Author: admin

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ, ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ. ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನಗರದ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ. ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಫೇಸ್‌ ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ…

Read More

ಮಿದುಳು ನಿಷ್ಕ್ರಿಯಗೊಂಡಿದ್ದ ಕೋಲಾರದ 51 ವರ್ಷದ ರೈತರೊಬ್ಬರ ಅಂಗಾಂಗಗಳನ್ನು ಇಲ್ಲಿನ ಸ್ಪರ್ಶ್ ಆಸ್ಪತ್ರೆಯ ವೈದ್ಯರು ದಾನವಾಗಿ ಪಡೆದಿದ್ದಾರೆ. ಅವರ ಪತ್ನಿ ಅಂಧರಾಗಿದ್ದು, ಪುತ್ರಿ ಇದ್ದಾಳೆ. ಅನಿಯಂತ್ರಿತ ರಕ್ತದೊತ್ತಡದಿಂದ ಅವರಿಗೆ ಮಿದುಳಿನಲ್ಲಿ ರಕ್ತಸ್ರಾವವಾಗಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಜು. 18ರಂದು ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರು. ಜು. 20ರಂದು ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರ ಸಮ್ಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆ ಕೈಗೊಂಡರು. ಹೃದಯ, ಶ್ವಾಸಕೋಶ, ಎರಡು ಮೂತ್ರಪಿಂಡಗಳು ಮತ್ತು ಕಾರ್ನಿಯಾವನ್ನು ದಾನವಾಗಿ ಪಡೆದರು ಎಂದು ಆಸ್ಪತ್ರೆ ತಿಳಿಸಿದೆ. ‘ದುಃಖದ ಸಂದರ್ಭದಲ್ಲಿಯೂ ಕುಟುಂಬ ಸದಸ್ಯರು ಅಂಗಾಂಗ ದಾನಕ್ಕೆ ಸಮ್ಮತಿಸುವ ಮೂಲಕ ಮಾದರಿಯಾಗಿದ್ದಾರೆ. ಅಂಗಾಂಗಕ್ಕಾಗಿ ಹಲವಾರು ಮಂದಿ ಎದುರು ನೋಡುತ್ತಿದ್ದು, ಈ ಬಗ್ಗೆ ಜಾಗೃತಿ ಹೆಚ್ಚಬೇಕು’ ಎಂದು ಆಸ್ಪತ್ರೆಗಳ ಸಮೂಹದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಜೋಸೆಫ್ ಸಂಘ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ನಗರದಲ್ಲಿ ಮಹಿಳೆಯರ ಸರಗಳವು ಮಾಡಿ ಪರಾರಿಯಾಗಿ ಉಡುಪಿಯಲ್ಲಿ ಸೆರೆಸಿಕ್ಕಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಇವರಿಂದ 7 3 ಲಕ್ಷ ಮೌಲ್ಯದ 49 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫಿಕ್ ಸಾಧಿಕ್ ಬಂಧಿತರು. ಅಪರಾಧ ಹಿನ್ನೆಲೆಯುಳ್ಳ ಇವರಿಬ್ಬರು, ಬೆಂಗಳೂರು, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಮಹಿಳೆಯರ ಸರಗಳವು ಮಾಡಿದ್ದರು. ಇತ್ತೀಚೆಗಷ್ಟೇ ಇವರನ್ನು ಉಡುಪಿ ಪೊಲೀಸರು ಬಂಧಿಸಿದ್ದರು. ಬಾಡಿ ವಾರಂಟ್ ಮೂಲಕ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಕೆಲ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ನಿವಾಸಿ ಶಾಂತಮ್ಮ (70) ಅವರು ಮೇ 27ರಂದು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಬೈಕ್‌ ನಲ್ಲಿ ಬಂದಿದ್ದ ಆರೋಪಿಗಳು, ಶಾಂತಮ್ಮ ಅವರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದರು. ಈ ಸಂಬಂಧ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮಾರುಕಟ್ಟೆಯಲ್ಲಿ ದರ ಗಗನಕ್ಕೇರಿರುವ ಸಂದರ್ಭದಲ್ಲಿ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿದ್ದ ದಂಪತಿಯನ್ನು ಆರ್ ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಕುಮಾರ್, ಮಹೇಶ್ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಜುಲೈ 8ರಂದು ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ 250ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆರ್‌ಎಂಸಿ ಯಾರ್ಡ್ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು ತಮ್ಮ ಕಾರಿಗೆ ನಿಮ್ಮ ವಾಹನ ಟಚ್ ಆಗಿದೆ ಎಂದು ಬಲವಂತದಿಂದ ಗೂಡ್ಸ್ ವಾಹನ ನಿಲ್ಲಿಸಿ ಚಾಲಕ ಹಾಗೂ ರೈತನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಗಾಡಿಯಲ್ಲಿದ್ದ ಟೊಮೆಟೋ ನೋಡಿ ಕಳ್ಳತನದ ಸಂಚು ರೂಪಿಸಿದ್ದರು. ಚಾಲಕ ಹಾಗೂ ರೈತನನ್ನು ಕೂರಿಸಿಕೊಂಡು ಹೋಗಿ ಚಿಕ್ಕಜಾಲ ಬಳಿ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಪರಾರಿ ಆಗಿದ್ದರು. ನಂತರ ಚೆನ್ನೈ ಮಾರುಕಟ್ಟೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರು.…

Read More

ರಾಜ್ಯದಲ್ಲಿ ನಡೆದಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಸಿವಿಲ್) -545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಲಾಗಿದೆ. ಅಕ್ರಮ ಪ್ರಕರಣದ ವರದಿಯನ್ನು ಮೂರು ತಿಂಗಳಲ್ಲಿ ನೀಡುವಂತೆ ಆಯೋಗವನ್ನು ಸರ್ಕಾರ ಕೋರಿದೆ. 2021ರ ಜನವರಿ 21ರಂದು ಪಿಎಸ್‌ಐಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿತ್ತು. ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ದಿನಗಳಲ್ಲಿ ಪಿಎಸ್‌ ಐ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಶಿಫಾರಸು ಮಾಡುವಂತೆ ಆಯೋಗವನ್ನು ಕೋರಲಾಗಿದೆ. ಸಿಐಡಿ ತಂಡ ಹಾಗೂ ಪೊಲೀಸ್ ನೇಮಕಾತಿ ವಿಭಾಗವು ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆ ಸಲ್ಲಿಸುವಂತೆ ಸೂಚಿಸಿದೆ. ಇದೇ ಅಕ್ರಮ ಪ್ರಕರಣದಲ್ಲಿ…

Read More

ನಾಲ್ವಡಿ ಕೃಷ್ಣರಾಜ ಒಡೆಯರು ಬ್ರಿಟೀಷರನ್ನು ಚಾಕಚಕ್ಯತೆಯಿಂದ ಎದುರಿಸಿ ಕನ್ನಡಿಗರ ಅಸ್ಮಿತೆ ಉಳಿಸಿದರು’ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಶುಕ್ರವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಯನ್ನು ಅನಾವರಣ ಮಾಡಿ ಅವರು ಮಾತನಾಡಿದರು. ‘ಬ್ರಿಟಿಷರ ಒಡೆದು ಆಳುವ ನೀತಿಯನ್ನು ಸಕಾರಾತ್ಮಕವಾಗಿ ಮೆಟ್ಟಿ ನಿಲ್ಲುವ ದೃಷ್ಟಿಯಿಂದ ಕನ್ನಡಿಗರನ್ನು ಒಂದುಗೂಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿರುವುದು ಅವರ ದೂರದೃಷ್ಟಿಯ ದ್ಯೋತಕ’ ಎಂದು ಬಣ್ಣಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ ಪುತ್ಥಳಿಯು ಪರಿಷತ್ತಿನ ಮೊದಲ ಮಹಡಿಯಲ್ಲಿತ್ತು. ಪರಿಷತ್ತಿನ ಅಧ್ಯಕ್ಷರನ್ನು ನೋಡಲು ಬರುವವರು ಮಾತ್ರ ಮಹಾರಾಜರ ಪುತ್ಥಳಿಯ ದರ್ಶನವನ್ನು ಪಡೆಯಬಹುದಿತ್ತು. ಈಗ ಪುತ್ಥಳಿಯನ್ನು ಪರಿಷತ್ತಿನ ಆವರಣದಲ್ಲಿ ಸ್ಥಾಪನೆ ಮಾಡಿ ಜನ ಸಾಮಾನ್ಯರೂ ನಾಲ್ವಡಿ ಅವರಿಗೆ ಗೌರವ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ’ ಎಂದು ತಿಳಿಸಿದರು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮಾತನಾಡಿ, ಪುತ್ಥಳಿಯ ಜೊತೆಗೆ ಮಹಾಪುರುಷರ ಬದುಕು,…

Read More

ಶಾಂತಿ ಪ್ರಿಯರಾದ ಕ್ರೈಸ್ತರ ಸೇವೆ ಸಮಾಜಕ್ಕೆ ಅತ್ಯಗತ್ಯ. ಕ್ರೈಸ್ತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕನ್ನಡ ಕ್ರೈಸ್ತರ ಪರವಾಗಿ ಕರ್ನಾಟಕ ಪ್ರಾಂತ್ಯ ಧರ್ಮಗುರುಗಳ ಭಗಿನಿಯರ ಮತ್ತು ಸಂಘ ಸಂಸ್ಥೆಗಳ ನಿಯೋಗದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ‘ಕ್ರೈಸ್ತರು ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಬೇಕು. ಕ್ರೈಸ್ತರ ಸೇವಾ ಕಾರ್ಯಗಳಲ್ಲಿ ಸಮರ್ಪಣಾ ಭಾವ ಪ್ರಕಾಶಿಸುತ್ತದೆ. ಶಿಕ್ಷಣ, ಆರೋಗ್ಯ ಸೇರಿ ವಿವಿಧ ಸೇವಾ ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಸಲ್ಲಿಸಿರುವ ಸೇವೆ ಅವಿಸ್ಮರಣಿಯ. ಸಮುದಾಯಕ್ಕೆ ಅಗತ್ಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು. ಸರ್ಕಾರದ ಜತೆಗೆ ಧರ್ಮಗುರುಗಳು, ಭಗಿನಿಯರು ಕೈಜೋಡಿಸಿದರೆ, ಸರ್ವಜನಾಂಗದ ಶಾಂತಿಯ ತೋಟವೆನಿಸಿರುವ ಕರ್ನಾಟಕದಲ್ಲಿ ಉತ್ತಮ ಜೀವನ ಸಾಧ್ಯ’ ಎಂದು ಹೇಳಿದರು. ನಿಯೋಗದಲ್ಲಿ ಬೆಂಗಳೂರು ಮಹಾಧರ್ಮ ಕ್ಷೇತ್ರದ ಗುರು ಸಿ. ಫ್ರಾನ್ಸಿಸ್, ಕರ್ನಾಟಕ ಕ್ರೈಸ್ತ ಧರ್ಮಗುರುಗಳು ಬಳಗದ ಅಧ್ಯಕ್ಷ ಎ. ಥಾಮಸ್, ಉಪಾಧ್ಯಕ್ಷ ಬಾರ್ತಲೋಮಿಯೊ, ಕಾರ್ಯದರ್ಶಿ ಪ್ರದೀಪ್ ಜಡ್, ಮೈಸೂರಿನ ಆರೋಗ್ಯಸ್ವಾಮಿ, ಚಿಕ್ಕಮಗಳೂರಿನ ಆಂಟೋನಿ ರಾಜು, ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ…

Read More

ಡೆಂಗಿ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, ಕಳೆದ 20 ದಿನಗಳಲ್ಲಿ 1, 330 ಮಂದಿಗೆ ಡೆಂಗಿ ದೃಢಪಟ್ಟಿದೆ. ಬಿಸಿಲು ಮಳೆಯಿಂದಾಗಿ ಈ ಜ್ವರಕ್ಕೆ ಅಧಿಕ ಮಂದಿ ಒಳಪಡುತ್ತಿದ್ದಾರೆ. ರಾಜ್ಯದಲ್ಲಿ ಈ ವರ್ಷ 4,053 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ. ನಗರದಲ್ಲಿ ಈವರೆಗೆ 2,078 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 1, 047 ಪ್ರಕರಣಗಳನ್ನು ಬಿಬಿಎಂಪಿ ತಡವಾಗಿ ವರದಿ ಮಾಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 4, 742 ಮಂದಿ ಡೆಂಗಿ ಶಂಕಿತರನ್ನು ಗುರುತಿಸಿ, ಅವರಲ್ಲಿ 3, 457 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಈವರೆಗೆ ಒಟ್ಟು 2, 062 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 64 ಮಂದಿ ಶಂಕಿತರನ್ನು ಗುರುತಿಸಿ, 32 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ. ಅವರಲ್ಲಿ 16 ಮಂದಿಯಲ್ಲಿ ಈವರೆಗೆ ಜ್ವರ ದೃಢಪಟ್ಟಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಕಳೆದ ವರ್ಷ…

Read More

ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೆ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಪ್ರಿಯತಮೆ ಬರೂತಿ ಈ ಕೃತ್ಯ ಎಸಗಿದ್ದಾಳೆ. ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಬೇರೆ ಹುಡುಗಿಯ ಜೊತೆಗೆ ಸಂಪರ್ಕ ಹೊಂದಿದ್ದು ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಳಗಾವಿ: ಜೀವನದಲ್ಲಿ ಜೀಗುಪ್ಸೆ ಹೊಂದಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನ ಟ್ರಾಫಿಕ್ ಕಾನ್ಸ್‌ಸ್ಟೇಬಲ್‌ ರಕ್ಷಣೆ ಮಾಡಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ 44 ವರ್ಷದ ಶಿವಲೀಲಾ ಪರ್ವತಗೌಡ್ರ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರಿಂದ ಉತ್ತರ ಸಂಚಾರ ಠಾಣೆ ಪಿಸಿ ಕಾಶಿನಾಥ್ ಈರಿಗಾರ ಎಂಬವರಿಗೆ ವಿಷಯ ತಿಳಿಯುತಿದ್ದಂತೆ ಕೆರೆಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ಲೆಕ್‍ ವ್ಯೂ ಆಸ್ಪತ್ರೆ ಪಾಯಿಂಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಷಯ ತಿಳಿದಿದೆ. ಈ ವೇಳೆ 5 ಅಡಿ ಎತ್ತರದ ಬ್ಯಾರಿಕೇಡ್ ಮೇಲಿಂದ ಜಿಗಿದು ಮಹಿಳೆಯರ ಪ್ರಾಣ ಕಾಪಾಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದು 5 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More