Author: admin

15 ದಿನಗಳ ಕಾಲ ನಡೆದ ಬಜೆಟ್ ಅಧಿವೇಶನಕ್ಕೆ ತೆರೆ ಬಿದ್ದಿದ್ದು, ಪ್ರತಿಪಕ್ಷಗಳ ಗೈರಿನಲ್ಲೇ ಧನ ವಿನಿಯೋಗ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ. ಸದನ ನಡೆಸಲು ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಬಜೆಟ್ ಮೇಲಿನ ಚರ್ಚೆಯ ನಂತರ ಮಾತನಾಡಿದ ಸಭಾನಾಯಕ ಬೋಸರಾಜ್, ಕಲಾಪ ನಡೆಸಲು ಸಹಕರಿಸಿದ ಸದಸ್ಯರು, ಸಚಿವರು, ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ನಂತರ ಸಭಾಪತಿ ಬಸವರಾಜ ಹೊರಟ್ಟಿ, ಸಭಾನಯಕರ ನಂತರ ಪ್ರತಿಪಕ್ಷ ನಾಯಕರು ಮಾತನಾಡಬೇಕಿತ್ತು ಆದರೆ ಅವರು ಯಾರೂ ಇಲ್ಲ ನೀವೇ ಬಿಜೆಪಿ ಪರ ಮಾತನಾಡಿ ಎಂದು ಬಿಜೆಪಿಯ ರೆಬೆಲ್ ಸದಸ್ಯ ಹೆಚ್. ವಿಶ್ವನಾಥ್‌ಗೆ ಸೂಚಿಸಿದರು. ನಾನೇ ವಿರೋಧ ಪಕ್ಷದ ನಾಯಕ ಈಗ ಎನ್ನುತ್ತಲೇ ಕಲಾಪ ನಡೆಸಲು ಸಹಕರಿಸಿದ ಎಲ್ಲರಿಗೂ ವಿಶ್ವನಾಥ್ ಧನ್ಯವಾದ ಅರ್ಪಣೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಅವರು ಸಲ್ಲಿಸಿರುವ ಚುನಾವಣಾ ಅರ್ಜಿ ಇಂದು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿತು. ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ. ಸೆಕ್ಷನ್ 123 (2) ಪ್ರಕಾರ ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಅದನ್ನು ಪ್ರಚಾರ ಮಾಡುವುದೂ ಅಪರಾಧ. ಅಲ್ಲದೇ, ಇದನ್ನು ಅಭ್ಯರ್ಥಿಯ ಚುನಾವಣಾ ಲೆಕ್ಕಕ್ಕೆ ಸೇರ್ಪಡೆ ಮಾಡದಿರುವುದು ಸೆಕ್ಷನ್ 123 (6)ರ ಅಪರಾಧವಾಗಿದೆ ಎಂದು…

Read More

ವಿಶ್ವದ 38 ರಾಷ್ಟ್ರಗಳಲ್ಲಿ ಆಧುನಿಕ ತಂತ್ರಜ್ಞಾನದ ಆವಿಷ್ಕಾರ ಸೃಜಿಸಿ, 11 ಉತ್ಪಾದನಾ ಘಟಕಗಳನ್ನು ಹೊಂದಿರುವ ಹಿಟಾಚಿ ರೇಲ್ ಎಸ್. ಟಿ. ಎಸ್ ಪೈವೇಟ್ ಲಿಮಿಟೆಡ್ ಕಚೇರಿಯನ್ನು ಇಂದು ಬೆಂಗಳೂರಿನ ದೊಮ್ಮಲೂರಿನಲ್ಲಿ ನಾಡಿನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಉದ್ಘಾಟಿಸಿ ಶುಭ ಕೋರಿ ಮಾತನಾಡಿದರು. ಭಾರತದಲ್ಲಿ “ಸ್ಮಾರ್ಟ್ ಮೊಬಿಲಿಟಿ” ಯನ್ನು ವೇಗಗೊಳಿಸಿ “ಸುರಕ್ಷಿತ ಮತ್‌ಆತು ರಾಮದಾಯಕ” ಹಾಗೂ “ಪರಿಸರ ಸ್ನೇಹಿ” ಸಾರಿಗೆ ಪರಿಹಾರಗಳನ್ನು ಒದಗಿಸುವ ಸಾಮಾಜಿಕ ನಾವೀನ್ಯತೆ ವ್ಯವಹಾರದ ಮೂಲಕ ಹಿಟಾಚಿ ರೇಲ್ ಕಂಪನಿಯು, ಉದ್ಯಮ ಶೀಲತೆಯ ಬೆಳವಣಿಗೆಗೆ ಬದ್ಧವಾಗಿರುವ ಕುರಿತು ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಮಾಹಿತಿ ಪಡೆದುಕೊಂಡರು. ಭಾರತದ ಕ್ಷಿಪ್ರ ಆರ್ಥಿಕ ಬೆಳವಣಿಗೆ ಮತ್ತು ಜಾಗತೀಕ ಕೈಗಾರಿಕಾ ವಲಯದ ಉತ್ಪಾದನಾ ಗುಣಮಟ್ಟಕ್ಕೆ ಹಿಟಾಚಿ ರೇಲ್ ಎಸ್. ಟಿ. ಎಸ್ ಪ್ರೈವೇಟ್ ಲಿಮಿಟೆಡ್ ವಿಶಿಷ್ಟ ಕೊಡುಗೆ ನೀಡಲಿ ಎಂದು ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಆಶಯ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಕರಡಿ ಒಂದು ರಾತ್ರಿಯಾಗುತ್ತಿದ್ದಂತೆ ಗ್ರಾಮದ ಹೊರವಲಯದಿಂದ ಗ್ರಾಮದೊಳಗೆ ನುಗ್ಗಿ ಭಯಭೀತಿ ಉಂಟು ಮಾಡುತ್ತಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ನಿತ್ಯ ನಿರಂತರವಾಗಿದೆ. ಇದರಿಂದಾಗಿ ಮುಂಜಾನೆ ಹಾಗೂ ರಾತ್ರಿ ವೇಳೆಯಲ್ಲಿ ರೈತರು ತಮ್ಮ ಹೋಲ ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ದಿನ ಸಂಜೆ 7 ಗಂಟೆಗೆ ಜನವಸತಿ ಪ್ರದೇಶಗಳತ್ತ ಬರುವಂತಹ ಕರಡಿ ಜನರನ್ನು ಕಂಡರೆ ಅವರ ಮೇಲೆ ಎರಗುವ ಭೀತಿ ಸೃಷ್ಟಿ ಮಾಡಿದೆ. ಅಲ್ಲದೆ ಮನೆ ಪಕ್ಕದಲ್ಲಿರೋ ಬಾಳೆ, ಪರಂಗಿ, ಸೀಬೆ, ಕಡಲೆಕಾಯಿ ಕಿತ್ತು ಹಾಕುತ್ತಿರುವ ಕರಡಿಯಿಂದ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಒಂದು ಹಂತದಲ್ಲಿ ಸಂಜೆಯಾಗುತ್ತಿದ್ದಂತೆ ತೋವಿನಕೆರೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಕೂಡ ಹೊರಗೆ ಬೆಳೆದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ತಿಂಗಳಿನಿಂದ ಕರಡಿಯ ಕಾಟದಿಂದ ಬೇಸತ್ತು ಹೋಗಿರುವ ಗ್ರಾಮಸ್ಥರು ಇದನ್ನು ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದುವರೆಗೂ ಅರಣ್ಯ ಇಲಾಖೆಯ ಕ್ಯಾರೆಯನ್ನದೆ…

Read More

ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿದ್ದ ಚಿರತೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ರೈತರೊಬ್ಬರು ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕ್ಯಾಮಸಂದ್ರ ಗ್ರಾಮದಲ್ಲಿ ನಡೆದಿದೆ. ಜಯರಾಮ್ ಪ್ರಾಣಾಪಾದಿಂದ ಪಾರಾದ ರೈತರಾಗಿದ್ದಾರೆ. ಎಂದಿನಂತೆ ನಿನ್ನೆ ರಾತ್ರಿ ತಮ್ಮ ತೋಟದ ಪಂಪ್ ಹೌಸ್ ಒಳಗೆ ತೆರಳಿದ್ದಾರೆ. ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆ, ಜಯರಾಮ್ ಅವರಿಗೆ ಗೋಚರಿಸಿಲ್ಲ. ಒಂದು ಹಂತದಲ್ಲಿ ಕತ್ತಲೆಯಲ್ಲಿ ಚಿರತೆ ಕಾಲು ಮುಟ್ಟಿದ್ದಾರೆ, ತಕ್ಷಣ ಎಚ್ಚೆತ್ತುಕೊಂಡ ಜಯರಾಮ್ ಅವರು ಕ್ಷಣಾರ್ಧದಲ್ಲಿ ಪಂಪ್ ಹೌಸ್ ನಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದಂತಾಗಿದೆ. ಸ್ವಲ್ಪ ಯಾಮಾರಿದ್ದರೂ ಚಿರತೆ ದಾಳಿಗೆ ಒಳಗಾಗುತ್ತಿದ್ದರು. ಅಲ್ಲದೆ ಚಿರತೆ ಎಂದು ಸ್ಪಷ್ಟವಾಗುತ್ತಿದ್ದಂತೆ ಕೂಡಲೇ ಪಂಪ್ ಹೌಸ್ ಬಾಗಿಲು ಹಾಕಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಪಂಪ್ ಹೌಸ್ ಸುತ್ತ ಬಲೆ ಹಾಕಿ ಚಿರತೆ ಸೆರೆ ಹಿಡಿದಿದ್ದಾರೆ. ಈ ಮೂಲಕ ಗ್ರಾಮಸ್ಥರು ಚಿರತೆ ಕಾಟದಿಂದ ನಿಟ್ಟುಸಿರು ಬಿಡುವಂತಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಹೆಚ್‌ ಡಿ ಕೆ ಮಾತನಾಡಿ, ವಿರೋಧ ಪಕ್ಷದಲ್ಲಿ ನಾನು ಇದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್‌ ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ ಎಂದರಲ್ಲದೇ ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದ್ರೆ ಈ…

Read More

ಕೋಲಾರ: ಕೆ ಎಸ್‍ ಆರ್‌ ಟಿ ಸಿ ಡಿಪೋ ನೌಕರನೊಬ್ಬ ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ. ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ ಶ್ರೀನಿವಾಸಪುರ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಪಾರ್ಶ್ವ ವಾಯುವಿಗೆ ತುತ್ತಾಗಿದ್ದ. ಬಳಿಕ ಕಂಡಕ್ಟರ್ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಡಿಪೋದಲ್ಲಿಯೇ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದರು. ರೋಗಕ್ಕೆ ತುತ್ತಾಗಿದ್ದರೂ ಸೋಮಾಚಾರಿಯಿಂದ ಮಾಡಲು ಸಾಧ್ಯವಾಗದ ಕೆಲಸ ನೀಡುವ ಮೂಲಕ ಡಿಪೋ ಮ್ಯಾನೇಜರ್ ವೆಂಕಟೇಶ್ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೇಲಾಧಿಕಾರಿಯ ಕಿರುಕುಳದ ಬಗ್ಗೆ ತನ್ನ ಬಳಿ ಹೇಳಿಕೊಂಡಿದ್ದರು ಎಂದು ಮೃತ ಕಂಡಕ್ಟರ್ ಪತ್ನಿ ಧನಲಕ್ಷ್ಮೀ ಹೇಳಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ  ದಾಖಲಿಸಿ ಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. ತೂಕದಲ್ಲಿ ವ್ಯವಸ್ಥಿತವಾಗಿ ಮೋಸ ಮಾಡಲಾಗುತ್ತಿದೆ. ಈ ವ್ಯವಹಾರವನ್ನೂ ಒಬ್ಬ ವ್ಯಕ್ತಿ ನಿರ್ವಹಿಸುತ್ತಿದ್ದಾರೆ. ಆತನನ್ನು ಭೂಗತ ದೊರೆ ಎನ್ನಬಹುದು. ರೈತರ ಮೇಲೆ ಗೂಂಡಾಗಳಿಂದ ಹಲ್ಲೆ: ಮಹಾರಾಷ್ಟ್ರದಲ್ಲಿ ದೊಡ್ಡ ಜಾಲವೇ ಇದೆ. ತೂಕ ಮಾಡುವ ಸಾಪ್ಟವೇರ್ ಅಳವಡಿಸಿದರೆ, ಖಾಸಗಿ ವೇಬ್ರಿಡ್‌ಜ್‌ನಲ್ಲಿ ಒಂದು ತೂಕವಾದರೆ, ಕಾರ್ಖಾನೆಗಳಲ್ಲಿ ಕಡಿಮೆ ತೂಕ ಬರಲಿದೆ. ಅದನ್ನು ಪ್ರಶ್ನಿಸಿದ ರೈತರ ಮೇಲೆ ಗೂಂಡಾಗಳಿಂದ ಹಲ್ಲೆ ಮಾಡಿಸಿರುವ ಉದಾಹರಣೆಗಳಿವೆ. ಒಂದೊಂದು ಕಾರ್ಖಾನೆಯಲ್ಲೂ 40-50 ಸಾವಿರ ಟನ್ ಕಬ್ಬನ್ನು ಈ ರೀತಿ ವಂಚಿಸಲಾಗುತ್ತಿದೆ. ಮೋಸದ…

Read More

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಸೇರಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ರಾಜಧಾನಿ ಇಂಫಾಲದಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮಾತ್ರವಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಇಂದು ಈ ನಾಲ್ಕು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More