Subscribe to Updates
Get the latest creative news from FooBar about art, design and business.
- ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
Author: admin
ರಾಜ್ಯದ ಹಕ್ಕು ಕೇಳಿ ಎಂದರೆ ಬಿಜೆಪಿ ಸಂಸದರು ಚಳಿಜ್ವರ ಬಂದಂಗೆ ನಡುಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಜೆಟ್ ಮೇಲಿನ ಚರ್ಚೆ ವೇಳೆ ಅವರು ಮಾತನಾಡಿದರು. 15 ನೇ ಹಣಕಾಸು ಆಯೋಗದಿಂದ ಕರ್ನಾಟಕ ನಾಡಿಗೆ ಅಪಾರ ಅನ್ಯಾಯ ಆಯಿತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನಮ್ಮ ಪಾಲಿನ, ನಮ್ಮ ಹಕ್ಕಾಗಿದ್ದ 5495 ಕೋಟಿ ಬರಲಿಲ್ಲ. ಕರ್ನಾಟಕದಿಂದಲೇ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರಿಂದ ಇಷ್ಟು ದೊಡ್ಡ ಅನ್ಯಾಯ ಆಯಿತು. ಇದನ್ನು ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರು ಪ್ರಶ್ನಿಸಬೇಕಿತ್ತು. ರಾಜ್ಯ ಬಿಜೆಪಿ ನಾಯಕರು, ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿತ್ತು. ಆದರೆ ಇವರೆಲ್ಲಾ ಮೋದಿ ಅವರ ಎದುರು ನಿಂತು ಕನ್ನಡಿಗರ ಪಾಲನ್ನು ಕೇಳಲು ಚಳಿ ಜ್ವರ ಬಂದವರಂತೆ ನಡುಗುತ್ತಾರೆ ಎಂದು ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಪತ್ತೆ ಹಿನ್ನೆಲೆ, ಪೊಲೀಸರಲ್ಲಿ ಆತಂಕ ಹೆಚ್ಚಿದೆ. ಇದುವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ. ಆದರೆ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿವೆ. 2021ರಲ್ಲಿ ಉಪ್ಪಿನಂಗಡಿ ಬಳಿ 40 ವರ್ಷದಷ್ಟು ಹಳೆಯ ಐದು ಹ್ಯಾಂಡ್ ಗ್ರೆನೇಡ್ ಗಳು ನೆಲದಲ್ಲಿ ಪತ್ತೆಯಾಗಿದ್ದವು. ನಂತರ 2022ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ರಾಜಧಾನಿಯೊಂದರಲ್ಲೇ ಭಾರಿ ಪ್ರಮಾಣದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಶುಕ್ರವಾರ ಘಟಿಕೋತ್ಸವದಲ್ಲಿ ಬಿಎಸ್ವೈ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ನಡೆದ ಗಲಾಟೆಯಲ್ಲಿ ಮಗಳು ತಂದೆಯನ್ನೇ ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಮಗಳು ಕೊಲೆ ಮಾಡಿದ್ದಾಳೆ. ಹುಚ್ಚೀರಯ್ಯ(68) ಕೊಲೆಯಾದ ವ್ಯಕ್ತಿ. ಪುಷ್ಪ (30) ತಂದೆಯನ್ನೇ ಹತ್ಯೆ ಮಾಡಿದ ಮಗಳು. ಗಂಡನ ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದ ಪುಷ್ಪ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗಳ ನಡುವೆ ಮಾತಿನ ಚಕಮಕಿ ಆಗಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್ ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು ಎಂದು ಆರೋಪಿಸಿದ್ರು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಗುಬ್ಬಿ: ಆಟೋ, ಲಾರಿ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಘಟನೆ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪರ್ಮಾನ್ ಖಾನ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಗುಬ್ಬಿ ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮದ ನಿವಾಸಿಯಾಗಿದ್ದಾನೆ. ಹೊರಗಿನಿಂದ ಗಾಂಜಾ ಖರೀದಿಸಿ ಗುಬ್ಬಿ ತಾಲ್ಲೂಕಿನಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆದರಿಸಿ ದಾಳಿ ನಡೆಸಿದ್ದ ಪೊಲೀಸರು ಪರ್ಮಾನ್ ಖಾನ್ ಮನೆಯಲ್ಲಿದ್ದ 230 ಗ್ರಾಂ. ಗಾಂಜಾ ಸೊಪ್ಪು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಗ್ರಾಮ ಪಂಚಾಯಿತಿ ಚುನಾವಣೆ ತಾಳಕೆರೆ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ತಾಳಕೆರೆ ಪಂಚಾಯತಿ ನೂತನ ಅಧ್ಯಕ್ಷರಾಗಿ ಸರೋಜಮ್ಮ, ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಜ್ಯೋತಿ ಸೋಮಶೇಖರ್ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗಾಗಿ ನಡೆದ ಚುನಾವಣೆಯಲ್ಲಿ 17 ಸದಸ್ಯರನ್ನು ಹೊಂದಿರುವ ಪಂಚಾಯತಿ ಇದಾಗಿದ್ದು. ಅಧ್ಯಕ್ಷರ ಸ್ಥಾನಕ್ಕೆ ಸರೋಜಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಸೋಮಶೇಖರ್ ಮತ್ತು ಲೋಹಿತ್ ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಪ್ರತಿಸ್ಪರ್ಧಿ ಯಾರು ನಾಮ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಲೋಕೋಪಯೋಗಿ ಇಲಾಖೆಯ ( A E E) ಅಧಿಕಾರಿಯಾದ ಪ್ರಭಾಕರ್ ಅವರು ಸರೋಜಮ್ಮ ಅವರನ್ನು ಅಧ್ಯಕ್ಷ ಎಂದು ಘೋಷಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಡೆದು 17 ಸದಸ್ಯ ರನ್ನು ಹೊಂದಿರುವ ಗ್ರಾಮ ಪಂಚಾಯಿತಿಯ ಸದಸ್ಯರಲ್ಲಿ ಒಂಬತ್ತು ಮತಗಳು ಜ್ಯೋತಿ ಸೋಮಶೇಖರ್ ಎಂಬುವರಿಗೆ , ಲೋಹಿತ್ ಅವರಿಗೆ ಏಳು ಮತಗಳಿದ್ದು ಒಬ್ಬ ಸದಸ್ಯ…
ವರದಿ: ಆಬಿದ್ ಮಧುಗಿರಿ ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಳ್ಳಿ ಗ್ರಾಮ ಪಂ ವ್ಯಾಪ್ತಿಯ ಸುವರ್ಣಮುಖಿ ನದಿಯಲ್ಲಿ ಭೂತಾಯಿಯ ಒಡಲನ್ನು ಬಗೆದು, ಕಳ್ಳರು ಹಾಡ ಹಗಲಲ್ಲೇ ಮರಳನ್ನು ದೋಚುತಿದ್ದಾರೆ. ಹಗಲು ಇರುಳು ಎನ್ನದೆ ರಾಜ ರೋಷವಾಗಿ ಯಾವ ಇಲಾಖೆಯ ಅಧಿಕಾರಿಗಳ ಭಯ ಇಲ್ಲದೆ ಪ್ರಕೃತಿಯ ನೈಸರ್ಗಿಕ ಮರಳನ್ನು ಟ್ರ್ಯಾಕ್ಟರ್ ಗಳಲ್ಲಿ ತುಂಬಿಕೊಂಡು ಪ್ರತಿ ಟ್ಯಾಕ್ಟರ್ ಲೋಡಿಗೆ ಇಷ್ಟು ಹಣ ಎಂಬಂತೆ ನಿಗದಿ ಮಾಡಿಕೊಂಡು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಸುವರ್ಣಮುಖಿ ನದಿ ತುಂಬಿ ಹರಿದಿದ್ದು, ಇದರಿಂದ ಹೆಚ್ಚಾಗಿ ಮರಳು ಬಂದು ಈ ಭಾಗದಲ್ಲಿ ಸಂಗ್ರಹವಾಗಿದೆ, ಆದರೆ ಖಾಸಗಿ ಟ್ರ್ಯಾಕ್ಟರ್ ಮಾಲೀಕರು ಇದನ್ನೇ ದಂಧೆ ಮಾಡಿಕೊಂಡು ಖಾಸಗಿ ವ್ಯಕ್ತಿಗಳಿಗೆ ಮರಳು ಸರಬರಾಜು ಮಾಡುವುದಕ್ಕೆಈ ಪ್ರಕೃತಿ ನೈಸರ್ಗಿಕ ಮರಳನ್ನೇ ದೋಚುತ್ತಿದ್ದಾರೆ. ಟ್ಯಾಕ್ಟರ್ ನಂಬರ್ ಕಾಣದಂತೆ ಮರೆ ಮಾಜಿ ಮರಳನ್ನು ತುಂಬಿ ಮಾರಾಟ ಮಾಡುತ್ತಿದ್ದರು ಹಾಗೂ ಇಷ್ಟೆಲ್ಲಾ ಅಕ್ರಮ ಹಾಡ ಹಗಲಲ್ಲೇ ನಡೆಯುತ್ತಿದ್ದರು, ಕ್ರಮಕ್ಕೆ ಮುಂದಾಗ ಬೇಕಾದ ಕಂದಾಯ ಇಲಾಖೆ,…
ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು. ಎರಡು ನಿಮಿಷಗಳ ಬಗೆಹರಿಸಬಹುದಾಗಿದ್ದ ವಿಷಯವನ್ನು ಇಷ್ಟು ದೂರ ಎಳೆದು ತಂದಿದ್ದಾರೆ. ಆಗಿದ್ದು ಆಯಿತು, ಮುಂದೆ ಈ ರೀತಿ ಆಗಲ್ಲ ಅಂತ ಹೇಳಿದ್ದರೆ ಸಾಕಿತ್ತು. ವಿಷಾದವನ್ನೂ…
ಗುಲ್ಟು” ಚಿತ್ರದ ಮೂಲಕ ಜನಪ್ರಿಯರಾಗಿ, “ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಮತ್ತು ದ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್ (EFG) ಸಹ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ಬಸ್ರುರ್ ಮ್ಯೂಸಿಕ್ & ಮೂವೀಸ್ ಈ ಚಿತ್ರವನ್ನು ಅರ್ಪಿಸುತ್ತಿದೆ. ಖ್ಯಾತ ಕೆ ಆರ್ ಜಿ ಡಿಸ್ಟ್ರಿಬ್ಯೂಟರ್ಸ್ ಬಿಡುಗಡೆ ಮಾಡುತ್ತಿದೆ. “ಕ್ಷೇತ್ರಪತಿ” ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ…