Subscribe to Updates
Get the latest creative news from FooBar about art, design and business.
- ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
Author: admin
ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹೌದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದು, ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಸರಕಾರಿ ಶಾಲಾ,ಕಾಲೇಜುಗಳು ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿದ್ದು,ಇವುಗಳ ಪೂರೈಸುವ ನಿಟ್ಟಿನಲ್ಲಿ ಸರಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಒತ್ತಾಯಿಸಿದ್ದಾರೆ. ತುಮಕೂರು ನಗರದ ಕನ್ನಡ ಭವನದಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ)ಆಯೋಜಿಸಿದ್ದ ನಿವೃತ್ತ ಪ್ರಾಂಶುಪಾಲ ರಿಗೆ ಸನ್ಮಾನ,ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ,ಪ್ರಾಂಶುಪಾಲರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು,ಸರಕಾರಿ ಕಾಲೇಜುಗಳಲ್ಲಿ,ಅದರಲ್ಲಿಯೂ ವಿಜ್ಞಾನ ಕಾಲೇಜುಗಳು,ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇಂದಿಗೂ ಕಾಡುತ್ತಿದೆ.ಗುಣಮಟ್ಟ ಶಿಕ್ಷಣ ಮಕ್ಕಳಿಗೆ,ಅದರಲ್ಲಿಯೂ ಗ್ರಾಮೀಣ ಮಕ್ಕಳಿಗೆ ದೊರೆಯಬೇಕಾದರೆ, ಮೂಲಭೂತ ಸೌಕರ್ಯಗಳ ಕೊರತೆ ನೀಗಬೇಕಿದೆ ಎಂದರು. ಕಳೆದ 20 ವರ್ಷಗಳಿಂದ ವೈ.ಎ.ನಾರಾಯಣಸ್ವಾಮಿ ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತಿದ್ದಾರೆ. ಅನುದಾನಿತ ಕಾಲೇಜುಗಳ ಖಾಲಿ ಹುದ್ದೆಗಳ ತುಂಬಲು ಸರಕಾರದ ಮೇಲೆ ಒತ್ತಡ ತಂದಿದ್ದಾರೆ. 2020ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುವಂತೆ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ನಮ್ಮಲ್ಲಿದೆ.ಗ್ರಾಮೀಣ ಭಾಗದಲ್ಲಿ ಕೆಲ ಅನುದಾನಿತ ಕಾಲೇಜುಗಳು ಏಕ ಶಿಕ್ಷಕ ಶಾಲೆಯಂತೆ ಗೋಚರಿಸುತಿದ್ದು, ಇದೇ…
ತುರುವೇಕೆರೆ: ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದ ಅಂಬೇಡ್ಕರ್ ರಸ್ತೆಯಲ್ಲಿರುವ ಪೂಜಾ ಫ್ಯಾನ್ಸಿ ಸ್ಟೋರ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ಕಳ್ಳರು ದೋಚಿದ ಘಟನೆ ನಡೆದಿದೆ ಅಂಗಡಿಗೆ ಬಂದಿದ್ದ ತಾಲೂಕಿನ ತಾಳ್ಕೆರೆ ಗ್ರಾಮದ ನಿವಾಸಿ ಶಾಲಿನಿ ಕುಮಾರಸ್ವಾಮಿ ಎಂಬ ಮಹಿಳೆ, ಸ್ಕೂಟಿಯನ್ನು ಅಂಗಡಿಯ ಹೊರಗೆ ನಿಲ್ಲಿಸಿ ಒಳಗೆ ಹೋಗಿದ್ದರು. ಈ ವೇಳೆ ವಾಹನದ ಡಿಕ್ಕಿಯಲ್ಲಿದ್ದ ಸುಮಾರು 93,000 ರೂಪಾಯಿಗಳನ್ನು ಕ್ಷಣ ಮಾತ್ರದಲ್ಲೇ ಕಳ್ಳರು ಎಗರಿಸಿದ್ದಾರೆ. ಈ ಕೃತ್ಯ ನಡೆದ ಸ್ಥಳದಲ್ಲಿ ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಕಳೆದ ವಾರವಷ್ಟೇ ಬಾಣಸಂದ್ರ ರಸ್ತೆಯಲ್ಲಿರುವ ಶಾರದಾ ಎಲೆಕ್ಟ್ರಿಕಲ್ಸ್ ನ ಅಂಗಡಿಯಲ್ಲಿ ಕಳ್ಳತನವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇಹ ಘಟನೆ ನಡೆದಿದೆ. ಈ ಘಟನೆಗಳು ಜನರ ನೆಮ್ಮದಿ ಕೆಡಿಸಿದೆ. ಘಟನೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಈವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ ಎನ್ನುವುದು…
ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ . ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ. ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ…
ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ. ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು.ಅವರು ನಡವಳಿಕೆ ಸರಿಯಿರದಿದ್ದ ಕಾರಣ , ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…
ಬೆಂಗಳೂರು: ಪುಸ್ತಕಗಳಿಗೆ ಸರ್ಕಾರದ ಪ್ರೋತ್ಸಾಹ ಹೆಚ್ಚಾದರೆ ಸಾಹಿತ್ಯದ ಮೌಲ್ಯ ಕಡಿಮೆಯಾಗುತ್ತದೆ. ಕಳಪೆ ಸಾಹಿತ್ಯ ಹೆಚ್ಚಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ವಿಶ್ವವಾಣಿ ಪುಸ್ತಕ ಹೊರ ತಂದಿರುವ ಆರು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದು ಬಿಡುಗಡೆಯಾಗಿರುವ ಪುಸ್ತಕಗಳಲ್ಲಿ ಅರ್ಥಪೂರ್ಣವಾಗಿ ಬದುಕಿನ ಒಳ ಮರ್ಮ ಹೇಳುವ ಅಂಕಣಗಳು ಇದರಲ್ಲಿವೆ. ವಿಶ್ವೇಶ್ವರ ಭಟ್ಟರು ಪ್ರತಿದಿನ ಹೊಸದನ್ನು ಹುಡುಕಿ ಜನರಿಗೆ ತಿಳಿಸುತ್ತಾರೆ. ಜನರಿಗೆ ಏನಾದರೂ ಹೇಳುವುದು ಬಹಳ ಕಷ್ಟ. ಅವರಲ್ಲಿ ಇರುವ ಚಿಂತನಾ ಶಕ್ತಿ ಸದಾ ಜೀವಂತ ಇರುವುದನ್ನು ನಾನು ಕಂಡಿದ್ದೇನೆ. ಅವರು ಒಬ್ಬ ಕೇವಲ ಪತ್ರಕರ್ತನಾಗಿ ಬೆಳೆದಿಲ್ಲ. ಒಬ್ಬ ಪತ್ರಕರ್ತ ಎಲ್ಲ ರಂಗದವರೊಂದಿಗೆ ಸಂಪರ್ಕ ಹೊಂದಿರದಿದ್ದರೆ, ಅವರು ಜನರ ಮನಸಿನಿಂದ ದೂರವಾಗುತ್ತಾನೆ ಎಂದರು. ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಪತ್ರಕರ್ತರಿಲ್ಲದೆ ರಾಜಕಾರಣ ಇಲ್ಲ. ರಾಜಕಾರಣಿಗಳಿಲ್ಲದೆ ಪತ್ರಿಕೋದ್ಯಮ ಇಲ್ಲ. ಟೀಕೆ ಮಾಡಲಿಕ್ಕೆ ಆದರೂ ಪತ್ರಿಕೆಗಳಿಗೆ ರಾಜಕಾರಣಿಗಳು ಬೇಕು. ರಾಜಕಾರಣಿಗಳು ಭ್ರಮೆಯಲ್ಲಿರುತ್ತೇವೆ. ಆದರೆ ವಾಸ್ತವ ಹಾಗೆ ಇರುವುದಿಲ್ಲ…
ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27 ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಅವರು, ಮೇ 27ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸರಗಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ, ಆರೋಪಿಗಳಿಬ್ಬರು ಸರಗಳ್ಳತನ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಪೊಲೀಸರಿಂದ ಬಂಧನವಾಗಿರುವುದನ್ನು ತಿಳಿದು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಬಂಧಿತರಿಂದ ಮೂರು ಲಕ್ಷ ರೂ ಮೌಲ್ಯದ ಒಟ್ಟು 49 ಗ್ರಾಂ ತೂಕದ ಚಿನ್ನದ…
ರಾಯಚೂರು: ತಾಲೂಕಿನ ವಡ್ಲೂರು ಗ್ರಾಮದಲ್ಲಿ ಮಗನಿಂದಲೇ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನಲ್ಲಿ ಹೂತಿಟ್ಟಿದ್ದ ಶವವನ್ನು 13 ದಿನಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಜಿಟಿ ಜಿಟಿ ಮಳೆಯಲ್ಲೇ ರಾಯಚೂರು ಎಸಿ ಮೆಹಬೂಬಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಜುಲೈ 7 ರಂದು ವಡ್ಲೂರು ಗ್ರಾಮದಲ್ಲಿ 70 ವರ್ಷದ ಶಿವನಪ್ಪ ಕೊಲೆಯಾಗಿದ್ದು, ಪ್ರಕರಣದ ಆರೋಪಿ ಈರಣ್ಣ ಜುಲೈ 19 ರಂದು ಪೊಲೀಸರಿಗೆ ಶರಣಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಭಾರತ ಮಾಲಾ ಯೋಜನೆ ಹೈವೆಗೆ ಜಮೀನು ಹೋಗಿದ್ದು, ಭೂಸ್ವಾಧೀನ ಪರಿಹಾರ ಹಣಕ್ಕಾಗಿ ತಂದೆ-ಮಗನ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ತಂದೆಯ ಕೊಲೆ ಬಳಿಕ ವಡ್ಲೂರು ಗ್ರಾಮದ ಹೈವೆ ಪಕ್ಕದಲ್ಲಿ ಈರಣ್ಣ ತಾಯಿ ರಂಗಮ್ಮ ಜೊತೆಗೂಡಿ ಶವವನ್ನು ಹೂತಿಟ್ಟಿದ್ದ. ಬಳಿಕ ತಂದೆ ಕಾಣೆಯಾಗಿದ್ದಾರೆ ಎಂದು ಗ್ರಾಮದಲ್ಲಿ ಹೇಳಿಕೊಂಡು ಬಂದಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಕಾಣೆಯಾಗಿದ್ದಾರೆ ಎಂದು ದೂರು ಕೊಡಲು ಬಂದರೂ ಧೈರ್ಯ ಸಾಲದೆ ವಾಪಸ್ ತೆರಳಿದ್ದ. ಆದರೆ ಈರಣ್ಣನ…
ಮಂಗಳೂರು: ನಗರದಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈಲ್ಯಾಂಡ್ ಬಳಿಯ ಅಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45) ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದನು. ಈತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 5,500 ರೂ. ಮೌಲ್ಯದ ಬಾಂಗ್ ಚಾಕೊಲೇಟ್ ಜಪ್ತಿ ಮಾಡಿದ್ದಾರೆ. ಕಾರ್ ಸ್ಟ್ರೀಟ್ ಬಳಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದ ಮನೋಹರ್ ಶೇಟ್ (49) ನನ್ನು ಮಂಗಳೂರು ಉತ್ತರ ಠಾಣಾ ಬಂಧಿಸಿದ್ದಾರೆ. ಆರೋಪಿಯಿಂದ 48,000 ರೂ. ಮೌಲ್ಯದ ಬಾಂಗ್ ಚಾಕೊಲೇಟ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚೊಚ್ಚಲ ಆವೃತ್ತಿಯ ಯಶಸ್ಸಿನ ಬಳಿಕ ಬಹುನಿರೀಕ್ಷಿತ ದ್ವಿತೀಯ ಆವೃತ್ತಿಯ ಶ್ರೀರಾಮ್ ಕ್ಯಾಪಿಟಲ್ ಮಹಾರಾಜ ಟ್ರೋಫಿ ಟೂರ್ನಿಗೆ ತಯಾರಿ ಆರಂಭವಾಗಿದೆ. ಆಗಸ್ಟ್ 13ರಿಂದ 29ರವರೆಗೂ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಆಟಗಾರರ ಹರಾಜು ಪ್ರಕ್ರಿಯೆಗೆ ನಾಲ್ಕು ಕೆಟಗರಿಗಳನ್ನು ನಿಗದಿಸಲಾಗಿದ್ದು, ಪ್ರತಿ ಫ್ರಾಂಚೈಸಿಗೆ ತನ್ನ ಆಟಗಾರರನ್ನು ಖರೀದಿಸಲು 50 ಲಕ್ಷ ರೂ ಗರಿಷ್ಠ ಮಿತಿ ನೀಡಲಾಗಿದೆ. ‘ಎ’ ಕೆಟಗರಿಯಲ್ಲಿ ಭಾರತ ರಾಷ್ಟ್ರೀಯ ತಂಡ ಹಾಗೂ ಐಪಿಎಲ್ ತಂಡಗಳನ್ನು ಪ್ರತಿನಿಧಿಸಿರುವ ಆಟಗಾರರ ಹರಾಜು ನಡೆಯಲಿದ್ದು, ‘ಬಿ’ ಕೆಟಗರಿಯಲ್ಲಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ, ಸೈಯ್ಯದ್ ಮುಸ್ತಾಕ್ ಅಲಿ ಟ್ರೋಫಿಯಂತಹ ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಆಡಿರುವ ಹಿರಿಯ ಆಟಗಾರರ ಹರಾಜು ನಡೆಯಲಿದೆ. ಇನ್ನು ‘ಸಿ’ ಕೆಟಗರಿಯಲ್ಲಿ ಬಿಸಿಸಿಐ ಅನುಮೋದಿತ ಟೂರ್ನಿಗಳಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರ ಹರಾಜು ನಡೆದರೆ, ‘ಡಿ’ ಕೆಟಗರಿಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ. ಎಸ್. ಸಿ. ಎ)ಯಲ್ಲಿ ನೋಂದಾಯಿತ ಆಟಗಾರರ ಹರಾಜು ನಡೆಯಲಿದೆ. ಪ್ರತಿ ಫ್ರಾಂಚೈಸಿಯು ಕನಿಷ್ಠ…