಿದು ಬ್ರೈಟ್ ಭಾರತ್!?: ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್. ಈ…

Read More

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾನಗರದಲ್ಲಿ ಕಳೆದ  50 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು  ಕೂಡ  ಬೇವಿನಸೊಪ್ಪು, ಸಿಹಿ ತಿಂಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ  ಜಮಾಯಿಸಿದ  ಪ್ರತಿಭಟನಾಕಾರರು ಭುವನೇಶ್ವರಿ ವೃತ್ತದ ತನಕ ರ್ಯಾಲಿ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಬೇವಿನಸೊಪ್ಪು, ಸಿಹಿ ಪ್ರದರ್ಶಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಮಂಡಳಿ  ತಮಿಳುನಾಡಿಗೆ ಸಿಹಿ ಕೊಟ್ಟು, ಕರ್ನಾಟಕದ ಪಾಲಿಗೆ ಕಹಿ ಕೊಟ್ಟು ಅನ್ಯಾಯ ಮಾಡಿದೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದರು. ಕನ್ನಡ ರಾಜ್ಯೋತ್ಸವ ಸುವರ್ಣ ಮಹೋತ್ಸವದ ಸಿಹಿ ಒಂದೆಡೆಯಾದರೇ ತಮಿಳುನಾಡಿಗೆ ನೀರು ಹರಿಯುತ್ತಿರುವುದು ಕನ್ನಡಿಗರ ಪಾಲಿಗೆ ಕಹಿಯಾಗಿದೆ ಎಂದು ಕಿಡಿಕಾರಿದರು.

Read More

ಉಡುಪಿ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದು ಕೋರ್ಟ್ ಒಂದು ದಿನ ಮಾತ್ರ ಕಸ್ಟಡಿಗೆ ನೀಡಿದ್ದರಿಂದ ವಿಚಾರಣೆ ನಡೆಸಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚೈತ್ರಾಳನ್ನು ಪೊಲೀಸ್ ಕಸ್ಟಡಿಗೆ ಪಡೆದ ಕೋಟ ಪೊಲೀಸರು ಮಂಗಳವಾರ ಬೆಂಗಳೂರಿನಿಂದ ಕೋಟಕ್ಕೆ ಕರೆತಂದಿದ್ದರು. ಬ್ರಹ್ಮಾವರ ಸಿಪಿಐ ದಿವಾಕರ್ ಪಿಎಂ ನೇತೃತ್ವದಲ್ಲಿ ಕೋಟ ಪಿಎಸ್ಐ ಶಂಭುಲಿಂಗಯ್ಯ ತಂಡ ವಿಚಾರಣೆ ನಡೆಸಿದ್ದು ಆಕೆಯಿಂದ ಹೇಳಿಕೆ ಪಡೆಯಲಾಗಿದೆ. ಕೋಟ ಠಾಣೆಯಲ್ಲಿ ಈ ಹಿಂದೆ ಸುಧೀನ ಎನ್ನುವರು ನೀಡಿದ ದೂರಿನ ಕುರಿತಂತೆ ದಿನವಿಡೀ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಚೈತ್ರಾಳನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿಪೀಠ…

Read More

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ…

Read More

ಕಡಲೆಕಾಯಿ (ಶೇಂಗಾ) ಎಷ್ಟು ಆರೋಗ್ಯಕ್ಕೆ ಒಳ್ಳೆಯದೋ, ಅಷ್ಟೇ ಆರೋಗ್ಯಕ್ಕೆ ಹಾನಿಯೂ ಹೌದು. ಇವುಗಳನ್ನು ಹೆಚ್ಚು ತಿನ್ನುವುದರಿಂದ ಕಬ್ಬಿಣ, ಮ್ಯಾಂಗನೀಸ್, ಸತು ಮತ್ತು ಕ್ಯಾಲ್ಸಿಯಂನಂತಹ ಇತರ ಖನಿಜಗಳ ಹೀರಿಕೊಳ್ಳುವಿಕೆಗೆ ಅಡ್ಡಿಯಾಗಬಹುದು. ಅವು ತೂಕ ನಷ್ಟಕ್ಕೂ ಅಡ್ಡಿಯಾಗುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅದರಲ್ಲೂ ಅಲರ್ಜಿ ಸಮಸ್ಯೆ ಇರುವವರು ಇವುಗಳನ್ನು ತಿನ್ನಬಾರದು. ತಿಂದರೆ ಗಂಟಲು ನೋವು, ಚರ್ಮದ ಸಮಸ್ಯೆ, ಮೂಗು ಸೋರುವಿಕೆ, ಜೀರ್ಣಕ್ರಿಯೆ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳು ಬರುತ್ತವೆ.

Read More

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ಡಿಕೆಶಿ ತಿಹಾರ್ ಜೈಲಿನಲ್ಲಿ ಸೋನಿಯಾಗೆ ಧಮ್ಕಿ ಹಾಕಿದ್ದಾನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸಿಡಿ ವಿಚಾರವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು.

Read More