Author: admin

ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಒತ್ತಾಯಿಸಿ ಆಮ್‌ ಆದ್ಮಿ ಪಕ್ಷ, ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು,ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಸುಮಾರು 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಮನ್ವಯತೆ ಸಾಧಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಹಿಂಸಾಚಾರ ಹತೋಟಿಗೆ ತರಲು ಮಣಿಪುರ ಸರ್ಕಾರಗಳು ವಿಫಲವಾಗಿದೆ. ಇತ್ತೀಚೆಗೆ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಪ್ರತಿಭಟನೆ ನಡೆಸಿದ ಪರಿಣಾಮ ಘಟನೆ ಹಿಂಸಾಚಾರ ಇನ್ನಷ್ಟು ತಾರಕ್ಕೇರಿದೆ. ಮಣಿಪುರದ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಣಿಪುರದಲ್ಲಿ ಅಮಾನವೀಯ ಘಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರ ಸತ್ತಿದೆ. ಮಣಿಪುರದ ಮುಖ್ಯಮಂತ್ರಿಯನ್ನು ವಜಾ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಆಮ್ ಆದ್ಮಿ  ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಿಸಿದರು. ಎಎಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಶನಿವಾರ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ‘ಕರ್ನಾಟಕದಲ್ಲಿ ಸದನ ಹೇಗೆ ನಡೆಯುತ್ತಿದೆ ಎಂಬುದನ್ನು ನೋಡಿದ್ದೀರಿ. ವಾದ, ಪ್ರತಿವಾದ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಿಟ್ಟನ್ನು ಮಾತಿನ ಮೂಲಕ ತೋರಿಸಬೇಕು. ಕಾಗದ ಹರಿದು, ಸ್ಪೀಕರ್ ಮೇಲೆ ಎಸೆದು ತೋರಿಸುವುದಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು. ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ, ಲೋಕಸಭಾ ಚುನಾವಣೆಗಳು ಒಂದು ವರ್ಷದ ಒಳಗೆ ನಡೆಯಲಿವೆ. ಇದೇ ಸಮಯದಲ್ಲಿ ಘಟಬಂಧನ್ ಕೂಡ ನಡೆದಿದೆ. ನಾವೇನು ಮಾಡಬೇಕು ಎಂಬ ಪ್ರಶ್ನೆ ಈ ಸಂದರ್ಭದಲ್ಲಿ ಮೂಡುತ್ತದೆ. ಪ್ರಜಾಪ್ರಭುತ್ವ ಉಳಿಸಲು, ಸಂವಿಧಾನ ರಕ್ಷಿಸಲು, ಕೋಮುವಾದ ದೂರ ಮಾಡಲು ರಾಷ್ಟ್ರಮಟ್ಟದಲ್ಲಿ ಪಕ್ಷಗಳು ಕೈಜೋಡಿಸಿವೆ. ಆದರೆ, ರಾಜ್ಯದಲ್ಲಿನ ಚುನಾವಣೆಗಳಲ್ಲಿ…

Read More

ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ಈ ಹಿಂದೆ ನೀಡಿದ್ದ ನಿರ್ದೇಶನಗಳ ಅನ್ವಯ ಸಮಗ್ರ ನಿಯಮಗಳನ್ನು ಜಾರಿ ಮಾಡದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಕೆರೆ-ರಾಜಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ, ‘ಸಿಟಿಜನ್ ಆ್ಯಕ್ಷನ್ ಗ್ರೂಪ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ‘ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೆ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ಬಿಬಿಎಂಪಿ ತಿಳಿಸಿಲ್ಲ’ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ. ‘ಒತ್ತುವರಿ ತೆರವು ಸಂದರ್ಭದಲ್ಲಿ ಕಾರ್ಯಾಚರಣೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ, ಅಂತಹ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ವಿವರಿಸಿಲ್ಲ’ ಎಂದು ಹೇಳಿದೆ. ವೈಜ್ಞಾನಿಕ ಸಲಹೆಗಳನ್ನು ಪಡೆದುಕೊಂಡು ಸಮಗ್ರವಾದ ಯೋಜನೆ ರೂಪಿಸಿ ಎಂದು ಬಿಬಿಎಂಪಿಗೆ…

Read More

ರಾಷ್ಟ್ರಧ್ವಜ ದಿನದ ಅಂಗವಾಗಿ ಅಂಚೆ ಇಲಾಖೆ ಕರ್ನಾಟಕ ವೃತ್ತದಿಂದ ವಿಶೇಷ ಲಕೋಟೆ ಮತ್ತು ವಿಶೇಷ ರಾಖಿ ಲಕೋಟೆಯನ್ನು ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಬಿಡುಗಡೆ ಮಾಡಿದರು. ವಿಶೇಷ ಲಕೋಟೆಗಳು ಬೆಂಗಳೂರು ಜಿಪಿಒ ಅಂಚೆಚೀಟಿಗಳ ಸಂಗ್ರಹಾಲಯ, ಮಂಗಳೂರು, ಮೈಸೂರು ಮತ್ತು ಕರ್ನಾಟಕ ಪೋಸ್ಟಲ್ ಸರ್ಕಲ್‌ ನಲ್ಲಿರುವ ಬೆಳಗಾವಿ ಮುಖ್ಯ ಕಚೇರಿಗಳಲ್ಲಿ ಮತ್ತು ಇ-ಪೋಸ್ಟ್ ಆಫೀಸ್‌ ನಲ್ಲಿ (www. Indiapost. gov. in) ಮಾರಾಟಕ್ಕೆ ಲಭ್ಯವಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದರು. ರಕ್ಷಾ ಬಂಧನ ಆಚರಣೆಯ ಸಂದರ್ಭದಲ್ಲಿ ‘ರಾಖಿ ಪೋಸ್ಟ್’ ಅನ್ನು ಆನ್‌ ಲೈನ್‌ ನಲ್ಲಿ ಬುಕ್ ಮಾಡಬಹುದು. ಶುಭಾಶಯ ಕಳುಹಿಸಲು ಸಹಾಯ ಮಾಡಲಿದೆ. ಆಗಸ್ಟ್ 26 ರವರೆಗೆ ಈ ಸೇವೆ ಇರಲಿದ್ದು, ಭಾರತದ ಯಾವುದೇ ಮೂಲೆಯ ವಿಳಾಸ ನೀಡಿದರೂ ತಲುಪಿಸಲಾಗುವುದು. ಆ. 10ರ ನಂತರ https://www.karnatakapost. gov. in/Rakhi_Post ಪ್ರವೇಶಿಸುವ ಮೂಲಕ ರಾಖಿ ಪೋಸ್ಟ್ ಸೇವೆ ಪಡೆಯಬಹುದು ಎಂದು ಮಾಹಿತಿ ನೀಡಿದರು. ರಾಖಿ ಲಕೋಟೆಗಳು ಕರ್ನಾಟಕದಲ್ಲಿ? 15ಕ್ಕೆ ಎಲ್ಲ…

Read More

ಪ್ರೇಯಸಿಯೇ ಪ್ರಿಯಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಗೇಶ್ ಇರಿತಕ್ಕೊಳಗಾದ ಯುವಕ. ಆರೋಪಿ ಮಹಿಳೆ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ಸಾಂ ಜೋಡಿ: ಅಸ್ಸಾಂ ಮೂಲದವರಾದ ಜೋಗೇಶ್ ಮತ್ತು ಮಹಿಳೆ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ಮಹಿಳೆ ಡೇ ಕೇರ್‌ ನಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಳು. ಜೋಗೇಶ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ. ಈ ಮೊದಲೇ ಒಂದು ಮದುವೆಯಾಗಿ ಗಂಡನಿಂದ ಮಹಿಳೆ ದೂರಾಗಿದ್ದಳು. ಆ ಬಳಿಕ ಜೋಗೇಶ್ ಪ್ರೀತಿಯಲ್ಲಿ ಬಿದ್ದಿದ್ದಳು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಪ್ರೇಯಸಿಯ ಬಳಿ ಯುವಕ ಸಾಕಷ್ಟು ಹಣ ಪಡೆದುಕೊಂಡಿದ್ದ. ಇತ್ತೀಚಿಗೆ ಆಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ. ಪ್ರಿಯಕರನ ವರ್ತನೆಯಿಂದ ರೊಚ್ಚಿಗೆದ್ದ ಮಹಿಳೆ ಜಗಳ ತೆಗೆದಿದ್ದಾಳೆ. ಈ ಜಗಳ ಅತಿರೇಕಕ್ಕೆ ಹೋದ ವೇಳೆ ಪ್ರಿಯಕರನಿಗೆ ಚಾಕುವಿನಿಂದ ಇರಿದಿದ್ದಾಳೆ. ಪರಾರಿ ಯತ್ನ: “ಪ್ರಿಯಕರನಿಗೆ ಚಾಕು ಇರಿದ ಮಹಿಳೆ ಪರಾರಿಯಾಗಲು…

Read More

ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ. ರಾಜ್ಯದಲ್ಲಿ ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನು ಗಮನಿಸಿರುವ ಸಚಿವರು, ಆರೋಗ್ಯ ಇಲಾಖೆಯ ವತಿಯಿಂದ ಅಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. ವರನಟ ಡಾ. ರಾಜಕುಮಾರ್ ಅವರಂತೆಯೇ ನಟ ಪುನೀತ್ ರಾಜ್ ಕುಮಾರ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದರು. ಪುನೀತ್ ರಾಜ್‌ ಕುಮಾರ್ ಅವರ ಕಣ್ಣುಗಳ ದಾನದಿಂದಾಗಿ ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅಲ್ಲದೇ ಅಂಗಾಂಗ ದಾನ ಪ್ರಮಾಣ ಏರಿಕೆ ಕೂಡಾ ಕಂಡಿತ್ತು.  ಅನೇಕರು ದಿ. ಪುನೀತ್ ರಾಜ್‌ಕುಮಾರ್ ಅವರನ್ನೇ ಮಾದರಿಯಾಗಿ ಇಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಹೀಗಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ. ಅಂಗಾಂಗ ದಾನದ ಮೂಲಕ…

Read More

ಕುಂದಾಪುರ ಕನ್ನಡ ಭಾಷೆ ಮಾತನಾಡುವವರು ರಾಜ್ಯ ಮಾತ್ರವಲ್ಲ ಪ್ರಪಂಚದ ಮೂಲೆ ಮೂಲೆಯಲ್ಲೂ ನೆಲೆಸಿದ್ದಾರೆ. ಕುಂದಗನ್ನಡ ಎಂದು ಪ್ರಖ್ಯಾತಿಯ ಗ್ರಾಮೀಣ ಸೊಗಡಿನ ಭಾಷೆಗೆ ತನ್ನದೇ ಅಸ್ತಿತ್ವ ಕೊಡಬೇಕು. ಈ ಭಾಷೆ ಕೇವಲ ಹಾಸ್ಯಕ್ಕೆ ಸೀಮಿತವಾಗದೇ ಇದು ಕುಂದಾಪುರದ ಜನರ ಬದುಕಿನ ಭಾಷೆಯಾಗಿದೆ ಎನ್ನುವುದನ್ನು ತಿಳಿಸುವುದಕ್ಕಾಗಿಯೇ ವಿಶ್ವಕುಂದಾಪ್ರಕನ್ನಡ ದಿನಾಚರಣೆ ನಗರದ ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ನಡೆಯಿತು. ಇಂದು ಮೊದಲಿಗೆ ಕುಂದಾಪುರದ ರಥವನ್ನು ಶಾಸಕ ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಲಿ, ಕಂಬಳದ ಧುರೀಣ ಶಾಂತರಾಮ್ ಶೆಟ್ಟಿ ಬಾರ್ಕೂರ್ ಎಳೆದು ಸಂಸ್ಕೃತಿಯನ್ನು ಮೆರೆದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಾಂಪ್ರದಾಯಿಕವಾಗಿ ಕಂಬಕ್ಕೆ ಕುಂದಾಪುರ ದಿನದ ಲೋಗೋ ಏರಿಸಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ಳೂರು ಭಾಗವಹಿಸಿದ್ದರು. ಉದ್ಘಾಟನೆ ಬಳಿಕ ಯಕ್ಷಗಾನ, ಹಾಡು, ನಾಟಕಗಳು ಸೇರಿದ್ದ ಜನರ ಮನಸೆಳೆದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? ಎಂದು ಪ್ರಶ್ನೆ ಮಾಡಿದರು. ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. 135 ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರ ನಿಮ್ಮದಲ್ಲವೇ?? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಸವಾಲು ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಐಷಾರಾಮಿ ಜೀವನ ಶೈಲಿಗಾಗಿ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಕಳ್ಳನನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಫೀಕ್ (29) ಬಂಧಿತ ಆರೋಪಿ, ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ನೆಲಮಂಗಲ ಹಾಗೂ ರಾಜಾಜಿನಗರದಲ್ಲಿ ಮತ್ತೆ ಕೈಚಳಕ ತೋರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಐಷಾರಾಮಿ ಜೀವನಕ್ಕಾಗಿ ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಆರೋಪಿ, ಬೆಂಗಳೂರು ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿದ್ದ. ಬೀಗ ಹಾಕಿದ ಮನೆ, ಅಂಗಡಿಗಳನ್ನೇ ಗುರಿಯಾಗಿಸಿಕೊಂಡು ಬರೋಬ್ಬರಿ 20 ಕಡೆ ಕಳ್ಳತನ ಮಾಡಿ ಜೈಲು ಸೇರಿದ್ದ. ಕಳೆದ ತಿಂಗಳಷ್ಟೇ ಜೈಲಿನಿಂದ ಹೊರಬಂದಿದ್ದವನು, ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ ನೆಲಮಂಗಲದ ಬಳಿ ಫಿಶ್ ಟೆಂಡರ್ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮನೆಯಲ್ಲಿಯೂ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಎರಡು ಪ್ರಕರಣಗಳಿಂದ 22 ಲಕ್ಷ ಮೌಲ್ಯದ 409 ಗ್ರಾಂ ಚಿನ 425 ಗಾಂಬೆಲಿ, 189 ಗ್ರಾಂ ತೂಕದ…

Read More

ಬೆಂಗಳೂರು ನಗರದ ಹೆಬ್ಬಗೋಡಿ ಸಮೀಪದ ತಿರುಪಾಳ್ಯ ಕೆರೆಯಲ್ಲಿ ನಡೆಯುತ್ತಿರುವ ಭೂಮಾಫಿಯಾಗಳ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್  ದಾಸರಿ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿ ಇಂದು ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಮಾತನಾಡಿದ ಮೋಹನ್ ದಾಸರಿ  “ತಿರುಪಾಳ್ಯ ಕೆರೆ 16 ಎಕರೆ ವಿಸ್ತೀರ್ಣವಿದ್ದು, ಭೂ ಮಾಫಿಯಾಗಳು ಸಾಕಷ್ಟು ಒತ್ತುವರಿ ಮಾಡಿಕೊಂಡಿರುವುದು ಕಂಡು ಬರುತ್ತಿದೆ. ಕೆರೆಗಳ ಪುನರುಜ್ಜಿವನ ಕಾರ್ಯದಲ್ಲಿ ಸಾಕಷ್ಟು ವರ್ಷಗಳಿಂದ ತೊಡಗಿಸಿಕೊಂಡಿರುವ ಆನಂದ್ ಮಲ್ಲಿಗೆವಾಡ್ ಈ ಕೆರೆಯನ್ನು ಪುನರುಜ್ಜಿವನಗೊಳಿಸುವ ಕಾರ್ಯದಲ್ಲಿ ಈಗಾಗಲೇ ತೊಡಗಿಸಿಕೊಂಡಿದ್ದಾರೆ. ಇದಕ್ಕೆ ಈಗಾಗಲೇ ಭೂ ಮಾಫಿಯಾ ಗಳಿಂದ ಪುನರುಜೀವನ ಕಾರ್ಯಕ್ಕೆ ಸಾಕಷ್ಟು ಅಡೆತಡೆಗಳನ್ನು ನೀಡಿ, ಬೆದರಿಕೆಗಳನ್ನು ಒಡ್ಡಲಾಗುತ್ತಿದ್ದು, ಆಮ್ ಆದ್ಮಿ ಪಕ್ಷವು ಈ ಕೆರೆಯ ಪುನರುಜ್ಜಿವನಕ್ಕಾಗಿ ಆನಂದ್ ರವರೊಂದಿಗೆ ಸದಾ ಕಾಲ ಇರುತ್ತದೆ ಹಾಗೂ ಈ ಮಾಫಿಯಾಗಳ ವಿರುದ್ಧ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು. “ಈಗಾಗಲೇ ಈ ಕೆರೆಗೆ ಸಾಕಷ್ಟು ರಾಸಾಯನಿಕಗಳನ್ನು ಹಾಗೂ ಕಲುಷಿತ ನೀರನ್ನು ಹರಿಯ ಬಿಡಲಾಗುತ್ತಿದೆ. ಕೂಡಲೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಇತ್ತ ಕಡೆ…

Read More