Author: admin

‘ಪರೀಕ್ಷೆ ವೇಳೆ ವಿದ್ಯಾರ್ಥಿ ತಪ್ಪು ಎಸಗಿದಾಗ ತಿಳಿಹೇಳುವ ಕೆಲಸ ಮಾಡಿದ್ದೇವೆಯೇ ಹೊರತು ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ’ ಎಂದು ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಇಎಸ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ‘ಸದ್ಯ ತನಿಖೆ ಪ್ರಗತಿಯಲ್ಲಿ ಇರುವುದರಿಂದ ಹೆಚ್ಚಿನ ವಿಚಾರ ಬಹಿರಂಗವಾಗಿ ಹೇಳುವುದು ಕಾನೂನಿನ ಪ್ರಕಾರ ತಪ್ಪು. ಆದರೆ, ಸತ್ಯಾಂಶವನ್ನು ವರದಿ ಮೂಲಕ ತನಿಖಾ ಸಮಿತಿಗೆ ಸಲ್ಲಿಸಿದ್ದೇವೆ’ ಎಂದು ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ತಿಳಿಸಿದ್ದಾರೆ. ‘ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಿರುವ ಬಗ್ಗೆ ಕಾಲೇಜಿಗೂ ಅತೀವ ಬೇಸರವಿದೆ. ಆದಿತ್ಯ ಉತ್ತಮ ವಿದ್ಯಾರ್ಥಿಯಾಗಿದ್ದ. ಶೈಕ್ಷಣಿಕವಾಗಿಯೂ ಮುಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳುವಂತಹ ವಿಚಾರಕ್ಕೆ ನಮ್ಮ ಖಂಡನೆ ಇದೆ’ ಎಂದು ಹೇಳಿದ್ದಾರೆ. ಜುಲೈ 17ರಂದು ವಿದ್ಯಾರ್ಥಿಯು ಪರೀಕ್ಷೆಗೆ ಹಾಜರಾಗಿದ್ದ. ಆ ವೇಳೆ ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಬಳಕೆ ಮಾಡಿದ್ದರಿಂದ ಬುದ್ಧಿ ಹೇಳಲಾಗಿತ್ತು. ಪ್ರಕರಣ ಸಂಬಂಧ ವಿದ್ಯಾರ್ಥಿ ಪೋಷಕರು ದೂರು ದಾಖಲಿಸಿದ್ದಾರೆ. ‘ತನಿಖೆ ಪ್ರಗತಿಯಲ್ಲಿರುವಾಗ ವಿಶ್ವವಿದ್ಯಾಲಯ ತನ್ನ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ಮೌನ ವಹಿಸಲಾಗಿತ್ತು.…

Read More

ಜನರ ತುರ್ತು ಸಹಾಯಕ್ಕಾಗಿ ನಮ್ಮ 112 ಕಾರ್ಯನಿರ್ವಹಿಸುತ್ತಿದೆ. ಅಪರಾಧ ಪ್ರಕರಣಗಳ ಜೊತೆಯಲ್ಲಿ, ಅಪಘಾತ ಹಾಗೂ ಸಂಚಾರ ಸಂಬಂಧಿತ ತುರ್ತು ಸಹಾಯಕ್ಕಾಗಿಯೂ ಜನರು ಕರೆ ಮಾಡಬಹುದು’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡಿದ್ದ ಜನ, ‘ನಮ್ಮ 112 ಎಲ್ಲ ರೀತಿಯ ತುರ್ತು ಸಹಾಯಕ್ಕೂ ವಿಸ್ತರಣೆ ಮಾಡಿ’ ಎಂದು ಕೋರಿದ್ದರು. ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದ ದಯಾನಂದ್, ‘ನಮ್ಮ 112 ವಿಸ್ತರಣೆ ಮಾಡಲಾಗಿದೆ’ ಎಂದು ಟ್ವಿಟ್ ಮಾಡಿದ್ದಾರೆ. ‘ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕ್ಕೆ ಸಿಲುಕಿದರೆ, ಕಾನೂನು ಸುವ್ಯವಸ್ಥೆಗೆ ಯಾರಾದರೂ ಧಕ್ಕೆ ತಂದರೆ 112ಕ್ಕೆ ಕರೆ ಮಾಡಬಹುದು. ಅಪಘಾತದ ವೇಳೆ ಸಹಾಯ ಹಾಗೂ ಸಂಚಾರದಲ್ಲಿ ಏನಾದರೂ ತೊಂದರೆಯಾದರೂ ಜನರು 112ಕ್ಕೆ ಕರೆ ಮಾಡಿ ತುರ್ತು ಸಹಾಯ ಕೇಳಬಹುದು. ಸಂಬಂಧಪಟ್ಟ ಸಿಬ್ಬಂದಿ, ಕೆಲ ನಿಮಿಷಗಳಲ್ಲಿ ಸ್ಥಳದಲ್ಲಿ ಹಾಜರಾಗಿ ಸಮಸ್ಯೆ ಆಲಿಸಲಿದ್ದಾರೆ’ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಕೃತ್ಯವನ್ನು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ಖಂಡಿಸಿದೆ. ಬಂಡಾಯ ಸಾಹಿತ್ಯ ಸಂಘಟನೆಯ ಬರಗೂರು ರಾಮಚಂದ್ರಪ್ಪ, ಜಿ. ರಾಮಕೃಷ್ಣ, ಆರ್. ಜಿ. ಹಳ್ಳಿ ನಾಗರಾಜ್, ಭಕ್ತರಹಳ್ಳಿ ಕಾಮರಾಜ್, ಎಚ್. ಎಲ್. ಪುಷ್ಪ, ಸುಕನ್ಯಾ ಮಾರುತಿ, ಎಲ್. ಹನುಮಂತಯ್ಯ, ವೈ. ಬಿ. ಹಿಮ್ಮಡಿ, ಕೆ. ಶರೀಫಾ, ಸಿದ್ಧನಗೌಡ ಪಾಟೀಲ, ಅಶ್ವಿನಿ ಮದನಕರ, ಬಿ. ಎಂ. ಹನೀಫ್, ಪಿ. ಆರ್. ವೆಂಕಟೇಶ್, ಗುರುಶಾಂತ್, ಬಿ. ರಾಜಶೇಖರ ಮೂರ್ತಿ, ಬಿ. ಎನ್. ಮಲ್ಲೇಶ್, ಎ. ಬಿ. ರಾಮಚಂದ್ರಪ್ಪ ಅವರು ಖಂಡನಾ ಹೇಳಿಕೆ ನೀಡಿದ್ದಾರೆ. ಇದೊಂದು ಆಘಾತಕಾರಿ ಘಟನೆಯಾಗಿದ್ದು, ಮಾನವೀಯ ಮೌಲ್ಯದ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಘಟನೆ ನಡೆದು 77 ದಿನಗಳ ನಂತರ ಬಯಲಾಗಿರುವುದು ಮತ್ತು ಕ್ರಮ ಕೈಗೊಳ್ಳಲು ವಿಳಂಬವಾಗಿರುವುದು ಆಡಳಿತಗಾರರ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂಸೆಯನ್ನು ನಿಯಂತ್ರಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನಾದರೂ ಎಲ್ಲ ಪಕ್ಷಗಳ, ಚಿಂತಕರ, ಸಾಮಾಜಿಕ ಕಾರ್ಯಕರ್ತರ ಸಹಕಾರವನ್ನು ಪಡೆದು ಶಾಂತಿ…

Read More

ಮಣಿಪುರದಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು. ‘ಮಣಿಪುರದ ಕುಕಿ ಸಮುದಾಯದ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುವವರೆಗೂ ಮಣಿಪುರದ ಪೊಲೀಸರು ತನಿಖೆ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು. ‘ಬೇಟಿ ಬಚಾವೊ, ಬೇಟಿ ಪಡಾವೊ’ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಕೆಲವು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಶಾಂತಿ ಸ್ಥಾಪಿಸಲು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಮಾನವೀಯತೆಯ ಮೇಲಿನ ದಾಳಿಯನ್ನು ಪ್ರಜ್ಞಾವಂತ ಸಮಾಜ ಒಗ್ಗಟ್ಟಾಗಿ ಧ್ವನಿ ಎತ್ತಬೇಕು. ಮಣಿಪುರದಲ್ಲಿ ಮಹಿಳೆಯರ ಮೇಲೆ ಅಮಾನವೀಯ ದೌರ್ಜನ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷ ನೀಡಬೇಕು’ ಎಂದು ಆಗ್ರಹಿಸಿದರು. ಸಂಘಟನೆಯ ರಾಜ್ಯ ಸಮಿತಿಯ ಸದಸ್ಯೆಯರಾದ ಭಾಗ್ಯ,…

Read More

ಆರೋಗ್ಯ ಕವಚ 108 ಯೋಜನೆಯಡಿ ಆಂಬುಲೆನ್ಸ್ ಸೇವೆ ಸುಧಾರಿಸಲು ಮುಂದಾಗಿರುವ ಆರೋಗ್ಯ ಇಲಾಖೆ, ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಲು ತಾಂತ್ರಿಕ ಸಮಿತಿ ರಚಿಸಿದೆ. ‘104’ ಆರೋಗ್ಯ ಸಹಾಯವಾಣಿ ಸೇವೆ ಸುಧಾರಿಸಲು ಸಹ ಈ ಸಮಿತಿ ನೆರವಾಗಲಿದೆ. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ, ಕಾರ್ಮಿಕ ಇಲಾಖೆಯ ಆಯುಕ್ತ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರನ್ನು ಸಮಿತಿ ಒಳಗೊಂಡಿರಲಿದೆ ಎಂದು ಇಲಾಖೆ ತಿಳಿಸಿದೆ. ಟೆಂಡರ್ ಪ್ರಕ್ರಿಯೆ, ಉತ್ತಮ ಆರೋಗ್ಯ ಸೇವೆಗೆ ಅಳವಡಿಸಿಕೊಳ್ಳಬೇಕಾದ ಸೌಲಭ್ಯ, ತಂತ್ರಜ್ಞಾನದ ಬಗ್ಗೆ ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಇಲಾಖೆ ಹೇಳಿದೆ. ಯೋಜನೆ ನಿರ್ವಹಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆ ವಿರುದ್ಧ ಆರೋಪಗಳಿದ್ದವು. ವೇತನ ಪಾವತಿಯಾಗುತ್ತಿಲ್ಲ ಎಂದು ಸಂಸ್ಥೆಯ ನೌಕರರು ದೂರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಸಹಾಯಮಾಡುವ ನೆಪದಲ್ಲಿ ವೃದ್ಧೆಯೊಬ್ಬರನ್ನು ಪರಿಚಯ ಮಾಡಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ  ಘಟನೆ ನಡೆದಿತ್ತು. ಕಳೆದ ವಾರ ಚಿಕ್ಕಮ್ಮ‌ ಎಂಬ ವೃದ್ಧೆಯ  ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಚಿಕ್ಕಮ್ಮ ಅವರನ್ನು ಕಟ್ಟಿಹಾಕಿ ಹಣ, ಒಡವೆ ದೋಚಿದ್ದ ಖತರ್ನಾಕ್ ಕಳ್ಳರು ಬೆಂಗಳೂರಿಗೆ ಪರಾರಿಯಾಗಿದ್ದರು.  ಇದೀಗ ಕಳ್ಳತನ ಮಾಡಿದ ಆರೋಪಿಗಳಾದ ಶರತ್, ಶಿವರಾಜು, ವಸಂತಕುಮಾರ್, ಅಲೀಶಾ ಬಾಬು ಅವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಬ್ಯಾಂಕಿಗೆ ಬಂದಿದ್ದ ವೃದ್ದೆಯನ್ನ ಪರಿಚಯ ಮಾಡಿಕೊಂಡಿದ್ದ ಆರೋಪಿ ಶರತ್, ಎಟಿಎಂ ನ ಲಾಕರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ವಾರ ಬ್ಯಾಂಕಿಗೆ ಬಂದಿದ್ದ ಚಿಕ್ಕಮ್ಮರನ್ನ ಶರತ್ ಪರಿಚಯ ಮಾಡಿಕೊಂಡಿದ್ದನು. ಈ ವೇಳೆ‌ ವೃದ್ಧೆ ಚಿಕ್ಕಮ್ಮ ಶರತ್ ಬಳಿ ತನ್ನ ಕಷ್ಟ ಸುಖಗಳನ್ನ ಹೇಳಿಕೊಂಡಿದ್ದರು. ಅಜ್ಜಿ ಒಬ್ಬಂಟಿಯಾಗಿರುವುದನ್ನು   ಶರತ್ ಖಾತರಿಪಡಿಸಿಕೊಂಡಿದ್ದನು. ತನ್ನ ಸ್ನೇಹಿತರ ಜೊತೆ ಸೇರಿ ವೃದ್ಧೆಯ ಮನೆ ಮೇಲೆ ದಾಳಿ ಮಾಡಿದ್ದ‌…

Read More

ತುಮಕೂರು: ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬದ ಗ್ರಾಮದ ಕೆರೆಯಲ್ಲಿ ನಡೆದಿದೆ. ಹರೀಶ್(31) ಯೋಗೀಶ್ (36) ಸಾವನ್ನಪ್ಪಿದ ಯುವಕರಾಗಿದ್ದಾರೆ. ಗ್ರಾಮದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಗ್ರಾಮದ ಕೆರೆಗೂ ಕೂಡ ನೀರು ಹರಿದು ಬರುತ್ತಿದೆ ಈ ನಡುವೆ ತಮ್ಮ ಸ್ನೇಹಿತರೊಂದಿಗೆ ಈ  ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಇಬ್ಬರೂ ಕೂಡ ಕಾಲ ಜಾರಿ ಕೆರೆಗೆ ಬಿದ್ದಿದ್ದಾರೆ. ಆದರೆ ಸುತ್ತಮುತ್ತಲಿದ್ದ ಯುವಕರು ಇವರನ್ನು ಪಾರು ಮಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ.  ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾದವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ. ಕೆರೆಯ ಬಳಿ ನೂರಾರು ಮಂದಿ ಗ್ರಾಮಸ್ಥರು ಜಮಾಯಿಸಿದ್ದಾರೆ. ಘಟನೆ  ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಹೆಚ್.ಡಿ.ಕೋಟೆ:  ಕಂಠಮಟ್ಟ ಕುಡಿದು ಪುಂಡಾಟ ಮೆರೆದು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಗಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ. ಹೊರಗಿನಿಂದ ಹ್ಯಾಂಡ್ ಪೋಸ್ಟ್ ಸರ್ಕಲ್ ಗೆ ಬಂದು ಅನವಶ್ಯಕವಾಗಿ ರಸ್ತೆಯಲ್ಲಿ ಅತೀ ವೇಗವಾಗಿ ಕಾರನ್ನು ಸರ್ಕಲ್ ನಲ್ಲಿ ಸುಖಸುಮ್ಮನ್ನೆ ಕಾರನ್ನು ಸುತ್ತಿಸಿ, ರಸ್ತೆ ಬದಿಯಲ್ಲಿ ನಿಂತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ಕೊಚ್ಚೆಯನ್ನು ಹಾರಿಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಎರಡೂ ಕಾರಿನಲ್ಲಿ ಬಂದು ಪುಂಡಾಟ ಆಡುತಿದ್ದ ಪಾನ ಮತ್ತರಿಗೆ ಆಕ್ರೋಶಗೊಂಡ ಸಾರ್ವಜನಿಕರು ಗೂಸ ನೀಡಿದ್ದು, ಕಾರಿನಲ್ಲಿದ್ದ ಒಬ್ಬನನ್ನು ಸಾರ್ವಜನಿಕರು ಹಿಡಿದುಪೋಲಿಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಉಳಿದವರು ಪರಾರಿಯಾಗಿದ್ದಾರೆ. ಪೊಲೀಸರು ಪರಾರಿಯಾದವರ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ  ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ ಸಂಘದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ರಾಜಕೀಯ ಕಾರಣಗಳಿಗಾಗಿ ವರದಿ ಸ್ವೀಕಾರವಾಗಲಿಲ್ಲ. ಈ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರಗಳು ಕಾಂತರಾಜು ವರದಿ ಸ್ವೀಕಾರ ಮಾಡಲಿಲ್ಲ. ವರದಿ ಅನುಷ್ಠಾನದಿಂದ ಜಾತಿಗಳ ಸ್ಥಿತಿಗತಿ ಆಧರಿಸಿ ಶಿಕ್ಷಣ, ಉದ್ಯೋಗ ಸೇರಿ ನಾನಾ ವಲಯಗಳಲ್ಲಿ ಅವಕಾಶ ಮತ್ತು…

Read More

ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ರಾಜ್ಯದ ಸಾಲ 5. 5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಪ್ರಶ್ನಿಸಿದ್ದಾರೆ. ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು…

Read More