Subscribe to Updates
Get the latest creative news from FooBar about art, design and business.
- ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
Author: admin
ಮಂಗಳೂರು ನಗರ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೊಹಮ್ಮದ್ ನಿಯಾಝ್(28), ನಿಶಾದ್(31) ಮತ್ತು ಮೊಹಮ್ಮದ್ ರಝೀನ್(24) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮಾರುತಿ ಸ್ವಿಫ್ಟ್ ಕಾರು, 1,40,000 ರೂಪಾಯಿ ಮೌಲ್ಯದ 4 ಮೊಬೈಲ್ ಫೋನ್‌ಗಳು, 22,050 ನಗದು ಹಣ, 1 ಪಿಸ್ತೂಲ್, 1 ಸಜೀವ ಗುಂಡು, 2 ಡ್ರ್ಯಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಬೆಲೆ 27,62,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಝ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐ ಅವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ,…
ಮಧುಗಿರಿ: ಪರಿಶ್ರಮದ ವಿದ್ಯಾಭ್ಯಾಸ, ಉಜ್ವಲ ಭವಿಷ್ಯಕ್ಕೆ ತಳಹದಿ ಎಂದು ಟಿ.ವಿ. ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಹಂತೇಶ ಮೈ ಹೊಸಮನಿ ಅಭಿಪ್ರಾಯ ಪಟ್ಟರು. ವೆಂಕಟಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ಪಿ.ಯು ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಹೆಚ್ಚು ಅಂಕ ಪಡೆದು ತೇರ್ಗಡೆಯಾದವರಿಗೆ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವಿಷ್ಯದಲ್ಲಿ ಖುಷಿ ಆನಂದ ಶಾಶ್ವತವಾಗಿರಬೇಕೆಂದರೆ ಏಕಾಗ್ರತೆ, ಸತತ ಅಧ್ಯಯನ ಅವಶ್ಯ, ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ. ವಿನಯ ವಿದ್ಯೆಗೆ ಪೋಷಕವಾಗಿರಬೇಕೆಂದರು. ಮುಖ್ಯ ಅತಿಥಿ ಹಿರಿಯ ಸಾಹಿತಿ ಪ್ರೊ. ಮಲವ ಮೂರ್ತಿ ಎದೆಗೆ ಬಿದ್ದ ಅಕ್ಷರ ಅರಿವನ್ನು ಬಿತ್ತರಿಸಿ, ಆತ್ಮ ವಿಶ್ವಾಸ ತುಂಟ, ಅಹಂಕಾರ ಲಯಗೊಳಸುತ್ತದೆ, ಗುರು-ಹಿರಿಯರು, ತಂದೆ ತಾಯಿರಲ್ಲಿ ಗೌರವ, ವಿಶ್ವಾಸ ನಂಬಿಕೆ ಮತ್ತು ಪ್ರೀತಿ ಬೆಳೆಸುತ್ತದೆ. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಜಿ.ಹೆಚ್, ಹನುಮಂತರಾಯಪ್ಪ ವಿದ್ಯೆ ಬಾಳಿನ ಬೆಳಕು, ಶಿಕ್ಷಕರ ಪರಿಶ್ರಮ, ಪರೀಕ್ಷೆ ಫಲಿತಾಂಶದ ಗುಣ ಮಟ್ಟಕ್ಕೆ ಪೂರಕವಾಗಲಿ ಎಂದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷನ ನಿರ್ದೇಶಕ ವೆಂಕಟೇಶಮೂರ್ತಿ, ರಂಗಸ್ವಾಮಯ್ಯ, ಏನುಕುಮಾರ್, ಚಿತ್ತಯ್ಯ…
ತುಮಕೂರು: ಟೀ ಮಾರುತ್ತಿದ್ದ ವ್ಯಕ್ತಿಯೇ ಇಂದು ಪ್ರಧಾನಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ ಹಾಗಾಗಿ ಅದೃಷ್ಟ ಎಂಬುದು ಯಾರಿಗೆ ಇರುತ್ತದೆ ಎಂಬುದು ಹೇಳಲು ಅಸಾಧ್ಯ. ಅಂತಹ ಒಂದು ಪ್ರಸಂಗ ತುಮಕೂರು ಜಿಲ್ಲೆಯಲ್ಲಿ ನಡೆದಿದ್ದು ಟೀ ಮಾರುತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ದೇವರಾಯನದುರ್ಗ ಪ್ರದೇಶದಲ್ಲಿರುವ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟಿ ಅಂಗಡಿ ಇಟ್ಟುಕೊಂಡು ಮಾರುತಿದ್ದ ಮಹಿಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ತುಮಕೂರು ತಾಲೂಕಿನ ಉರ್ಡಿಗೆರೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿದ್ದ ಅನ್ನಪೂರ್ಣಮ್ಮ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ದೇವರಾಯನದುರ್ಗ ಗ್ರಾ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ನಿನ್ನೆ ನಡೆದ ಗ್ರಾ.ಪಂ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ತುಮಕೂರಿನ ಉರ್ಡಿಗೆರೆ ಗ್ರಾ.ಪಂ.ಗೆ ಅಧ್ಯಕ್ಷೆಯಾದ ಅನ್ನಪೂರ್ಣಮ್ಮ ಅವಿರೋಧವಾಗಿ ಉರ್ಡಿಗೆರೆ ಗ್ರಾ.ಪಂ ಸದಸ್ಯರು ಆಯ್ಕೆ ಮಾಡಿದ್ದಾರೆ. ಇನ್ನು ಟೀ ಮಾರಾಟ ಮಾಡ್ತಿದ್ದ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದಾರೆ.. ಅವರದ್ದು…
ತುಮಕೂರು: ಚಲಿಸುತ್ತಿದ್ದ ಬಸ್ ನಲ್ಲಿ ಮೂರ್ಛೇ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್ ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಸ್ ನಲ್ಲಿಯೇ ಮೂರ್ಛೇ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ ಪ್ರಶಂಸೆಗೆ ಪಾತ್ರವಾಗಿದ್ದಾನೆ. ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿದ ಚಾಲಕ ಪ್ರಯಾಣಿಕನ ಪ್ರಾಣ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ- ಬೆಂಗಳೂರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇದಾಗಿತ್ತು, ಈಶ್ವರ್ ರೆಡ್ಡಿ ಎಂಬವರು ಅಸ್ವಸ್ಥರಾದವರಾಗಿದ್ದಾರೆ. ಇವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಬಸ್ ತಿಪಟೂರು ನಿಲ್ದಾಣ ತಲುಪಿದಾಗ ಉಸಿರಾಡಲು ಸಾಧ್ಯವಾಗದೆ ಮೂರ್ಛೇ ತಪ್ಪಿದ್ದರು. ಬಿದ್ದ ರಭಸಕ್ಕೆ ಮೂಗಿನಲ್ಲಿ ರಕ್ತ ಸ್ರಾವವಾಗಿತ್ತು. ಕೂಡಲೇ ಇದನ್ನು ಗಮನಿಸಿದ ನಿರ್ವಾಹಕ ಓಂಕಾರ್, ಚಾಲಕನಿಗೆ ತಿಳಿಸಿದ್ದಾರೆ. ಕೂಡಲೇ ಚಾಲಕ ಪ್ರಕಾಶ್ ಬಸ್ ಅನ್ನು ತಿಪಟೂರು ತಾಲ್ಲೂಕು ಆಸ್ಪತ್ರೆಗೆ ಚಲಾಯಿಸಿದ್ದಾರೆ. ಸೂಕ್ತ ಸಮಯಕ್ಕೆ…
ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಕುರಿತ ಚರ್ಚೆಗೆ ಉತ್ತರಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ 13500 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ, 8068 ಕೋಟಿ ರೂ. ಹೆಚ್ಚುವರಿ ಸಾಲ, ಬಂಡವಾಳ ಯೋಜನೆಗಳ ಮರು ಆದ್ಯತೆ ನಿಗದಿ ಮೂಲಕ 6086 ಕೋಟಿ ರೂ. ಹಾಗೂ ರಾಜಸ್ವ ಯೋಜನೆಗಳ ಮರು ಆದ್ಯತೆ ನಿಗದಿ ಪಡಿಸುವ ಮೂಲಕ 7೦೦೦ ಕೋಟಿ ರೂ. ಸೇರಿದಂತೆ ಒಟ್ಟು 34,654 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ತಿಳಿಸಿದರು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಜೇಬಿಗೆ ಹಣ ಹಾಕುವ ಈ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಜಾರಿಯಲ್ಲಿರುವ ಸಾರ್ವತ್ರಿಕ ಮೂಲ ಆದಾಯ (Universal Basic Income) ಕಾರ್ಯಕ್ರಮಗಳಿಂದ ಪ್ರೇರಿತವಾಗಿವೆ. ಶೇ. 9೦ ರಷ್ಟು…
ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ವರ್ಗ ಸಂಘರ್ಷ, ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಯುವತಿಯರ ಬೆತ್ತಲೆ ಪೆರೇಡ್ ನಡೆಸಿ ಅತ್ಯಾಚಾರ ಎಸಗಿದ ಅಮಾನವೀಯ ದೌರ್ಜನ್ಯದ ಪ್ರಕರಣವನ್ನು ಖಂಡಿಸಿ ಆಮ್ ಆದ್ಮ ಪಕ್ಷದ ಕಾರ್ಯಕರ್ತರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಮೊಂಬತ್ತಿ ಹಚ್ಚುವ ಮೂಲಕ ಪ್ರತಿಭಟನೆ ಹಾಗೂ ತೀವ್ರ ಕಂಡನೆಯನ್ನು ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ” ಇತ್ತೀಚಿನ ಕೆಲವು ತಿಂಗಳುಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸೆ, ದೌರ್ಜನ್ಯ ಹಾಗೂ ಭದ್ರತಾ ಪಡೆವರಿಂದಲೇ ನಡೆಯುತ್ತಿರುವ ದಬ್ಬಾಳಿಕೆಯನ್ನು ಪೂರ್ವ ಯೋಚಿತವಾಗಿಯೇ ಬಿಜೆಪಿಯ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವುದು ತೀರ ಖಂಡನೀಯ. ಕಳೆದ ತಿಂಗಳು ಯುವತಿಯರ ಬೆತ್ತಲೆ ಪೆರೇಡ್ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣವು ತಡವಾಗಿ ಬೆಳಕಿಗೆ ಬಂದಿರುವುದು ದುರಂತ. ನಾಗರಿಕ ಸಮಾಜವೇ ಬೀಳಿಸುವಂತಹ ಇಂತಹ ಆರೋಪಿಗಳನ್ನು ಬಂಧಿಸಿ ಶೀಘ್ರ ಕಠಿಣ ಶಿಕ್ಷೆಗೆ ಒಳಪಡಿಸದಿರುವುದು ಈ ದೇಶದ ದುರಂತ ‘ ಎಂದು ತಿಳಿಸಿದರು. ಪ್ರಕರಣ ನಡೆದು ಎರಡು…
ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳೆ ಯಾವುದೇ ನ್ಯೂನ್ಯತೆಗಳಾಗದಂತೆ ಸರಿಯಾದ ಮಾದರಿಯಲ್ಲಿ ಪರಿಷ್ಕರಣೆ ಕಾರ್ಯವಾಗಬೇಕೆಂದು ಮುಖ್ಯ ಆಯುಕ್ತತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರವರು, ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆಯು ದಿನಾಂಕ: 21. 07. 2023 ರಿಂದ 21. 08. 2023 ರವರೆಗೆ ನಡೆಯಲಿದೆ. ನಾಳೆಯಿಂದ ಒಂದು ತಿಂಗಳ ಕಾಲ ಮತಗಟ್ಟೆ ಮಟ್ಟದ ಅಧಿಕಾರಿಗಳು(BLOs) ಮನೆ ಮನೆಗೆ ಭೇಟಿ ನೀಡಿ ಬಿಎಲ್‌ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಈ ವೇಳೆ ಬೂತ್ ಮಟ್ಟದ ಏಜೆಂಟ್ ಗಳಲ್ಲಿ ಸ್ಥಳದಲ್ಲಿರಬೇಕಿದ್ದು, ಎಲ್ಲಾ ಕಡೆ ಬೂತ್…
ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ. ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಳಗನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿದರು. ಸದ್ಯ ಸ್ಪೀಕರ್ ಹುದ್ದೆ…
ವಿರೋಧ ಪಕ್ಷಗಳ ಮೈತ್ರಿ ಸರ್ಕಾರಕ್ಕೆ ಸವಾಲಾಗುತ್ತದೆಯೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ಈಗ ಆ ಬಗ್ಗೆ ಚರ್ಚೆ ಬೇಡ, ರಾಜ್ಯ ಮಟ್ಟದಲ್ಲಿ ಅವರ ನಿಲುವು ಸ್ವಲ್ಪ ಸ್ವಲ್ಪ ಗೊತ್ತಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಅವರ ನಿರ್ಧಾರ ಅಂತಿಮವಾಗಿಲ್ಲ. ಈ ವಿಚಾರವಾಗಿ ಸಿಎಂ ಇಬ್ರಾಹಿಂ ಈವರೆಗೂ ಮಾತನಾಡಿಲ್ಲ. ದೇವೇಗೌಡರು ಮಾತನಾಡಿಲ್ಲ. ಕೇವಲ ಶಾಸಕಾಂಗ ಪಕ್ಷದ ನಾಯಕರು ಮಾತ್ರ ನಿಲುವು ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷರಾಗಲಿ, ರಾಷ್ಟ್ರೀಯ ಅಧ್ಯಕ್ಷರಾಗಲಿ ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ತಿಳಿಸಿದರು. ಸ್ಪೀಕರ್ ಬದಲಾವಣೆಗೆ ಸಹಿ ಹಾಕಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಯಶಸ್ಸಾಗಲಿ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿವೆ. ಇವುಗಳ ನಿರ್ವಹಣೆಗಾಗಿ ಪ್ರತಿ ತಿಂಗಳು 12 ಕೋಟಿ ವಿದ್ಯುತ್ ಬಿಲ್ಲನ್ನ ಭರಿಸಲಾಗುತ್ತಿದೆ. ವಿದ್ಯುತ್ ಬಳಕೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಪ್ಯಾನಲ್ ಅಳವಡಿಸುವ ಸಾಧ್ಯತೆಗಳ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್ ಬೋಸರಾಜ್ ಅವರು ಹೇಳಿದರು. ಇಂದು ವಿಕಾಸಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಚಿಂತನೆಗಳು ಪ್ರಾರಂಭವಾಗಿವೆ. ಸಣ್ಣ ನೀರಾವರಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂರ್ತಜಲ ಹೆಚ್ಚಿಸುವುದು ಮತ್ತು ಕೆರೆಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ ಮಾಡುವುದು ಸಾಧ್ಯವಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಆಗುತ್ತಿರುವ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲೂ ಚಿಂತನೆ ನಡೆಸಲಾಗುತ್ತಿದೆ. ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಕೆಯಿಂದ ಆಗಬಹುದಾದ ಅನುಕೂಲತೆಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…