Author: admin

ರಾಜ್ಯ ವಿಧಾನಸಭೆಯ ಸದನದಲ್ಲಿ ನಡೆದ ಘಟನೆಯ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಸದನ ಮುಕ್ತಾಯದ ಬಳಿಕ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವ ರಾಮಲಿಂಗಾರೆಡ್ಡಿ, ವಿಪಕ್ಷದವರಿಗೆ ಜವಾಬ್ದಾರಿ ಇಲ್ಲ ಅನ್ನುವುದನ್ನು ಹೇಳುತ್ತೇನೆ. ನಿನ್ನೆ ಪ್ರತಿಪಕ್ಷದವರೆಲ್ಲ ಬಂದಿದ್ದರು. ಹಾಲಿ, ಮಾಜಿ ಎಲ್ಲರೂ ಇದ್ದರು. ಅವರಿಗೆ ಪ್ರೋಟೋಕಾಲ್ ಪ್ರಕಾರ ಸೆಕ್ಯೂರಿಟಿ ನೀಡಿದ್ದೆವು. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಬರುತ್ತಿದ್ದರು. ಅವರಿಗೆ ಪ್ರೋಟೋಕಾಲ್ ಪ್ರಕಾರ ಗೌರವ ಕೊಡುತ್ತಿದ್ದರು. ಇವತ್ತು ಬಿಜೆಪಿ ಎಡಬಿಡಂಗಿತನ ತೋರಿದ್ದಾರೆ. ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಬಿಜೆಪಿಯವರು. ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ. ಬಿಜೆಪಿಯವರು ಎಡಬಿಡಂಗಿಗಳು, ಹೊಸ ಸಂಸತ್ ಉದ್ಘಾಟನೆಯಾಯಿತು. ಆಗ ಪುರೋಹಿತರನ್ನ ಅಲ್ಲಿಗೆ ಕರೆದೊಯ್ದಿದ್ದರು. ಸ್ಪೆಷಲ್ ಫೈಟ್ ನಲ್ಲಿ ಕರೆದೊಯ್ದು ಉಪಚಾರ ಮಾಡಿದ್ದರು. ಕುಮಾರಸ್ವಾಮಿ ಪ್ರಮಾಣ ವಚನ ಮಾಡಿದರು. ಆಗ ಯಾರೆಲ್ಲ ಇಲ್ಲಿಗೆ ಬಂದಿದ್ದರಲ್ಲ, ಆಗ ಏಕೆ ಯಾರೂ ಕೇಳಲಿಲ್ಲ? ಅತಿಥಿಗಳಿಗೆ ಗೌರವ ಕೊಡುವುದು ಇವರಿಗೆ ಬರಲ್ಲ. ಜನ ಚುನಾವಣೆಯಲ್ಲಿ ಮಂಗಳಾರತಿ ಎತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಮಂಗಳಾರತಿ…

Read More

ನವದೆಹಲಿ:ಪ್ರಾರಂಭವಾಗುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಇದರ ನಡುವೆ ಸದ್ಯ ದೇಶದ ಎಲ್ಲರ ಕಣ್ಣುಗಳು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ. ಇತ್ತ ಸರ್ಕಾರವನ್ನ ಇಕ್ಕಟ್ಟಿಗೆ ತಳ್ಳಲು ವಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ…

Read More

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಳಗಾವಿ, ಬೀದರ್, ಕಲಬುರಗಿ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸಭಾಧ್ಯಕ್ಷರು ಸದಸ್ಯರನ್ನು ಅಮಾನತು ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿ ನೀಡಿದ್ದಾರೆ. ಸಭಾಧ್ಯಕ್ಷರ ಮುಖಕ್ಕೆ ಕಾಗದ ಹರಿದು ಎಸೆಯಬಹುದೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಸಭಾಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ಕೈಗೊಂಬೆ ಹೇಗಾಗುತ್ತಾರೆ? ಇವರು ಹೇಳಿದಂತೆ ಕೇಳದಿದ್ದರೆ ಸರ್ಕಾರದ ಕೈಗೊಂಬೆ, ಇಲ್ಲದಿದ್ದರೆ ಇಲ್ಲವೇ? ಎಂದ ಮುಖ್ಯಮಂತ್ರಿಗಳು ‘ನಾನು ವಿಧಾನಸಭೆಯಲ್ಲಿ ಕಳೆದ 40 ವರ್ಷಗಳಿಂದ ಇದ್ದೇನೆ, ಸಭಾಧ್ಯಕ್ಷರ ಬಗ್ಗೆ ಅವಮಾನಕಾರಿಯಾಗಿ, ಅವಹೇಳಕಾರಿಯಾಗಿ ಮಾತನಾಡಿಲ್ಲ. ಕಾಗದವನ್ನು ಹರಿದು ಉಪ ಸಭಾಧ್ಯಕ್ಷರ ಮುಖಕ್ಕೆ ಎಸೆಯುವುದು ಗೂಂಡಾಗಳ ರೀತಿಯಲ್ಲಿ ವರ್ತನೆ ಮಾಡುವುದು ಅನಾಗರಿಕ ಸಂಸ್ಕೃತಿಯಲ್ಲವೇ? ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆಯೇ? ಜನರ ಸಮಸ್ಯೆ ಚರ್ಚೆ ಮಾಡಿ ಪರಿಹಾರ ಕಂಡುಕೊಂಡು ಬರಬೇಕು. ಅದನ್ನು ಬಿಟ್ಟು ಗೂಂಡಾಗಳ ರೀತಿ ವರ್ತಿಸುವುದು ತಪ್ಪು. ಪ್ರತಿಭಟನೆ ಮಾಡಿದರೆ ತಕರಾರಿಲ್ಲ. ಗಾಜು ಒಡೆಯುವುದು ಮುಂತಾದ ಕೆಲಸಗಳನ್ನು ಮಾಡಬಾರದು’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್‍ ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು. ಇಲ್ಲೇ ನೆಲೆಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ. ಅಂತರಾಷ್ಟ್ರೀಯ ಐ ಎಸ್ ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು…

Read More

ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಲ್.ರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋದವಾಗಿ ಆಯ್ಕೆಯಾದರು. ಈ ಸಂಧರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಆರ್.ಭಾಸ್ಕರ್ ಮಾತನಾಡಿ, ಈ ಗೆಲುವಿಗೆ ಸಚಿವರಾದ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಹಾಗೂ ಜಿ.ಪಂ. ಮಾಜಿ ಸದಸ್ಯರಾದ ಶಾಂತಲ, ರಾಜಣ್ಣ ಸಹಕಾರವೇ ಗೆಲುವಿಗೆ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ ಅಧಿಕಾರ ಹಂಚುವ ಅವರ ಕಾರ್ಯವೈಕರಿಗೆ ನಾವೆಲ್ಲ ಅಭಾರಿಯಾಗಿದ್ದೇವೆ ಎಂದರು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಮುಖಂಡ ನಾಗರಾಜು, ಗ್ರಾ.ಪಂ ಸದಸ್ಯರಾದ ಪ್ರೇಮಲತಾ, ಮಂಜುನಾಥ್‌ ರೆಡ್ಡಿ, ಸುರೇಶ್, ಬಸವರಾಜು,ಅನಿತಾ, ಸವಿತಾ ಹಾಗೂ, ಕುರೂಡಿ ನಿಂಗಪ್ಪ, ಅಶ್ವತಪ್ಪ, ಗಂಗಪ್ಪ, ಶಿವಣ್ಣ, ಪ್ರಕಾಶ್, ಚನ್ನಸೋಮೆಗೌಡ, ರಾಮಚಂದ್ರು, ಸಿದ್ದಗಂಗಪ್ಪ, ಗೋವಿಂದಪ್ಪ, ನಂಜುಡಪ್ಪ, ವೆಂಕಟೇಶ್, ಲಿಂಗರಾಜು, ಮಧನ್ ಕುಮಾರ್, ಹಾಗೂ ಮುಂತಾದವರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಮಧುಗಿರಿ: ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಒಣಜಾಕ್ಷಮ್ಮ ಅಧ್ಯಕ್ಷೆಯಾಗಿ, ಉಪಾಧ್ಯಕ್ಷೆಯಾಗಿ ಕೆ.ಟಿ.ಸವಿತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ  ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಲಕ್ಷ್ಮೀನಾರಾಯಣ ಮಾತನಾಡಿ, ಸಚಿವರಾದ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಸೂಚನೆ ಮೇರೆಗೆ ಎಲ್ಲಾ ಸದಸ್ಯರ ಸಮಕ್ಷ ಬೆಂಬಲದೊಂದಿಗೆ  ಒಣಜಾಕ್ಷಮ್ಮ ಅಧ್ಯಕ್ಷೆಯಾಗಿ, ಉಪಾಧ್ಯಕ್ಷೆಯಾಗಿ ಕೆ.ಟಿ. ಸವಿತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪಂಚಾಯಿತಿಯ ಸರ್ವೋತ್ತಮುಖ ಅಭಿವೃದ್ಧಿಗಾಗಿ ಕೆಲಸ ಮಾಡಲಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಂಜಣ್ಣ ಟಿ.ಪಿ., ಚುನಾವಣೆ ಅಧಿಕಾರಿ ಡಾ.ಸಿದ್ದನಗೌಡ, ಪಿಡಿಒ ಬಾಲಕೃಷ್ಣ ಹಾಗೂ ಸದಸ್ಯರು ಇತರರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುನಾಥ್ ಎಂ.ಜಿ. ಮತ್ತು ವಿಶಾಲಕ್ಷಮ್ಮ ಆಯ್ಕೆಯಾಗಿದ್ದಾರೆ. 15 ಸದಸ್ಯ ಬಲವುಳ್ಳ  ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಾಯಸಂದ್ರ ಕ್ಷೇತ್ರದ ಇಬ್ಬರು ಸದಸ್ಯರಾದ ಅಜಿತ್ ಪ್ರಸಾದ್ ಮತ್ತು ಮಂಜುನಾಥ್ ಎಂ‌.ಜಿ, ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯನ್ನು ಕೈಗೊಂಡು ಇಬ್ಬರು ಸ್ಪರ್ಧಿಗಳ ನಡುವೆ ಚುನಾವಣೆ ನಡೆಸಿದರು. ಚುನಾವಣೆಯಲ್ಲಿ ಸದಸ್ಯ ಅಜಿತ್ ಪ್ರಸಾದ್ ಆರು ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಸದಸ್ಯ ಮಂಜುನಾಥ ಎಂ‌.ಜಿ ಒಂಭತ್ತು ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ ಎಂದು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ದೊಡ್ಡ ಶೆಟ್ಟಿಕೆರೆ ಕ್ಷೇತ್ರದ ಸದಸ್ಯೆ ವಿಶಾಲಕ್ಷಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಚುನಾವಣೆ ಅಧಿಕಾರಿಗಳಾದ ಹೇಮಾವತಿ ಇಲಾಖೆಯ ಎಂಜಿನಿಯರ್ ಶಿವಪ್ರಸಾದ್ ಅಧಿಕೃತವಾಗಿ ಘೋಷಿಸಿದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳು ‌ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ…

Read More

ವರದಿ: ಮಂಜುಸ್ವಾಮಿ ಎಂ ಎನ್, ಕೊರಟಗೆರೆ ಕೊರಟಗೆರೆ : 2ನೇ ಅವಧಿಗೆ ಬಾರಿ ಕುತೂಹಲ ಕೆರಳಿಸಿದ್ದ ವಡ್ಡಗೆರೆ ಗ್ರಾ.ಪಂಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿ ಕಾಂಗ್ರೆಸ್ ತೆಕ್ಕೆಗೆ.. ನೂತನ ಅಧ್ಯಕ್ಷರಾಗಿ ರಕ್ಷಿತಾ ವೀರಾಕ್ಯಾತಯ್ಯ ಹಾಗೂ ಉಪಾಧ್ಯಕ್ಷರಾಗಿ ನರೇಂದ್ರಬಾಬು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷ ನರೇಂದ್ರಬಾಬು ಮಾತನಾಡಿ, ಗ್ರಾಮದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ನಮ್ಮ ಗ್ರಾ.ಪಂ ನಿಂದ ಮಾಡಬಹುದಾದ ಅಭಿವೃದ್ಧಿಗೆ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ವಡ್ಡಗೆರೆ ಪಂಚಾಯಿತಿಯನ್ನು ಮಾದರಿಯನ್ನಾಗಿ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ. ನಮ್ಮ ಸದಸ್ಯರೆಲ್ಲರೂ ಒಟ್ಟುಗೂಡಿ ಗ್ರಾಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಜನತೆಗೆ ಒದಗಿಸುವಲ್ಲಿ ನಿಷ್ಠೆಯಿಂದ ಶ್ರಮವಹಿಸುತ್ತೇವೆ ಎಂದರು… ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಬೆಂಬಲಿಗರು ನಾಸಿಕಡೋಲ್ ನೊಂದಿಗೆ ಅದ್ದೂರಿಯಾಗಿ ಮೆರವಣಿಗೆಯ ಮೂಲಕ ಸುಪ್ರಸಿದ್ಧ ಶ್ರೀ ವೀರನಾಗಮ್ಮ ದೇವಿ ಪೂಜೆ ಸಲ್ಲಿಸಿದ ನಂತರ ಸಿಹಿ ಹಂಚಿ ಪಾಟಕಿ ಸಿಡಿಸಿ ಅಭಿನಂದಿಸಿದರು. ನಮ್ಮ ಪಂಚಾಯಿತಿ ಎಲ್ಲಾ ಸದಸ್ಯ ಸಹಕಾರದಿಂದ ನನ್ನನ್ನು ಅವಿರೋಧವಾಗಿ ಆಯ್ಕೆಮಾಡಿದ್ದಾರೆ. ಅವರಿಗೆ ನನ್ನ…

Read More

ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ಎಸೆದು ಅಗೌರವ ತೋರಿದ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More