Author: admin

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಕರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಘೋಷಣೆ ಮಾಡಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ. 2021ರ ಜುಲೈ 22 ರಂದು ಈ ಯೋಜನೆ ಜಾರಿ ಆಗಿದೆ. ಈ ಯೋಜನೆಯಡಿ ಚಿಕಿತ್ಸೆಯ ವೆಚ್ಚವನ್ನು ಪೂರ್ಣವಾಗಿ ರಾಜ್ಯ ಸರ್ಕಾರವು ಭರಿಸಲಿದೆ. ಈ ಮೂಲಕ ಜೀವನ ಮತ್ತು ಆರೋಗ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. https:// dpar.karnataka.gov.in/servicerules/public/info-2 The+Karnataka+Arogya+Sanjeevini+Scheme+(KASS)/kn  ವೆಬ್ ಸೈಟ್ ಗೆ ಭೇಟಿ ನೀಡಿ.

Read More

ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ನ. 1ರಿಂದ 2024ರ ನ. 30ರ ವರೆಗೆ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿ, ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.

Read More

ನೀವು ಬಂಗಾರವನ್ನು ಖರೀದಿಸಲು ಹೊರಟಿದ್ದರೆ, ಇಲ್ಲಿದೆ ನಿಮಗೆ ತುಂಬಾ ಉಪಯುಕ್ತ ಮಾಹಿತಿ, ಹೌದು, ನೀವು ಖರೀದಿಸುವ ಆಭರಣವು ಶುದ್ಧವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ಗುರುತಿಸಬಹುದು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ನ ಹೆಸರು BIS ಕೇರ್ ಆ್ಯಪ್ ಆಗಿದೆ. ಹಾಲ್‌ ಮಾರ್ಕ್ ಮತ್ತು ISI ಪ್ರಮಾಣೀಕೃತ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ಟ್ರ್ಯಾಕ್ ಮಾಡಲು ಈ ಆ್ಯಪ್ ನಿಮಗೆ ಸಹಾಯ ಮಾಡುತ್ತದೆ. ಆಂಡ್ರಾಯ್ಡ್ ಫೋನ್‌ ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಐಫೋನ್‌ ನಲ್ಲಿ ಆ್ಯಪ್ ಸ್ಟೋರ್‌ನಿಂದ BIS ಕೇರ್ ಆ್ಯಪ್ ಡೌನ್‌ ಲೋಡ್ ಮಾಡಿಕೊಳ್ಳಬಹುದು.

Read More

ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ದೇಶಕಿ ಸ್ನೇಹಲ್. ಆರ್. ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿ ಶ್ರೀವಿದ್ಯಾ ಪಿ. ಐ. , ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ರಾಷ್ಟ್ರೀಯ ಜೀವನೋಪಾಯ ಮಿಷನ್ ಮಿಷನ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ. 6 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುನೀಶ್ ಮುದ್ದಿಲ್, ಐಎಎಸ್, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಂಗಳೂರು ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ವಿಶೇಷ ಆಯುಕ್ತ ಆಗಿ ನೇಮಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್ ಪ್ರಿಯಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

Read More

ಉಡುಪಿ: ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವರು, ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದವರನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಸ್ಮರಿಸಿದರು. ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನ ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದರು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ.…

Read More

ಬೆಂಗಳೂರು: ಹುಲಿ ಉಗುರು ಫೆಂಡೆಂಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಆಗ್ರಹಿಸಿದ್ದಾಾರೆ. ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಲಿ ಉಗುರು ಫೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯ ಭೀತರಾಗಿದ್ದು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಸರ್ಕಾರ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಾವೇರಿ ವಿಚಾರ ದ್ವನಿಸುತ್ತಿದೆ.ನಾಡಿನ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆ ಹುಲಿಉಗುರಿನ ಫೆಂಡೆಂಟ್ ವಿಚಾರವನ್ನು ಕೆದುಕಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಆರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್…

Read More

ಬೆಂಗಳೂರು: ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ರಾಜ್ಯದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿರುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ನಗರದಲ್ಲಿಂದು ಮಾತನಾಡಿದ ರೇಣುಕಾಚಾರ್ಯ, ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ. ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು. ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳುತ್ತಿದ್ಧಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ…

Read More

ಬೆಂಗಳೂರು: ಹುತಾತ್ಮರ ಗೌರವಾರ್ಥ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಅಮೃತ ಕಳಸವನ್ನು ದೆಹಲಿಗೆ ಇದೇ 30ಕ್ಕೆ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಪ್ರತಿ ಮನೆ, ಧಾರ್ಮಿಕ ಕೇಂದ್ರಗಳು, ವೀರ ಯೋಧರ ಮನೆ, ಸ್ವಾತಂತ್ರ್ಯ ಹೋರಾಟಗಾರರ ಮನೆ, ಮಹಾಪುರುಷರ ಸ್ಮಾರಕ ಸ್ಥಳ, ಸಾಧು ಸಂತರ ಮಠಗಳಿಂದ ಪುಣ್ಯ ಮಣ್ಣನ್ನು ಸಂಗ್ರಹಿಸಲಾಗಿದೆ. ಏಕ್ ಭಾರತ್, ಶ್ರೇಷ್ಠ್ ಭಾರತ್ ಕಲ್ಪನೆಯೊಂದಿಗೆ ಅಮೃತ್ ವನದಲ್ಲಿ ಮಣ್ಣನ್ನು ವಿಲೀನಗೊಳಿಸಲಾಗುವುದು ಎಂದು ತಿಳಿಸಿದರು. ದೇಶವು ಸ್ವಾತಂತ್ರ್ಯ ಪಡೆದು 75 ವರ್ಷಗಳಾಗಿವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆದರಣೀಯ ಪ್ರಧಾನಿ ನರೇಂದ್ರ ಮೋದಿಜಿ ಅವರ ಮುಂದಾಲೋಚನೆಯೊಂದಿಗೆ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನವನ್ನು ಸೆಪ್ಟೆಂಬರ್ 3ರಿಂದ ಪ್ರಾರಂಭಿಸಲಾಗಿದೆ. ಇದೇ 31ರವರೆಗೆ ಅಭಿಯಾನ…

Read More

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಎನ್. ಡಿ.ಎ ಒಕ್ಕೂಟಕ್ಕೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್‌ ಸೇರಿದ್ದು, ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ದೆಹಲಿಯಲ್ಲಿಂದು ಭೇಟಿಯಾಗಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ (JDS_ BJP) ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ನಿಖಿಲ್‌ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

Read More

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ  ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಕೋಟಿ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರ ಕೋಟಿಯಿಂದ  30 ಸಾವಿರ ಕೋಟಿಗೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ…

Read More